
ಅಂತರರಾಷ್ಟ್ರೀಯ ಕ್ರಿಕೆಟ್ ಮಂಡಳಿ ಅಂದರೆ ಐಸಿಸಿ (ICC), ಮಹಿಳಾ ಏಕದಿನ ವಿಶ್ವಕಪ್ ( Womens Cricket World Cup 2025) ವೇಳಾಪಟ್ಟಿಯನ್ನು ಪ್ರಕಟಿಸಿದೆ. ಈ ಪಂದ್ಯಾವಳಿ ಸೆಪ್ಟೆಂಬರ್ 30 ರಿಂದ ಪ್ರಾರಂಭವಾಗಲಿದ್ದು, ಇದರ ಫೈನಲ್ ಪಂದ್ಯವು ನವೆಂಬರ್ 2 ರಂದು ನಡೆಯಲಿದೆ. ಈ ಪಂದ್ಯಾವಳಿಯನ್ನು ಭಾರತ ಮತ್ತು ಶ್ರೀಲಂಕಾ ಜಂಟಿಯಾಗಿ ಆಯೋಜಿಸಲಿದ್ದು, ಮೊದಲ ಪಂದ್ಯ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿದೆ. ಅಲ್ಲದೆ ಈ ಏಕದಿನ ವಿಶ್ವಕಪ್‌ನ ಫೈನಲ್ ಪಂದ್ಯ ಕೂಡ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿದೆ. ಆದರೆ ಪಾಕಿಸ್ತಾನ ಫೈನಲ್‌ಗೆ ಅರ್ಹತೆ ಪಡೆದರೆ, ಈ ಫೈನಲ್ ಪಂದ್ಯ ಪಂದ್ಯ ಕೊಲಂಬೊದಲ್ಲಿ ನಡೆಯಲಿದೆ.
ಇದು 13 ನೇ ಮಹಿಳಾ ವಿಶ್ವಕಪ್ ಆಗಿದ್ದು, ಈ ರೀತಿಯಾಗಿ, 12 ವರ್ಷಗಳ ನಂತರ ಭಾರತಕ್ಕೆ ಮಹಿಳಾ ವಿಶ್ವಕಪ್ ಮರಳಲಿದೆ. 2016 ರಲ್ಲಿ ಭಾರತದಲ್ಲಿ ಮಹಿಳಾ ಏಕದಿನ ವಿಶ್ವಕಪ್ ನಡೆದಿತ್ತು. ಇನ್ನು ಕೊನೆಯ ಬಾರಿಗೆ ಅಂದರೆ 2022 ರಲ್ಲಿ ನ್ಯೂಜಿಲೆಂಡ್‌ನಲ್ಲಿ ನಡೆದಿದ್ದ ಮಹಿಳಾ ವಿಶ್ವಕಪ್‌ನ ಫೈನಲ್‌ನಲ್ಲಿ ಇಂಗ್ಲೆಂಡ್ ತಂಡವನ್ನು ಸೋಲಿಸಿದ ಆಸ್ಟ್ರೇಲಿಯಾ ಹಾಲಿ ಚಾಂಪಿಯನ್ ಆಗಿ ಪಂದ್ಯಾವಳಿಯನ್ನು ಪ್ರವೇಶಿಸಲಿದೆ. ಏಳು ಬಾರಿ ಚಾಂಪಿಯನ್ ಆಗಿರುವ ಆಸ್ಟ್ರೇಲಿಯಾ ಪಂದ್ಯಾವಳಿಯ ಇತಿಹಾಸದಲ್ಲಿ ಅತ್ಯಂತ ಯಶಸ್ವಿ ತಂಡವಾಗಿದೆ.
2025 ICC Women’s Cricket World Cup schedule 𝐑𝐄𝐕𝐄𝐀𝐋𝐄𝐃!
Read more ➡ https://t.co/myj2Gfamkv pic.twitter.com/zl3IYWC2e6
— ICC (@ICC) June 2, 2025
2025 ರ ಮಹಿಳಾ ಏಕದಿನ ವಿಶ್ವಕಪ್ ಪಂದ್ಯಗಳು ಐದು ಸ್ಥಳಗಳಲ್ಲಿ ನಡೆಯಲಿದ್ದು, ಬೆಂಗಳೂರಿನ ಎಂ, ಚಿನ್ನಸ್ವಾಮಿ ಕ್ರೀಡಾಂಗಣ, ಎಸಿಎ ಕ್ರೀಡಾಂಗಣ, ಇಂದೋರ್‌ನ ಹೋಳ್ಕರ್ ಕ್ರೀಡಾಂಗಣ, ವಿಶಾಖಪಟ್ಟಣಂನ ಎಸಿಎ-ವಿಡಿಸಿಎ ಕ್ರೀಡಾಂಗಣ ಮತ್ತು ಆರ್. ಪ್ರೇಮದಾಸ ಕ್ರೀಡಾಂಗಣದಲ್ಲಿ ನಡೆಯಲಿವೆ. ಈ ಪಂದ್ಯಾವಳಿ ಒಂದು ತಿಂಗಳ ಕಾಲ ನಡೆಯಲಿದ್ದು, 8 ತಂಡಗಳು ಭಾಗವಹಿಸಲಿವೆ. ಟೂರ್ನಿಯ ನಾಕೌಟ್ ಸುತ್ತಿನ ಪಂದ್ಯಗಳು ಅಕ್ಟೋಬರ್ 29 ರಂದು ಗುವಾಹಟಿ ಅಥವಾ ಕೊಲಂಬೊದಲ್ಲಿ ನಡೆಯಲಿವೆ. ಎರಡನೇ ಸೆಮಿಫೈನಲ್ ಪಂದ್ಯ ಅಕ್ಟೋಬರ್ 30 ರಂದು ಬೆಂಗಳೂರಿನಲ್ಲಿ ನಡೆಯಲಿದೆ.
