2024 ರ ಐಸಿಸಿ ಅಂಡರ್-19 ವಿಶ್ವಕಪ್ (ICC Under 19 World Cup 2024) ಇಂದಿನಿಂದ ದಕ್ಷಿಣ ಆಫ್ರಿಕಾದಲ್ಲಿ ಆರಂಭವಾಗಿದೆ. ಈ ಬಾರಿ ಪಂದ್ಯಾವಳಿಯಲ್ಲಿ ಒಟ್ಟು 16 ತಂಡಗಳು ಭಾಗವಹಿಸುತ್ತಿದ್ದು, ತಲಾ 4 ರಂತೆ ನಾಲ್ಕು ವಿವಿಧ ಗುಂಪುಗಳಾಗಿ ವಿಂಗಡಿಸಲಾಗಿದೆ. ಇದರಲ್ಲಿ ಬಾಂಗ್ಲಾದೇಶ, ಐರ್ಲೆಂಡ್ ಮತ್ತು ಅಮೆರಿಕದ ಅಂಡರ್ 19 ತಂಡವನ್ನು ಒಳಗೊಂಡಿರುವ ಎ ಗುಂಪಿನಲ್ಲಿ ಭಾರತ ತಂಡವು (Indian Under-19 team) ಸ್ಥಾನ ಪಡೆದಿದೆ. ಈ ಮೆಗಾ ಇವೆಂಟ್‌ನಲ್ಲಿ ಭಾರತ ತಂಡದ ನಾಯಕತ್ವದ ಜವಾಬ್ದಾರಿಯನ್ನು ಉದಯ್ ಸಹರಾನ್ (Uday Saharan) ನಿಭಾಯಿಸುತ್ತಿದ್ದಾರೆ. ಇಲ್ಲಿಯವರೆಗೆ ಭಾರತವು 19 ವರ್ಷದೊಳಗಿನವರ ವಿಶ್ವಕಪ್ ಅನ್ನು 5 ಬಾರಿ ಗೆದ್ದಿದ್ದು, ಈ ಬಾರಿಯೂ ಪ್ರಶಸ್ತಿ ಗೆಲ್ಲುವ ನೆಚ್ಚಿನ ತಂಡ ಎನಿಸಿಕೊಂಡಿದೆ
ಇನ್ನು ಈ ವಿಶ್ವಕಪ್‌ನಲ್ಲಿ ಭಾರತ ತಂಡದ ವೇಳಾಪಟ್ಟಿಯನ್ನು ನೋಡುವುದಾದರೆ, ಜನವರಿ 20 ರಂದು ಬಾಂಗ್ಲಾದೇಶ ಅಂಡರ್ 19 ತಂಡದ ವಿರುದ್ಧ ಟೂರ್ನಿಯಲ್ಲಿ ಭಾರತ ತನ್ನ ಮೊದಲ ಪಂದ್ಯವನ್ನು ಆಡಬೇಕಾಗಿದೆ. ಉಭಯ ತಂಡಗಳ ನಡುವಿನ ಈ ಪಂದ್ಯ ಬ್ಲೋಮ್‌ಫಾಂಟೈನ್ ಮೈದಾನದಲ್ಲಿ ನಡೆಯಲಿದೆ. ಇದಾದ ಬಳಿಕ ತಂಡಕ್ಕೆ ಕೆಲ ದಿನಗಳ ವಿರಾಮ ಸಿಗಲಿದ್ದು, ಜನವರಿ 25ರಂದು ಬ್ಲೋಮ್‌ಫಾಂಟೈನ್ ಮೈದಾನದಲ್ಲಿ ಐರ್ಲೆಂಡ್ ತಂಡದ ವಿರುದ್ಧ ಎರಡನೇ ಪಂದ್ಯವನ್ನಾಡಲಿದೆ. ನಂತರ ಭಾರತ ತಂಡ ಜನವರಿ 28 ರಂದು ಅಮೆರಿಕ ಅಂಡರ್-19 ತಂಡದ ವಿರುದ್ಧ ಗುಂಪು ಹಂತದ ಕೊನೆಯ ಪಂದ್ಯವನ್ನು ಆಡಲಿದೆ.
20 ಜನವರಿ – ಭಾರತ vs ಬಾಂಗ್ಲಾದೇಶ
25 ಜನವರಿ – ಭಾರತ vs ಐರ್ಲೆಂಡ್
28 ಜನವರಿ – ಭಾರತ vs ಯುಎಸ್ಎ
ದಕ್ಷಿಣ ಆಫ್ರಿಕಾದಲ್ಲಿ ಆರಂಭವಾಗಿರುವ ಅಂಡರ್-19 ವಿಶ್ವಕಪ್‌ನಲ್ಲಿ ಭಾರತ ತಂಡದ ಪಂದ್ಯಗಳು ಭಾರತೀಯ ಕಾಲಮಾನ ಮಧ್ಯಾಹ್ನ 1:30 ಕ್ಕೆ ಪ್ರಾರಂಭವಾಗುತ್ತವೆ.
ಅರ್ಶಿನ್ ಕುಲಕರ್ಣಿ, ಆದರ್ಶ್ ಸಿಂಗ್, ರುದ್ರ ಮಯೂರ್ ಪಟೇಲ್, ಸಚಿನ್ ಧಾಸ್, ಪ್ರಿಯಾಂಶು ಮೊಲಿಯಾ, ಮುಶೀರ್ ಖಾನ್, ಉದಯ್ ಸಹರಾನ್ (ನಾಯಕ), ಅರವೆಲ್ಲಿ ಅವನೀಶ್ ರಾವ್ (ವಿಕೆಟ್ ಕೀಪರ್), ಸೌಮ್ಯ ಕುಮಾರ್ ಪಾಂಡೆ (ಉಪನಾಯಕ), ಮುರುಗನ್ ಅಭಿಷೇಕ್, ಇನೇಶ್ ಮಹಾಜನ್ (ವಿಕೆಟ್) , ಧನುಷ್ ಗೌಡ. , ಆರಾಧ್ಯ ಶುಕ್ಲಾ, ರಾಜ್ ಲಿಂಬಾನಿ, ನಮನ್ ತಿವಾರಿ.
ಮೀಸಲು ಆಟಗಾರರು – ಪ್ರೇಮ್ ದಿಯೋಕರ್, ಅಂಶ್ ಗೋಸಾಯಿ, ಮೊಹಮ್ಮದ್ ಅಮನ್.
ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 7:09 pm, Fri, 19 January 24