T20 World Cup 2023: ಟಿ20 ವಿಶ್ವಕಪ್​ನಲ್ಲಿ ಟೀಮ್ ಇಂಡಿಯಾಗೆ ಮೊದಲ ಸೋಲು

England Women vs India Women: 152 ರನ್​ಗಳ ಸ್ಪರ್ಧಾತ್ಮಕ ಸವಾಲನ್ನು ಬೆನ್ನತ್ತಿದ ಟೀಮ್ ಇಂಡಿಯಾಗೆ ಉತ್ತಮ ಆರಂಭ ಸ್ಮೃತಿ ಮಂಧಾನ ಯಶಸ್ವಿಯಾದರು. 41 ಎಸೆತಗಳಲ್ಲಿ 1 ಸಿಕ್ಸ್ ಹಾಗೂ 7 ಫೋರ್​ನೊಂದಿಗೆ 52 ಬಾರಿಸಿದರು.

T20 World Cup 2023: ಟಿ20 ವಿಶ್ವಕಪ್​ನಲ್ಲಿ ಟೀಮ್ ಇಂಡಿಯಾಗೆ ಮೊದಲ ಸೋಲು
England W vs India W
Follow us
TV9 Web
| Updated By: ಝಾಹಿರ್ ಯೂಸುಫ್

Updated on: Feb 18, 2023 | 9:47 PM

England Women vs India Women Match: ಸೌತ್ ಆಫ್ರಿಕಾದಲ್ಲಿ ನಡೆಯುತ್ತಿರುವ ಟಿ20 ವಿಶ್ವಕಪ್​ನ 14ನೇ ಪಂದ್ಯದಲ್ಲಿ ಭಾರತದ ವಿರುದ್ಧ ಇಂಗ್ಲೆಂಡ್ ತಂಡ ರೋಚಕ ಜಯ ಸಾಧಿಸಿದೆ. ಈ ಗೆಲುವಿನೊಂದಿಗೆ ಗ್ರೂಪ್-ಬಿ ಅಂಕಪಟ್ಟಿಯಲ್ಲಿ ಇಂಗ್ಲೆಂಡ್ ತಂಡವು ಅಗ್ರಸ್ಥಾನಕ್ಕೇರಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಟೀಮ್ ಇಂಡಿಯಾ (Team India) ನಾಯಕಿ ಹರ್ಮನ್​ಪ್ರೀತ್ ಕೌರ್ ಬೌಲಿಂಗ್ ಆಯ್ದುಕೊಂಡಿದ್ದಾರೆ. ಅದರಂತೆ ಇನಿಂಗ್ಸ್ ಆರಂಭಿಸಿದ ಇಂಗ್ಲೆಂಡ್ ಉತ್ತಮ ಆರಂಭ ಪಡೆದಿರಲಿಲ್ಲ.

ಮೊದಲ ಓವರ್​ನ ಮೂರನೇ ಎಸೆತದಲ್ಲೇ ವ್ಯಾಟ್ (0) ವಿಕೆಟ್​ ಪಡೆಯುವ ಮೂಲಕ ರೇಣುಕಾ ಸಿಂಗ್ ಮೊದಲ ಯಶಸ್ಸು ತಂದುಕೊಟ್ಟರು. ಆ ಬಳಿಕ ಬಂದ ಅಲೀಸ್ ಕ್ಯಾಪ್ಸೆ (3) ಅವರನ್ನು ಕ್ಲೀನ್ ಬೌಲ್ಡ್ ಮಾಡಿದರು. ಈ ಹಂತದಲ್ಲಿ ಜೊತೆಗೂಡಿದ ನ್ಯಾಟ್ ಸ್ಕಿವರ್ ಬ್ರಂಟ್ ಹಾಗೂ ನಾಯಕಿ ಹೀದರ್ ನೈಟ್ 51 ರನ್​ಗಳ ಜೊತೆಯಾಟವಾಡಿದರು. ಅಲ್ಲದೆ 42 ಎಸೆತಗಳಲ್ಲಿ ಅರ್ಧಶತಕ ಬಾರಿಸಿದ ಬ್ರಂಟ್ ತಂಡವನ್ನು ಆರಂಭಿಕ ಆಘಾತದಿಂದ ಪಾರು ಮಾಡಿದರು.

ಇನ್ನು ಅಂತಿಮ ಹಂತದಲ್ಲಿ ಆ್ಯಮಿ ಜೋನ್ಸ್ 27 ಎಸೆತಗಳಲ್ಲಿ 40 ರನ್ ಬಾರಿಸಿದರು. ಅದರಂತೆ ಇಂಗ್ಲೆಂಡ್ ತಂಡವು 20 ಓವರ್​ಗಳಲ್ಲಿ 7 ವಿಕೆಟ್ ನಷ್ಟಕ್ಕೆ 151 ರನ್ ಪೇರಿಸಿತು. ಟೀಮ್ ಇಂಡಿಯಾ ಪರ ಅತ್ಯುತ್ತಮ ದಾಳಿ ಸಂಘಟಿಸಿದ ರೇಣುಕಾ ಸಿಂಗ್ 4 ಓವರ್​ಗಳಲ್ಲಿ 15 ರನ್ ನೀಡಿ 5 ವಿಕೆಟ್ ಉರುಳಿಸಿ ಮಿಂಚಿದರು.

