AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ICC U-19 World Cup Final: ಫೈನಲ್​ನಲ್ಲಿ ಭಾರತದ ಎದುರಾಳಿ ಯಾರು? ಯಾವ ಚಾನೆಲ್​ನಲ್ಲಿ ನೇರ ಪ್ರಸಾರ? ಇಲ್ಲಿದೆ ಸಂಪೂರ್ಣ ಮಾಹಿತಿ

ICC U-19 World Cup Final: 2018 ರಲ್ಲಿ ಪೃಥ್ವಿ ಶಾ ನಾಯಕತ್ವದಲ್ಲಿ ಟೀಮ್ ಇಂಡಿಯಾ ಕೊನೆಯ ಬಾರಿ ಅಂಡರ್​-19 ವಿಶ್ವಕಪ್ ಚಾಂಪಿಯನ್ ಆಗಿತ್ತು. ಇದಾಗ್ಯೂ 2020 ರಲ್ಲಿ ಪ್ರಿಯಮ್ ಗಾರ್ಗ್ ನಾಯಕತ್ವದಲ್ಲಿ ಟೀಮ್ ಇಂಡಿಯಾ ಫೈನಲ್ ತಲುಪಿದರೂ ಬಾಂಗ್ಲಾದೇಶ ವಿರುದ್ದ ಸೋಲನುಭವಿಸಿತು.

ICC U-19 World Cup Final: ಫೈನಲ್​ನಲ್ಲಿ ಭಾರತದ ಎದುರಾಳಿ ಯಾರು? ಯಾವ ಚಾನೆಲ್​ನಲ್ಲಿ ನೇರ ಪ್ರಸಾರ? ಇಲ್ಲಿದೆ ಸಂಪೂರ್ಣ ಮಾಹಿತಿ
ICC U-19 World Cup Final
TV9 Web
| Updated By: ಝಾಹಿರ್ ಯೂಸುಫ್|

Updated on: Feb 03, 2022 | 4:33 PM

Share

ಅಂಡರ್​ 19 ವಿಶ್ವಕಪ್‌ನ (U-19 World Cup Final) ಫೈನಲ್ ಪಂದ್ಯಕ್ಕೆ ವೇದಿಕೆ ಸಜ್ಜಾಗಿದೆ. ಫೆಬ್ರವರಿ 5 ರಂದು ಅಂಟಿಗುವಾದ ವಿವಿಯನ್ ರಿಚರ್ಡ್ಸ್ ಸ್ಟೇಡಿಯಂನಲ್ಲಿ ನಡೆಯಲಿರುವ ಅಂತಿಮ ಹಣಾಹಣಿಯಲ್ಲಿ ಭಾರತ (India U9) ಮತ್ತು ಇಂಗ್ಲೆಂಡ್ (Engaland U19) ಮುಖಾಮುಖಿಯಾಗಲಿದೆ. ಬುಧವಾರ ನಡೆದ ಸೆಮಿಫೈನಲ್‌ನಲ್ಲಿ ಯಶ್ ಧುಲ್ ನಾಯಕತ್ವದ ಭಾರತ ತಂಡವು ಆಸ್ಟ್ರೇಲಿಯಾವನ್ನು ಸೋಲಿಸಿ ಫೈನಲ್‌ಗೆ ಪ್ರವೇಶಿಸಿದರೆ, ಇಂಗ್ಲೆಂಡ್ ಅಫ್ಘಾನಿಸ್ತಾನವನ್ನು ಸೋಲಿಸಿ ಅಂತಿಮ ಸುತ್ತಿಗೆ ತಲುಪಿದೆ. ಉಭಯ ತಂಡಗಳೂ ಬಲಿಷ್ಠ ಯುವ ಆಟಗಾರರನ್ನು ಹೊಂದಿದ್ದು, ಹೀಗಾಗಿ ಫೈನಲ್ ಪಂದ್ಯದಲ್ಲಿ ಭರ್ಜರಿ ಪೈಪೋಟಿಯನ್ನು ನಿರೀಕ್ಷಿಸಬಹುದು.

ಅಂತಿಮ ಹಣಾಹಣಿಯಲ್ಲಿ ಟೀಮ್ ಇಂಡಿಯಾ ಗೆದ್ದರೆ 5ನೇ ಬಾರಿ ಚಾಂಪಿಯನ್ ಪಟ್ಟಕ್ಕೇರಲಿದೆ. ಇದಕ್ಕೂ ಮುನ್ನ ಭಾರತ ಅಂಡರ್-19 ತಂಡವು 4 ಬಾರಿ ವಿಶ್ವ ಚಾಂಪಿಯನ್​ ಆಗಿ ಹೊರಹೊಮ್ಮಿದೆ. ಮೊದಲ ಬಾರಿ 2000ರಲ್ಲಿ ಮೊಹಮ್ಮದ್ ಕೈಫ್ ನೇತೃತ್ವದಲ್ಲಿ ಭಾರತ ತಂಡವು ಕಿರಿಯರ ವಿಶ್ವಕಪ್ ಗೆದ್ದರೆ, ಆ ಬಳಿಕ ವಿರಾಟ್ ಕೊಹ್ಲಿ ನಾಯಕತ್ವದಲ್ಲಿ 2008 ರಲ್ಲಿ ಚಾಂಪಿಯನ್​ ಆಗಿ ಹೊರಹೊಮ್ಮಿತ್ತು. ಇದಾದ ಬಳಿಕ 2012 ರಲ್ಲಿ ಉನ್ಮುಕ್ತ್ ಚಂದ್ ನಾಯಕತ್ವದಲ್ಲಿ ಭಾರತ ತಂಡವು ಮೂರನೇ ಬಾರಿಗೆ ಚಾಂಪಿಯನ್ ಪಟ್ಟ ಅಲಂಕರಿಸಿತ್ತು.

