IND vs ENG: ಇಂಗ್ಲೆಂಡ್ ವಿರುದ್ಧ ಸೋತ ಭಾರತ ಈಗ ಸೆಮಿಫೈನಲ್ ತಲುಪುವುದು ಹೇಗೆ?

Women T20 World Cup 2023: ಒಂದು ವೇಳೆ ಟೀಂ ಇಂಡಿಯಾ ಐರ್ಲೆಂಡ್ ವಿರುದ್ಧ ಸೋತರೆ, ಕೊನೆಯ-4ರ ಘಟ್ಟಕ್ಕೆ ತಲುಪಲು ನೆಟ್ ರನ್ ರೇಟ್‌ ಮೇಲೆ ಅವಲಂಬನೆಯಾಗಬೇಕಾಗುತ್ತದೆ.

IND vs ENG: ಇಂಗ್ಲೆಂಡ್ ವಿರುದ್ಧ ಸೋತ ಭಾರತ ಈಗ ಸೆಮಿಫೈನಲ್ ತಲುಪುವುದು ಹೇಗೆ?
ಭಾರತ ಮಹಿಳಾ ತಂಡ
Follow us
ಪೃಥ್ವಿಶಂಕರ
|

Updated on: Feb 19, 2023 | 9:46 AM

ಶನಿವಾರ ನಡೆದ ಐಸಿಸಿ ಟಿ20 ವಿಶ್ವಕಪ್-2023ರಲ್ಲಿ (ICC T20 World Cup) ಭಾರತ ಮಹಿಳಾ ತಂಡ ಮೊದಲ ಸೋಲು ಕಂಡಿದೆ. ಹರ್ಮನ್‌ಪ್ರೀತ್ ಕೌರ್ ನಾಯಕತ್ವದ ಟೀಂ ಇಂಡಿಯಾವನ್ನು ಇಂಗ್ಲೆಂಡ್ (India vs England) 11 ರನ್‌ಗಳಿಂದ ಸೋಲಿಸುವುದರೊಂದಿಗೆ ಹ್ಯಾಟ್ರಿಕ್ ಗೆಲುವಿನ ಅವಕಾಶವನ್ನು ಕಿತ್ತುಕೊಂಡಿತು. ಈ ಪಂದ್ಯದಲ್ಲಿ ಟಾಸ್ ಗೆದ್ದ ಟೀಂ ಇಂಡಿಯಾ ನಾಯಕಿ ಹರ್ಮನ್‌ಪ್ರೀತ್ (Harmanpreet Kaur) ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿದರು. ಕಳಪೆ ಆರಂಭ ಪಡೆದ ಹೊರತಾಗಿಯೂ ಇಂಗ್ಲೆಂಡ್ ತಂಡ 20 ಓವರ್‌ಗಳಲ್ಲಿ 7 ವಿಕೆಟ್ ಕಳೆದುಕೊಂಡು 151 ರನ್ ಗಳಿಸಿತು. ಇಡೀ ಓವರ್ ಆಡಿದ ಟೀಂ ಇಂಡಿಯಾ ಕೇವಲ 140 ರನ್ ಗಳಿಸಲಷ್ಟೇ ಶಕ್ತವಾಗಿ ಸೋಲು ಕಂಡಿತು.

ಈ ಪಂದ್ಯದಲ್ಲಿ ಟೀಂ ಇಂಡಿಯಾದ ಗೆಲುವು ಅತ್ಯಂತ ಮಹತ್ವದ್ದಾಗಿತ್ತು. ಏಕೆಂದರೆ ಈ ಪಂದ್ಯದ ಗೆಲುವು ಅವರನ್ನು ಬಹುತೇಕ ಸೆಮಿಫೈನಲ್‌ಗೆ ತಲುಪಿಸುತ್ತಿತ್ತು. ತನ್ನ ಮೊದಲ ಪಂದ್ಯದಲ್ಲಿ ಪಾಕಿಸ್ತಾನವನ್ನು ಸೋಲಿಸಿದ್ದ ಭಾರತ, ತನ್ನ ಎರಡನೇ ಪಂದ್ಯದಲ್ಲಿ ವೆಸ್ಟ್ ಇಂಡೀಸ್ ತಂಡವನ್ನು ಸೋಲಿಸಿತ್ತು. ಹೀಗಾಗಿ ಈ ಪಂದ್ಯದಲ್ಲಿ ಹ್ಯಾಟ್ರಿಕ್ ಜಯ ಸಾಧಿಸುವ ಮೂಲಕ ಸೆಮಿಫೈನಲ್ ಟಿಕೆಟ್ ಮೇಲೆ ಅವರ ಕಣ್ಣು ನೆಟ್ಟಿತ್ತು. ಆದರೆ ಇಂಗ್ಲೆಂಡ್ ವಿರುದ್ಧದ ಈ ಸೋಲು ಟೀಂ ಇಂಡಿಯಾವನ್ನು ನಿರಾಸೆಗೊಳಿಸಿದೆ. ಆದರೆ ಈ ಸೋಲಿನ ನಂತರವೂ ಟೀಂ ಇಂಡಿಯಾ ಸೆಮಿಫೈನಲ್ ತಲುಪಬಹುದಾಗಿದೆ. ಅದು ಹೇಗೆ ಎಂಬುದರ ವಿವರ ಇಲ್ಲಿದೆ.

