AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Asia Cup 2025: ಟೀಂ ಇಂಡಿಯಾ ನಾಯಕ ಸೂರ್ಯಕುಮಾರ್​ಗೆ ದಂಡ

Asia Cup 2025: ಟೀಂ ಇಂಡಿಯಾ ನಾಯಕ ಸೂರ್ಯಕುಮಾರ್ ಯಾದವ್‌ಗೆ ಐಸಿಸಿ ಎಚ್ಚರಿಕೆ ನೀಡಿ ದಂಡ ವಿಧಿಸಿದೆ. ಪಾಕಿಸ್ತಾನದ ವಿರುದ್ಧದ ಪಂದ್ಯದ ನಂತರ ವಿಜಯವನ್ನು ಭಯೋತ್ಪಾದಕ ದಾಳಿ ಸಂತ್ರಸ್ತರಿಗೆ ಅರ್ಪಿಸಿದ್ದ ಸೂರ್ಯಕುಮಾರ್ ಹೇಳಿಕೆ ರಾಜಕೀಯ ಪ್ರೇರಿತ ಎಂದು ಪಾಕಿಸ್ತಾನ ಮಂಡಳಿ ದೂರು ನೀಡಿತ್ತು. ವಿಚಾರಣೆ ನಡೆಸಿ ಎಚ್ಚರಿಕೆ ನೀಡಲಾಗಿದೆ. ಇದರ ನಡುವೆ, ಬಿಸಿಸಿಐ ಪಾಕ್ ಆಟಗಾರರಾದ ಹ್ಯಾರಿಸ್ ರೌಫ್ ಮತ್ತು ಫರ್ಹಾನ್ ವಿರುದ್ಧವೂ ದುರ್ವರ್ತನೆ ದೂರು ದಾಖಲಿಸಿದೆ.

Asia Cup 2025: ಟೀಂ ಇಂಡಿಯಾ ನಾಯಕ ಸೂರ್ಯಕುಮಾರ್​ಗೆ ದಂಡ
Suryakumar
ಪೃಥ್ವಿಶಂಕರ
|

Updated on:Sep 26, 2025 | 7:44 PM

Share

2025 ರ ಏಷ್ಯಾಕಪ್ (Asia Cup 2025) ಫೈನಲ್​ಗೂ ಮುನ್ನ ಟೂರ್ನಿಯ ಆರಂಭದ ಹಂತದಲ್ಲಿ ಹುಟ್ಟಿಕೊಂಡಿದ್ದ ಹ್ಯಾಂಡ್​ಶೇಕ್ ವಿವಾದಕ್ಕೆ ಸಂಬಂಧಿಸಿದಂತೆ ಟೀಂ ಇಂಡಿಯಾ ನಾಯಕ ಸೂರ್ಯಕುಮಾರ್ ಯಾದವ್ (Suryakumar Yadav)​ ಅವರನ್ನು ವಿಚಾರಣೆ ನಡೆಸಿದ್ದ ಐಸಿಸಿ (ICC), ರಾಜಕೀಯವಾಗಿ ಅರ್ಥೈಸಿಕೊಳ್ಳಬಹುದಾದ ಹೇಳಿಕೆಗಳನ್ನು ನೀಡದಂತೆ ಎಚ್ಚರಿಕೆ ನೀಡಿರುವುದು ಮಾತ್ರವಲ್ಲದೆ ಶೇ.  30 ರಷ್ಟು ಪಂದ್ಯ ಶುಲ್ಕವನ್ನು ದಂಡವಾಗಿ ವಿಧಿಸಲಾಗಿದೆ. ವಾಸ್ತವವಾಗಿ ಭಾರತ ಹಾಗೂ ಪಾಕಿಸ್ತಾನ ನಡುವಿನ ಪಂದ್ಯದ ಬಳಿಕ ಪಂದ್ಯ ಪ್ರಸ್ತುತಿಯಲ್ಲಿ ಸೂರ್ಯಕುಮಾರ್ ಯಾದವ್ ರಾಜಕೀಯ ಪ್ರೇರಿತ ಹೇಳಿಕೆಗಳನ್ನು ನೀಡಿದ್ದಾರೆ. ಇದು ಐಸಿಸಿ ನಿಯಮಗಳಿಗೆ ವಿರುದ್ಧವಾಗಿದೆ ಎಂದು ಆರೋಪಿಸಿ ಪಾಕಿಸ್ತಾನ ಕ್ರಿಕೆಟ್ ಮಂಡಳಿ ಐಸಿಸಿಗೆ ಈ ಬಗ್ಗೆ ದೂರು ನೀಡಿತ್ತು.