ಇನ್ನು 2018 ರಲ್ಲಿ ಪೃಥ್ವಿ ಶಾ ನಾಯಕತ್ವದಲ್ಲಿ ಟೀಮ್ ಇಂಡಿಯಾ ಕೊನೆಯ ಬಾರಿ ಅಂಡರ್​-19 ವಿಶ್ವಕಪ್ ಚಾಂಪಿಯನ್ ಆಗಿತ್ತು. ಇದಾಗ್ಯೂ 2020 ರಲ್ಲಿ ಪ್ರಿಯಮ್ ಗಾರ್ಗ್ ನಾಯಕತ್ವದಲ್ಲಿ ಟೀಮ್ ಇಂಡಿಯಾ ಫೈನಲ್ ತಲುಪಿದರೂ ಬಾಂಗ್ಲಾದೇಶ ವಿರುದ್ದ ಸೋಲನುಭವಿಸಿತು. ಇದೀಗ ನಾಲ್ಕು ಬಾರಿಯ ಚಾಂಪಿಯನ್‌ ಭಾರತ ತನ್ನ ಐದನೇ ಬಾರಿ ಪ್ರಶಸ್ತಿಯನ್ನು ತನ್ನದಾಗಿಸಿಕೊಳ್ಳುವ ವಿಶ್ವಾಸದಲ್ಲಿದೆ.

ಭಾರತ ಮತ್ತು ಇಂಗ್ಲೆಂಡ್ ನಡುವಿನ ಅಂಡರ್ 19 ವಿಶ್ವಕಪ್ ಫೈನಲ್ ಪಂದ್ಯ ಯಾವಾಗ? ಅಂಡರ್ 19 ವಿಶ್ವಕಪ್​ನ ಫೈನಲ್ ಪಂದ್ಯವು ಫೆಬ್ರವರಿ 5 ರಂದು ನಡೆಯಲಿದೆ.

ಪಂದ್ಯ ಯಾವಾಗ ಆರಂಭವಾಗಲಿದೆ? ಭಾರತೀಯ ಕಾಲಮಾನ ಸಂಜೆ 6.30ಕ್ಕೆ ಪಂದ್ಯ ಶುರುವಾಗಲಿದೆ. ಸಂಜೆ 6 ಗಂಟೆಗೆ ಟಾಸ್ ನಡೆಯಲಿದೆ.

ಪಂದ್ಯದ ನೇರ ಪ್ರಸಾರವನ್ನು ನಾನು ಎಲ್ಲಿ ವೀಕ್ಷಿಸಬಹುದು? ಫೈನಲ್ ಪಂದ್ಯದ ನೇರ ಪ್ರಸಾರವು ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್‌ನ ಚಾನೆಲ್‌ನಲ್ಲಿ ಇರಲಿದೆ.

ಅಂಡರ್ 19 ವಿಶ್ವಕಪ್ ಸೆಮಿಫೈನಲ್ ಪಂದ್ಯದ ಲೈವ್ ಸ್ಟ್ರೀಮಿಂಗ್ ಎಲ್ಲಿ ನೋಡಬಹುದು? ಫೈನಲ್ ಪಂದ್ಯದ ಲೈವ್ ಸ್ಟ್ರೀಮಿಂಗ್ ಹಾಟ್‌ಸ್ಟಾರ್‌ನಲ್ಲೂ ಕೂಡ ವೀಕ್ಷಿಸಬಹುದು.

ಇದನ್ನೂ ಓದಿ: IPL 2022 auction: ಮೆಗಾ ಹರಾಜಿನಲ್ಲಿ ಕಾಣಿಸಿಕೊಳ್ಳಲಿರುವ 590 ಆಟಗಾರರ ಹೆಸರು ಇಲ್ಲಿದೆ

ಇದನ್ನೂ ಓದಿ: IPL 2022: ಮೆಗಾ ಹರಾಜಿನಲ್ಲಿ 590 ಆಟಗಾರರು: ಯಾವ ದೇಶದಿಂದ ಎಷ್ಟು ಆಟಗಾರರು? ಇಲ್ಲಿದೆ ಸಂಪೂರ್ಣ ಪಟ್ಟಿ

ಇದನ್ನೂ ಓದಿ: Jason Holder: ಡಬಲ್ ಹ್ಯಾಟ್ರಿಕ್ ಪಡೆದು ವಿಶ್ವ ದಾಖಲೆ ನಿರ್ಮಿಸಿದ ಜೇಸನ್ ಹೋಲ್ಡರ್

(ICC U-19 World Cup Final Match: When and where to watch on TV & online)U19 World Cup Final

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