U19 World Cup 2024: ಭಾರತ- ಆಫ್ರಿಕಾ ಸೆಮಿಫೈನಲ್ ಫೈಟ್; ಗೆದ್ದವರಿಗೆ ಫೈನಲ್ ಟಿಕಟ್
U19 World Cup 2024: ದಕ್ಷಿಣ ಆಫ್ರಿಕಾದಲ್ಲಿ ನಡೆಯುತ್ತಿರುವ 19 ವರ್ಷದೊಳಗಿನವರ ವಿಶ್ವಕಪ್ ಪಂದ್ಯಾವಳಿ ಈಗ ಸೆಮಿಫೈನಲ್ ಹಂತಕ್ಕೆ ತಲುಪಿದ್ದು, ಪ್ರಶಸ್ತಿ ಸುತ್ತಿಗೆ ಎಂಟ್ರಿಕೊಡಲು 4 ತಂಡಗಳು ಈ ಸುತ್ತಿನಲ್ಲಿ ಸೆಣಸಾಟ ನಡೆಸಲಿವೆ. ಇದರಲ್ಲಿ ಭಾರತ, ಆಸ್ಟ್ರೇಲಿಯಾ, ಪಾಕಿಸ್ತಾನ ಮತ್ತು ದಕ್ಷಿಣ ಆಫ್ರಿಕಾ ತಂಡಗಳು ಸೆಮಿಫೈನಲ್‌ಗೆ ಅರ್ಹತೆ ಪಡೆದಿವೆ.

ದಕ್ಷಿಣ ಆಫ್ರಿಕಾದಲ್ಲಿ ನಡೆಯುತ್ತಿರುವ 19 ವರ್ಷದೊಳಗಿನವರ ವಿಶ್ವಕಪ್ (ICC U19 World Cup 2024) ಪಂದ್ಯಾವಳಿ ಈಗ ಸೆಮಿಫೈನಲ್ (Semi-Final) ಹಂತಕ್ಕೆ ತಲುಪಿದ್ದು, ಪ್ರಶಸ್ತಿ ಸುತ್ತಿಗೆ ಎಂಟ್ರಿಕೊಡಲು 4 ತಂಡಗಳು ಈ ಸುತ್ತಿನಲ್ಲಿ ಸೆಣಸಾಟ ನಡೆಸಲಿವೆ. ಇದರಲ್ಲಿ ಭಾರತ, ಆಸ್ಟ್ರೇಲಿಯಾ, ಪಾಕಿಸ್ತಾನ ಮತ್ತು ದಕ್ಷಿಣ ಆಫ್ರಿಕಾ ತಂಡಗಳು ಸೆಮಿಫೈನಲ್‌ಗೆ ಅರ್ಹತೆ ಪಡೆದಿವೆ. ಇದೀಗ ಈ ಸೆಮಿಫೈನಲ್‌ನಲ್ಲಿ ಮೊದಲ ಪಂದ್ಯ ಟೀಂ ಇಂಡಿಯಾ ಮತ್ತು ದಕ್ಷಿಣ ಆಫ್ರಿಕಾ (India Vs South Africa) ನಡುವೆ ನಡೆಯಲಿದೆ. ಈ ಪಂದ್ಯದಲ್ಲಿ ಗೆಲ್ಲುವ ತಂಡ ನೇರವಾಗಿ ಫೈನಲ್ ತಲುಪಲಿದೆ. ಸೋತ ತಂಡದ ಸವಾಲು ಕೊನೆಗೊಳ್ಳುತ್ತದೆ.
ಟೀಂ ಇಂಡಿಯಾದ ಅದ್ಭುತ ಪ್ರದರ್ಶನ
ಟೀಂ ಇಂಡಿಯಾ ಈ ವಿಶ್ವಕಪ್‌ನಲ್ಲಿ ಇದುವರೆಗೆ ಆಡಿರುವ ಎಲ್ಲಾ 5 ಪಂದ್ಯಗಳನ್ನು ಗೆದ್ದಿದೆ. ಲೀಗ್ ಸುತ್ತಿನ 3 ಪಂದ್ಯಗಳಲ್ಲಿ ಭಾರಿ ಅಂತರದ ಗೆಲುವು ಸಾಧಿಸಿದ ಭಾರತ, ಆ ಬಳಿಕ ಸೂಪರ್ 6ನಲ್ಲಿ ನಡೆದ ಎರಡೂ ಪಂದ್ಯಗಳಲ್ಲೂ ಗೆಲುವು ಸಾಧಿಸಿತ್ತು. ಈಗ ಟೀಂ ಇಂಡಿಯಾ ಸೆಮಿಫೈನಲ್‌ನಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಗೆದ್ದರೆ, ಗೆಲುವಿನ ಸಿಕ್ಸರ್ ಬಾರಿಸಲಿದೆ.
ಪಂದ್ಯದ ಬಗ್ಗೆ ಪೂರ್ಣ ಮಾಹಿತಿ ಇಲ್ಲಿದೆ
ಅಂಡರ್ 19 ವಿಶ್ವಕಪ್‌ನಲ್ಲಿ ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಸೆಮಿಫೈನಲ್ ಪಂದ್ಯ ಯಾವಾಗ ನಡೆಯಲ್ಲಿದೆ?
