ICC Test Rankings: ಇಂಗ್ಲೆಂಡ್ ವಿರುದ್ಧ ಕಣಕ್ಕಿಳಿಯದಿದ್ದರೂ ಟಾಪ್-10 ನಲ್ಲಿ ಕಾಣಿಸಿಕೊಂಡ ವಿರಾಟ್ ಕೊಹ್ಲಿ
ICC Test Rankings: ಇಂಗ್ಲೆಂಡ್ ವಿರುದ್ಧದ ಮೊದಲೆರಡು ಟೆಸ್ಟ್ ಪಂದ್ಯಗಳಿಂದ ಹೊರಗುಳಿದಿರುವ ಟೀಮ್ ಇಂಡಿಯಾದ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ ಐಸಿಸಿ ಟೆಸ್ಟ್ ಬ್ಯಾಟರ್ಗಳ ಶ್ರೇಯಾಂಕ ಪಟ್ಟಿಯ ಅಗ್ರ ಹತ್ತರಲ್ಲಿ ಕಾಣಿಸಿಕೊಂಡಿದ್ದಾರೆ. ಕೊಹ್ಲಿಯನ್ನು ಹೊರತುಪಡಿಸಿ ಟಾಪ್-10 ಪಟ್ಟಿಯಲ್ಲಿ ಭಾರತದ ಯಾವುದೇ ಬ್ಯಾಟರ್ ಸ್ಥಾನ ಪಡೆದಿಲ್ಲ.
ICC Test Cricket Rankings: ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ (ICC) ಟೆಸ್ಟ್ ಬ್ಯಾಟರ್ಗಳ ಹೊಸ ಶ್ರೇಯಾಂಕ ಪಟ್ಟಿಯನ್ನು ಪ್ರಕಟಿಸಿದೆ. ಈ ಬಾರಿ ಕೂಡ ನ್ಯೂಝಿಲೆಂಡ್ನ ಕೇನ್ ವಿಲಿಯಮ್ಸನ್ (Kane Williamson) ಅಗ್ರಸ್ಥಾನವನ್ನು ಕಾಯ್ದುಕೊಂಡಿದ್ದಾರೆ. ಹಾಗೆಯೇ ಇಂಗ್ಲೆಂಡ್ ಬ್ಯಾಟರ್ ಜೋ ರೂಟ್ ದ್ವಿತೀಯ ಸ್ಥಾನ ಅಲಂಕರಿಸಿದ್ದಾರೆ. ಮೂರನೇ ಸ್ಥಾನದಲ್ಲಿ ಆಸ್ಟ್ರೇಲಿಯಾ ಆಟಗಾರನಿದ್ದರೆ, ನಾಲ್ಕನೇ ಸ್ಥಾನದಲ್ಲಿ ನ್ಯೂಝಿಲೆಂಡ್ ಬ್ಯಾಟರ್ ಕಾಣಿಸಿಕೊಂಡಿದ್ದಾರೆ. ವಿಶೇಷ ಎಂದರೆ ಅಗ್ರ ಹತ್ತರ ಪಟ್ಟಿಯಲ್ಲಿ ಟೀಮ್ ಇಂಡಿಯಾದ ಏಕೈಕ ಆಟಗಾರ ಮಾತ್ರ ಸ್ಥಾನ ಪಡೆದಿದ್ದಾರೆ. ಸೌತ್ ಆಫ್ರಿಕಾ ವಿರುದ್ಧದ 2 ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ್ದ ವಿರಾಟ್ ಕೊಹ್ಲಿ (Virat Kohli) ಈ ಬಾರಿ 6ನೇ ಸ್ಥಾನದಲ್ಲಿದ್ದಾರೆ.
ವಿರಾಟ್ ಕೊಹ್ಲಿ ಇಂಗ್ಲೆಂಡ್ ವಿರುದ್ಧದ ಮೊದಲ ಟೆಸ್ಟ್ನಲ್ಲಿ ಕಣಕ್ಕಿಳಿದಿರಲಿಲ್ಲ. ಇದಾಗ್ಯೂ ಆರನೇ ಸ್ಥಾನವನ್ನು ಕಾಯ್ದುಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಇನ್ನು ಕಳೆದ ಬಾರಿ ಟಾಪ್-10 ರಲ್ಲಿ ಕೊನೆಯ ಸ್ಥಾನದಲ್ಲಿದ್ದ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಈ ಬಾರಿ 2 ಸ್ಥಾನ ಕುಸಿತ ಕಂಡು 12ನೇ ಶ್ರೇಯಾಂಕಕ್ಕೆ ತೃಪ್ತಿಪಟ್ಟುಕೊಂಡಿದ್ದಾರೆ. ಹಾಗೆಯೇ 13ನೇ ಸ್ಥಾನದಲ್ಲಿ ರಿಷಭ್ ಪಂತ್ ಕಾಣಿಸಿಕೊಂಡಿರುವುದು ವಿಶೇಷ.
