ICC Test Rankings: ಅಗ್ರ-10 ರಲ್ಲಿ ಕಾಣಿಸಿಕೊಂಡ ವಿರಾಟ್ ಕೊಹ್ಲಿ-ರೋಹಿತ್ ಶರ್ಮಾ

| Updated By: ಝಾಹಿರ್ ಯೂಸುಫ್

Updated on: Jan 10, 2024 | 8:19 AM

ICC Test Rankings: ಈ ಬಾರಿ ಟಾಪ್-10 ಪಟ್ಟಿಯಲ್ಲಿ ಟೀಮ್ ಇಂಡಿಯಾದ ಇಬ್ಬರು ಆಟಗಾರರು ಕಾಣಿಸಿಕೊಂಡಿದ್ದಾರೆ. ಸೌತ್ ಆಫ್ರಿಕಾ ವಿರುದ್ಧದ 2 ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ್ದ ವಿರಾಟ್ ಕೊಹ್ಲಿ 3 ಸ್ಥಾನ ಮೇಲೇರಿದರೆ, ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ 4 ಸ್ಥಾನಗಳ ಜಿಗಿತದೊಂದಿಗೆ ಅಗ-10 ರಲ್ಲಿ ಕಾಣಿಸಿಕೊಂಡಿದ್ದಾರೆ.

ICC Test Rankings: ಅಗ್ರ-10 ರಲ್ಲಿ ಕಾಣಿಸಿಕೊಂಡ ವಿರಾಟ್ ಕೊಹ್ಲಿ-ರೋಹಿತ್ ಶರ್ಮಾ
Virat Kohli - Rohit Sharma (4)
Follow us on

ICC Test Cricket Rankings: ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ (ICC) ಟೆಸ್ಟ್ ಬ್ಯಾಟರ್​ಗಳ​ ಹೊಸ ಶ್ರೇಯಾಂಕ ಪಟ್ಟಿಯನ್ನು ಪ್ರಕಟಿಸಿದೆ. ಈ ಬಾರಿ ಕೂಡ ನ್ಯೂಝಿಲೆಂಡ್​ನ ಕೇನ್ ವಿಲಿಯಮ್ಸನ್ (Kane Williamson) ಅಗ್ರಸ್ಥಾನವನ್ನು ಕಾಯ್ದುಕೊಂಡಿದ್ದಾರೆ. ಹಾಗೆಯೇ ಇಂಗ್ಲೆಂಡ್ ಬ್ಯಾಟರ್ ಜೋ ರೂಟ್ ದ್ವಿತೀಯ ಸ್ಥಾನದಲ್ಲಿದ್ದು, ಮೂರನೇ ಮತ್ತು ನಾಲ್ಕನೇ ಸ್ಥಾನಗಳನ್ನು ಅಲಂಕರಿಸುವಲ್ಲಿ ಆಸ್ಟ್ರೇಲಿಯಾ ಬ್ಯಾಟರ್​ಗಳು ಯಶಸ್ವಿಯಾಗಿದ್ದಾರೆ.

ವಿಶೇಷ ಎಂದರೆ ಈ ಬಾರಿ ಟಾಪ್-10 ಪಟ್ಟಿಯಲ್ಲಿ ಟೀಮ್ ಇಂಡಿಯಾದ ಇಬ್ಬರು ಆಟಗಾರರು ಕಾಣಿಸಿಕೊಂಡಿದ್ದಾರೆ. ಸೌತ್ ಆಫ್ರಿಕಾ ವಿರುದ್ಧದ 2 ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ್ದ ವಿರಾಟ್ ಕೊಹ್ಲಿ 3 ಸ್ಥಾನ ಮೇಲೇರಿದರೆ, ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ 4 ಸ್ಥಾನಗಳ ಜಿಗಿತದೊಂದಿಗೆ ಅಗ-10 ರಲ್ಲಿ ಕಾಣಿಸಿಕೊಂಡಿದ್ದಾರೆ. ಅದರಂತೆ ಟೆಸ್ಟ್​​ ಬ್ಯಾಟರ್​ಗಳ ನೂತನ ಶ್ರೇಯಾಂಕ ಪಟ್ಟಿ ಈ ಕೆಳಗಿನಂತಿದೆ.

ಟೆಸ್ಟ್ ಬ್ಯಾಟರ್​ಗಳ ಶ್ರೇಯಾಂಕ ಪಟ್ಟಿ:

