AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Women’s World Cup 2025: ಏಕದಿನ ವಿಶ್ವಕಪ್​ಗೆ ಇಂಗ್ಲೆಂಡ್ ತಂಡ ಪ್ರಕಟ

Women's World Cup 2025: 2025ರ ಐಸಿಸಿ ಮಹಿಳಾ ಏಕದಿನ ವಿಶ್ವಕಪ್‌ಗೆ ಇಂಗ್ಲೆಂಡ್ ತನ್ನ ತಂಡವನ್ನು ಪ್ರಕಟಿಸಿದೆ. ನಾಯಕಿಯಾಗಿ ನಟ್ ಸಿವರ್ ಬ್ರಂಟ್ ಆಯ್ಕೆಯಾಗಿದ್ದು, ಹೀದರ್ ನೈಟ್ ಮತ್ತು ಡ್ಯಾನಿ ವ್ಯಾಟ್-ಹಾಡ್ಜ್ ಮುಂತಾದ ಅನುಭವಿ ಆಟಗಾರ್ತಿಯರು ತಂಡದಲ್ಲಿದ್ದಾರೆ. ಸಾರಾ ಗ್ಲೆನ್ ಮತ್ತು ಸೋಫಿ ಎಕ್ಲೆಸ್ಟೋನ್ ಸ್ಪಿನ್ನರ್‌ಗಳಾಗಿ ಆಯ್ಕೆಯಾಗಿದ್ದಾರೆ. ಭಾರತ ಮತ್ತು ಶ್ರೀಲಂಕಾದಲ್ಲಿ ನಡೆಯುವ ಈ ಪಂದ್ಯಾವಳಿಯಲ್ಲಿ ಇಂಗ್ಲೆಂಡ್ ಉತ್ತಮ ಪ್ರದರ್ಶನ ನೀಡುವ ನಿರೀಕ್ಷೆಯಿದೆ. ಭಾರತ ಕೂಡ ತನ್ನ ತಂಡವನ್ನು ಈಗಾಗಲೇ ಪ್ರಕಟಿಸಿದೆ.

Women's World Cup 2025: ಏಕದಿನ ವಿಶ್ವಕಪ್​ಗೆ ಇಂಗ್ಲೆಂಡ್ ತಂಡ ಪ್ರಕಟ
England Team
ಪೃಥ್ವಿಶಂಕರ
|

Updated on:Aug 21, 2025 | 7:17 PM

Share

2025 ರ ಐಸಿಸಿ ಮಹಿಳಾ ಏಕದಿನ ವಿಶ್ವಕಪ್ (ICC Women’s World Cup 2025) ಸೆಪ್ಟೆಂಬರ್ 30 ರಿಂದ ಪ್ರಾರಂಭವಾಗುತ್ತಿದ್ದು, ಇದೀಗ ಈ ಪಂದ್ಯಾವಳಿಗೆ ಇಂಗ್ಲೆಂಡ್ ತನ್ನ ತಂಡವನ್ನು ಪ್ರಕಟಿಸಿದೆ. ಇತ್ತೀಚೆಗೆ, ಭಾರತ ಕೂಡ ಈ ಪಂದ್ಯಾವಳಿಗೆ ತನ್ನ ತಂಡವನ್ನು ಪ್ರಕಟಿಸಿತ್ತು. ಈ ಪಂದ್ಯಾವಳಿಯಲ್ಲಿ ನ್ಯಾಟ್ ಸಿವರ್ ಬ್ರಂಟ್ ಇಂಗ್ಲೆಂಡ್ ತಂಡದ ನಾಯಕತ್ವ ವಹಿಸಲಿದ್ದಾರೆ. ಉಳಿದಂತೆ ಈ ತಂಡದಲ್ಲಿ ಅನುಭವಿ ಆಟಗಾರ್ತಿಯರ ಜೊತೆಗೆ, ಯುವ ಆಟಗಾರ್ತಿಯರು ಸಹ ಸೇರಿದ್ದಾರೆ.

