AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ICC Test Rankings: ಟಾಪ್​ 5ರಲ್ಲಿ ರೋಹಿತ್! ಡೀನ್ ಎಲ್ಗರ್​ಗೆ ಲಾಭ; ಪಾಕ್ ಬೌಲರ್​ಗೆ ಹಿನ್ನಡೆ

ICC Test Rankings: ಇದೇ ವೇಳೆ ಐಸಿಸಿ ವಿರಾಟ್ ಕೊಹ್ಲಿಗೆ 9ನೇ ಸ್ಥಾನ ನೀಡಿದೆ. ಅವರಿಗಿಂತ ಸ್ವಲ್ಪ ಮೇಲಿರುವ ಪಾಕಿಸ್ತಾನದ ನಾಯಕ ಬಾಬರ್ ಅಜಮ್ 8ನೇ ಸ್ಥಾನದಲ್ಲಿದ್ದಾರೆ. ಬಾಬರ್ ಅಜಂ ಮತ್ತು ವಿರಾಟ್ ಕೊಹ್ಲಿ ನಡುವೆ 10 ರೇಟಿಂಗ್ ಪಾಯಿಂಟ್‌ಗಳ ಅಂತರವಿದೆ

ICC Test Rankings: ಟಾಪ್​ 5ರಲ್ಲಿ ರೋಹಿತ್! ಡೀನ್ ಎಲ್ಗರ್​ಗೆ ಲಾಭ; ಪಾಕ್ ಬೌಲರ್​ಗೆ ಹಿನ್ನಡೆ
ಎಲ್ಗರ್, ಕೊಹ್ಲಿ
TV9 Web
| Edited By: |

Updated on: Jan 12, 2022 | 4:37 PM

Share

ಐಸಿಸಿಯ ಇತ್ತೀಚಿನ ಬ್ಯಾಟ್ಸ್‌ಮನ್‌ ಮತ್ತು ಬೌಲರ್‌ಗಳ ಟೆಸ್ಟ್ ಶ್ರೇಯಾಂಕಗಳನ್ನು ಬಿಡುಗಡೆ ಮಾಡಿದೆ. ಹೊಸ ಶ್ರೇಯಾಂಕದಲ್ಲಿ ಕೆಲವು ಬದಲಾವಣೆಗಳನ್ನು ಮಾಡಲಾಗಿದೆ. ಹೊಸ ಶ್ರೇಯಾಂಕದಲ್ಲಿ ನ್ಯೂಜಿಲೆಂಡ್ ನಾಯಕ ಕೇನ್ ವಿಲಿಯಮ್ಸನ್ ಕುಸಿತ ಕಂಡಿದ್ದಾರೆ. ಭಾರತದ ವಿರುದ್ಧ ಜೋಹಾನ್ಸ್‌ಬರ್ಗ್ ಟೆಸ್ಟ್‌ನಲ್ಲಿ 96 ರನ್‌ಗಳ ಅಜೇಯ ಮತ್ತು ಮ್ಯಾಚ್ ವಿನ್ನಿಂಗ್ ಇನ್ನಿಂಗ್ಸ್ ಆಡಿದ ದಕ್ಷಿಣ ಆಫ್ರಿಕಾದ ನಾಯಕ ಡೀನ್ ಎಲ್ಗರ್ ಕೂಡ ಹೆಚ್ಚಿನ ಲಾಭ ಪಡೆದಿದ್ದಾರೆ. 4 ಸ್ಥಾನಗಳ ಜಿಗಿತದೊಂದಿಗೆ, ಅವರು ಬ್ಯಾಟ್ಸ್‌ಮನ್‌ಗಳ ಹೊಸ ಶ್ರೇಯಾಂಕದಲ್ಲಿ ಅಗ್ರ 10 ಬ್ಯಾಟ್ಸ್‌ಮನ್‌ಗಳ ಪಟ್ಟಿಯಲ್ಲಿದ್ದಾರೆ. ಅದೇನೆಂದರೆ, ಈಗ ಈ ಪಟ್ಟಿಯಲ್ಲಿ, ಅವರು ಭಾರತೀಯ ಟೆಸ್ಟ್ ನಾಯಕ ವಿರಾಟ್ ಕೊಹ್ಲಿಯ ಹಿಂದೆ ನಿಂತಿದ್ದಾರೆ.

