ICC Women’s T20I Ranking: ಟಾಪ್ 10ರೊಳಗೆ ಮೂವರು ಟೀಂ ಇಂಡಿಯಾ ಆಟಗಾರ್ತಿಯರು; ಆದರೆ..?

ICC Women's T20I Ranking: ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ಬೆಳ್ಳಿ ಪದಕ ಗೆದ್ದ ಭಾರತ ತಂಡದ ಮೂವರು ಆಟಗಾರರು ಟಾಪ್-10ರಲ್ಲಿ ಸ್ಥಾನ ಪಡೆದಿದ್ದಾರೆ. ರೋಡ್ರಿಗಸ್ ಏಳು ಸ್ಥಾನ ಮೇಲೇರಿ 10ನೇ ಸ್ಥಾನಕ್ಕೆ ತಲುಪಿದ್ದಾರೆ.

ICC Women's T20I Ranking: ಟಾಪ್ 10ರೊಳಗೆ ಮೂವರು ಟೀಂ ಇಂಡಿಯಾ ಆಟಗಾರ್ತಿಯರು; ಆದರೆ..?
ಕ್ಯಾಂಟರ್ಬರಿಯಲ್ಲಿ ಇಂಗ್ಲೆಂಡ್ ವಿರುದ್ಧದ ಎರಡನೇ ಏಕದಿನ ಪಂದ್ಯದಲ್ಲಿ ಆರಂಭಿಕರಾಗಿ ಕಣಕ್ಕಿಳಿದಿದ್ದ ಮಂಧಾನ 40 ರನ್ ಗಳಿಸಿದರು. ಇದರೊಂದಿಗೆ ಏಕದಿನ ಕ್ರಿಕೆಟ್​ನಲ್ಲಿ 3000 ರನ್ಗಳನ್ನು ಪೂರೈಸಿದರು. ಮಂಧಾನ 3000 ರನ್ ಪೂರೈಸಿದ ಭಾರತದ ಮೂರನೇ ಮಹಿಳಾ ಕ್ರಿಕೆಟಿಗರಾದರು.
Follow us
TV9 Web
| Updated By: ಪೃಥ್ವಿಶಂಕರ

Updated on: Aug 09, 2022 | 5:54 PM

ಬರ್ಮಿಂಗ್ ಹ್ಯಾಮ್​ನಲ್ಲಿ ನಡೆದ ಕಾಮನ್​ವೆಲ್ತ್ ಗೇಮ್ಸ್​ನಲ್ಲಿ (Commonwealth Games) ಭಾರತ ಮಹಿಳಾ ತಂಡ (Indian women’s team) ಅದ್ಭುತ ಪ್ರದರ್ಶನ ನೀಡಿ ಪದಕ ಗೆಲ್ಲುವಲ್ಲಿ ಯಶಸ್ವಿಯಾಗಿದೆ. ಆದರೆ, ಚಿನ್ನದ ಪದಕದ ಪಂದ್ಯದಲ್ಲಿ ತಂಡ ಸೋಲನುಭವಿಸಿ ಬೆಳ್ಳಿ ಪದಕಕ್ಕೆ ತೃಪ್ತಿಪಡಬೇಕಾಯಿತು. ಇದಾದ ಬಳಿಕ ಮಹಿಳಾ ಕ್ರಿಕೆಟ್ ಶ್ರೇಯಾಂಕದಲ್ಲಿ ಕೆಲವು ಬದಲಾವಣೆಗಳು ಕಂಡುಬಂದಿವೆ. ಇದರಲ್ಲಿ ಇಬ್ಬರು ದೊಡ್ಡ ಬ್ಯಾಟರ್​ಗಳಾದ ಸ್ಮೃತಿ ಮಂಧಾನ ಮತ್ತು ಶೆಫಾಲಿ ವರ್ಮಾ (Smriti Mandhana and Shefali Verma) ಹಿಂಬಡ್ತಿ ಪಡೆದಿದ್ದಾರೆ. ಆದರೆ ಜೆಮಿಮಾ ರೊಡ್ರಿಗಸ್ (Jemima Rodriguez) ಶ್ರೇಯಾಂಕದಲ್ಲಿ ಲಾಭ ಪಡೆದಿದ್ದಾರೆ. ಜೊತೆಗೆ ಟಾಪ್-10ರೊಳಗೆ ಸ್ಥಾನ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.