ಅಂಡರ್ 19 ವಿಶ್ವಕಪ್‌ನಲ್ಲಿ ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಸೆಮಿಫೈನಲ್ ಪಂದ್ಯ ಫೆಬ್ರವರಿ 6 ರಂದು ನಡೆಯಲ್ಲಿದೆ.
ಅಂಡರ್ 19 ವಿಶ್ವಕಪ್‌ನಲ್ಲಿ ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಸೆಮಿಫೈನಲ್ ಪಂದ್ಯ ಎಲ್ಲಿ ನಡೆಯಲ್ಲಿದೆ?
ಅಂಡರ್ 19 ವಿಶ್ವಕಪ್‌ನಲ್ಲಿ ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಸೆಮಿಫೈನಲ್ ಪಂದ್ಯ ಸಹಾರಾ ಪಾರ್ಕ್ ವಿಲೋಮೂರ್ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯಲಿದೆ.
ಅಂಡರ್ 19 ವಿಶ್ವಕಪ್‌ನಲ್ಲಿ ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಸೆಮಿಫೈನಲ್ ಪಂದ್ಯ ಎಷ್ಟು ಗಂಟೆಗೆ ಆರಂಭವಾಗಲಿದೆ?
ಅಂಡರ್ 19 ವಿಶ್ವಕಪ್‌ನಲ್ಲಿ ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಸೆಮಿಫೈನಲ್ ಪಂದ್ಯ ಭಾರತೀಯ ಕಾಲಮಾನ ಮಧ್ಯಾಹ್ನ 1:30 ಕ್ಕೆ ಪ್ರಾರಂಭವಾಗುತ್ತದೆ.
ಅಂಡರ್ 19 ವಿಶ್ವಕಪ್‌ನಲ್ಲಿ ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಸೆಮಿಫೈನಲ್ ಪಂದ್ಯದ ನೇರ ಪ್ರಸಾರ ಎಲ್ಲಿ?
ಅಂಡರ್ 19 ವಿಶ್ವಕಪ್‌ನಲ್ಲಿ ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಸೆಮಿಫೈನಲ್ ಪಂದ್ಯ ನೇರಪ್ರಸಾರವನ್ನು ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್ ಚಾನೆಲ್‌ಗಳಲ್ಲಿ ಟಿವಿಯಲ್ಲಿ ವೀಕ್ಷಿಸಬಹುದು. ಹಾಗೆಯೇ ಮೊಬೈಲ್‌ನಲ್ಲಿ ಡಿಸ್ನಿ ಪ್ಲಸ್ ಹಾಟ್‌ಸ್ಟಾರ್ ಅಪ್ಲಿಕೇಶನ್‌ನಲ್ಲಿ ಪಂದ್ಯವನ್ನು ವೀಕ್ಷಿಸಬಹುದು.
ಉಭಯ ತಂಡಗಳು
ವಿಶ್ವಕಪ್‌ಗೆ ಭಾರತ ತಂಡ: ಉದಯ್ ಸಹಾರನ್ (ನಾಯಕ), ಆದರ್ಶ್ ಸಿಂಗ್, ಅರ್ಶಿನ್ ಕುಲಕರ್ಣಿ, ಮುಶೀರ್ ಖಾನ್, ಸಚಿನ್ ಧಾಸ್, ಪ್ರಿಯಾಂಶು ಮೊಲಿಯಾ, ಅರವೇಲಿ ಅವನೀಶ್ (ವಿಕೆಟ್ ಕೀಪರ್), ಮುರುಗನ್ ಅಭಿಷೇಕ್, ಸೌಮ್ಯ ಪಾಂಡೆ, ರಾಜ್ ಲಿಂಬಾನಿ, ನಮನ್ ತಿವಾರಿ, ಆರಾಧ್ಯ ಶುಕ್ಲಾ, ರುದ್ರ ಪಟೇಲ್, ಪ್ರೇಮ್ ದಿಯೋಕರ್, ಮೊಹಮ್ಮದ್ ಅಮನ್ ಮತ್ತು ಅಂಶ್ ಗೋಸಾಯಿ.
ದಕ್ಷಿಣ ಆಫ್ರಿಕಾ ತಂಡ: ಜುವಾನ್ ಜೇಮ್ಸ್ (ನಾಯಕ), ಲುವಾನ್-ಡ್ರೆ ಪ್ರಿಟೋರಿಯಸ್ (ವಿಕೆಟ್‌ಕೀಪರ್), ಸ್ಟೀವ್ ಸ್ಟೋಕ್, ಡೇವಿಡ್ ಟೀಗರ್, ರಿಚರ್ಡ್ ಸೆಲೆಟ್ಸ್‌ವೈನ್, ದಿವಾನ್ ಮರೈಸ್, ರೊಮಾಶನ್ ಪಿಳ್ಳೆ, ರಿಲೆ ನಾರ್ಟನ್, ಟ್ರಿಸ್ಟಾನ್ ಲೂಸ್, ಎನ್‌ಕೋಬಾನಿ ಮೊಕೊಯೆನಾ, ಕ್ವೆನಾ ಮಫಕಾ, ಮಾರ್ಟಿನ್ ಖುಮಾಲೊ, ಒಲಿವರ್ ವೈಟ್‌ಹೆಡ್ ಎಂಟಾಂಡೋ ಜುಮಾ ಮತ್ತು ರಿಕ್ ಡೇನಿಯಲ್ಸ್.
ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
