ICC Women’s T20 World Cup 2023: ಐಸಿಸಿ ಮಹಿಳಾ ಟಿ20 ವಿಶ್ವಕಪ್ ಯಾವಾಗ ಆರಂಭ?, ಎಷ್ಟು ಗಂಟೆಗೆ?, ಯಾವುದರಲ್ಲಿ ನೇರಪ್ರಸಾರ

Women's T20 World Cup Schedule: 2023ರ ಐಸಿಸಿ ಮಹಿಳಾ ಟಿ20 ವಿಶ್ವಕಪ್ ಟೂರ್ನಿಯು ಫೆಬ್ರವರಿ 10ರಿಂದ ಪ್ರಾರಂಭವಾಗಲಿದೆ. ಫೈನಲ್ ಪಂದ್ಯವು ಫೆಬ್ರವರಿ 26ರಂದು ನಡೆಯಲಿದೆ. ಭಾರತ ಮಹಿಳಾ ತಂಡ ತನ್ನ ಮೊದಲ ಪಂದ್ಯದಲ್ಲೇ ಬದ್ಧವೈರಿ ಪಾಕಿಸ್ತಾನ ವಿರುದ್ದ ಹೋರಾಟ ನಡೆಸಲಿದೆ.

ICC Women's T20 World Cup 2023: ಐಸಿಸಿ ಮಹಿಳಾ ಟಿ20 ವಿಶ್ವಕಪ್ ಯಾವಾಗ ಆರಂಭ?, ಎಷ್ಟು ಗಂಟೆಗೆ?, ಯಾವುದರಲ್ಲಿ ನೇರಪ್ರಸಾರ
ICC Women's T20 World Cup 2023
Follow us
TV9 Web
| Updated By: Vinay Bhat

Updated on: Feb 05, 2023 | 10:54 AM

ಮಹಿಳಾ ಕ್ರಿಕೆಟ್​ ಲೋಕ ಐಸಿಸಿ ಅಂಡರ್-19 ವಿಶ್ವಕಪ್ ಮುಗಿದ ಬಳಿಕ ಇದೀಗ ಮತ್ತೊಂದು ಮಹತ್ವದ ಟೂರ್ನಿಗೆ ಸಜ್ಜಾಗುತ್ತಿದೆ. ಇದೇ ಮೊದಲ ಬಾರಿಗೆ ದಕ್ಷಿಣ ಆಫ್ರಿಕಾ ಐಸಿಸಿ ಮಹಿಳಾ ಟಿ20 ವಿಶ್ವಕಪ್ (ICC Women’s T20 World Cup) ಟೂರ್ನಿಗೆ ಆತಿಥ್ಯ ವಹಿಸುತ್ತಿದೆ. ಈಗಾಗಲೇ ಎಲ್ಲ ತಂಡಗಳು ಪ್ರಕಟವಾಗಿದ್ದು, ಬಲಿಷ್ಠದಿಂದ ಕೂಡಿದೆ. ಹರ್ಮನ್​ಪ್ರೀತ್ ಕೌರ್ (Harmanpreet Kaur) ನಾಯಕತ್ವದ ಭಾರತ ಮಹಿಳಾ ತಂಡ ಕೂಡ ಚೊಚ್ಚಲ ಟ್ರೋಫಿ ಎತ್ತಿ ಹಿಡಿಲು ಅಭ್ಯಾಸ ಶುರು ಮಾಡಿಕೊಂಡಿದೆ. ಭಾರತ ಮಹಿಳಾ ತಂಡವು (India Womens Team) ಇಂಗ್ಲೆಂಡ್, ವೆಸ್ಟ್ ಇಂಡೀಸ್, ಪಾಕಿಸ್ತಾನ ಮತ್ತು ಐರ್ಲೆಂಡ್‌ನೊಂದಿಗೆ ಗುಂಪು 2ರಲ್ಲಿದೆ. ಹಾಗಾದರೆ ಬಹುನಿರೀಕ್ಷಿತ ಮಹಿಳಾ ಟಿ20 ವಿಶ್ವಕಪ್ ಯಾವಾಗ ಆರಂಭವಾಗಲಿದೆ?, ಎಷ್ಟು ಗಂಟೆಗೆ? ಇಲ್ಲಿದೆ ಎಲ್ಲ ನೋಡಿ ಎಲ್ಲ ಮಾಹಿತಿ.

