AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

World Cup 2025: ಭಾರತದ ವಿರುದ್ಧ ಟಾಸ್ ಗೆದ್ದ ಪಾಕಿಸ್ತಾನ; ಹರ್ಮನ್‌ಪ್ರೀತ್ ಪಡೆಯಲ್ಲಿ 1 ಬದಲಾವಣೆ

India vs Pakistan: ಐಸಿಸಿ ಮಹಿಳಾ ವಿಶ್ವಕಪ್ 2025 ರ ಲೀಗ್ ಸುತ್ತಿನಲ್ಲಿ ಭಾರತ ಮತ್ತು ಪಾಕಿಸ್ತಾನ ಕೊಲಂಬೊದಲ್ಲಿ ಮುಖಾಮುಖಿಯಾಗುತ್ತಿವೆ. ಶ್ರೀಲಂಕಾ ವಿರುದ್ಧ ಗೆದ್ದಿರುವ ಭಾರತ ತಂಡ ಸತತ ಎರಡನೇ ಜಯದ ನಿರೀಕ್ಷೆಯಲ್ಲಿದ್ದರೆ, ಬಾಂಗ್ಲಾದೇಶದ ವಿರುದ್ಧ ಸೋತಿರುವ ಪಾಕಿಸ್ತಾನ ಮೊದಲ ಗೆಲುವಿಗಾಗಿ ಹೋರಾಡಲಿದೆ. ಮಹಿಳಾ ಏಕದಿನ ಕ್ರಿಕೆಟ್‌ನಲ್ಲಿ ಭಾರತ ಪಾಕಿಸ್ತಾನದ ವಿರುದ್ಧದ ಎಲ್ಲಾ 11 ಪಂದ್ಯಗಳನ್ನೂ ಗೆದ್ದು ಮೇಲುಗೈ ಸಾಧಿಸಿದೆ. ಹರ್ಮನ್‌ಪ್ರೀತ್ ಕೌರ್ ನಾಯಕತ್ವದ ಭಾರತ ಉತ್ತಮ ಫಾರ್ಮ್‌ನಲ್ಲಿದೆ.

World Cup 2025: ಭಾರತದ ವಿರುದ್ಧ ಟಾಸ್ ಗೆದ್ದ ಪಾಕಿಸ್ತಾನ; ಹರ್ಮನ್‌ಪ್ರೀತ್ ಪಡೆಯಲ್ಲಿ 1 ಬದಲಾವಣೆ
Ind Vs Pak
ಪೃಥ್ವಿಶಂಕರ
|

Updated on:Oct 05, 2025 | 3:10 PM

Share

ಐಸಿಸಿ ಮಹಿಳಾ ವಿಶ್ವಕಪ್ 2025 (ICC Women’s World Cup 2025) ರ ಲೀಗ್ ಸುತ್ತಿನಲ್ಲಿ ಟೀಂ ಇಂಡಿಯಾ, ಪಾಕಿಸ್ತಾನದ (India vs Pakistan) ವಿರುದ್ಧ ತನ್ನ ಎರಡನೇ ಪಂದ್ಯವನ್ನು ಆಡುತ್ತಿದೆ. ಉಭಯ ತಂಡಗಳ ನಡುವಿನ ಈ ಪಂದ್ಯವು ಕೊಲಂಬೊದ ಆರ್. ಪ್ರೇಮದಾಸ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯುತ್ತಿದೆ. ಭಾರತೀಯ ಮಹಿಳಾ ತಂಡವು ಟೂರ್ನಿಯಲ್ಲಿ ಸತತ ಎರಡನೇ ಗೆಲುವನ್ನು ಎದುರು ನೋಡುತ್ತಿದ್ದರೆ, ಪಾಕಿಸ್ತಾನ ತಂಡವು ತನ್ನ ಮೊದಲ ಗೆಲುವಿಗಾಗಿ ಹೋರಾಡಲಿದೆ. ಭಾರತ ತನ್ನ ಮೊದಲ ಪಂದ್ಯದಲ್ಲಿ ಶ್ರೀಲಂಕಾವನ್ನು ಸೋಲಿಸಿದರೆ, ಇತ್ತ ಪಾಕಿಸ್ತಾನ ತನ್ನ ಮೊದಲ ಪಂದ್ಯದಲ್ಲಿ ಬಾಂಗ್ಲಾದೇಶ ವಿರುದ್ಧ ಹೀನಾಯವಾಗಿ ಸೋತಿತ್ತು. ಹೀಗಾಗಿ ಇಂದಿನ ಪಂದ್ಯದಲ್ಲಿ ಯಾರು ಗೆಲ್ಲುತ್ತಾರೆ ಎಂಬುದು ಕೆಲವೇ ಗಂಟೆಗಳಲ್ಲಿ ಗೊತ್ತಾಗಲಿದೆ.