ಆಸ್ಟ್ರೇಲಿಯಾ ಚಿನ್ನದ ಪದಕ ಪಡೆಯುವಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಬೆತ್ ಮೂನಿ ಲಾಭ ಪಡೆದಿದ್ದು, ಶ್ರೇಯಾಂಕದಲ್ಲಿ ಮೊದಲ ಸ್ಥಾನ ಆಕ್ರಮಿಸಿಕೊಂಡಿದ್ದಾರೆ. ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ಮೂನಿ 179 ರನ್ ಗಳಿಸಿದ್ದರು. ಜೊತೆಗೆ ಈ ಪಂದ್ಯಾವಳಿಯಲ್ಲಿ ಅತಿ ಹೆಚ್ಚು ರನ್ ಗಳಿಸಿದ ಆಟಗಾರ್ತಿ ಎನಿಸಿಕೊಂಡರು. ಕಳೆದ ತಿಂಗಳಷ್ಟೇ ಅವರು ಆಸೀಸ್​ ಮಹಿಳಾ ತಂಡದ ನಾಯಕಿ ಎದುರು ಅಗ್ರಸ್ಥಾನವನ್ನು ಕಳೆದುಕೊಂಡಿದ್ದರು.

ಮಂಧಾನ ಮತ್ತು ಶೆಫಾಲಿಗೆ ಹಿಂಬಡ್ತಿ

ಇದನ್ನೂ ಓದಿ
Image
Asia Cup 2022: ಜಸ್ಪ್ರೀತ್ ಬುಮ್ರಾ ಬಳಿಕ ಮತ್ತೊಬ್ಬ ಸ್ಟಾರ್ ಬೌಲರ್ ಏಷ್ಯಾಕಪ್​ನಿಂದ ಔಟ್..!
Image
Asia Cup: ಏಷ್ಯಾಕಪ್​ಗೆ ತಂಡದಲ್ಲಿ ಸ್ಥಾನ ಪಡೆದ ಆರ್​ಸಿಬಿ ಆಟಗಾರ; ಕಾಮೆಂಟರಿಗೆ ಸೂಕ್ತ ಎಂದ ಜಡೇಜಾ..!
Image
IND vs PAK: ಏಷ್ಯಾಕಪ್​ನಲ್ಲಿ ಪಾಕ್​ ವಿರುದ್ಧದ ಪಂದ್ಯಕ್ಕೆ ಭಾರತದ ಸಂಭಾವ್ಯ ಪ್ಲೇಯಿಂಗ್ XI ಹೀಗಿರಲಿದೆ

ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ಬೆಳ್ಳಿ ಪದಕ ಗೆದ್ದ ಭಾರತ ತಂಡದ ಮೂವರು ಆಟಗಾರರು ಟಾಪ್-10ರಲ್ಲಿ ಸ್ಥಾನ ಪಡೆದಿದ್ದಾರೆ. ರೋಡ್ರಿಗಸ್ ಏಳು ಸ್ಥಾನ ಮೇಲೇರಿ 10ನೇ ಸ್ಥಾನಕ್ಕೆ ತಲುಪಿದ್ದಾರೆ. ಅವರು ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ 146 ರನ್ ಗಳಿಸಿದ್ದರು. ಆದರೆ, ಭಾರತದ ಆರಂಭಿಕ ಆಟಗಾರ್ತಿ ಮಂಧಾನ ಅವರು ಹೆಚ್ಚು ಯಶಸ್ವಿಯಾಗಲಿಲ್ಲ. ಎರಡು ಸ್ಥಾನ ಕಳೆದುಕೊಂಡಿರುವ ಅವರು ನಾಲ್ಕನೇ ಸ್ಥಾನ ತಲುಪಿದ್ದಾರೆ. ಶೆಫಾಲಿ ವರ್ಮಾ ಒಂದು ಸ್ಥಾನ ಕುಸಿದು ಆರನೇ ಸ್ಥಾನಕ್ಕೆ ತಲುಪಿದ್ದಾರೆ. ದಕ್ಷಿಣ ಆಫ್ರಿಕಾ ಅನ್ನೆ ಬಾಷ್ ಐದು ಸ್ಥಾನ ಮೇಲೇರಿ 20ನೇ ಸ್ಥಾನ ಪಡೆದಿದ್ದಾರೆ. ತಜ್ಮಿನ್ ಬ್ರಿಟ್ಜ್ ಆರು ಸ್ಥಾನ ಮೇಲೇರಿ 22ನೇ ಸ್ಥಾನಕ್ಕೆ ತಲುಪಿದ್ದಾರೆ.