  1. ಕೇನ್ ವಿಲಿಯಮ್ಸನ್ (ನ್ಯೂಝಿಲೆಂಡ್)- 864 ಪಾಯಿಂಟ್ಸ್​
  2. ಜೋ ರೂಟ್ (ಇಂಗ್ಲೆಂಡ್)- 859 ಪಾಯಿಂಟ್ಸ್​
  3. ಸ್ಟೀವ್ ಸ್ಮಿತ್ (ಆಸ್ಟ್ರೇಲಿಯಾ)- 818 ಪಾಯಿಂಟ್ಸ್​
  4. ಮಾರ್ನಸ್ ಲಾಬುಶೇನ್ (ಆಸ್ಟ್ರೇಲಿಯಾ)- 802 ಪಾಯಿಂಟ್ಸ್​
  5. ಡೇರಿಲ್ ಮಿಚೆಲ್ (ನ್ಯೂಝಿಲೆಂಡ್)- 786 ಪಾಯಿಂಟ್ಸ್​
  6. ವಿರಾಟ್ ಕೊಹ್ಲಿ (ಭಾರತ)- 775 ಪಾಯಿಂಟ್ಸ್​
  7. ಹ್ಯಾರಿ ಬ್ರೂಕ್ (ಇಂಗ್ಲೆಂಡ್)- 773 ಪಾಯಿಂಟ್ಸ್​
  8. ಬಾಬರ್ ಆಝಂ (ಪಾಕಿಸ್ತಾನ್)- 768 ಪಾಯಿಂಟ್ಸ್​
  9. ಉಸ್ಮಾನ್ ಖ್ವಾಜಾ (ಆಸ್ಟ್ರೇಲಿಯಾ)- 764 ಪಾಯಿಂಟ್ಸ್
  10. ರೋಹಿತ್ ಶರ್ಮಾ (ಭಾರತ)- 748 ಪಾಯಿಂಟ್ಸ್​

ಅಗ್ರಸ್ಥಾನದಲ್ಲಿ ಅಶ್ವಿನ್:

ಟೆಸ್ಟ್ ಬೌಲರ್​ಗಳ ಶ್ರೇಯಾಂಕ ಪಟ್ಟಿಯಲ್ಲಿ ಟೀಮ್ ಇಂಡಿಯಾ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಅಗ್ರಸ್ಥಾನ ಅಲಂಕರಿಸಿದ್ದಾರೆ. ಇನ್ನು ದ್ವಿತೀಯ ಸ್ಥಾನದಲ್ಲಿ ಆಸ್ಟ್ರೇಲಿಯಾ ತಂಡದ ನಾಯಕ ಪ್ಯಾಟ್ ಕಮಿನ್ಸ್​ ಇದ್ದು, ಮೂರನೇ ಸ್ಥಾನದಲ್ಲಿ ಕಗಿಸೊ ರಬಾಡ ಕಾಣಿಸಿಕೊಂಡಿದ್ದಾರೆ. ಹಾಗೆಯೇ ಟಾಪ್-10 ರಲ್ಲಿ ಭಾರತದ ಮೂವರು ಬೌಲರ್​ಗಳು ಸ್ಥಾನ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಅದರಂತೆ ಟೆಸ್ಟ್ ಬೌಲರ್​ಗಳ ನೂತನ ಶ್ರೇಯಾಂಕ ಪಟ್ಟಿ ಈ ಕೆಳಗಿನಂತಿದೆ.

ಇದನ್ನೂ ಓದಿ: ಶ್ರೀರಾಮನ ಹಾಡು ಕೇಳುವುದೇ ಖುಷಿ ಎಂದ ಸೌತ್ ಆಫ್ರಿಕಾ ಕ್ರಿಕೆಟಿಗ

ಟೆಸ್ಟ್ ಬೌಲರ್​ಗಳ ಶ್ರೇಯಾಂಕ ಪಟ್ಟಿ:

  1. ರವಿಚಂದ್ರನ್ ಅಶ್ವಿನ್ (ಭಾರತ)- 863 ಪಾಯಿಂಟ್ಸ್
  2. ಪ್ಯಾಟ್ ಕಮಿನ್ಸ್ (ಆಸ್ಟ್ರೇಲಿಯಾ)- 858 ಪಾಯಿಂಟ್ಸ್
  3. ಕಗಿಸೊ ರಬಾಡ (ಸೌತ್ ಆಫ್ರಿಕಾ)- 851 ಪಾಯಿಂಟ್ಸ್
  4. ಜಸ್​ಪ್ರೀತ್ ಬುಮ್ರಾ (ಭಾರತ)- 787 ಪಾಯಿಂಟ್ಸ್
  5. ರವೀಂದ್ರ ಜಡೇಜಾ (ಭಾರತ)- 774 ಪಾಯಿಂಟ್ಸ್
  6. ಒಲಿ ರಾಬಿನ್ಸನ್ (ಇಂಗ್ಲೆಂಡ್)- 762 ಪಾಯಿಂಟ್ಸ್
  7. ಜೇಮ್ಸ್ ಅ್ಯಂಡರ್ಸನ್ (ಇಂಗ್ಲೆಂಡ್)- 761 ಪಾಯಿಂಟ್ಸ್​
  8. ಜೋಶ್ ಹ್ಯಾಝಲ್​ವುಡ್ (ಆಸ್ಟ್ರೇಲಿಯಾ)- 761 ಪಾಯಿಂಟ್ಸ್​
  9. ಮಿಚೆಲ್ ಸ್ಟಾರ್ಕ್​ (ಆಸ್ಟ್ರೇಲಿಯಾ)- 753 ಪಾಯಿಂಟ್ಸ್
  10. ಪ್ರಭಾತ್ ಜಯಸೂರ್ಯ (ಶ್ರೀಲಂಕಾ)- 751 ಪಾಯಿಂಟ್ಸ್​