AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

World Cup 2025: ಮುಂಬೈನಲ್ಲಿ ಭಾರಿ ಮಳೆ; ಇನ್ನೂ ಆರಂಭವಾಗದ ವಿಶ್ವಕಪ್ ಫೈನಲ್

ICC Women's World Cup 2025 Final: ಮುಂಬೈನಲ್ಲಿ ನಡೆಯಬೇಕಿದ್ದ ಐಸಿಸಿ ಮಹಿಳಾ ಏಕದಿನ ವಿಶ್ವಕಪ್ 2025 ರ ಭಾರತ-ದಕ್ಷಿಣ ಆಫ್ರಿಕಾ ಫೈನಲ್ ಪಂದ್ಯಕ್ಕೆ ಮಳೆ ಅಡ್ಡಿಪಡಿಸಿದೆ. ಹವಾಮಾನ ಇಲಾಖೆಯ ಮುನ್ಸೂಚನೆಯಂತೆ, ಮಳೆಯಿಂದ ಪಂದ್ಯ ಇದುವರೆಗೂ ಆರಂಭವಾಗಿಲ್ಲ. ಒಂದು ವೇಳೆ ಇಂದು ಪಂದ್ಯ ನಡೆಯದಿದ್ದರೆ, ನವೆಂಬರ್ 2 ರಂದು ಮೀಸಲು ದಿನದಂದು ಪಂದ್ಯ ಪೂರ್ಣಗೊಳಿಸಲಾಗುತ್ತದೆ. ಮಳೆ ನಿಂತರೆ 20 ಓವರ್‌ಗಳ ಪಂದ್ಯ ನಡೆಸಲು ಪ್ರಯತ್ನಿಸಲಾಗುತ್ತದೆ.

World Cup 2025: ಮುಂಬೈನಲ್ಲಿ ಭಾರಿ ಮಳೆ; ಇನ್ನೂ ಆರಂಭವಾಗದ ವಿಶ್ವಕಪ್ ಫೈನಲ್
Mambai Rain
ಪೃಥ್ವಿಶಂಕರ
|

Updated on:Nov 02, 2025 | 4:12 PM

Share

ಐಸಿಸಿ ಮಹಿಳಾ ಏಕದಿನ ವಿಶ್ವಕಪ್ 2025 ರ ಫೈನಲ್ (ICC Women’s World Cup 2025 Final) ಪಂದ್ಯ ಭಾರತ ಮತ್ತು ದಕ್ಷಿಣ ಆಫ್ರಿಕಾದಂತಹ (India vs South Africa) ಬಲಿಷ್ಠ ತಂಡಗಳ ನಡುವೆ ನಡೆಯಲಿದೆ. ಆದರೆ ಮುಂಬೈನ ಡಿವೈ ಪಾಟೀಲ್ ಕ್ರೀಡಾಂಗಣದಲ್ಲಿ ಭಾರತೀಯ ಕಾಲಮಾನ ಮಧ್ಯಾಹ್ನ 3:00 ಗಂಟೆಗೆ ಆರಂಭವಾಗಬೇಕಿದ್ದ ಪಂದ್ಯ ಮಳೆಯಿಂದಾಗಿ ಇದುವರೆಗೂ ಆರಂಭವಾಗಿಲ್ಲ. ವಾಸ್ತವವಾಗಿ ಪಂದ್ಯದ ದಿನದಂದು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮೊದಲೇ ಮುನ್ಸೂಚನೆ ನೀಡಿತ್ತು. ಅದರಂತೆ ಮುಂಬೈನಲ್ಲಿ ಮಳೆ ಎಡಬಿಡದೆ ಸುರಿಯುತ್ತಿದೆ. ಇದರಿಂದಾಗಿ ಟಾಸ್ ಕೂಡ ನಡೆದಿಲ್ಲ.

ಶೇ. 63 ರಷ್ಟು ಮಳೆ

ಹವಾಮಾನ ಇಲಾಖೆಯ ವರದಿ ಪ್ರಕಾರ ನವಿ ಮುಂಬೈನಲ್ಲಿ ಪಂದ್ಯದ ದಿನದಂದು ಮಳೆಯಾಗುವ ಸಾಧ್ಯತೆ ಶೇ. 63 ರಷ್ಟು ಇರಲಿದೆ ಎಂದು ವರದಿಯಾಗಿತ್ತು. ಅದರಂತೆ ಪಂದ್ಯಕ್ಕೆ ಮಳೆ ಅಡ್ಡಿಪಡಿಸಿದೆ. ಒಂದೊಮ್ಮೆ ಮಳೆ ಕೊಂಚ ವಿರಾಮ ತೆಗೆದುಕೊಂಡ ಕಾರಣ 3 ಗಂಟೆಗೆ ಟಾಸ್ ನಡೆಸಲು ತೀರ್ಮಾನಿಸಲಾಗಿತ್ತು. ಹಾಗೆಯೇ 3:30 ಕ್ಕೆ ಪಂದ್ಯ ಆರಂಭಿಸಲು ನಿರ್ಧರಿಸಲಾಗಿತ್ತು. ಆದರೆ ಟಾಸ್ ನಡೆಯುವುದಕ್ಕೂ ಮುನ್ನವೇ ಮತ್ತೆ ಮಳೆ ಸುರಿಯಲಾರಂಭಿಸಿದೆ.

