AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

U19 World Cup: ಗುಂಪು ಹಂತದಲ್ಲಿ ಭಾರತ ಯಾವೆಲ್ಲ ತಂಡಗಳನ್ನು ಎದುರಿಸಲಿದೆ? ಇಲ್ಲಿದೆ ಸಂಪೂರ್ಣ ವೇಳಾಪಟ್ಟಿ

U19 World Cup 2024: 2024 ರ ಐಸಿಸಿ ಅಂಡರ್-19 ವಿಶ್ವಕಪ್ ಇಂದಿನಿಂದ ದಕ್ಷಿಣ ಆಫ್ರಿಕಾದಲ್ಲಿ ಆರಂಭವಾಗಿದೆ. ಈ ಬಾರಿ ಪಂದ್ಯಾವಳಿಯಲ್ಲಿ ಒಟ್ಟು 16 ತಂಡಗಳು ಭಾಗವಹಿಸುತ್ತಿದ್ದು, ತಲಾ 4 ರಂತೆ ನಾಲ್ಕು ವಿವಿಧ ಗುಂಪುಗಳಾಗಿ ವಿಂಗಡಿಸಲಾಗಿದೆ. ಇದರಲ್ಲಿ ಬಾಂಗ್ಲಾದೇಶ, ಐರ್ಲೆಂಡ್ ಮತ್ತು ಅಮೆರಿಕದ ಅಂಡರ್ 19 ತಂಡವನ್ನು ಒಳಗೊಂಡಿರುವ ಎ ಗುಂಪಿನಲ್ಲಿ ಭಾರತ ತಂಡವು ಸ್ಥಾನ ಪಡೆದಿದೆ.

U19 World Cup: ಗುಂಪು ಹಂತದಲ್ಲಿ ಭಾರತ ಯಾವೆಲ್ಲ ತಂಡಗಳನ್ನು ಎದುರಿಸಲಿದೆ? ಇಲ್ಲಿದೆ ಸಂಪೂರ್ಣ ವೇಳಾಪಟ್ಟಿ
ಭಾರತ ತಂಡ
ಪೃಥ್ವಿಶಂಕರ
|

Updated on:Jan 19, 2024 | 7:10 PM

Share

2024 ರ ಐಸಿಸಿ ಅಂಡರ್-19 ವಿಶ್ವಕಪ್ (ICC Under 19 World Cup 2024) ಇಂದಿನಿಂದ ದಕ್ಷಿಣ ಆಫ್ರಿಕಾದಲ್ಲಿ ಆರಂಭವಾಗಿದೆ. ಈ ಬಾರಿ ಪಂದ್ಯಾವಳಿಯಲ್ಲಿ ಒಟ್ಟು 16 ತಂಡಗಳು ಭಾಗವಹಿಸುತ್ತಿದ್ದು, ತಲಾ 4 ರಂತೆ ನಾಲ್ಕು ವಿವಿಧ ಗುಂಪುಗಳಾಗಿ ವಿಂಗಡಿಸಲಾಗಿದೆ. ಇದರಲ್ಲಿ ಬಾಂಗ್ಲಾದೇಶ, ಐರ್ಲೆಂಡ್ ಮತ್ತು ಅಮೆರಿಕದ ಅಂಡರ್ 19 ತಂಡವನ್ನು ಒಳಗೊಂಡಿರುವ ಎ ಗುಂಪಿನಲ್ಲಿ ಭಾರತ ತಂಡವು (Indian Under-19 team) ಸ್ಥಾನ ಪಡೆದಿದೆ. ಈ ಮೆಗಾ ಇವೆಂಟ್‌ನಲ್ಲಿ ಭಾರತ ತಂಡದ ನಾಯಕತ್ವದ ಜವಾಬ್ದಾರಿಯನ್ನು ಉದಯ್ ಸಹರಾನ್ (Uday Saharan) ನಿಭಾಯಿಸುತ್ತಿದ್ದಾರೆ. ಇಲ್ಲಿಯವರೆಗೆ ಭಾರತವು 19 ವರ್ಷದೊಳಗಿನವರ ವಿಶ್ವಕಪ್ ಅನ್ನು 5 ಬಾರಿ ಗೆದ್ದಿದ್ದು, ಈ ಬಾರಿಯೂ ಪ್ರಶಸ್ತಿ ಗೆಲ್ಲುವ ನೆಚ್ಚಿನ ತಂಡ ಎನಿಸಿಕೊಂಡಿದೆ