ಸೂರ್ಯಕುಮಾರ್ ವಿರುದ್ಧದ ಆರೋಪವೇನು?

ಮೇಲೆ ಹೇಳಿದಂತೆ ಸೆಪ್ಟೆಂಬರ್ 14 ರಂದು ನಡೆದಿದ್ದ ಪಾಕಿಸ್ತಾನ ವಿರುದ್ಧದ ಲೀಗ್ ಹಂತದ ಪಂದ್ಯದಲ್ಲಿ ಗೆದ್ದ ಬಳಿಕ ಟೀಂ ಇಂಡಿಯಾ ನಾಯಕ ಸೂರ್ಯಕುಮಾರ್ ಯಾದವ್ ಪಹಲ್ಗಾಮ್ ಭಯೋತ್ಪಾದಕ ದಾಳಿಯ ಸಂತ್ರಸ್ತರಿಗೆ ಸಂತಾಪ ಸೂಚಿಸಿ ಮತ್ತು ಆಪರೇಷನ್ ಸಿಂಧೂರ್‌ನಲ್ಲಿ ಭಾಗಿಯಾಗಿದ್ದ ಭಾರತೀಯ ಸೇನೆಗೆ ಈ ವಿಜಯವನ್ನು ಅರ್ಪಿಸುವುದಾಗಿ ಹೇಳಿಕೆ ನೀಡಿದ್ದರು. ಪಿಸಿಬಿ ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿ ಐಸಿಸಿಗೆ ದೂರು ಸಲ್ಲಿಸಿತ್ತು. ಈ ವಿಷಯದ ಕುರಿತು ಸೆಪ್ಟೆಂಬರ್ 25 ರಂದು ವಿಚಾರಣೆ ನಡೆಯಿತು.

ಪಿಟಿಐ ವರದಿಗಳ ಪ್ರಕಾರ, ನಾಯಕ ಸೂರ್ಯಕುಮಾರ್ ಅಂದಿನ ಪಂದ್ಯದ ರೆಫರಿ ರಿಚಿ ರಿಚರ್ಡ್ಸನ್ ಅವರ ಮುಂದೆ ವಿಚಾರಣೆ ಹಾಜರಾಗಿದ್ದರು. ಸೂರ್ಯ ಅವರೊಂದಿಗೆ ಬಿಸಿಸಿಐ ಸಿಒಒ ಹೇಮಾಂಗ್ ಅಮೀನ್ ಮತ್ತು ಕ್ರಿಕೆಟ್ ಕಾರ್ಯಾಚರಣೆ ವ್ಯವಸ್ಥಾಪಕ ಸಮರ್ ಮಲ್ಲಾಪುರ್ಕರ್ ಕೂಡ ಹಾಜರಿದ್ದರು. ವಿಚಾರಣೆಯ ಸಂದರ್ಭದಲ್ಲಿ ಸೂರ್ಯಕುಮಾರ್ ನನ್ನ ಹೇಳಿಕೆ ಯಾವುದೇ ರಾಜಕೀಯ ಪ್ರೇರಿತವಲ್ಲ. ಹೀಗಾಗಿ ನಾನು ತಪ್ಪೊಪ್ಪಿಗೆ ನೀಡುವುದಿಲ್ಲ ಎಂದಿ ವಾದಿಸಿದ್ದರು ಎಂದು ವರದಿಯಾಗಿದೆ.