ಮೀಸಲು ದಿನ ನಿಗದಿಪಡಿಸಲಾಗಿದೆ

ಮಳೆ ಧಾರಕಾರವಾಗಿ ಸುರಿಯುತ್ತಿರುವ ಕಾರಣ ಈ ಪಂದ್ಯ ನಡೆಯುತ್ತದೋ ಇಲ್ಲವೋ ಎಂಬ ಆತಂಕ ಅಭಿಮಾನಿಗಳಲ್ಲಿ ಮೂಡಿದೆ. ಆದರೆ ಅಭಿಮಾನಿಗಳು ಚಿಂತಿಸಬೇಕಿಲ್ಲ. ಏಕೆಂದರೆ ಮಳೆಯಿಂದಾಗಿ ಇಂದು ಪಂದ್ಯ ನಡೆಯದಿದ್ದರೆ, ಮೀಸಲು ದಿನದಂದು ಈ ಪಂದ್ಯವನ್ನು ಪೂರ್ಣಗೊಳಿಸಲಾಗುತ್ತದೆ. ಮಳೆಯ ಮುನ್ಸೂಚನೆಯನ್ನು ಗಮನದಲಿಟ್ಟುಕೊಂಡು ಆಯೋಜಕರು ಸೆಮಿಫೈನಲ್ ಹಾಗೂ ಫೈನಲ್ ಪಂದ್ಯಗಳಿಗೆ ಮೀಸಲು ದಿನವನ್ನು ನಿಗದಿಪಡಿಸಿದ್ದರು. ಅದರಂತೆ ಫೈನಲ್ ಪಂದ್ಯಕ್ಕೆ ನವೆಂಬರ್ 2 ಅನ್ನು ಮೀಸಲು ದಿನವಾಗಿ ಕಾಯ್ದಿರಿಸಲಾಗಿದೆ.

World Cup 2025: ಭಾರತ ವಿಶ್ವಕಪ್‌ ಗೆದ್ದರೆ ಬಿಸಿಸಿಐನಿಂದ ಸಿಗಲಿದೆ ಶತಕೋಟಿಗೂ ಅಧಿಕ ಮೊತ್ತದ ಬಹುಮಾನ

ಕಟ್ ಆಫ್ ಸಮಯ ಯಾವುದು?

ಆದಾಗ್ಯೂ ಇಂದೇ ಮಳೆ ನಿಂತು ಆಟಕ್ಕೆ ಅನುವು ಮಾಡಿಕೊಟ್ಟರೆ, ಇಂದೇ ಪಂದ್ಯವನ್ನು ಮುಗಿಸಲು ಪ್ರಯತ್ನಿಸಲಾಗುತ್ತದೆ. ಆದರೆ ಪೂರ್ಣ 50 ಓವರ್​ಗಳನ್ನು ಆಡುವ ಬದಲು ತಲಾ 20 ಓವರ್​ಗಳಿಗೆ ಪಂದ್ಯವನ್ನು ನಿಗದಿ ಮಾಡಲಾಗುತ್ತದೆ. ಆದರೆ 20 ಓವರ್‌ಗಳ ಪ್ರತಿ ಇನ್ನಿಂಗ್ಸ್ ಪಂದ್ಯಕ್ಕೆ ಕಟ್-ಆಫ್ ಸಮಯವನ್ನು ರಾತ್ರಿ 9:08 ಕ್ಕೆ ನಿಗದಿಪಡಿಸಲಾಗಿದೆ. ಆದರೂ ಆ ಹೊತ್ತಿಗೆ ಆಟ ಪ್ರಾರಂಭವಾಗಿ ಮತ್ತೆ ಮಳೆಯಿಂದ ಆಟಕ್ಕೆ ಅಡಚಣೆ ಉಂಟಾದರೆ, ಮೀಸಲು ದಿನದಂದು ಪಂದ್ಯವನ್ನು ಆಡಿಸಲಾಗುತ್ತದೆ. ಆರಂಭದಲ್ಲಿ, ಇಂದು ಪಂದ್ಯದ ಫಲಿತಾಂಶವನ್ನು ನಿರ್ಧರಿಸಲು ಪ್ರಯತ್ನಿಸಲಾಗುವುದು. ಆದರೆ ಕಟ್-ಆಫ್ ಸಮಯದೊಳಗೆ ಆಟ ಪ್ರಾರಂಭವಾಗದಿದ್ದರೆ, ಪಂದ್ಯವನ್ನು ಮೀಸಲು ದಿನದಂದು ಆಡಿಸಲಾಗುವುದು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:10 pm, Sun, 2 November 25

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