ಅಂದರೆ ಕಳೆದ 1 ವರ್ಷದಿಂದ ಯಾವುದೇ ಟೆಸ್ಟ್ ಪಂದ್ಯವಾಡದಿದ್ದರೂ ರಿಷಭ್ ಪಂತ್ ಅವರ ಶ್ರೇಯಾಂಕದಲ್ಲಿ ಮಹತ್ವದ ಬದಲಾವಣೆಯಾಗಿಲ್ಲ. ಒಟ್ಟು 721 ಅಂಕಗಳೊಂದಿಗೆ ಪಂತ್ ಈಗಲೂ ಟಾಪ್-15 ನಲ್ಲಿ ಕಾಣಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಅದರಂತೆ ಟೆಸ್ಟ್ ಬ್ಯಾಟರ್ಗಳ ನೂತನ ಶ್ರೇಯಾಂಕ ಪಟ್ಟಿ ಈ ಕೆಳಗಿನಂತಿದೆ.
ಟೆಸ್ಟ್ ಬ್ಯಾಟರ್ಗಳ ಶ್ರೇಯಾಂಕ ಪಟ್ಟಿ:
- ಕೇನ್ ವಿಲಿಯಮ್ಸನ್ (ನ್ಯೂಝಿಲೆಂಡ್)- 864 ಪಾಯಿಂಟ್ಸ್
- ಜೋ ರೂಟ್ (ಇಂಗ್ಲೆಂಡ್)- 832 ಪಾಯಿಂಟ್ಸ್
- ಸ್ಟೀವ್ ಸ್ಮಿತ್ (ಆಸ್ಟ್ರೇಲಿಯಾ)- 818 ಪಾಯಿಂಟ್ಸ್
- ಡೇರಿಲ್ ಮಿಚೆಲ್ (ನ್ಯೂಝಿಲೆಂಡ್)- 786 ಪಾಯಿಂಟ್ಸ್
- ಬಾಬರ್ ಆಝಂ (ಪಾಕಿಸ್ತಾನ್)- 768 ಪಾಯಿಂಟ್ಸ್
- ವಿರಾಟ್ ಕೊಹ್ಲಿ (ಭಾರತ)- 767 ಪಾಯಿಂಟ್ಸ್
- ಉಸ್ಮಾನ್ ಖ್ವಾಜಾ (ಆಸ್ಟ್ರೇಲಿಯಾ)- 765 ಪಾಯಿಂಟ್ಸ್
- ಹ್ಯಾರಿ ಬ್ರೂಕ್ (ಇಂಗ್ಲೆಂಡ್)- 765 ಪಾಯಿಂಟ್ಸ್
- ದಿಮುತ್ ಕರುಣರತ್ನೆ (ಶ್ರೀಲಂಕಾ)- 747 ಪಾಯಿಂಟ್ಸ್
- ಮಾರ್ನಸ್ ಲಾಬುಶೇನ್ (ಆಸ್ಟ್ರೇಲಿಯಾ)- 746 ಪಾಯಿಂಟ್ಸ್
ಇದನ್ನೂ ಓದಿ: Virat Kohli vs Rohit Sharma: ವಿರಾಟ್ ಕೊಹ್ಲಿ vs ರೋಹಿತ್ ಶರ್ಮಾ: ಯಾರು ಉತ್ತಮ ನಾಯಕ?
ಮುಂದಿನ ವಾರ ಮಹತ್ವದ ಬದಲಾವಣೆ:
ಫೆಬ್ರವರಿ ಮೊದಲ ವಾರದಲ್ಲಿ ಭಾರತ ಮತ್ತು ಇಂಗ್ಲೆಂಡ್, ಅಫ್ಘಾನಿಸ್ತಾನ್ ಮತ್ತು ಶ್ರೀಲಂಕಾ ನಡುವೆ ಟೆಸ್ಟ್ ಪಂದ್ಯ ನಡೆಯಲಿದೆ. ಹಾಗೆಯೇ ಇದೇ ವಾರದಲ್ಲಿ ನ್ಯೂಝಿಲೆಂಡ್ ಹಾಗೂ ಸೌತ್ ಆಫ್ರಿಕಾ ತಂಡಗಳು ಟೆಸ್ಟ್ನಲ್ಲಿ ಮುಖಾಮುಖಿಯಾಗಲಿದೆ. ಹೀಗಾಗಿ ಮುಂದಿನ ವಾರದ ಐಸಿಸಿ ಶ್ರೇಯಾಂಕದಲ್ಲಿ ಮಹತ್ವದ ಬದಲಾವಣೆ ಕಂಡು ಬರಲಿದೆ.