
2025 ರ ಐಸಿಸಿ ಮಹಿಳಾ ಏಕದಿನ ವಿಶ್ವಕಪ್ (ICC Women’s World Cup 2025) ಸೆಪ್ಟೆಂಬರ್ 30 ರಿಂದ ಪ್ರಾರಂಭವಾಗುತ್ತಿದ್ದು, ಇದೀಗ ಈ ಪಂದ್ಯಾವಳಿಗೆ ಇಂಗ್ಲೆಂಡ್ ತನ್ನ ತಂಡವನ್ನು ಪ್ರಕಟಿಸಿದೆ. ಇತ್ತೀಚೆಗೆ, ಭಾರತ ಕೂಡ ಈ ಪಂದ್ಯಾವಳಿಗೆ ತನ್ನ ತಂಡವನ್ನು ಪ್ರಕಟಿಸಿತ್ತು. ಈ ಪಂದ್ಯಾವಳಿಯಲ್ಲಿ ನ್ಯಾಟ್ ಸಿವರ್ ಬ್ರಂಟ್ ಇಂಗ್ಲೆಂಡ್ ತಂಡದ ನಾಯಕತ್ವ ವಹಿಸಲಿದ್ದಾರೆ. ಉಳಿದಂತೆ ಈ ತಂಡದಲ್ಲಿ ಅನುಭವಿ ಆಟಗಾರ್ತಿಯರ ಜೊತೆಗೆ, ಯುವ ಆಟಗಾರ್ತಿಯರು ಸಹ ಸೇರಿದ್ದಾರೆ.
ಇಂಗ್ಲೆಂಡ್ ತಂಡದಲ್ಲಿ ಅನೇಕ ಅನುಭವಿ ಆಟಗಾರ್ತಿಯರಿದ್ದು, ನ್ಯಾಟ್ ಸಿವರ್ ಬ್ರಂಟ್ ಹೊರತುಪಡಿಸಿ, ಹೀದರ್ ನೈಟ್ ಮತ್ತು ಡ್ಯಾನಿ ವ್ಯಾಟ್-ಹಾಡ್ಜ್ ಬ್ಯಾಟಿಂಗ್‌ನಲ್ಲಿ ಪ್ರಮುಖ ಪಾತ್ರ ವಹಿಸಲಿದ್ದಾರೆ. ಸಾರಾ ಗ್ಲೆನ್ ಮತ್ತು ಸೋಫಿ ಎಕ್ಲೆಸ್ಟೋನ್ ಅವರನ್ನು ಸ್ಪಿನ್ನರ್‌ಗಳಾಗಿ ತಂಡಕ್ಕೆ ಆಯ್ಕೆ ಮಾಡಲಾಗಿದೆ. ಈ ಪಂದ್ಯಾವಳಿ ಭಾರತ ಮತ್ತು ಶ್ರೀಲಂಕಾದಲ್ಲಿ ನಡೆಯಲಿದ್ದು, ಈ ಇಬ್ಬರೂ ಆಟಗಾರ್ತಿಯರು ಇಲ್ಲಿ ಪ್ರಮುಖ ಪಾತ್ರ ವಹಿಸಲಿದ್ದಾರೆ. ತಂಡವು ಉತ್ತಮ ಆಲ್‌ರೌಂಡರ್‌ಗಳನ್ನು ಸಹ ಹೊಂದಿದ್ದು, ಎಮ್ಮಾ ಜೋನ್ಸ್ ಅವರನ್ನು ವಿಕೆಟ್ ಕೀಪರ್ ಆಗಿ ಆಯ್ಕೆ ಮಾಡಲಾಗಿದೆ.
Here it is, your Cricket World Cup squad heading to India & Sri-Lanka! 👏 pic.twitter.com/jJxKGDfWNn
— England Cricket (@englandcricket) August 21, 2025
ಮೇಲೆ ಹೇಳಿದಂತೆ 2025 ರ ಮಹಿಳಾ ಏಕದಿನ ವಿಶ್ವಕಪ್ ಪಂದ್ಯಾವಳಿ ಸೆಪ್ಟೆಂಬರ್ 30 ರಿಂದ ಆರಂಭವಾಗಲಿದೆ. ಈ ಪಂದ್ಯಾವಳಿ ಭಾರತ ಮತ್ತು ಶ್ರೀಲಂಕಾದಲ್ಲಿ ನಡೆಯಲಿದೆ. ಇಲ್ಲಿಯವರೆಗೆ ಕೇವಲ ಎರಡು ತಂಡಗಳು ಮಾತ್ರ ಈ ಪಂದ್ಯಾವಳಿಗೆ ತಮ್ಮ ತಂಡವನ್ನು ಘೋಷಿಸಿವೆ. ಭಾರತದ ಬಗ್ಗೆ ಹೇಳುವುದಾದರೆ, ತಂಡವನ್ನು ಹರ್ಮನ್ಪ್ರೀತ್ ಕೌರ್ ಮುನ್ನಡೆಸಲಿದ್ದು, ಸ್ಮೃತಿ ಮಂಧಾನ ಅವರನ್ನು ಉಪನಾಯಕಿಯನ್ನಾಗಿ ಮಾಡಲಾಗಿದೆ. ಭಾರತ ಮತ್ತು ಇಂಗ್ಲೆಂಡ್ ನಡುವಿನ ಪಂದ್ಯವು ಅಕ್ಟೋಬರ್ 19 ರಂದು ಇಂದೋರ್‌ನಲ್ಲಿ ನಡೆಯಲಿದೆ. ಈ ಪಂದ್ಯಾವಳಿಯ ಅಂತಿಮ ಪಂದ್ಯವು ನವೆಂಬರ್ 2 ರಂದು ನಡೆಯಲಿದೆ.
ಮಹಿಳಾ ಏಕದಿನ ವಿಶ್ವಕಪ್ ಗೆ ಭಾರತ ತಂಡ ಪ್ರಕಟ, ಟೀಮ್ನಲ್ಲಿ ಯಾರಿಗೆಲ್ಲಾ ಸಿಕ್ತು ಚಾನ್ಸ್?
2025 ರ ಏಕದಿನ ವಿಶ್ವಕಪ್‌ಗಾಗಿ ಇಂಗ್ಲೆಂಡ್ ತಂಡ: ನ್ಯಾಟ್ ಸಿವರ್ ಬ್ರಂಟ್ (ನಾಯಕಿ), ಎಂ ಆರ್ಲಾಟ್, ಟ್ಯಾಮಿ ಬ್ಯೂಮಾಂಟ್, ಲಾರೆನ್ ಬೆಲ್, ಆಲಿಸ್ ಕ್ಯಾಪ್ಸೆ, ಚಾರ್ಲಿ ಡೀನ್, ಸೋಫಿಯಾ ಡಂಕ್ಲಿ, ಸೋಫಿ ಎಕ್ಲೆಸ್ಟೋನ್, ಲಾರೆನ್ ಫೈಲರ್, ಸಾರಾ ಗ್ಲೆನ್, ಆಮಿ ಜೋನ್ಸ್ (ವಿಕೆಟ್ ಕೀಪರ್), ಹೀದರ್ ನೈಟ್, ಎಮ್ಮಾ ಲ್ಯಾಂಬ್, ಲಿನ್ಸೆ ಸ್ಮಿತ್ ಮತ್ತು ಡ್ಯಾನಿ ವ್ಯಾಟ್-ಹಾಡ್ಜ್.
ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 7:13 pm, Thu, 21 August 25