ಮಹಿಳಾ ಟಿ20 ವಿಶ್ವಕಪ್‌ ಟೂರ್ನಿ ಯಾವಾಗ ಆರಂಭ?

2023ರ ಐಸಿಸಿ ಮಹಿಳಾ ಟಿ20 ವಿಶ್ವಕಪ್ ಟೂರ್ನಿಯು ಫೆಬ್ರವರಿ 10ರಿಂದ ಪ್ರಾರಂಭವಾಗಲಿದೆ. ಫೈನಲ್ ಪಂದ್ಯವು ಫೆಬ್ರವರಿ 26ರಂದು ನಡೆಯಲಿದೆ.

ಇದನ್ನೂ ಓದಿ
Image
IND vs AUS Test: ಬಾರ್ಡರ್-ಗವಾಸ್ಕರ್ ಟ್ರೋಫಿ ಬಳಿಕ ನೀವೃತ್ತಿ ನೀಡಲಿರುವ ಭಾರತದ ಪ್ಲೇಯರ್ಸ್ ಇವರೇ ನೋಡಿ
Image
IND vs AUS Test: ನಮ್ಮಲ್ಲಿ 20 ವಿಕೆಟ್ ಕೀಳುವ ಬೌಲರ್ ಇದ್ದಾರೆ: ಭಾರತಕ್ಕೆ ಭಯ ಹುಟ್ಟಿಸಲು ಮತ್ತೊಂದು ಹೇಳಿಕೆ ನೀಡಿದ ಆಸ್ಟ್ರೇಲಿಯಾ
Image
Ranji Trophy 2023: ರಣಜಿ ಟ್ರೋಫಿ ಸೆಮಿ ಫೈನಲ್ ವೇಳಾಪಟ್ಟಿ ಪ್ರಕಟ
Image
Team India: ಭಾರತ ತಂಡದ ಭವಿಷ್ಯದ ಸೂಪರ್​ಸ್ಟಾರ್​ಗಳನ್ನು ಹೆಸರಿಸಿದ ಅನಿಲ್ ಕುಂಬ್ಳೆ

ಮಹಿಳಾ ಟಿ20 ವಿಶ್ವಕಪ್‌ನಲ್ಲಿ ಎಷ್ಟು ತಂಡಗಳು ಭಾಗವಹಿಸುತ್ತವೆ ಮತ್ತು ಎಷ್ಟು ಪಂದ್ಯಗಳು ನಡೆಯಲಿದೆ?

ಮಹಿಳೆಯರ ಟಿ20 ವಿಶ್ವಕಪ್ ಟ್ರೋಫಿಗಾಗಿ ಒಟ್ಟು 10 ತಂಡಗಳು ಹೋರಾಡಲಿವೆ ಮತ್ತು ಈ ಮೆಗಾ ಈವೆಂಟ್‌ನಲ್ಲಿ ಒಟ್ಟು 33 ಪಂದ್ಯಗಳು ನಡೆಯಲಿದೆ.

ಮಹಿಳಾ ಟಿ20 ವಿಶ್ವಕಪ್ ಎಲ್ಲಿ ನಡೆಯಲಿದೆ?

