ಅಂಡರ್ 19 ವಿಶ್ವಕಪ್‌ನ (U-19 World Cup Final) ಫೈನಲ್ ಪಂದ್ಯಕ್ಕೆ ವೇದಿಕೆ ಸಜ್ಜಾಗಿದೆ. ಫೆಬ್ರವರಿ 5 ರಂದು ಅಂಟಿಗುವಾದ ವಿವಿಯನ್ ರಿಚರ್ಡ್ಸ್ ಸ್ಟೇಡಿಯಂನಲ್ಲಿ ನಡೆಯಲಿರುವ ಅಂತಿಮ ಹಣಾಹಣಿಯಲ್ಲಿ ಭಾರತ (India U9) ಮತ್ತು ಇಂಗ್ಲೆಂಡ್ (Engaland U19) ಮುಖಾಮುಖಿಯಾಗಲಿದೆ. ಬುಧವಾರ ನಡೆದ ಸೆಮಿಫೈನಲ್‌ನಲ್ಲಿ ಯಶ್ ಧುಲ್ ನಾಯಕತ್ವದ ಭಾರತ ತಂಡವು ಆಸ್ಟ್ರೇಲಿಯಾವನ್ನು ಸೋಲಿಸಿ ಫೈನಲ್‌ಗೆ ಪ್ರವೇಶಿಸಿದರೆ, ಇಂಗ್ಲೆಂಡ್ ಅಫ್ಘಾನಿಸ್ತಾನವನ್ನು ಸೋಲಿಸಿ ಅಂತಿಮ ಸುತ್ತಿಗೆ ತಲುಪಿದೆ. ಉಭಯ ತಂಡಗಳೂ ಬಲಿಷ್ಠ ಯುವ ಆಟಗಾರರನ್ನು ಹೊಂದಿದ್ದು, ಹೀಗಾಗಿ ಫೈನಲ್ ಪಂದ್ಯದಲ್ಲಿ ಭರ್ಜರಿ ಪೈಪೋಟಿಯನ್ನು ನಿರೀಕ್ಷಿಸಬಹುದು.
ಅಂತಿಮ ಹಣಾಹಣಿಯಲ್ಲಿ ಟೀಮ್ ಇಂಡಿಯಾ ಗೆದ್ದರೆ 5ನೇ ಬಾರಿ ಚಾಂಪಿಯನ್ ಪಟ್ಟಕ್ಕೇರಲಿದೆ. ಇದಕ್ಕೂ ಮುನ್ನ ಭಾರತ ಅಂಡರ್-19 ತಂಡವು 4 ಬಾರಿ ವಿಶ್ವ ಚಾಂಪಿಯನ್ ಆಗಿ ಹೊರಹೊಮ್ಮಿದೆ. ಮೊದಲ ಬಾರಿ 2000ರಲ್ಲಿ ಮೊಹಮ್ಮದ್ ಕೈಫ್ ನೇತೃತ್ವದಲ್ಲಿ ಭಾರತ ತಂಡವು ಕಿರಿಯರ ವಿಶ್ವಕಪ್ ಗೆದ್ದರೆ, ಆ ಬಳಿಕ ವಿರಾಟ್ ಕೊಹ್ಲಿ ನಾಯಕತ್ವದಲ್ಲಿ 2008 ರಲ್ಲಿ ಚಾಂಪಿಯನ್ ಆಗಿ ಹೊರಹೊಮ್ಮಿತ್ತು. ಇದಾದ ಬಳಿಕ 2012 ರಲ್ಲಿ ಉನ್ಮುಕ್ತ್ ಚಂದ್ ನಾಯಕತ್ವದಲ್ಲಿ ಭಾರತ ತಂಡವು ಮೂರನೇ ಬಾರಿಗೆ ಚಾಂಪಿಯನ್ ಪಟ್ಟ ಅಲಂಕರಿಸಿತ್ತು.
