INDW vs AUSW Semi Final: ಐಸಿಸಿ ಟಿ20 ವಿಶ್ವಕಪ್ ಸೆಮಿ ಫೈನಲ್​ನಲ್ಲಿ ಭಾರತಕ್ಕೆ ಆಸ್ಟ್ರೇಲಿಯಾ ಎದುರಾಳಿ: ಪಂದ್ಯ ಯಾವಾಗ?

ICC Women's T20 World Cup Semi Final: ಇದೀಗ ಸೆಮಿ ಫೈನಲ್​ನಲ್ಲಿ ಭಾರತಕ್ಕೆ ಬಲಿಷ್ಠ ತಂಡ ಎದುರಾಗಿದೆ. ಟೂರ್ನಿಯಲ್ಲಿ ಒಂದೇ ಒಂದು ಸೋಲು ಕಾಣದೆ ಆಡಿರುವ ಎಲ್ಲ ನಾಲ್ಕು ಪಂದ್ಯಗಳಲ್ಲಿ ದೊಡ್ಡ ಅಂತರದ ಗೆಲುವು ಸಾಧಿಸಿರುವ ಆಸ್ಟ್ರೇಲಿಯಾ ತಂಡವನ್ನು ಎದುರಿಸಲಿದೆ.

INDW vs AUSW Semi Final: ಐಸಿಸಿ ಟಿ20 ವಿಶ್ವಕಪ್ ಸೆಮಿ ಫೈನಲ್​ನಲ್ಲಿ ಭಾರತಕ್ಕೆ ಆಸ್ಟ್ರೇಲಿಯಾ ಎದುರಾಳಿ: ಪಂದ್ಯ ಯಾವಾಗ?
INDW vs AUSW Semi Final
Follow us
Vinay Bhat
|

Updated on:Feb 21, 2023 | 7:31 AM

ಐಸಿಸಿ ಮಹಿಳಾ ಟಿ20 ವಿಶ್ವಕಪ್​ನಲ್ಲಿ (ICC Womens T20 World Cup) ನಡೆದ 19ನೇ ಪಂದ್ಯದಲ್ಲಿ ಐರ್ಲೆಂಡ್ ವಿರುದ್ಧ ಡಕ್ವರ್ತ್ ಲೂಯಿಸ್ ನಿಯಮದ ಅನ್ವಯ 5 ರನ್​ಗಳ ರೋಚಕ ಜಯ ಸಾಧಿಸಿರುವ ಭಾರತೀಯ ವನಿತೆಯರು ಸೆಮಿ ಫೈನಲ್​ಗೆ ಕ್ವಾಲಿಫೈ ಆಗಿದ್ದಾರೆ. ಆಡಿರುವ ನಾಲ್ಕು ಪಂದ್ಯಗಳ ಪೈಕಿ ಮೂರರಲ್ಲಿ ಜಯ ಹಾಗೂ ಒಂದು ಸೋಲಿನೊಂದಿಗೆ 6 ಅಂಕ ಸಂಪಾದಿಸಿರುವ ಟೀಮ್ ಇಂಡಿಯಾ (Team india) +0.253 ರನ್​ರೇಟ್​ನೊಂದಿಗ ಗ್ರೂಪ್​​ ಬಿಯಲ್ಲಿ ಎರಡನೇ ಸ್ಥಾನ ಪಡೆದು ಸೆಮೀಸ್​ಗೆ ಕ್ವಾಲಿಫೈ ಆಗಿದೆ. ಇದೀಗ ಸೆಮಿ ಫೈನಲ್​ನಲ್ಲಿ ಭಾರತಕ್ಕೆ ಬಲಿಷ್ಠ ತಂಡ ಎದುರಾಗಿದೆ. ಟೂರ್ನಿಯಲ್ಲಿ ಒಂದೇ ಒಂದು ಸೋಲು ಕಾಣದೆ ಆಡಿರುವ ಎಲ್ಲ ನಾಲ್ಕು ಪಂದ್ಯಗಳಲ್ಲಿ ದೊಡ್ಡ ಅಂತರದ ಗೆಲುವು ಸಾಧಿಸಿರುವ ಆಸ್ಟ್ರೇಲಿಯಾ (India Women vs Australia Women) ತಂಡವನ್ನು ಎದುರಿಸಲಿದೆ.