ಮಹಿಳೆಯರ ಟಿ20 ವಿಶ್ವಕಪ್ ದಕ್ಷಿಣ ಆಫ್ರಿಕಾದ ಮೂರು ಸ್ಥಳಗಳಲ್ಲಿ ಆಡಲಾಗುತ್ತದೆ – ನ್ಯೂಲ್ಯಾಂಡ್ಸ್ ಕ್ರಿಕೆಟ್ ಗ್ರೌಂಡ್ (ಕೇಪ್ ಟೌನ್), ಸೇಂಟ್ ಜಾರ್ಜ್ ಪಾರ್ಕ್ ಕ್ರಿಕೆಟ್ ಗ್ರೌಂಡ್ (ಗ್ಕೆಬರ್ಹಾ) ಮತ್ತು ಬೋಲ್ಯಾಂಡ್ ಪಾರ್ಕ್ (ಪಾರ್ಲ್).

Virat Kohli vs Rohit Sharma: ವಿರಾಟ್ ಕೊಹ್ಲಿ vs ರೋಹಿತ್ ಶರ್ಮಾ: ಟೀಮ್ ಇಂಡಿಯಾದಲ್ಲಿತ್ತು 2 ಗುಂಪು..!

2023 ರ ಮಹಿಳಾ ಟಿ20 ವಿಶ್ವಕಪ್‌ನ ಸ್ವರೂಪ ಏನು?

10 ತಂಡಗಳನ್ನು ಎರಡು ಗುಂಪುಗಳಾಗಿ ವಿಂಗಡಿಸಲಾಗಿದೆ. ಎಲ್ಲಾ ತಂಡಗಳು ರೌಂಡ್-ರಾಬಿನ್ ಮಾದರಿಯಲ್ಲಿ ಆಡುತ್ತವೆ. ಪ್ರತಿ ಗುಂಪಿನಲ್ಲಿ ಅಗ್ರಸ್ಥಾನ ಪಡೆದ ಎರಡು ತಂಡಗಳು ಸೆಮಿಫೈನಲ್‌ಗೆ ಅರ್ಹತೆ ಪಡೆಯುತ್ತವೆ.

ಮಹಿಳೆಯರ ಟಿ20 ವಿಶ್ವಕಪ್ 2023ರ ಎರಡು ಗುಂಪುಗಳು ಯಾವುವು?

ಗುಂಪು 1: ಆಸ್ಟ್ರೇಲಿಯಾ, ನ್ಯೂಜಿಲೆಂಡ್, ದಕ್ಷಿಣ ಆಫ್ರಿಕಾ, ಶ್ರೀಲಂಕಾ, ಬಾಂಗ್ಲಾದೇಶ

ಗುಂಪು 2: ಇಂಗ್ಲೆಂಡ್, ಭಾರತ, ವೆಸ್ಟ್ ಇಂಡೀಸ್, ಪಾಕಿಸ್ತಾನ, ಐರ್ಲೆಂಡ್

ಭಾರತದಲ್ಲಿ ಮಹಿಳೆಯರ ಟಿ20 ವಿಶ್ವಕಪ್ 2023 ಅನ್ನು ಎಲ್ಲಿ ವೀಕ್ಷಿಸಬಹುದು?

ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್ ಚಾನೆಲ್‌ಗಳಲ್ಲಿ ನೇರಪ್ರಸಾರವಾಗಲಿದೆ. ನೀವು ಡಿಸ್ನಿ+ ಹಾಟ್‌ಸ್ಟಾರ್ ಅಪ್ಲಿಕೇಶನ್‌ನಲ್ಲಿ ಲೈವ್ ಸ್ಟ್ರೀಮ್ ನೋಡಬಹುದು.

