AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ICC Women’s World Cup: ಆಫ್ರಿಕಾಗೆ ಸತತ ನಾಲ್ಕನೇ ಜಯ; ತವರಿನಲ್ಲಿ ಕಿವೀಸ್​ಗೆ ಸೋಲಿನ ಮುಖಭಂಗ

ICC Women's World Cup: ದಕ್ಷಿಣ ಆಫ್ರಿಕಾ ಈ ಹಿಂದೆ ಬಾಂಗ್ಲಾದೇಶ, ಇಂಗ್ಲೆಂಡ್ ಮತ್ತು ಪಾಕಿಸ್ತಾನವನ್ನು ಸೋಲಿಸಿತ್ತು. ಆದಾಗ್ಯೂ, ಕಡಿಮೆ ರನ್ ರೇಟ್ ಕಾರಣ, ಅವರು ಇನ್ನೂ ಪಾಯಿಂಟ್ ಪಟ್ಟಿಯಲ್ಲಿ ಆಸ್ಟ್ರೇಲಿಯಾಕ್ಕಿಂತ ಹಿಂದಿದ್ದಾರೆ.

ICC Women's World Cup: ಆಫ್ರಿಕಾಗೆ ಸತತ ನಾಲ್ಕನೇ ಜಯ; ತವರಿನಲ್ಲಿ ಕಿವೀಸ್​ಗೆ ಸೋಲಿನ ಮುಖಭಂಗ
ಆಫ್ರಿಕಾ, ಕಿವೀಸ್ ಆಟಗಾರ್ತಿಯರು
TV9 Web
| Edited By: |

Updated on: Mar 17, 2022 | 3:28 PM

Share

ಮಹಿಳಾ ವಿಶ್ವಕಪ್‌ (Women’s World Cup )ನಲ್ಲಿ ದಕ್ಷಿಣ ಆಫ್ರಿಕಾ ತಂಡ ತನ್ನ ಗೆಲುವಿನ ಅಭಿಯಾನವನ್ನು ಮುಂದುವರೆಸಿದೆ. ಗುರುವಾರ ನಡೆದ ಪಂದ್ಯದಲ್ಲಿ ಆತಿಥೇಯ ನ್ಯೂಜಿಲೆಂಡ್ ತಂಡವನ್ನು ಸೋಲಿಸುವ ಮೂಲಕ ತಂಡ ಸತತ ನಾಲ್ಕನೇ ಗೆಲುವು ಸಾಧಿಸಿದೆ. ನಾಯಕಿ ಸೋಫಿ ಡಿವೈನ್ (Sophie Devine) ಮತ್ತು ಅಮೆಲಿಯಾ ಕೆರ್ (Amelia Kerr) ಅವರ ಅದ್ಭುತ ಇನ್ನಿಂಗ್ಸ್ ಹೊರತಾಗಿಯೂ ನ್ಯೂಜಿಲೆಂಡ್ ಕೇವಲ 228 ರನ್ ಗಳಿಸಲು ಸಾಧ್ಯವಾಯಿತು. ಈ ಗುರಿಯನ್ನು ದಕ್ಷಿಣ ಆಫ್ರಿಕಾ ಮೂರು ಎಸೆತಗಳು ಬಾಕಿ ಇರುವಂತೆಯೇ ಸಾಧಿಸಿತು. ದಕ್ಷಿಣ ಆಫ್ರಿಕಾದ ಬೌಲರ್ ಮರಿಜಾನ್ ಕ್ಯಾಪ್ ಪಂದ್ಯ ಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು.