ಬಾಂಗ್ಲಾ ವಿರುದ್ಧ ಮೊದಲ ಪಂದ್ಯ

ಇನ್ನು ಈ ವಿಶ್ವಕಪ್‌ನಲ್ಲಿ ಭಾರತ ತಂಡದ ವೇಳಾಪಟ್ಟಿಯನ್ನು ನೋಡುವುದಾದರೆ, ಜನವರಿ 20 ರಂದು ಬಾಂಗ್ಲಾದೇಶ ಅಂಡರ್ 19 ತಂಡದ ವಿರುದ್ಧ ಟೂರ್ನಿಯಲ್ಲಿ ಭಾರತ ತನ್ನ ಮೊದಲ ಪಂದ್ಯವನ್ನು ಆಡಬೇಕಾಗಿದೆ. ಉಭಯ ತಂಡಗಳ ನಡುವಿನ ಈ ಪಂದ್ಯ ಬ್ಲೋಮ್‌ಫಾಂಟೈನ್ ಮೈದಾನದಲ್ಲಿ ನಡೆಯಲಿದೆ. ಇದಾದ ಬಳಿಕ ತಂಡಕ್ಕೆ ಕೆಲ ದಿನಗಳ ವಿರಾಮ ಸಿಗಲಿದ್ದು, ಜನವರಿ 25ರಂದು ಬ್ಲೋಮ್‌ಫಾಂಟೈನ್ ಮೈದಾನದಲ್ಲಿ ಐರ್ಲೆಂಡ್ ತಂಡದ ವಿರುದ್ಧ ಎರಡನೇ ಪಂದ್ಯವನ್ನಾಡಲಿದೆ. ನಂತರ ಭಾರತ ತಂಡ ಜನವರಿ 28 ರಂದು ಅಮೆರಿಕ ಅಂಡರ್-19 ತಂಡದ ವಿರುದ್ಧ ಗುಂಪು ಹಂತದ ಕೊನೆಯ ಪಂದ್ಯವನ್ನು ಆಡಲಿದೆ.

ಗ್ರೂಪ್ ಹಂತದಲ್ಲಿ ಭಾರತ ತಂಡದ ವೇಳಾಪಟ್ಟಿ

20 ಜನವರಿ – ಭಾರತ vs ಬಾಂಗ್ಲಾದೇಶ

25 ಜನವರಿ – ಭಾರತ vs ಐರ್ಲೆಂಡ್

28 ಜನವರಿ – ಭಾರತ vs ಯುಎಸ್​ಎ

ಪಂದ್ಯ ಆರಂಭದ ಸಮಯ

ದಕ್ಷಿಣ ಆಫ್ರಿಕಾದಲ್ಲಿ ಆರಂಭವಾಗಿರುವ ಅಂಡರ್-19 ವಿಶ್ವಕಪ್‌ನಲ್ಲಿ ಭಾರತ ತಂಡದ ಪಂದ್ಯಗಳು ಭಾರತೀಯ ಕಾಲಮಾನ ಮಧ್ಯಾಹ್ನ 1:30 ಕ್ಕೆ ಪ್ರಾರಂಭವಾಗುತ್ತವೆ.

ಭಾರತ ಸಂಪೂರ್ಣ ತಂಡ:

ಅರ್ಶಿನ್ ಕುಲಕರ್ಣಿ, ಆದರ್ಶ್ ಸಿಂಗ್, ರುದ್ರ ಮಯೂರ್ ಪಟೇಲ್, ಸಚಿನ್ ಧಾಸ್, ಪ್ರಿಯಾಂಶು ಮೊಲಿಯಾ, ಮುಶೀರ್ ಖಾನ್, ಉದಯ್ ಸಹರಾನ್ (ನಾಯಕ), ಅರವೆಲ್ಲಿ ಅವನೀಶ್ ರಾವ್ (ವಿಕೆಟ್ ಕೀಪರ್), ಸೌಮ್ಯ ಕುಮಾರ್ ಪಾಂಡೆ (ಉಪನಾಯಕ), ಮುರುಗನ್ ಅಭಿಷೇಕ್, ಇನೇಶ್ ಮಹಾಜನ್ (ವಿಕೆಟ್) , ಧನುಷ್ ಗೌಡ. , ಆರಾಧ್ಯ ಶುಕ್ಲಾ, ರಾಜ್ ಲಿಂಬಾನಿ, ನಮನ್ ತಿವಾರಿ.

ಮೀಸಲು ಆಟಗಾರರು – ಪ್ರೇಮ್ ದಿಯೋಕರ್, ಅಂಶ್ ಗೋಸಾಯಿ, ಮೊಹಮ್ಮದ್ ಅಮನ್.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:09 pm, Fri, 19 January 24