ಭಾರತದ ಪಂದ್ಯ ಯಾವಾಗ?:

ಭಾರತ ಮಹಿಳಾ ತಂಡ ತನ್ನ ಮೊದಲ ಪಂದ್ಯದಲ್ಲೇ ಬದ್ಧವೈರಿ ಪಾಕಿಸ್ತಾನ ವಿರುದ್ದ ಹೋರಾಟ ನಡೆಸಲಿದೆ. ಫೆಬ್ರವರಿ 12ರಂದು ಇಂಡೋ- ಪಾಕ್ ಕದನ ಏರ್ಪಡಿಸಲಾಗಿದೆ. ಬಳಿಕ ಫೆಬ್ರವರಿ 15 ರಂದು ವೆಸ್ಟ್ ಇಂಡೀಸ್ ವಿರುದ್ಧ ಕಾದಾಟ ನಡೆಸಲಿದೆ. ಫೆಬ್ರವರಿ 18 ರಂದು ಇಂಗ್ಲೆಂಡ್ ವಿರುದ್ಧ ಹೋರಾಟ ನಡೆಸಲಿರುವ ಭಾರತ ಮಹಿಳಾ ತಂಡ, ಫೆಬ್ರವರಿ 20 ರಂದು ಐರ್ಲೆಂಡ್ ವಿರುದ್ಧ ಸೆಣೆಸಾಡಲಿದೆ.

ಐಸಿಸಿ ಮಹಿಳಾ ಟಿ20 ವಿಶ್ವಕಪ್​ಗೆ ಭಾರತ ತಂಡ:

ಹರ್ಮನ್‌ಪ್ರೀತ್ ಕೌರ್ (ನಾಯಕಿ), ಸ್ಮೃತಿ ಮಂಧಾನ (ಉಪನಾಯಕಿ), ಶಫಾಲಿ ವರ್ಮಾ, ಯಾಸ್ತಿಕಾ ಭಾಟಿಯಾ (ವಿಕೆಟ್ ಕೀಪರ್), ರಿಚಾ ಘೋಷ್ (ವಿಕೆಟ್ ಕೀಪರ್) ಜೆಮಿಮಾ ರೋಡ್ರಿಗಸ್, ಹರ್ಲೀನ್ ಡಿಯೋಲ್, ದೀಪ್ತಿ ಶರ್ಮಾ, ರಾಧಾ ಯಾದವ್, ರೇಣುಕಾ ಠಾಕೂರ್, ಅಂಜಲಿ ಸರ್ವಾಣಿ, ಪೂಜಾ ವಸ್ತ್ರಾಕರ್, ರಾಜೇಶ್ವರಿ ಗಾಯಕ್ವಾಡ್, ಶಿಖಾ ಪಾಂಡೆ.