ಬೌಲರ್‌ಗಳ ಶ್ರೇಯಾಂಕ ಹೀಗಿದೆ

ಬೌಲರ್‌ಗಳಿಗೆ ಸಂಬಂಧಿಸಿದಂತೆ, ಸೋಫಿ ಎಕ್ಲೆಸ್ಟನ್ T20 ನಲ್ಲಿ ನಂಬರ್-1 ಬೌಲರ್ ಆಗಿ ಉಳಿದಿದ್ದು, ಅವರು ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ಐದು ವಿಕೆಟ್‌ ಕಬಳಿಸುವಲ್ಲಿ ಯಶಸ್ವಿಯಾಗಿದ್ದಾರೆ. ಕ್ಯಾಥರೀನ್ ಬ್ರಂಟ್ ಒಂದು ಸ್ಥಾನ ಮೇಲೇರಿ ಎರಡನೇ ಸ್ಥಾನ ಪಡೆದಿದ್ದಾರೆ. ದಕ್ಷಿಣ ಆಫ್ರಿಕಾದ ಶಬ್ನಿಮ್ ಇಸ್ಮಾಯಿಲ್ ನಾಲ್ಕನೇ ಸ್ಥಾನದಲ್ಲಿದ್ದಾರೆ. ಆಸ್ಟ್ರೇಲಿಯಾದ ಮೇಗನ್ ಶುಟ್ ಎರಡು ಸ್ಥಾನ ಮೇಲೇರಿ ಐದನೇ ಸ್ಥಾನಕ್ಕೆ ತಲುಪಿದ್ದಾರೆ. ಭಾರತದ ದೀಪ್ತಿ ಶರ್ಮಾ ಆರನೇ ಸ್ಥಾನದಲ್ಲಿದ್ದಾರೆ. ಇವರನ್ನು ಹೊರತುಪಡಿಸಿ ಟಾಪ್-10ರಲ್ಲಿ ಭಾರತದ ಮತ್ತೊಬ್ಬ ಬೌಲರ್ ಇಲ್ಲ.

ಮೊದಲ ಬಾರಿಗೆ ಅದ್ಭುತ ಸಾಧನೆ

ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ಮೊದಲ ಬಾರಿಗೆ ಮಹಿಳಾ ಕ್ರಿಕೆಟ್ ಸೇರ್ಪಡೆಗೊಂಡಿತ್ತು. ಜೊತೆಗೆ ಈ ಕ್ರೀಡಾಕೂಟದಲ್ಲಿ T20 ಮಾದರಿಯ ಪಂದ್ಯಗಳನ್ನು ಆಡಲಾಯಿತು. ಅದ್ಭುತ ಪ್ರದರ್ಶನ ನೀಡುವ ಮೂಲಕ ಭಾರತ ಫೈನಲ್‌ಗೆ ಲಗ್ಗೆ ಇಟ್ಟಿತ್ತು ಆದರೆ ಮತ್ತೊಮ್ಮೆ ಆಸ್ಟ್ರೇಲಿಯಾದ ಸವಾಲನ್ನು ಜಯಿಸಲು ಸಾಧ್ಯವಾಗಲಿಲ್ಲ. ರೋಚಕ ಪಂದ್ಯದಲ್ಲಿ ಭಾರತವನ್ನು ಸೋಲಿಸಿ ಆಸ್ಟ್ರೇಲಿಯಾ ಚಿನ್ನದ ಪದಕ ಗೆದ್ದುಕೊಂಡಿದ್ದು, ಭಾರತ ಬೆಳ್ಳಿ ಪದಕಕ್ಕೆ ತೃಪ್ತಿಪಡಬೇಕಾಯಿತು.

ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್