ಹೊಸ ಬ್ಯಾಟ್ಸ್‌ಮನ್‌ಗಳ ಟೆಸ್ಟ್ ಶ್ರೇಯಾಂಕದಲ್ಲಿ ಮೊದಲ ಎರಡು ಸ್ಥಾನಗಳಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ಆಸ್ಟ್ರೇಲಿಯದ ಬ್ಯಾಟ್ಸ್‌ಮನ್ ಮಾರ್ನಸ್ ಲ್ಯಾಬುಸ್ಚಾಗ್ನೆ 924 ರೇಟಿಂಗ್ ಪಾಯಿಂಟ್‌ಗಳೊಂದಿಗೆ ಅಗ್ರಸ್ಥಾನದಲ್ಲಿದ್ದಾರೆ. ಇಂಗ್ಲೆಂಡ್‌ನ ಟೆಸ್ಟ್ ನಾಯಕ ಜೋ ರೂಟ್ 881 ಅಂಕಗಳೊಂದಿಗೆ ಎರಡನೇ ಸ್ಥಾನದಲ್ಲಿದ್ದಾರೆ. ಆದರೆ, ಮೂರನೇ ಕ್ರಮಾಂಕದ ಬ್ಯಾಟ್ಸ್‌ಮನ್‌ನಲ್ಲಿ ಬದಲಾವಣೆ ಮಾಡಲಾಗಿದೆ.

ಟಾಪ್ 4ರಲ್ಲಿ ಕೇನ್ ವಿಲಿಯಮ್ಸನ್ ನ್ಯೂಜಿಲೆಂಡ್ ನಾಯಕ ಕೇನ್ ವಿಲಿಯಮ್ಸನ್ ಐಸಿಸಿ ಬ್ಯಾಟ್ಸ್‌ಮನ್‌ಗಳ ಹೊಸ ಟೆಸ್ಟ್ ಶ್ರೇಯಾಂಕದಲ್ಲಿ ಅಗ್ರ 3 ರಿಂದ ಹೊರಬಿದ್ದಿದ್ದಾರೆ. ಇದೀಗ ಅವರ ಸ್ಥಾನ ನಾಲ್ಕನೇ ಸ್ಥಾನಕ್ಕೆ ಕುಸಿದಿದೆ. ಅದೇ ಸಮಯದಲ್ಲಿ, ಆಸ್ಟ್ರೇಲಿಯಾದ ಬ್ಯಾಟ್ಸ್‌ಮನ್ ಸ್ಟೀವ್ ಸ್ಮಿತ್ 871 ರೇಟಿಂಗ್ ಪಾಯಿಂಟ್‌ಗಳನ್ನು ಹೊಂದಿದ್ದು 3 ನೇ ಸ್ಥಾನಕ್ಕೆ ಬಂದಿದ್ದಾರೆ. ಟಾಪ್ 5 ಬ್ಯಾಟ್ಸ್‌ಮನ್‌ಗಳ ಪಟ್ಟಿಯಲ್ಲಿ ಭಾರತದ ರೋಹಿತ್ ಶರ್ಮಾ 5ನೇ ಸ್ಥಾನದಲ್ಲಿದ್ದಾರೆ.