ಮಹಿಳಾ ವಿಶ್ವಕಪ್‌ಗೆ 8 ತಂಡಗಳು ಅರ್ಹತೆ ಪಡೆದಿವೆ. ಈ ಪಂದ್ಯಾವಳಿಯಲ್ಲಿ ಭಾರತ, ಆಸ್ಟ್ರೇಲಿಯಾ, ಇಂಗ್ಲೆಂಡ್, ದಕ್ಷಿಣ ಆಫ್ರಿಕಾ, ನ್ಯೂಜಿಲೆಂಡ್, ಶ್ರೀಲಂಕಾ, ಬಾಂಗ್ಲಾದೇಶ ಮತ್ತು ಪಾಕಿಸ್ತಾನ ತಂಡಗಳು ಭಾಗವಹಿಸಲಿವೆ. ಆದಾಗ್ಯೂ, ಪಾಕಿಸ್ತಾನ ತಂಡವು ವಿಶ್ವಕಪ್‌ನಲ್ಲಿ ಭಾಗವಹಿಸಲು ಭಾರತಕ್ಕೆ ಬರುವುದಿಲ್ಲ. ಬದಲಿಗೆ ಪಾಕಿಸ್ತಾನ ತಂಡವು ಕೊಲಂಬೊದ ಆರ್ ಪ್ರೇಮದಾಸ ಕ್ರೀಡಾಂಗಣದಲ್ಲಿ ತನ್ನ ವಿಶ್ವಕಪ್ ಪಂದ್ಯಗಳನ್ನು ಆಡಲಿದೆ. ಅದೇ ಸಮಯದಲ್ಲಿ, ಭಾರತ ಸೆಪ್ಟೆಂಬರ್ 30 ರಂದು ಬೆಂಗಳೂರಿನಲ್ಲಿ ತನ್ನ ಮೊದಲ ಪಂದ್ಯವನ್ನು ಆಡಲಿದೆ. ಈ ಪಂದ್ಯಾವಳಿಯನ್ನು ರೌಂಡ್-ರಾಬಿನ್ ಆಧಾರದ ಮೇಲೆ ಆಡಲಾಗುತ್ತದೆ, ಇದರಲ್ಲಿ ಒಟ್ಟು 28 ಲೀಗ್ ಹಂತದ ಪಂದ್ಯಗಳು ಇರುತ್ತವೆ. ಇದರ ನಂತರ, 2 ಸೆಮಿಫೈನಲ್‌ಗಳು ಮತ್ತು ಫೈನಲ್ ಆಡಲಾಗುತ್ತದೆ.
2025 ರ ಏಕದಿನ ವಿಶ್ವಕಪ್; 230 ಕೋಟಿ.. ಈ ನಗರದಲ್ಲಿ ನಡೆಯಲಿದೆ ಫೈನಲ್ ಪಂದ್ಯ
ಪಾಕಿಸ್ತಾನ ತಂಡವು ಸೆಮಿಫೈನಲ್ ಮತ್ತು ಫೈನಲ್ ತಲುಪಿದರೆ, ನಂತರ ಪಂದ್ಯಗಳನ್ನು ಕೊಲಂಬೊದಲ್ಲಿ ಆಡಲಾಗುತ್ತದೆ. ಇದಕ್ಕಾಗಿಯೇ ಮೊದಲ ಸೆಮಿಫೈನಲ್ ಅಕ್ಟೋಬರ್ 29 ರಂದು ಗುವಾಹಟಿ ಅಥವಾ ಕೊಲಂಬೊದಲ್ಲಿ ನಡೆಯಲಿದೆ, ಆದರೆ ಎರಡನೇ ಸೆಮಿಫೈನಲ್ ಮರುದಿನ ಅಕ್ಟೋಬರ್ 30 ರಂದು ಬೆಂಗಳೂರಿನಲ್ಲಿ ನಡೆಯಲಿದೆ. ಇದರ ನಂತರ, ಎರಡೂ ಫೈನಲಿಸ್ಟ್‌ಗಳು ಪ್ರಶಸ್ತಿ ನಿರ್ಣಾಯಕ ಪಂದ್ಯಕ್ಕೆ ತಯಾರಿ ನಡೆಸಲು ಕನಿಷ್ಠ ಎರಡು ದಿನಗಳನ್ನು ಹೊಂದಿರುತ್ತವೆ. ಅಂತಿಮವಾಗಿ 2025 ರ ಮಹಿಳಾ ವಿಶ್ವಕಪ್‌ನ ಫೈನಲ್ ನವೆಂಬರ್ 2 ರ ಭಾನುವಾರ ಬೆಂಗಳೂರು ಅಥವಾ ಕೊಲಂಬೊದಲ್ಲಿ ನಡೆಯಲಿದೆ.
ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 6:33 pm, Mon, 2 June 25