Renuka Singh: ಬುಮ್ರಾ-ಅಶ್ವಿನ್ ಯಾರಿಗೂ ಸಾಧ್ಯವಾಗಿಲ್ಲ: ಟಿ20 ವಿಶ್ವಕಪ್​ನಲ್ಲಿ ಇತಿಹಾಸ ರಚಿಸಿದ ರೇಣುಕಾ ಸಿಂಗ್

ಭಾರತಕ್ಕಿದೆ ಸೆಮಿಫೈನಲ್​ಗೇರುವ ಅವಕಾಶ

ಈ ವಿಶ್ವಕಪ್‌ನಲ್ಲಿ 10 ತಂಡಗಳನ್ನು ತಲಾ ಎರಡು ಗುಂಪುಗಳಾಗಿ ವಿಂಗಡಿಸಲಾಗಿದೆ. ಟೀಂ ಇಂಡಿಯಾ ಜೊತೆಗೆ ಇಂಗ್ಲೆಂಡ್, ಪಾಕಿಸ್ತಾನ, ವೆಸ್ಟ್ ಇಂಡೀಸ್ ಮತ್ತು ಐರ್ಲೆಂಡ್ ತಂಡಗಳು ಗುಂಪು-2ರಲ್ಲಿವೆ. ಭಾರತವನ್ನು ಸೋಲಿಸುವುದರೊಂದಿಗೆ ಹ್ಯಾಟ್ರಿಕ್ ಜಯ ಸಾಧಿಸಿರುವ ಇಂಗ್ಲೆಂಡ್ ಅಂಕಿಅಂಶಗಳ ಪ್ರಕಾರ ಇನ್ನೂ ಸೆಮಿಫೈನಲ್ ತಲುಪಿಲ್ಲವಾದರೂ, ಅವರ ಸೆಮಿಫೈನಲ್ ಟಿಕೆಟ್ ಖಚಿತವಾದಂತಿದೆ. ಮೂರು ಪಂದ್ಯಗಳಿಂದ ಆರು ಅಂಕಗಳನ್ನು ಹೊಂದಿರುವ ಇಂಗ್ಲೆಂಡ್​ಗೆ ಇನ್ನು ಒಂದು ಪಂದ್ಯ ಉಳಿದಿದ್ದು, ಅವರು ಸೆಮಿಫೈನಲ್‌ಗೆ ಹೋಗದಿರುವ ಸಾಧ್ಯತೆ ತೀರಾ ಕಡಿಮೆ. ಭಾರತ ಈಗ ತನ್ನ ಮುಂದಿನ ಪಂದ್ಯವನ್ನು ಐರ್ಲೆಂಡ್ ವಿರುದ್ಧ ಆಡಬೇಕಾಗಿದೆ. ಭಾರತ ಈಗ ಮೂರು ಪಂದ್ಯಗಳಿಂದ ನಾಲ್ಕು ಅಂಕಗಳನ್ನು ಹೊಂದಿದೆ. ಭಾರತ ತನ್ನ ಸೆಮಿಫೈನಲ್ ಆಸೆಯನ್ನು ಜೀವಂತವಾಗಿರಿಸಿಕೊಳ್ಳಲು ಐರ್ಲೆಂಡ್ ತಂಡವನ್ನು ಸೋಲಿಸಬೇಕಾಗಿದೆ.