ಭಾರತ ಹಾಗೂ ಆಸ್ಟ್ರೇಲಿಯಾ ನಡುವಣ ಸೆಮಿ ಫೈನಲ್ ಕದನ ಫೆಬ್ರವರಿ 23 ಗುರುವಾರದಂದು ಕೇಪ್​ಟೌನ್​ನ ನ್ಯೂಲೆಂಡ್ಸ್​ನಲ್ಲಿ ನಡೆಯಲಿದೆ. ಈ ಪಂದ್ಯ ಭಾರತೀಯ ಕಾಲಮಾನದ ಪ್ರಕಾರ ಸಂಜೆ 6:30ಕ್ಕೆ ಶುರುವಾಗಲಿದೆ. 6 ಗಂಟೆಗೆ ಟಾಸ್ ಪ್ರಕ್ರಿಯೆ ಆಗಲಿದೆ. ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್ ಚಾನೆಲ್‌ಗಳಲ್ಲಿ ನೇರಪ್ರಸಾರ ವೀಕ್ಷಿಸಬಹುದು. ಡಿಸ್ನಿ+ ಹಾಟ್‌ಸ್ಟಾರ್ ಅಪ್ಲಿಕೇಶನ್‌ನಲ್ಲಿ ಲೈವ್ ಸ್ಟ್ರೀಮ್ ನೋಡಬಹುದು.

ದಾಖಲೆಗಳನ್ನು ಗಮನಿಸುವುದಾದರೆ, ಭಾರತ ವಿರುದ್ಧ ಆಸ್ಟ್ರೇಲಿಯಾ ಮೇಲುಗೈ ಸಾಧಿಸಿದೆ. ಉಭಯ ತಂಡಗಳು ಈವರೆಗೆ ಒಟ್ಟು 30 ಬಾರಿ ಮುಖಾಮುಖಿ ಆಗಿವೆ. ಇದರಲ್ಲಿ ಭಾರತ ಕೇವಲ 7 ಪಂದ್ಯಗಳಲ್ಲಷ್ಟೆ ಜಯ ಸಾಧಿಸಿದರೆ ಕಾಂಗರೂ ಪಡೆ 22 ಪಂದ್ಯಗಳಲ್ಲಿ ಗೆಲುವು ಕಂಡಿದೆ. ಒಂದು ಪಂದ್ಯ ಫಲಿತಾಂಶ ಇಲ್ಲದೆ ಅಂತ್ಯಕಂಡಿದೆ. ಕೊನೆಯ ಐದು ಪಂದ್ಯಗಳಲ್ಲಿ ಕೂಡ ಅಸೀಸ್ 4 ರಲ್ಲಿ ಹಾಗೂ ಭಾರತ ಒಂದರಲ್ಲಿ ಜಯ ಕಂಡಿದೆ. ಹೀಗಾಗಿ ಭಾರತ ಹೊಸ ರಣತಂತ್ರದೊಂದಿಗೆ ಕಣಕ್ಕಿಳಿಯಬೇಕು.

ಇದನ್ನೂ ಓದಿ
Image
Harmanpreet Kaur: ಕೊಹ್ಲಿ, ರೋಹಿತ್ ಸಾಲಿಗೆ ಸೇರಿದ ಹರ್ಮನ್​ಪ್ರೀತ್: ಮಹಿಳೆಯರಲ್ಲಿ ಯಾರೂ ಮಾಡಿಲ್ಲ ಈ ಸಾಧನೆ
Image
Fastest Test Century: ಟೆಸ್ಟ್ ಕ್ರಿಕೆಟ್​ನಲ್ಲಿ ಅತೀ ವೇಗದ ಶತಕ ಸಿಡಿಸಿದ್ದು ಯಾರು ಗೊತ್ತಾ?
Image
T20 World Cup 2023: ರೋಚಕ ಜಯದೊಂದಿಗೆ ಸೆಮೀಸ್​ಗೆ ಎಂಟ್ರಿ ಕೊಟ್ಟ ಟೀಮ್ ಇಂಡಿಯಾ
Image
IPL 2023: RCB ತಂಡಕ್ಕೆ ಹಿನ್ನಡೆ: ಪ್ರಮುಖ ಆಟಗಾರ ಆಡುವುದು ಅನುಮಾನ..!