ಅನುಭವಿಗಳಿಂದ ಕೂಡಿದ ತಂಡ

ಇಂಗ್ಲೆಂಡ್ ತಂಡದಲ್ಲಿ ಅನೇಕ ಅನುಭವಿ ಆಟಗಾರ್ತಿಯರಿದ್ದು, ನ್ಯಾಟ್ ಸಿವರ್ ಬ್ರಂಟ್ ಹೊರತುಪಡಿಸಿ, ಹೀದರ್ ನೈಟ್ ಮತ್ತು ಡ್ಯಾನಿ ವ್ಯಾಟ್-ಹಾಡ್ಜ್ ಬ್ಯಾಟಿಂಗ್‌ನಲ್ಲಿ ಪ್ರಮುಖ ಪಾತ್ರ ವಹಿಸಲಿದ್ದಾರೆ. ಸಾರಾ ಗ್ಲೆನ್ ಮತ್ತು ಸೋಫಿ ಎಕ್ಲೆಸ್ಟೋನ್ ಅವರನ್ನು ಸ್ಪಿನ್ನರ್‌ಗಳಾಗಿ ತಂಡಕ್ಕೆ ಆಯ್ಕೆ ಮಾಡಲಾಗಿದೆ. ಈ ಪಂದ್ಯಾವಳಿ ಭಾರತ ಮತ್ತು ಶ್ರೀಲಂಕಾದಲ್ಲಿ ನಡೆಯಲಿದ್ದು, ಈ ಇಬ್ಬರೂ ಆಟಗಾರ್ತಿಯರು ಇಲ್ಲಿ ಪ್ರಮುಖ ಪಾತ್ರ ವಹಿಸಲಿದ್ದಾರೆ. ತಂಡವು ಉತ್ತಮ ಆಲ್‌ರೌಂಡರ್‌ಗಳನ್ನು ಸಹ ಹೊಂದಿದ್ದು, ಎಮ್ಮಾ ಜೋನ್ಸ್ ಅವರನ್ನು ವಿಕೆಟ್ ಕೀಪರ್ ಆಗಿ ಆಯ್ಕೆ ಮಾಡಲಾಗಿದೆ.

2 ತಂಡಗಳು ಇದುವರೆಗೆ ಪ್ರಕಟ

ಮೇಲೆ ಹೇಳಿದಂತೆ 2025 ರ ಮಹಿಳಾ ಏಕದಿನ ವಿಶ್ವಕಪ್ ಪಂದ್ಯಾವಳಿ ಸೆಪ್ಟೆಂಬರ್ 30 ರಿಂದ ಆರಂಭವಾಗಲಿದೆ. ಈ ಪಂದ್ಯಾವಳಿ ಭಾರತ ಮತ್ತು ಶ್ರೀಲಂಕಾದಲ್ಲಿ ನಡೆಯಲಿದೆ. ಇಲ್ಲಿಯವರೆಗೆ ಕೇವಲ ಎರಡು ತಂಡಗಳು ಮಾತ್ರ ಈ ಪಂದ್ಯಾವಳಿಗೆ ತಮ್ಮ ತಂಡವನ್ನು ಘೋಷಿಸಿವೆ. ಭಾರತದ ಬಗ್ಗೆ ಹೇಳುವುದಾದರೆ, ತಂಡವನ್ನು ಹರ್ಮನ್ಪ್ರೀತ್ ಕೌರ್ ಮುನ್ನಡೆಸಲಿದ್ದು, ಸ್ಮೃತಿ ಮಂಧಾನ ಅವರನ್ನು ಉಪನಾಯಕಿಯನ್ನಾಗಿ ಮಾಡಲಾಗಿದೆ. ಭಾರತ ಮತ್ತು ಇಂಗ್ಲೆಂಡ್ ನಡುವಿನ ಪಂದ್ಯವು ಅಕ್ಟೋಬರ್ 19 ರಂದು ಇಂದೋರ್‌ನಲ್ಲಿ ನಡೆಯಲಿದೆ. ಈ ಪಂದ್ಯಾವಳಿಯ ಅಂತಿಮ ಪಂದ್ಯವು ನವೆಂಬರ್ 2 ರಂದು ನಡೆಯಲಿದೆ.

ಮಹಿಳಾ ಏಕದಿನ ವಿಶ್ವಕಪ್ ಗೆ ಭಾರತ ತಂಡ ಪ್ರಕಟ, ಟೀಮ್​​ನಲ್ಲಿ ಯಾರಿಗೆಲ್ಲಾ ಸಿಕ್ತು ಚಾನ್ಸ್​?

2025 ರ ಏಕದಿನ ವಿಶ್ವಕಪ್‌ಗಾಗಿ ಇಂಗ್ಲೆಂಡ್ ತಂಡ: ನ್ಯಾಟ್ ಸಿವರ್ ಬ್ರಂಟ್ (ನಾಯಕಿ), ಎಂ ಆರ್ಲಾಟ್, ಟ್ಯಾಮಿ ಬ್ಯೂಮಾಂಟ್, ಲಾರೆನ್ ಬೆಲ್, ಆಲಿಸ್ ಕ್ಯಾಪ್ಸೆ, ಚಾರ್ಲಿ ಡೀನ್, ಸೋಫಿಯಾ ಡಂಕ್ಲಿ, ಸೋಫಿ ಎಕ್ಲೆಸ್ಟೋನ್, ಲಾರೆನ್ ಫೈಲರ್, ಸಾರಾ ಗ್ಲೆನ್, ಆಮಿ ಜೋನ್ಸ್ (ವಿಕೆಟ್ ಕೀಪರ್), ಹೀದರ್ ನೈಟ್, ಎಮ್ಮಾ ಲ್ಯಾಂಬ್, ಲಿನ್ಸೆ ಸ್ಮಿತ್ ಮತ್ತು ಡ್ಯಾನಿ ವ್ಯಾಟ್-ಹಾಡ್ಜ್.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:13 pm, Thu, 21 August 25

ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್