ಮಹಿಳಾ ಟಿ20 ವಿಶ್ವಕಪ್ 2024ರ ಆ್ಯಂಥಮ್ ಸಾಂಗ್ ಬಿಡುಗಡೆ

|

Updated on: Sep 24, 2024 | 2:53 PM

Women's T20 World Cup 2024: ಮಹಿಳಾ ಟಿ20 ವಿಶ್ವಕಪ್​ನಲ್ಲಿ ಭಾರತ ತಂಡವು ಅಕ್ಟೋಬರ್ 4 ರಂದು ಅಭಿಯಾನ ಆರಂಭಿಸಲಿದೆ. ದುಬೈ ಇಂಟರ್​ನ್ಯಾಷನಲ್ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಟೀಮ್ ಇಂಡಿಯಾ ನ್ಯೂಝಿಲೆಂಡ್ ತಂಡವನ್ನು ಎದುರಿಸಲಿದೆ. ಇನ್ನು ಅಕ್ಟೋಬರ್ 6 ರಂದು ಭಾರತ ಮತ್ತು ಪಾಕಿಸ್ತಾನ್ ತಂಡಗಳು ಮುಖಾಮುಖಿಯಾಗಲಿದೆ.

ಐಸಿಸಿ ಮಹಿಳಾ ಟಿ20 ವಿಶ್ವಕಪ್ 2024ರ ಆ್ಯಂಥಮ್ ಸಾಂಗ್ ಬಿಡುಗಡೆ ಮಾಡಿದೆ. ‘ವಾಟ್ ಎವರ್ ಇಟ್ ಟೇಕ್ಸ್’ ಎನ್ನುವ ಸಾಹಿತ್ಯದೊಂದಿಗೆ ಶುರುವಾಗುವ ಈ ಹಾಡನ್ನು ಹಾಡಿರುವುದು ಆಲ್-ಗರ್ಲ್ ಪಾಪ್ ಗ್ರೂಪ್ W.i.S.H ತಂಡವರು ಎಂಬುದು ವಿಶೇಷ. ಇನ್ನು ಈ ಗೀತೆಗೆ ಸಂಗೀತ ಸಂಯೋಜಿಸಿರುವುದು ಮೈಕಿ ಮೆಕ್‌ಕ್ಲಿಯರಿ, ಪಾರ್ಥ್ ಪರೇಖ್ ಮತ್ತು W.i.S.H ಟೀಮ್. ಪಾಪ್ ಶೈಲಿಯಲ್ಲಿ ಮೂಡಿಬಂದಿರುವ ಈ ಹಾಡು ಈಗಾಗಲೇ ವೈರಲ್ ಆಗಿದ್ದು, ಪ್ರಮುಖ ಸ್ಟೀಮಿಂಗ್ ಪ್ಲಾಟ್​ಫಾರ್ಮ್​ಗಳಲ್ಲಿ ಡೌನ್​ಲೋಡ್​ಗೂ ಲಭ್ಯವಿದೆ.

ಇನ್ನು ಈ ಬಾರಿಯ ಮಹಿಳಾ ಟಿ20 ವಿಶ್ವಕಪ್ ಅಕ್ಟೋಬರ್ 3 ರಿಂದ ಶುರುವಾಗಲಿದೆ. ಯುಎಇ ನಲ್ಲಿ ನಡೆಯಲಿರುವ ಈ ಟೂರ್ನಿಯಲ್ಲಿ ಒಟ್ಟು 10 ತಂಡಗಳು ಕಣಕ್ಕಿಳಿಯಲಿವೆ. ಈ ಟೀಮ್​ಗಳನ್ನು ಎರಡು ಗ್ರೂಪ್​ಗಳಾಗಿ ವಿಂಗಡಿಸಲಾಗಿದ್ದು, ಅದರಂತೆ ಮೊದಲ ಸುತ್ತಿನಲ್ಲಿ ಗ್ರೂಪ್ ತಂಡಗಳ ನಡುವೆ ಪೈಪೋಟಿ ನಡೆಯಲಿದೆ.

ಮಹಿಳಾ ಟಿ20 ವಿಶ್ವಕಪ್ ತಂಡಗಳು:

  • ಗುಂಪು A : ಆಸ್ಟ್ರೇಲಿಯಾ, ಭಾರತ, ನ್ಯೂಝಿಲೆಂಡ್, ಪಾಕಿಸ್ತಾನ್, ಶ್ರೀಲಂಕಾ.
  • ಗುಂಪು B: ಸೌತ್ ಆಫ್ರಿಕಾ, ಇಂಗ್ಲೆಂಡ್, ವೆಸ್ಟ್ ಇಂಡೀಸ್, ಬಾಂಗ್ಲಾದೇಶ, ಸ್ಕಾಟ್ಲೆಂಡ್.

ಅಕ್ಟೋಬರ್ 3 ರಂದು ನಡೆಯಲಿರುವ ಉದ್ಘಾಟನಾ ಪಂದ್ಯದಲ್ಲಿ ಬಾಂಗ್ಲಾದೇಶ್ ತಂಡವು ಸ್ಕಾಟ್ಲೆಂಡ್ ತಂಡವನ್ನು ಎದುರಿಸಲಿದೆ. ಹಾಗೆಯೇ ಇದೇ ದಿನ 2ನೇ ಪಂದ್ಯದಲ್ಲಿ ಪಾಕಿಸ್ತಾನ್ ಹಾಗೂ ಶ್ರೀಲಂಕಾ ತಂಡಗಳು ಮುಖಾಮುಖಿಯಾಗಲಿದೆ.

ಇನ್ನು ಟೀಮ್ ಇಂಡಿಯಾ ಟಿ20 ವಿಶ್ವಕಪ್ ಅಭಿಯಾನ ಆರಂಭಿಸುವುದು ಅಕ್ಟೋಬರ್ 4 ರಂದು. ತನ್ನ ಮೊದಲ ಪಂದ್ಯದಲ್ಲಿ ಭಾರತ ತಂಡವು ನ್ಯೂಝಿಲೆಂಡ್ ತಂಡವನ್ನು ಎದುರಿಸಲಿದೆ. ಹಾಗೆಯೇ ಅಕ್ಟೋಬರ್ 6 ರಂದು ನಡೆಯಲಿರುವ ಹೈವೋಲ್ಟೇಜ್ ಪಂದ್ಯದಲ್ಲಿ ಭಾರತ ಮತ್ತು ಪಾಕಿಸ್ತಾನ್ ತಂಡಗಳು ಮುಖಾಮುಖಿಯಾಗಲಿದೆ.

 

Follow us on