IPL Incredible Awards: ಐಪಿಎಲ್​ ಅವಾರ್ಡ್ಸ್ ಪ್ರಕಟ: 6 ಆಟಗಾರರಿಗೆ ಒಲಿದ ಪ್ರಶಸ್ತಿ

ಸ್ಮೃತಿ ಮಂಧಾನ ಭರ್ಜರಿ ಫಾರ್ಮ್:

ಭಾರತದ ಬ್ಯಾಟಿಂಗ್ ವಿಭಾಗದ ಪ್ರಮುಖ ಅಸ್ತ್ರವಾಗಿರುವ ಸ್ಮೃತಿ ಮಂಧಾನ ಭರ್ಜರಿ ಫಾರ್ಮ್​ನಲ್ಲಿರುವುದು ತಂಡದ ಪ್ಲಸ್ ಪಾಯಿಂಟ್. ಇವರು ಕಳೆದ ಎರಡು ಪಂದ್ಯಗಳಲ್ಲಿ ಸತತವಾಗಿ ಅರ್ಧಶತಕ ಸಿಡಿಸಿ ಮಿಂಚಿದ್ದಾರೆ. ಇಂಗ್ಲೆಂಡ್ ವಿರುದ್ಧ 41 ಎಸೆತಗಳಲ್ಲಿ 52 ರನ್ ಗಳಿಸಿದರೆ, ಸೋಮವಾರ ಐರ್ಲೆಂಡ್​ ವಿರುದ್ಧದ ಪಂದ್ಯದಲ್ಲಿ 3 ಭರ್ಜರಿ ಸಿಕ್ಸ್ ಹಾಗೂ 9 ಫೋರ್​ಗಳೊಂದಿಗೆ 56 ಎಸೆತಗಳಲ್ಲಿ 87 ರನ್​ ಚಚ್ಚಿದರು. ಶಫಾಲಿ ವರ್ಮಾ ಹಾಗೂ ರಿಚಾ ಘೋಷ್ ಸಾಥ್ ನೀಡುತ್ತಿದ್ದಾರೆ. ಆದರೆ, ನಾಯಕಿ ಹರ್ಮನ್​ಪ್ರೀತ್​ ಕೌರ್, ಜೆಮಿಯಾ ರೋಡ್ರಿಗಸ್ ಬ್ಯಾಟ್​ನಿಂದ ರನ್ ಬರದಿರುವುದು ದೊಡ್ಡ ತಲೆನೋವಾಗಿದೆ.

ಭಾರತ ಮಹಿಳಾ ತಂಡ: ಹರ್ಮನ್‌ಪ್ರೀತ್ ಕೌರ್ (ನಾಯಕಿ), ಸ್ಮೃತಿ ಮಂಧಾನ (ಉಪನಾಯಕಿ), ಶಫಾಲಿ ವರ್ಮಾ, ಯಾಸ್ತಿಕಾ ಭಾಟಿಯಾ (ವಿಕೆಟ್ ಕೀಪರ್), ರಿಚಾ ಘೋಷ್ (ವಿಕೆಟ್ ಕೀಪರ್), ದೀಪ್ತಿ ಶರ್ಮಾ, ಜೆಮಿಮಾ ರೋಡ್ರಿಗಸ್, ಹರ್ಲೀನ್ ಡಿಯೋಲ್, ರಾಧಾ ಯಾದವ್, ಪೂಜಾ ವಸ್ತ್ರಾಕರ್, ರಾಜೇಶ್ವರಿ ಗಾಯಕ್ವಾಡ್, ಶಿಖಾ ಪಾಂಡೆ, ರೇಣುಕಾ ಠಾಕೂರ್, ಅಂಜಲಿ ಸರ್ವಾಣಿ.

ಆಸ್ಟ್ರೇಲಿಯಾ ಮಹಿಳಾ ತಂಡ: ಮೆಗ್ ಲ್ಯಾನಿಂಗ್ (ನಾಯಕಿ), ಅಲಿಸ್ಸಾ ಹೀಲಿ (ವಿಕೆಟ್ ಕೀಪರ್), ಡಾರ್ಸಿ ಬ್ರೌನ್, ಆಶ್ಲೀಗ್ ಗಾರ್ಡ್ನರ್, ಕಿಮ್ ಗಾರ್ತ್, ಹೀದರ್ ಗ್ರಹಾಂ, ಗ್ರೇಸ್ ಹ್ಯಾರಿಸ್, ಜೆಸ್ ಜೊನಾಸೆನ್, ಅಲಾನಾ ಕಿಂಗ್, ತಾಲಿಯಾ ಮೆಕ್‌ಗ್ರಾತ್, ಬೆತ್ ಮೂನಿ, ಎಲ್ಲಿಸ್ ಪೆರಿ, ಮೇಗನ್ ಶುಟ್, ಅನ್ನಾಬೆಲ್ ಸದರ್ಲ್ಯಾಂಡ್, ಜಾರ್ಜಿಯಾ ವೇರ್ಹ್ಯಾಮ್.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 7:31 am, Tue, 21 February 23

ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