ದಕ್ಷಿಣ ಆಫ್ರಿಕಾ ಈ ಹಿಂದೆ ಬಾಂಗ್ಲಾದೇಶ, ಇಂಗ್ಲೆಂಡ್ ಮತ್ತು ಪಾಕಿಸ್ತಾನವನ್ನು ಸೋಲಿಸಿತ್ತು. ಆದಾಗ್ಯೂ, ಕಡಿಮೆ ರನ್ ರೇಟ್ ಕಾರಣ, ಅವರು ಇನ್ನೂ ಪಾಯಿಂಟ್ ಪಟ್ಟಿಯಲ್ಲಿ ಆಸ್ಟ್ರೇಲಿಯಾಕ್ಕಿಂತ ಹಿಂದಿದ್ದಾರೆ. ದಕ್ಷಿಣ ಆಫ್ರಿಕಾ ಕೂಡ ನಾಲ್ಕು ಪಂದ್ಯಗಳಿಂದ ನಾಲ್ಕು ಗೆಲುವಿನೊಂದಿಗೆ ಎಂಟು ಅಂಕಗಳನ್ನು ಹೊಂದಿದೆ. ಆದರೂ ಆಸ್ಟ್ರೇಲಿಯಾದ ನೆಟ್​ ರನ್ರೈಟ್ ದಕ್ಷಿಣ ಆಫ್ರಿಕಾಕ್ಕಿಂತ ಉತ್ತಮವಾಗಿದೆ.

ಸೋಫಿ ಡಿವೈನ್ ಏಕಾಂಗಿ ಹೋರಾಟ ಟಾಸ್ ಗೆದ್ದ ನ್ಯೂಜಿಲೆಂಡ್ ಮೊದಲು ಬ್ಯಾಟಿಂಗ್ ಮಾಡಲು ನಿರ್ಧರಿಸಿತು. ಹಿಂದಿನ ಪಂದ್ಯದ ಸ್ಟಾರ್ ಶಬ್ನಿಮ್ ಇಸ್ಮಾಯಿಲ್ ಸುಜಿ ಬೇಟ್ಸ್ ಅವರನ್ನು ಔಟ್ ಮಾಡುವ ಮೂಲಕ ತಂಡಕ್ಕೆ ಮೊದಲ ಪೆಟ್ಟು ನೀಡಿದರು. ಇಲ್ಲಿಂದ ಅಮೆಲಿಯಾ ಕರ್ ಮತ್ತು ಸೋಫಿ ಡಿವೈನ್ ಇನ್ನಿಂಗ್ಸ್ ಕೈಗೆತ್ತಿಕೊಂಡು 76 ರನ್‌ಗಳ ಜೊತೆಯಾಟವನ್ನು ಹಂಚಿಕೊಂಡರು. ಮೊದಲು ಅಮೆಲಿಯಾ ಪೆವಿಲಿಯನ್‌ಗೆ ಮರಳಿದರು. ಇದಾದ ಬಳಿಕ ಸದರ್ವೈತ್ (1) ಮತ್ತು ಮ್ಯಾಡಿ ಗ್ರೀನ್ (30) ಕೂಡ ಹೆಚ್ಚು ಹೊತ್ತು ನಿಲ್ಲಲಿಲ್ಲ. ಏತನ್ಮಧ್ಯೆ, ಡಿವೈನ್ ಒಂದು ಬದಿಯಲ್ಲಿ ಇನ್ನಿಂಗ್ಸ್ ಅನ್ನು ಉಳಿಸಿಕೊಂಡರು. 93 ರನ್ ಗಳಿಸಿ ಡಿವೈನ್ ಬೌಲ್ಡ್ ಆದರು. ಹ್ಯಾಲಿಡೆ (24), ಕೇಟೀ ಮಾರ್ಟಿನ್ (9) ಮತ್ತು ಫ್ರಾನ್ಸಿಸ್ ಮ್ಯಾಕಿ (7) ಎರಡಂಕಿ ಮೊತ್ತವನ್ನು ಮುಟ್ಟಲಿಲ್ಲ, ಆದರೆ ಹನಾಹ್ ರೋವ್ ಮತ್ತು ತಹುಹು ಖಾತೆ ತೆರೆಯಲು ಸಹ ಸಾಧ್ಯವಾಗಲಿಲ್ಲ.

ಇದನ್ನೂ ಓದಿ:IPL 2022: ಧೋನಿ 7ನೇ ನಂಬರ್ ಜರ್ಸಿಯನ್ನೇ ತೊಡುವುದ್ಯಾಕೆ? ಇದರ ಸೀಕ್ರೆಟ್ ಏನು ಗೊತ್ತೆ? ವಿಡಿಯೋ ನೋಡಿ

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