ಇನ್ನು 2018 ರಲ್ಲಿ ಪೃಥ್ವಿ ಶಾ ನಾಯಕತ್ವದಲ್ಲಿ ಟೀಮ್ ಇಂಡಿಯಾ ಕೊನೆಯ ಬಾರಿ ಅಂಡರ್-19 ವಿಶ್ವಕಪ್ ಚಾಂಪಿಯನ್ ಆಗಿತ್ತು. ಇದಾಗ್ಯೂ 2020 ರಲ್ಲಿ ಪ್ರಿಯಮ್ ಗಾರ್ಗ್ ನಾಯಕತ್ವದಲ್ಲಿ ಟೀಮ್ ಇಂಡಿಯಾ ಫೈನಲ್ ತಲುಪಿದರೂ ಬಾಂಗ್ಲಾದೇಶ ವಿರುದ್ದ ಸೋಲನುಭವಿಸಿತು. ಇದೀಗ ನಾಲ್ಕು ಬಾರಿಯ ಚಾಂಪಿಯನ್ ಭಾರತ ತನ್ನ ಐದನೇ ಬಾರಿ ಪ್ರಶಸ್ತಿಯನ್ನು ತನ್ನದಾಗಿಸಿಕೊಳ್ಳುವ ವಿಶ್ವಾಸದಲ್ಲಿದೆ.
ಭಾರತ ಮತ್ತು ಇಂಗ್ಲೆಂಡ್ ನಡುವಿನ ಅಂಡರ್ 19 ವಿಶ್ವಕಪ್ ಫೈನಲ್ ಪಂದ್ಯ ಯಾವಾಗ?
ಅಂಡರ್ 19 ವಿಶ್ವಕಪ್‌ನ ಫೈನಲ್ ಪಂದ್ಯವು ಫೆಬ್ರವರಿ 5 ರಂದು ನಡೆಯಲಿದೆ.
ಪಂದ್ಯ ಯಾವಾಗ ಆರಂಭವಾಗಲಿದೆ?
ಭಾರತೀಯ ಕಾಲಮಾನ ಸಂಜೆ 6.30ಕ್ಕೆ ಪಂದ್ಯ ಶುರುವಾಗಲಿದೆ. ಸಂಜೆ 6 ಗಂಟೆಗೆ ಟಾಸ್ ನಡೆಯಲಿದೆ.
ಪಂದ್ಯದ ನೇರ ಪ್ರಸಾರವನ್ನು ನಾನು ಎಲ್ಲಿ ವೀಕ್ಷಿಸಬಹುದು?
ಫೈನಲ್ ಪಂದ್ಯದ ನೇರ ಪ್ರಸಾರವು ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್‌ನ ಚಾನೆಲ್‌ನಲ್ಲಿ ಇರಲಿದೆ.
ಅಂಡರ್ 19 ವಿಶ್ವಕಪ್ ಸೆಮಿಫೈನಲ್ ಪಂದ್ಯದ ಲೈವ್ ಸ್ಟ್ರೀಮಿಂಗ್ ಎಲ್ಲಿ ನೋಡಬಹುದು?
ಫೈನಲ್ ಪಂದ್ಯದ ಲೈವ್ ಸ್ಟ್ರೀಮಿಂಗ್ ಹಾಟ್‌ಸ್ಟಾರ್‌ನಲ್ಲೂ ಕೂಡ ವೀಕ್ಷಿಸಬಹುದು.
ಇದನ್ನೂ ಓದಿ: IPL 2022 auction: ಮೆಗಾ ಹರಾಜಿನಲ್ಲಿ ಕಾಣಿಸಿಕೊಳ್ಳಲಿರುವ 590 ಆಟಗಾರರ ಹೆಸರು ಇಲ್ಲಿದೆ
ಇದನ್ನೂ ಓದಿ: IPL 2022: ಮೆಗಾ ಹರಾಜಿನಲ್ಲಿ 590 ಆಟಗಾರರು: ಯಾವ ದೇಶದಿಂದ ಎಷ್ಟು ಆಟಗಾರರು? ಇಲ್ಲಿದೆ ಸಂಪೂರ್ಣ ಪಟ್ಟಿ
ಇದನ್ನೂ ಓದಿ: Jason Holder: ಡಬಲ್ ಹ್ಯಾಟ್ರಿಕ್ ಪಡೆದು ವಿಶ್ವ ದಾಖಲೆ ನಿರ್ಮಿಸಿದ ಜೇಸನ್ ಹೋಲ್ಡರ್
(ICC U-19 World Cup Final Match: When and where to watch on TV & online)U19 World Cup Final