2024 ರಿಂದ 2031 ರವರೆಗೆ ನಡೆಯಲಿರುವ ವಿಶ್ವಕಪ್ (World Cup) ಸೇರಿದಂತೆ ಪ್ರಮುಖ ಟೂರ್ನಿಗಳ ಆತಿಥೇಯ ರಾಷ್ಟ್ರಗಳ ಪಟ್ಟಿಯನ್ನು ಅಂತರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ (ICC) ಪ್ರಕಟಿಸಿದೆ. 2024-2031ರ ಅವಧಿಯಲ್ಲಿ ಒಟ್ಟು 8 ಟೂರ್ನಿಗಳು ನಡೆಯಲಿದ್ದು, ಅದರಲ್ಲಿ ಎರಡು ಏಕದಿನ ವಿಶ್ವಕಪ್, ನಾಲ್ಕು ಟಿ20 ವಿಶ್ವಕಪ್ ಹಾಗೂ ಎರಡು ಚಾಂಪಿಯನ್ಸ್ ಟ್ರೋಫಿ ನಡೆಯಲಿದೆ.
ಈ ಟೂರ್ನಿಯನ್ನು ಆಯೋಜಿಸಲು ಐಸಿಸಿಯ 11 ಪೂರ್ಣ ಸದಸ್ಯ ರಾಷ್ಟ್ರಗಳು ಮತ್ತು ಮೂರು ಸಹಾಯಕ ಸದಸ್ಯ ರಾಷ್ಟ್ರವನ್ನು ಆಯ್ಕೆ ಮಾಡಿಕೊಂಡಿದೆ. ಅದರಂತೆ 2024 ರ ಟಿ20 ವಿಶ್ವಕಪ್ ವೆಸ್ಟ್ ಇಂಡೀಸ್ ಹಾಗೂ ಅಮೆರಿಕದಲ್ಲಿ ಆಯೋಜನೆಯಾಗಲಿದೆ.
ಹಾಗೆಯೇ 2025ರಲ್ಲಿ ಪಾಕಿಸ್ತಾನದಲ್ಲಿ ಚಾಂಪಿಯನ್ಸ್ ಟ್ರೋಫಿ ನಡೆಯಲಿದೆ. ಇನ್ನು 2026ರ ಟಿ20 ವಿಶ್ವಕಪ್ ಅನ್ನು ಶ್ರೀಲಂಕಾ ಹಾಗೂ ಭಾರತ ಜಂಟಿಯಾಗಿ ಆಯೋಜಿಸಲಿದೆ. 2027ರ ಏಕದಿನ ವಿಶ್ವಕಪ್ಗೆ ದಕ್ಷಿಣ ಆಫ್ರಿಕಾ, ಝಿಂಬಾಬ್ವೆ ಹಾಗೂ ನಮೀಬಿಯಾ ಜಂಟಿಯಾಗಿ ಆತಿಥ್ಯವಹಿಸಲಿದೆ.
2028ರ ಟಿ20 ವಿಶ್ವಕಪ್ ಅನ್ನು ನ್ಯೂಝಿಲೆಂಡ್ ಹಾಗೂ ಆಸ್ಟ್ರೇಲಿಯಾ ಕ್ರಿಕೆಟ್ ಬೋರ್ಡ್ ಆಯೋಜಿಸಲಿದೆ. 2029ರ ಚಾಂಪಿಯನ್ಸ್ ಟ್ರೋಫಿ ಭಾರತದಲ್ಲಿ ನಡೆಯಲಿದ್ದು, ಹಾಗೆಯೇ 2030ರ ಟಿ20 ವಿಶ್ವಕಪ್ಗೆ ಇಂಗ್ಲೆಂಡ್-ಐರ್ಲೆಂಡ್-ಸ್ಕಾಟ್ಲೆಂಡ್ ಆತಿಥ್ಯವಹಿಸಲಿದೆ.
ಅದೇ ರೀತಿ 2031 ಏಕದಿನ ವಿಶ್ವಕಪ್ ಅನ್ನು ಭಾರತ ಹಾಗೂ ಬಾಂಗ್ಲಾದೇಶದಲ್ಲಿ ನಡೆಸಲಾಗುತ್ತದೆ. ಈ ಮೂಲಕ ಐಸಿಸಿ ಮುಂದಿನ ಟೂರ್ನಿಗಳನ್ನು ನೆರೆಹೊರೆ ದೇಶಗಳಲ್ಲಿ ಜಂಟಿಯಾಗಿ ಆಯೋಜಿಸಲು ನಿರ್ಧರಿಸಿದೆ.
2029ರ (ಭಾರತ) ಚಾಂಪಿಯನ್ಸ್ ಟ್ರೋಫಿಯನ್ನು ಹೊರತುಪಡಿಸಿದರೆ ಉಳಿದೆಲ್ಲಾ ಟೂರ್ನಿಗಳು ಜಂಟಿಯಾಗಿ ಆಯೋಜನೆಗೊಳ್ಳಲಿರುವುದು ವಿಶೇಷ. ಅದರಂತೆ ಮುಂಬರುವ 8 ವರ್ಷದಲ್ಲಿ 6 ವಿಶ್ವಕಪ್, 2 ಚಾಂಪಿಯನ್ಸ್ ಟ್ರೋಫಿ ನಡೆಯಲಿದೆ. ಇದರ ನಡುವೆ 2025 ರಲ್ಲಿ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಕೂಡ ಜರುಗಲಿದೆ.
ಇದನ್ನೂ ಓದಿ: IPL 2024: ಒಂದು ಎಸೆತದ ಬೆಲೆ ಬರೋಬ್ಬರಿ 7.40 ಲಕ್ಷ ರೂ..!