ಟಾಸ್ ಗೆದ್ದ ಪಾಕಿಸ್ತಾನ

ಇನ್ನು ಈ ಪಂದ್ಯದಲ್ಲಿ ಪಾಕಿಸ್ತಾನ ಟಾಸ್ ಗೆದ್ದು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದೆ. ಈ ಪಂದ್ಯಕ್ಕೆ ಭಾರತ ತನ್ನ ಆಡುವ ಹನ್ನೊಂದರ ಬಳಗದಲ್ಲಿ ಒಂದು ಬದಲಾವಣೆ ಮಾಡಿದೆ. ಬದಲಾವಣೆಯ ಬಗ್ಗೆ ಮಾತನಾಡಿದ ನಾಯಕಿ ಹರ್ಮನ್‌ಪ್ರೀತ್ ಕೌರ್, ಅಮನ್‌ಜೋತ್ ಕೌರ್ ಅನಾರೋಗ್ಯದಿಂದ ಬಳಲುತ್ತಿದ್ದು, ಇಂದಿನ ಪಂದ್ಯದಲ್ಲಿ ಆಡುತ್ತಿಲ್ಲ. ಹೀಗಾಗಿ ಅವರ ಸ್ಥಾನದಲ್ಲಿ ರೇಣುಕಾ ಸಿಂಗ್ ಆಡಲಿದ್ದಾರೆ ಎಂದರು.

ಮುಖಾಮುಖಿ ದಾಖಲೆ

ಮಹಿಳಾ ಕ್ರಿಕೆಟ್‌ನಲ್ಲಿ ಭಾರತ ಮತ್ತು ಪಾಕಿಸ್ತಾನ ನಡುವೆ ಇಲ್ಲಿಯವರೆಗೆ ಒಟ್ಟು 11 ಏಕದಿನ ಪಂದ್ಯಗಳು ನಡೆದಿವೆ. ಭಾರತೀಯ ಮಹಿಳಾ ತಂಡವು ಆಡಿರುವ ಎಲ್ಲಾ ಪಂದ್ಯಗಳನ್ನೂ ಗೆದ್ದಿದೆ. ಎರಡೂ ತಂಡಗಳು ಏಕದಿನ ವಿಶ್ವಕಪ್‌ನಲ್ಲಿ ನಾಲ್ಕು ಬಾರಿ ಮುಖಾಮುಖಿಯಾಗಿದ್ದು, ಇಲ್ಲಿಯೂ ಕೂಡ ಭಾರತ ಎಲ್ಲಾ ಪಂದ್ಯಗಳನ್ನು ಗೆದ್ದಿದೆ. ಕಳೆದ ಬಾರಿ ಅಂದರೆ 2022 ರ ವಿಶ್ವಕಪ್‌ನಲ್ಲಿ ಭಾರತ ತಂಡವು, ಪಾಕಿಸ್ತಾನವನ್ನು 107 ರನ್‌ಗಳಿಂದ ಸೋಲಿಸಿತು. ಇದರರ್ಥ, ಪುರುಷರ ಕ್ರಿಕೆಟ್‌ನಂತೆ, ಮಹಿಳಾ ಕ್ರಿಕೆಟ್‌ನಲ್ಲಿ ಭಾರತ ತಂಡವು ಯಾವಾಗಲೂ ಪಾಕಿಸ್ತಾನದ ಮೇಲೆ ಮೇಲುಗೈ ಸಾಧಿಸಿದೆ.

ಆಜಾದ್ ಕಾಶ್ಮೀರ್: ವಿಶ್ವಕಪ್‌ನಲ್ಲಿ ವಿವಾದಾತ್ಮಕ ಹೇಳಿಕೆ ನೀಡಿದ ಪಾಕ್ ಮಾಜಿ ನಾಯಕಿ; ವಿಡಿಯೋ

ಉಭಯ ತಂಡಗಳು

ಭಾರತ ತಂಡ: ಪ್ರತೀಕಾ ರಾವಲ್, ಸ್ಮೃತಿ ಮಂಧಾನ, ಹರ್ಲೀನ್ ಡಿಯೋಲ್, ಹರ್ಮನ್‌ಪ್ರೀತ್ ಕೌರ್ (ನಾಯಕಿ), ಜೆಮಿಮಾ ರಾಡ್ರಿಗಸ್, ದೀಪ್ತಿ ಶರ್ಮಾ, ರಿಚಾ ಘೋಷ್ (ವಿಕೆಟ್ ಕೀಪರ್), ಸ್ನೇಹ ರಾಣಾ, ರೇಣುಕಾ ಸಿಂಗ್ ಠಾಕೂರ್, ಕ್ರಾಂತಿ ಗೌಡ್, ಶ್ರೀ ಚರಣಿ.

ಪಾಕಿಸ್ತಾನ: ಮುನೀಬಾ ಅಲಿ, ಸದಾಫ್ ಶಮ್ಸ್, ಸಿದ್ರಾ ಅಮೀನ್, ರಮೀನ್ ಶಮೀಮ್, ಅಲಿಯಾ ರಿಯಾಜ್, ಸಿದ್ರಾ ನವಾಜ್ (ವಿಕೆಟ್ ಕೀಪರ್), ಫಾತಿಮಾ ಸನಾ (ನಾಯಕಿ), ನತಾಲಿಯಾ ಪರ್ವೇಜ್, ಡಯಾನಾ ಬೇಗ್, ನಶ್ರಾ ಸಂಧು, ಸಾದಿಯಾ ಇಕ್ಬಾಲ್.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:02 pm, Sun, 5 October 25

ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