ಮೀಸಲು: ಸಬ್ಬಿನೇನಿ ಮೇಘನಾ, ಮೇಘನಾ ಸಿಂಗ್, ಸ್ನೇಹ ರಾಣಾ.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಕುಡಿದ ನಶೆಯಲ್ಲಿ ಏನೇನೋ ಮಾತನಾಡಿದ ಎನ್ನುವ ಕಾರಣಕ್ಕೆ ಹೊಡೆದು ಕೊಂದರು!
ಕುಡಿದ ನಶೆಯಲ್ಲಿ ಏನೇನೋ ಮಾತನಾಡಿದ ಎನ್ನುವ ಕಾರಣಕ್ಕೆ ಹೊಡೆದು ಕೊಂದರು!
ಶ್ರೀರಾಮುಲು-ಜನಾರ್ಧನ ರೆಡ್ಡಿ ಜಗಳದ ಹಿನ್ನೆಲೆಯಲ್ಲಿ ಹಿರಿಯರ ಸಭೆ?
ಶ್ರೀರಾಮುಲು-ಜನಾರ್ಧನ ರೆಡ್ಡಿ ಜಗಳದ ಹಿನ್ನೆಲೆಯಲ್ಲಿ ಹಿರಿಯರ ಸಭೆ?
ಯಾರು ಬಿಗ್ ಬಾಸ್ ಗೆಲ್ತಾರೆ ಅಂತ ನಾನು ಹೇಳಲ್ಲ: ಪ್ರಥಮ್ ಖಡಕ್ ಮಾತು
ಯಾರು ಬಿಗ್ ಬಾಸ್ ಗೆಲ್ತಾರೆ ಅಂತ ನಾನು ಹೇಳಲ್ಲ: ಪ್ರಥಮ್ ಖಡಕ್ ಮಾತು
ನಿಯೋಗ ಹೊತ್ತು ತಂದಿದ್ದ ಕಬ್ಬನ್ನು ಕಚೇರಿಯಲ್ಲೇ ಮುರಿದು ತಿಂದ ಸಿದ್ದರಾಮಯ್ಯ
ನಿಯೋಗ ಹೊತ್ತು ತಂದಿದ್ದ ಕಬ್ಬನ್ನು ಕಚೇರಿಯಲ್ಲೇ ಮುರಿದು ತಿಂದ ಸಿದ್ದರಾಮಯ್ಯ
ಕೆಡಿಪಿ ಸಭೆಗಳನ್ನು ಹಗುರವಾಗಿ ಪರಿಗಣಿಸುವ ಪ್ರವೃತ್ತಿ ನಿಲ್ಲಬೇಕು
ಕೆಡಿಪಿ ಸಭೆಗಳನ್ನು ಹಗುರವಾಗಿ ಪರಿಗಣಿಸುವ ಪ್ರವೃತ್ತಿ ನಿಲ್ಲಬೇಕು
ಸುದೀಪ್ ಬಿಗ್​ಬಾಸ್ ಬಿಡಲು ಅಸಲಿ ಕಾರಣ ಬಿಚ್ಚಿಟ್ಟ ಪ್ರಥಮ್
ಸುದೀಪ್ ಬಿಗ್​ಬಾಸ್ ಬಿಡಲು ಅಸಲಿ ಕಾರಣ ಬಿಚ್ಚಿಟ್ಟ ಪ್ರಥಮ್
ಬೆಂಗಳೂರಿನ ಈ ಮಾರ್ಗದಲ್ಲಿ ಫುಲ್ ಟ್ರಾಫಿಕ್ ಜಾಮ್..!
ಬೆಂಗಳೂರಿನ ಈ ಮಾರ್ಗದಲ್ಲಿ ಫುಲ್ ಟ್ರಾಫಿಕ್ ಜಾಮ್..!
ಮಂತ್ರಾಲಯ ಸಂಸ್ಕೃತ ಶಾಲೆ ವಿದ್ಯಾರ್ಥಿಗಳು ಸಾವು: ಅಪಘಾತಕ್ಕೆ ಕಾರಣವೇನು?
ಮಂತ್ರಾಲಯ ಸಂಸ್ಕೃತ ಶಾಲೆ ವಿದ್ಯಾರ್ಥಿಗಳು ಸಾವು: ಅಪಘಾತಕ್ಕೆ ಕಾರಣವೇನು?
ಒಬ್ಬನಿಗೆ ಮದುವೆಯಾಗಿ ಕೇವಲ 4 ತಿಂಗಳಾಗಿತ್ತು, ಮತ್ತೊಬ್ಬನ ಪತ್ನಿ ಗರ್ಭಿಣಿ!
ಒಬ್ಬನಿಗೆ ಮದುವೆಯಾಗಿ ಕೇವಲ 4 ತಿಂಗಳಾಗಿತ್ತು, ಮತ್ತೊಬ್ಬನ ಪತ್ನಿ ಗರ್ಭಿಣಿ!
ಜಿಟಿಡಿ ಹೇಳಿದ ಧಮ್ ಮಾತಿಗೆ ಬಿಜೆಪಿ ನಾಯಕ ರವಿ ಪ್ರತಿಕ್ರಿಯೆ ನೀಡಲಿಲ್ಲ
ಜಿಟಿಡಿ ಹೇಳಿದ ಧಮ್ ಮಾತಿಗೆ ಬಿಜೆಪಿ ನಾಯಕ ರವಿ ಪ್ರತಿಕ್ರಿಯೆ ನೀಡಲಿಲ್ಲ