ಒಂದು ವೇಳೆ ಟೀಂ ಇಂಡಿಯಾ ಐರ್ಲೆಂಡ್ ವಿರುದ್ಧ ಸೋತರೆ, ಕೊನೆಯ-4ರ ಘಟ್ಟಕ್ಕೆ ತಲುಪಲು ನೆಟ್ ರನ್ ರೇಟ್‌ ಮೇಲೆ ಅವಲಂಬನೆಯಾಗಬೇಕಾಗುತ್ತದೆ. ಒಂದು ವೇಳೆ ಈ ಪಂದ್ಯದಲ್ಲಿ ಭಾರತ ಗೆದ್ದರೆ ಮತ್ತು ಪಾಕಿಸ್ತಾನ ತನ್ನ ಉಳಿದ ಎರಡೂ ಪಂದ್ಯಗಳನ್ನು ಗೆದ್ದರೆ, ನಂತರ ಆಸ್ಟ್ರೇಲಿಯಾ, ಭಾರತ ಮತ್ತು ಪಾಕಿಸ್ತಾನ ಸಮಾನ ಅಂಕಗಳನ್ನು ಪಡೆಯುತ್ತವೆ. ನಂತರ ನೆಟ್ ರನ್ ರೇಟ್‌ ಆಧಾರದ ಮೇಲೆ ಸೆಮಿಫೈನಲ್ ಟಿಕೆಟ್ ನೀಡಲಾಗುತ್ತದೆ. ಪಾಕಿಸ್ತಾನ ಈಗ ಎರಡು ಪಂದ್ಯಗಳಿಂದ ಎರಡು ಅಂಕಗಳನ್ನು ಹೊಂದಿದೆ. ಈಗ ಉಳಿದಿರುವ ಎರಡು ಪಂದ್ಯಗಳಲ್ಲಿ ಪಾಕ್, ವೆಸ್ಟ್ ಇಂಡೀಸ್ ಮತ್ತು ಇಂಗ್ಲೆಂಡ್ ಎದುರು ಸೆಣಸಾಡಬೇಕಾಗಿದೆ.

ಯಾವ ತಂಡದ ನೆಟ್ ರನ್ ರೇಟ್‌ ಎಷ್ಟಿದೆ?

ಈಗ ಗುಂಪಿನ ತಂಡಗಳ ನೆಟ್ ರನ್ ರೇಟ್ ನೋಡಿದರೆ ಇಂಗ್ಲೆಂಡ್ ಮತ್ತು ಪಾಕಿಸ್ತಾನ ಎರಡೂ ಭಾರತಕ್ಕಿಂತ ಮುಂದಿವೆ. ಭಾರತ ವಿರುದ್ಧದ ಪಂದ್ಯದ ನಂತರ ಇಂಗ್ಲೆಂಡ್ ತಂಡದ ನಿವ್ವಳ ರನ್ ರೇಟ್ +1.776 ಆಗಿದೆ. ಹಾಗೆಯೇ ಪಾಕಿಸ್ತಾನದ ನಿವ್ವಳ ರನ್ ರೇಟ್ +1.542 ಆಗಿದೆ. ಭಾರತದ ನಿವ್ವಳ ರನ್ ರೇಟ್ +0.205 ಆಗಿದ್ದು, ಸದ್ಯ ಇಂಗ್ಲೆಂಡ್ ಗ್ರೂಪ್-2ರಲ್ಲಿ ನಂಬರ್ ಒನ್ ಸ್ಥಾನದಲ್ಲಿದೆ. ಭಾರತ ಎರಡನೇ ಸ್ಥಾನದಲ್ಲಿದ್ದರೆ ಪಾಕಿಸ್ತಾನ ಮೂರನೇ ಸ್ಥಾನದಲ್ಲಿದೆ. ವೆಸ್ಟ್ ಇಂಡೀಸ್ ತಂಡ ಮೂರು ಪಂದ್ಯಗಳಲ್ಲಿ ಒಂದು ಗೆಲುವು ಮತ್ತು ಎರಡು ಸೋಲುಗಳೊಂದಿಗೆ ನಾಲ್ಕನೇ ಸ್ಥಾನದಲ್ಲಿದೆ. ಐರ್ಲೆಂಡ್ ತಂಡ ಇದುವರೆಗೆ ಮೂರು ಪಂದ್ಯಗಳನ್ನು ಆಡಿದ್ದು ಮೂರರಲ್ಲೂ ಸೋಲು ಕಂಡಿದೆ. ಹೀಗಾಗಿ ಐರ್ಲೆಂಡ್ ತಂಡ ಈಗಾಗಲೇ ಸೆಮಿಫೈನಲ್ ರೇಸ್‌ನಿಂದ ಹೊರಗುಳಿದಿದೆ.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಶರಣಾದ ನಕ್ಸಲರ ಶಸ್ತ್ರಾಸ್ತ್ರ ಎಲ್ಲಿ? ಕೊನೆಗೂ ಉತ್ತರಿಸಿದ ಸಿದ್ದರಾಮಯ್ಯ
ಶರಣಾದ ನಕ್ಸಲರ ಶಸ್ತ್ರಾಸ್ತ್ರ ಎಲ್ಲಿ? ಕೊನೆಗೂ ಉತ್ತರಿಸಿದ ಸಿದ್ದರಾಮಯ್ಯ
ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