ಕ್ರಿಕೆಟ್ ಲೋಕ ಇಂದಿನಿಂದ ಮೊತ್ತೊಂದು ಮಹತ್ವದ ಟೂರ್ನಿಗೆ ಸಾಕ್ಷಿಯಾಗುತ್ತಿದೆ. ಇದೇ ಮೊದಲ ಬಾರಿಗೆ ದಕ್ಷಿಣ ಆಫ್ರಿಕಾದಲ್ಲಿ ಐಸಿಸಿ ಮಹಿಳಾ ಟಿ20 ವಿಶ್ವಕಪ್ (ICC Women’s T20 World Cup) ಟೂರ್ನಿ ಆಯೋಜನೆಯಾಗಿದ್ದು ಇಂದು ಇದಕ್ಕೆ ಚಾಲನೆ ಸಿಗಲಿದೆ. ಉದ್ಘಾಟನಾ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ಹಾಗೂ ಶ್ರೀಲಂಕಾ (SAW vs SLW) ವನಿತೆಯರು ಮುಖಾಮುಖಿ ಆಗಲಿದ್ದಾರೆ. ಈ ಪಂದ್ಯ ಭಾರತೀಯ ಕಾಲಮಾನದ ಪ್ರಕಾರ ರಾತ್ರಿ 10:30 ಕ್ಕೆ ಶುರುವಾಗಲಿದೆ. ಹರ್ಮನ್‌ಪ್ರೀತ್ ಕೌರ್ ನಾಯಕತ್ವದ ಭಾರತ ಮಹಿಳಾ ತಂಡವು (India Womens Team) ಇಂಗ್ಲೆಂಡ್, ವೆಸ್ಟ್ ಇಂಡೀಸ್, ಪಾಕಿಸ್ತಾನ ಮತ್ತು ಐರ್ಲೆಂಡ್‌ನೊಂದಿಗೆ ಗುಂಪು 2ರಲ್ಲಿದೆ.
ಈ ಬಾರಿಯ ಮಹಿಳೆಯರ ಟಿ20 ವಿಶ್ವಕಪ್ ಟ್ರೋಫಿಗಾಗಿ ಒಟ್ಟು 10 ತಂಡಗಳು ಹೋರಾಟ ನಡೆಸುತ್ತಿದೆ. ಈ ಮೆಗಾ ಈವೆಂಟ್‌ನಲ್ಲಿ ಒಟ್ಟು 33 ಪಂದ್ಯಗಳು ನಡೆಯಲಿದೆ. ಇದಕ್ಕಾಗಿ ದಕ್ಷಿಣ ಆಫ್ರಿಕಾದ ಮೂರು ಸ್ಥಳಗಳನ್ನು ನಿಗದಿ ಪಡಿಸಲಾಗಿದೆ. ನ್ಯೂಲ್ಯಾಂಡ್ಸ್ ಕ್ರಿಕೆಟ್ ಗ್ರೌಂಡ್ (ಕೇಪ್ ಟೌನ್), ಸೇಂಟ್ ಜಾರ್ಜ್ ಪಾರ್ಕ್ ಕ್ರಿಕೆಟ್ ಗ್ರೌಂಡ್ (ಗ್ಕೆಬರ್ಹಾ) ಮತ್ತು ಬೋಲ್ಯಾಂಡ್ ಪಾರ್ಕ್ (ಪಾರ್ಲ್) ನಲ್ಲಿ ಎಲ್ಲ ಪಂದ್ಯಗಳು ನಡೆಯಲಿದೆ. ಒಟ್ಟು 10 ತಂಡಗಳನ್ನು ಎರಡು ಗುಂಪುಗಳಾಗಿ ವಿಂಗಡಿಸಲಾಗಿದೆ. ಎಲ್ಲಾ ತಂಡಗಳು ರೌಂಡ್-ರಾಬಿನ್ ಮಾದರಿಯಲ್ಲಿ ಆಡುತ್ತವೆ. ಪ್ರತಿ ಗುಂಪಿನಲ್ಲಿ ಅಗ್ರಸ್ಥಾನ ಪಡೆದ ಎರಡು ತಂಡಗಳು ಸೆಮಿಫೈನಲ್‌ಗೆ ಅರ್ಹತೆ ಪಡೆಯುತ್ತವೆ.