ರಾಜಶೇಖರ್​​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ: ಸಚಿವ ಜಮೀರ್ ವಿರುದ್ಧ ದೂರು
ರಾಜಶೇಖರ್​​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ: ಸಚಿವ ಜಮೀರ್ ವಿರುದ್ಧ ದೂರು
ಸ್ಪಂದನಾ ಫ್ಯಾಮಿಲಿಗೆ ಗಿಲ್ಲಿ ಇಷ್ಟ ಆಗಿದ್ದೇ ಈ ಕಾರಣಕ್ಕೆ; ವಿವರಿಸಿದ ನಟಿ
ಸ್ಪಂದನಾ ಫ್ಯಾಮಿಲಿಗೆ ಗಿಲ್ಲಿ ಇಷ್ಟ ಆಗಿದ್ದೇ ಈ ಕಾರಣಕ್ಕೆ; ವಿವರಿಸಿದ ನಟಿ
ಪ್ರಸಿದ್ಧ ಆಭರಣ ಮಳಿಗೆಯಲ್ಲಿ 14 ಲಕ್ಷದ ಜ್ಯುವೆಲರಿ ಕದ್ದ ಮಹಿಳೆಯರು
ಪ್ರಸಿದ್ಧ ಆಭರಣ ಮಳಿಗೆಯಲ್ಲಿ 14 ಲಕ್ಷದ ಜ್ಯುವೆಲರಿ ಕದ್ದ ಮಹಿಳೆಯರು
ಗುಡ್ ಲಕ್; ಸಿದ್ದರಾಮಯ್ಯಗೆ ಡಿಸಿಎಂ ಡಿಕೆ ಶಿವಕುಮಾರ್ ಅಭಿನಂದನೆ
ಗುಡ್ ಲಕ್; ಸಿದ್ದರಾಮಯ್ಯಗೆ ಡಿಸಿಎಂ ಡಿಕೆ ಶಿವಕುಮಾರ್ ಅಭಿನಂದನೆ
ಸಾಕ್ಷಿ ನಾಶ ಹಿನ್ನೆಲೆ ರಾಜಶೇಖರ್​ ಶವ ಸುಟ್ಟು ಹಾಕಿದ್ದಾರೆ ಎಂದ ಶ್ರೀರಾಮುಲು
ಸಾಕ್ಷಿ ನಾಶ ಹಿನ್ನೆಲೆ ರಾಜಶೇಖರ್​ ಶವ ಸುಟ್ಟು ಹಾಕಿದ್ದಾರೆ ಎಂದ ಶ್ರೀರಾಮುಲು
ಕೊಡಗು ಜಿಲ್ಲೆಯ ನಂಬರ್ ಒನ್ ಟ್ಯಾಕ್ಸ್ ಪೇಯರ್ ರಶ್ಮಿಕಾ ಮಂದಣ್ಣ
ಕೊಡಗು ಜಿಲ್ಲೆಯ ನಂಬರ್ ಒನ್ ಟ್ಯಾಕ್ಸ್ ಪೇಯರ್ ರಶ್ಮಿಕಾ ಮಂದಣ್ಣ
ರಕ್ಷಿತಾ ಬೆಂಬಲಕ್ಕೆ ಬಂದ ಗಿಲ್ಲಿ, ರಾಶಿಕಾ ಜೊತೆ ಜಗಳ: ವಿಡಿಯೋ
ರಕ್ಷಿತಾ ಬೆಂಬಲಕ್ಕೆ ಬಂದ ಗಿಲ್ಲಿ, ರಾಶಿಕಾ ಜೊತೆ ಜಗಳ: ವಿಡಿಯೋ
ಸಿದ್ದರಾಮಯ್ಯ ಇಲ್ಲ ಅಂದ್ರೆ ಕಾಂಗ್ರೆಸ್ ಪಕ್ಷ ಇಲ್ಲ: ರಾಜಣ್ಣ ಖಡಕ್​​ ಮಾತು
ಸಿದ್ದರಾಮಯ್ಯ ಇಲ್ಲ ಅಂದ್ರೆ ಕಾಂಗ್ರೆಸ್ ಪಕ್ಷ ಇಲ್ಲ: ರಾಜಣ್ಣ ಖಡಕ್​​ ಮಾತು
ರಾಜಶೇಖರ್​ ತಾಯಿಗೆ ಡಿಕೆ ಶಿವಕುಮಾರ್​ ಸಾಂತ್ವನ: ಸರ್ಕಾರದಿಂದ ನೆರವು ಭರವಸೆ
ರಾಜಶೇಖರ್​ ತಾಯಿಗೆ ಡಿಕೆ ಶಿವಕುಮಾರ್​ ಸಾಂತ್ವನ: ಸರ್ಕಾರದಿಂದ ನೆರವು ಭರವಸೆ
ಸನ್​ರೂಫ್ ಬಳಿ ನಿಂತು ಕೈ ಬೀಸುತ್ತಿದ್ದಾಗ ಬ್ರೇಕ್ ಹಾಕಿದ ಕಾರು
ಸನ್​ರೂಫ್ ಬಳಿ ನಿಂತು ಕೈ ಬೀಸುತ್ತಿದ್ದಾಗ ಬ್ರೇಕ್ ಹಾಕಿದ ಕಾರು