ವಿರಾಟ್ ಮತ್ತು ಬಾಬರ್ ನಡುವೆ 10 ಅಂಕಗಳ ಅಂತರ ಇದೇ ವೇಳೆ ಐಸಿಸಿ ವಿರಾಟ್ ಕೊಹ್ಲಿಗೆ 9ನೇ ಸ್ಥಾನ ನೀಡಿದೆ. ಅವರಿಗಿಂತ ಸ್ವಲ್ಪ ಮೇಲಿರುವ ಪಾಕಿಸ್ತಾನದ ನಾಯಕ ಬಾಬರ್ ಅಜಮ್ 8ನೇ ಸ್ಥಾನದಲ್ಲಿದ್ದಾರೆ. ಬಾಬರ್ ಅಜಂ ಮತ್ತು ವಿರಾಟ್ ಕೊಹ್ಲಿ ನಡುವೆ 10 ರೇಟಿಂಗ್ ಪಾಯಿಂಟ್‌ಗಳ ಅಂತರವಿದೆ. ಆಸ್ಟ್ರೇಲಿಯಾದ ಡೇವಿಡ್ ವಾರ್ನರ್ ಕೂಡ ಐಸಿಸಿ ಬ್ಯಾಟ್ಸ್‌ಮನ್‌ಗಳ ಇತ್ತೀಚಿನ ಟೆಸ್ಟ್ ಶ್ರೇಯಾಂಕದಲ್ಲಿ ಸ್ಥಾನ ಕಳೆದುಕೊಂಡಿದ್ದಾರೆ. ಅವರು ಈಗ 6ನೇ ಸ್ಥಾನದಿಂದ 7ನೇ ಸ್ಥಾನಕ್ಕೆ ಕುಸಿದಿದ್ದಾರೆ. ಅವರ ಸ್ಥಾನವನ್ನು ಶ್ರೀಲಂಕಾದ ಬ್ಯಾಟ್ಸ್‌ಮನ್ ದಿಮುತ್ ಕರುಣರತ್ನೆ 6ನೇ ಸ್ಥಾನದಲ್ಲಿದ್ದಾರೆ.

ಪಾಕ್ ಬೌಲರ್‌ಗೂ ದೊಡ್ಡ ನಷ್ಟ! ಐಸಿಸಿ ಬೌಲರ್‌ಗಳ ನೂತನ ಟೆಸ್ಟ್ ಶ್ರೇಯಾಂಕದಲ್ಲೂ ಬದಲಾವಣೆಯಾಗಿದ್ದು, ಈ ಕಾರಣದಿಂದಾಗಿ ಪಾಕಿಸ್ತಾನದ ವೇಗದ ಬೌಲರ್ ಶಾಹೀನ್ ಶಾ ಆಫ್ರಿದಿ ಸಂಕಷ್ಟಕ್ಕೆ ಸಿಲುಕಿದ್ದಾರೆ. ಶಾಹೀನ್ ಈಗ ಟಾಪ್ 3 ರಿಂದ ಹೊರಗುಳಿದಿದ್ದಾರೆ. ಅವರ ಸ್ಥಾನಕ್ಕೆ ನ್ಯೂಜಿಲೆಂಡ್‌ನ ಕೈಲ್ ಜೇಮಿಸನ್ ಬಂದಿದ್ದಾರೆ. ಆಸ್ಟ್ರೇಲಿಯಾದ ನಾಯಕ ಪ್ಯಾಟ್ ಕಮ್ಮಿನ್ಸ್ ಇನ್ನೂ 895 ಅಂಕಗಳೊಂದಿಗೆ ಟೆಸ್ಟ್ ಬೌಲಿಂಗ್​ನಲ್ಲಿ ಮೊದಲ ಸ್ಥಾನದಲ್ಲಿ ಉಳಿದಿದ್ದಾರೆ. ಭಾರತದ ಅಶ್ವಿನ್ 861 ರೇಟಿಂಗ್ ಪಾಯಿಂಟ್‌ಗಳೊಂದಿಗೆ ಎರಡನೇ ಸ್ಥಾನದಲ್ಲಿದ್ದಾರೆ.

ನಾನು ಲೋಫರ್, ದುನಿಯಾ ವಿಜಿ ನಮ್ಮ ಅಪ್ಪ ಇದ್ದಂಗೆ: ಯೋಗರಾಜ್ ಭಟ್ ನೇರ ಮಾತು
ನಾನು ಲೋಫರ್, ದುನಿಯಾ ವಿಜಿ ನಮ್ಮ ಅಪ್ಪ ಇದ್ದಂಗೆ: ಯೋಗರಾಜ್ ಭಟ್ ನೇರ ಮಾತು
ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