IND vs AUS: ಮೂರೇ ದಿನದಲ್ಲಿ ಮುಗಿಯಲಿದೆ ಮೊದಲ ಟೆಸ್ಟ್: ಮ್ಯಾಥ್ಯೂ ಹೇಡನ್
ಗುಂಪು 1 ರಲ್ಲಿ ಆಸ್ಟ್ರೇಲಿಯಾ, ನ್ಯೂಜಿಲೆಂಡ್, ದಕ್ಷಿಣ ಆಫ್ರಿಕಾ, ಶ್ರೀಲಂಕಾ ಮತ್ತು ಬಾಂಗ್ಲಾದೇಶ ತಂಡವಿದ್ದರೆ, ಗುಂಪು 2 ರಲ್ಲಿ ಇಂಗ್ಲೆಂಡ್, ಭಾರತ, ವೆಸ್ಟ್ ಇಂಡೀಸ್, ಪಾಕಿಸ್ತಾನ, ಐರ್ಲೆಂಡ್ ಸ್ಥಾನ ಪಡೆದಿದೆ. ಭಾರತ ಮಹಿಳಾ ತಂಡ ತನ್ನ ಮೊದಲ ಪಂದ್ಯದಲ್ಲೇ ಬದ್ಧವೈರಿ ಪಾಕಿಸ್ತಾನ ವಿರುದ್ದ ಹೋರಾಟ ನಡೆಸಲಿದೆ. ಫೆಬ್ರವರಿ 12ರಂದು ಇಂಡೋ- ಪಾಕ್ ಕದನ ಏರ್ಪಡಿಸಲಾಗಿದೆ. ಬಳಿಕ ಫೆಬ್ರವರಿ 15 ರಂದು ವೆಸ್ಟ್ ಇಂಡೀಸ್ ವಿರುದ್ಧ ಕಾದಾಟ ನಡೆಸಲಿದೆ. ಫೆಬ್ರವರಿ 18 ರಂದು ಇಂಗ್ಲೆಂಡ್ ವಿರುದ್ಧ ಹೋರಾಟ ನಡೆಸಲಿರುವ ಭಾರತ ಮಹಿಳಾ ತಂಡ, ಫೆಬ್ರವರಿ 20 ರಂದು ಐರ್ಲೆಂಡ್ ವಿರುದ್ಧ ಸೆಣೆಸಾಡಲಿದೆ.
ಭಾರತದಲ್ಲಿ ಮಹಿಳೆಯರ ಟಿ20 ವಿಶ್ವಕಪ್ 2023 ಅನ್ನು ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್ ಚಾನೆಲ್‌ಗಳಲ್ಲಿ ನೇರಪ್ರಸಾರ ವೀಕ್ಷಿಸಬಹುದು. ಡಿಸ್ನಿ+ ಹಾಟ್‌ಸ್ಟಾರ್ ಅಪ್ಲಿಕೇಶನ್‌ನಲ್ಲಿ ಲೈವ್ ಸ್ಟ್ರೀಮ್ ನೋಡಬಹುದು.
ಟಿ20 ವಿಶ್ವಕಪ್ಗೆ ಭಾರತ ತಂಡ: ಹರ್ಮನ್‌ಪ್ರೀತ್ ಕೌರ್ (ನಾಯಕಿ), ಸ್ಮೃತಿ ಮಂಧಾನ (ಉಪನಾಯಕಿ), ಶಫಾಲಿ ವರ್ಮಾ, ಯಾಸ್ತಿಕಾ ಭಾಟಿಯಾ (ವಿಕೆಟ್ ಕೀಪರ್), ರಿಚಾ ಘೋಷ್ (ವಿಕೆಟ್ ಕೀಪರ್) ಜೆಮಿಮಾ ರೋಡ್ರಿಗಸ್, ಹರ್ಲೀನ್ ಡಿಯೋಲ್, ದೀಪ್ತಿ ಶರ್ಮಾ, ರಾಧಾ ಯಾದವ್, ರೇಣುಕಾ ಠಾಕೂರ್, ಅಂಜಲಿ ಸರ್ವಾಣಿ, ಪೂಜಾ ವಸ್ತ್ರಾಕರ್, ರಾಜೇಶ್ವರಿ ಗಾಯಕ್ವಾಡ್, ಶಿಖಾ ಪಾಂಡೆ.
ಮೀಸಲು: ಸಬ್ಬಿನೇನಿ ಮೇಘನಾ, ಮೇಘನಾ ಸಿಂಗ್, ಸ್ನೇಹ ರಾಣಾ.
ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