ಐಸಿಸಿ ತೆಗೆದುಕೊಂಡ ನಿರ್ಧಾರವೇನು?

ವರದಿಗಳ ಪ್ರಕಾರ, ರಾಜಕೀಯವಾಗಿ ಅರ್ಥೈಸಿಕೊಳ್ಳಬಹುದಾದ ಹೇಳಿಕೆಗಳನ್ನು ನೀಡದಂತೆ ಮ್ಯಾಚ್ ರೆಫರಿ ರಿಚರ್ಡ್ಸನ್, ಸೂರ್ಯಕುಮಾರ್ ಯಾದವ್ ಅವರಿಗೆ ಶೇ.  30 ರಷ್ಟು ಪಂದ್ಯ ಶುಲ್ಕವನ್ನು ದಂಡವಾಗಿ ವಿಧಿಸಿದ್ದಾರೆ. ಐಸಿಸಿ ನೀತಿ ಸಂಹಿತೆಯ ಅಡಿಯಲ್ಲಿ ಲೆವೆಲ್ 1 ಅಪರಾಧಗಳಿಗೆ ಸಾಮಾನ್ಯವಾಗಿ ಎಚ್ಚರಿಕೆ ಅಥವಾ ಪಂದ್ಯ ಶುಲ್ಕದ 15% ದಂಡ ವಿಧಿಸಲಾಗುತ್ತದೆ.

Asia Cup 2025: ಏಷ್ಯಾಕಪ್ ಇತಿಹಾಸದಲ್ಲಿ ಮೊದಲ ಬಾರಿಗೆ ಭಾರತ- ಪಾಕ್ ನಡುವೆ ಫೈನಲ್ ಫೈಟ್

ಈಗ ರೌಫ್ ಮತ್ತು ಫರ್ಹಾನ್ ಸರದಿ

ಏತನ್ಮಧ್ಯೆ, ಬಿಸಿಸಿಐ ಪಾಕಿಸ್ತಾನದ ಇಬ್ಬರು ಆಟಗಾರರಾದ ಹ್ಯಾರಿಸ್ ರೌಫ್ ಮತ್ತು ಸಾಹಿಬ್ಜಾದಾ ಫರ್ಹಾನ್ ವಿರುದ್ಧ ದುರ್ವರ್ತನೆಯ ದೂರು ದಾಖಲಿಸಿದೆ. ಸೆಪ್ಟೆಂಬರ್ 26 ರಂದು ಇವರಿಬ್ಬರ ವಿಚಾರಣೆ ನಡೆಯಲಿದೆ. ಇಬ್ಬರು ಆಟಗಾರರು ತಪ್ಪಿತಸ್ಥರೆಂದು ಕಂಡುಬಂದರೆ, ಇಬ್ಬರು ಗಂಭೀರ ಕ್ರಮವನ್ನು ಎದುರಿಸಬೇಕಾಗುತ್ತದೆ. ಸೆಪ್ಟೆಂಬರ್ 28 ರಂದು ಭಾರತ ವಿರುದ್ಧದ ಫೈನಲ್ ಪಂದ್ಯಕ್ಕೂ ಮುನ್ನ ಇದು ಪಾಕಿಸ್ತಾನಕ್ಕೆ ದೊಡ್ಡ ಹೊಡೆತವಾಗಬಹುದು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:17 pm, Fri, 26 September 25

ಪೊಲೀಸಪ್ಪನ ಜತೆ ಓಡಿಹೋಗಿದ್ದ ಮೋನಿಕಾಳ ಅಸಲಿಯತ್ತು ಬಯಲು
ಪೊಲೀಸಪ್ಪನ ಜತೆ ಓಡಿಹೋಗಿದ್ದ ಮೋನಿಕಾಳ ಅಸಲಿಯತ್ತು ಬಯಲು
ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?