ಇದನ್ನೂ ಓದಿ
Image
Nathan Lyon: ಟೀಮ್ ಇಂಡಿಯಾ ವಿರುದ್ಧ ಹೊಸ ದಾಖಲೆ ಬರೆದ ನಾಥನ್ ಲಿಯಾನ್
Image
Virat Kohli: ನಾನಾ-ನೀನಾ…ಗಂಗೂಲಿಗೆ ಪಾಠ ಕಲಿಸಲು ಮುಂದಾಗಿದ್ದ ವಿರಾಟ್ ಕೊಹ್ಲಿ..!
Image
Virender Sehwag: ಪುಲ್ವಾಮಾ ದಾಳಿಗೆ 4 ವರ್ಷ: ಕೊಟ್ಟ ಮಾತು ಉಳಿಸಿಕೊಂಡ ವೀರೇಂದ್ರ ಸೆಹ್ವಾಗ್
Image
RCB Women Squad: RCB ಮಹಿಳಾ ತಂಡ ಹೀಗಿದೆ

152 ರನ್​ಗಳ ಸ್ಪರ್ಧಾತ್ಮಕ ಸವಾಲನ್ನು ಬೆನ್ನತ್ತಿದ ಟೀಮ್ ಇಂಡಿಯಾಗೆ ಉತ್ತಮ ಆರಂಭ ಸ್ಮೃತಿ ಮಂಧಾನ ಯಶಸ್ವಿಯಾದರು. 41 ಎಸೆತಗಳಲ್ಲಿ 1 ಸಿಕ್ಸ್ ಹಾಗೂ 7 ಫೋರ್​ನೊಂದಿಗೆ 52 ಬಾರಿಸಿದರು. ಆದರೆ ಶಫಾಲಿ ವರ್ಮಾ ಕೇವಲ 8 ರನ್​ಗಳಿಸಿ ವಿಕೆಟ್ ಒಪ್ಪಿಸಿದರು. ಇನ್ನು ಮಧ್ಯಮ ಕ್ರಮಾಂಕದಲ್ಲಿ ಜೆಮಿಮಾ (13) ಹಾಗೂ ಹರ್ಮನ್​ಪ್ರೀತ್ ಕೌರ್ (4) ಕೂಡ ವಿಫಲರಾದರು.

ಇದಾಗ್ಯೂ ಕೆಲ ಕ್ರಮಾಂಕದಲ್ಲಿ ರಿಚಾ ಘೋಷ್ ಬಿರುಸಿನ ಬ್ಯಾಟಿಂಗ್​ ನಡೆಸಲು ಯತ್ನಿಸಿದರು. ಪರಿಣಾಮ ಕೊನೆಯ 2 ಓವರ್​ಗಳಲ್ಲಿ ಟೀಮ್ ಇಂಡಿಯಾಗೆ ಗೆಲ್ಲಲು 34 ರನ್​ಗಳ ಅವಶ್ಯಕತೆಯಿತ್ತು. ಆದರೆ 19ನೇ ಓವರ್​ನಲ್ಲಿ ಕಲೆಹಾಕಿದ್ದು ಕೇವಲ 3 ರನ್​ ಮಾತ್ರ. ಕೊನೆಯ ಓವರ್​ನಲ್ಲಿ ಭಾರತಕ್ಕೆ ಗೆಲ್ಲಲು 31 ರನ್​ಗಳ ಅವಶ್ಯಕತೆಯಿತ್ತು.

ಬ್ರಂಟ್ ಎಸೆದ ಕೊನೆಯ ಓವರ್​ನ ಮೊದಲೆರಡು ಎಸೆತಗಳಲ್ಲಿ ಬ್ಯಾಕ್ ಟು ಬ್ಯಾಕ್ 2 ಫೋರ್ ಬಾರಿಸಿದರು. ಅಲ್ಲದೆ 4ನೇ ಎಸೆತದಲ್ಲಿ ಭರ್ಜರಿ ಸಿಕ್ಸ್ ಸಿಡಿಸಿದರು. ಇದಾಗ್ಯೂ ಟೀಮ್ ಇಂಡಿಯಾ 11 ರನ್​ಗಳಿಂದ ಸೋಲನುಭವಿಸಬೇಕಾಯಿತು. ಅಂತಿಮ ಹಂತದಲ್ಲಿ ಅತ್ಯುತ್ತಮ ಬ್ಯಾಟಿಂಗ್ ಪ್ರದರ್ಶಿಸಿದ ರಿಚಾ ಘೋಷ್ (47) ಅವರ ಏಕಾಂಗಿ ಹೋರಾಟ ವ್ಯರ್ಥವಾಯಿತು. ಇದರೊಂದಿಗೆ ಟಿ20 ವಿಶ್ವಕಪ್ 2023 ರ ಟೂರ್ನಿಯಲ್ಲಿ ಟೀಮ್ ಇಂಡಿಯಾ ಮೊದಲ ಸೋಲನುಭವಿಸಿದೆ. ಇದಕ್ಕೂ ಮುನ್ನ ಭಾರತ ತಂಡವು ಪಾಕಿಸ್ತಾನ್ ಹಾಗೂ ವೆಸ್ಟ್ ಇಂಡೀಸ್ ವಿರುದ್ಧ ಭರ್ಜರಿ ಜಯ ಸಾಧಿಸಿತ್ತು.

ಶರಣಾದ ನಕ್ಸಲರ ಶಸ್ತ್ರಾಸ್ತ್ರ ಎಲ್ಲಿ? ಕೊನೆಗೂ ಉತ್ತರಿಸಿದ ಸಿದ್ದರಾಮಯ್ಯ
ಶರಣಾದ ನಕ್ಸಲರ ಶಸ್ತ್ರಾಸ್ತ್ರ ಎಲ್ಲಿ? ಕೊನೆಗೂ ಉತ್ತರಿಸಿದ ಸಿದ್ದರಾಮಯ್ಯ
ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