ನವೆಂಬರ್ 19 ರ ಭಾನುವಾರದಂದು ನರೇಂದ್ರ ಮೋದಿ ಮೈದಾನದಲ್ಲಿ (Narendra Modi Stadium in Ahmedabad) ನಡೆದ 2023 ರ ವಿಶ್ವಕಪ್ (ICC World Cup 2023) ಫೈನಲ್ ಪಂದ್ಯದಲ್ಲಿ ಟೀಂ ಇಂಡಿಯಾವನ್ನು ಸೋಲಿಸುವ ಮೂಲಕ ಆಸ್ಟ್ರೇಲಿಯಾ (India Vs Australia) ತನ್ನ 10 ನೇ ಐಸಿಸಿ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿತು. ಆಸೀಸ್ ಪರ ಗೆಲುವಿನ ಇನ್ನಿಂಗ್ಸ್ ಆಡಿದ ಟ್ರಾವಿಸ್ ಹೆಡ್ ತನ್ನ ಶತಕದಮೂಲಕ ಕೋಟ್ಯಾಂತರ ಭಾರತೀಯರ ಅಭಿಮಾನಿಗಳ ಹೃದಯ ಒಡೆದರು. ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಭಾರತ ವಿರಾಟ್ ಕೊಹ್ಲಿ (Virat Kohli) ಮತ್ತು ಕೆಎಲ್ ರಾಹುಲ್ ಅವರ ಅರ್ಧಶತಕಗಳ ಆಧಾರದ ಮೇಲೆ 240 ರನ್ ಕಲೆಹಾಕಿತು. ಆದರೆ ಇಡೀ ಟೂರ್ನಿಯಲ್ಲಿ ಒಂದೇ ಒಂದು ಪಂದ್ಯವನ್ನು ಸೋಲದೆ ಫೈನಲ್ಗೇರಿದ್ದ ಭಾರತದ ಅಜೇಯ ಓಟ ಆರು ವಿಕೆಟ್‌ಗಳ ಬೃಹತ್ ಸೋಲಿನೊಂದಿಗೆ ಕೊನೆಗೊಂಡಿತು. ಈ ವಿಶ್ವಕಪ್ ಅಂತ್ಯದೊಂದಿಗೆ ಪ್ರಶಸ್ತಿ ವಿಜೇತರ ಪಟ್ಟಿಯೂ ಹೊರಬಿದ್ದಿತು.
ಇನ್ನು ಈ ವಿಶ್ವಕಪ್‌ನಲ್ಲಿ ಅತಿ ಹೆಚ್ಚು 765 ರನ್ ಕಲೆಹಾಕಿದ ಕೊಹ್ಲಿ ಟೂರ್ನಮೆಂಟ್ ಆಟಗಾರ ಪ್ರಶಸ್ತಿಯನ್ನು ಪಡೆದರೆ, ಫೈನಲ್ ಪಂದ್ಯದಲ್ಲಿ 137 ರನ್‌ಗಳ ನಾಕ್ ಆಡಿದ ಹೆಡ್, ಫೈನಲ್‌ನಲ್ಲಿ ಪಂದ್ಯಶ್ರೇಷ್ಠ ಪ್ರಶಸ್ತಿಯನ್ನು ಬಾಚಿಕೊಂಡರು. ಆಸ್ಟ್ರೇಲಿಯಾ ವಿರುದ್ಧದ ಆರಂಭಿಕ ಪಂದ್ಯದಲ್ಲಿ ಪಂದ್ಯಶ್ರೇಷ್ಠ ಅರ್ಧಶತಕ ಸಿಡಿಸುವ ಮೂಲಕ ಅಭಿಯಾನವನ್ನು ಆರಂಭಿಸಿದ ಕೊಹ್ಲಿ 11 ಇನ್ನಿಂಗ್ಸ್‌ಗಳಲ್ಲಿ 9 ಫಿಫ್ಟಿ ಪ್ಲಸ್ ಸ್ಕೋರ್‌ಗಳನ್ನು ದಾಖಲಿಸಿದರು. ಇದರೊಂದಿಗೆ ಏಕದಿನ ವಿಶ್ವಕಪ್ ಆವೃತ್ತಿಯಲ್ಲಿ ಸಚಿನ್ ತೆಂಡೂಲ್ಕರ್ ಅವರ ಅತಿ ಹೆಚ್ಚು ಏಕದಿನ ಶತಕಗಳು ಮತ್ತು ಹೆಚ್ಚು ರನ್‌ಗಳ ಪ್ರಮುಖ ದಾಖಲೆಗಳನ್ನು ಕೊಹ್ಲಿ ಮುರಿದರು.
ಈ ವಿಶ್ವಕಪ್‌ನಲ್ಲಿ ಭಾರತದ ಆಟಗಾರರು ಲೀಡರ್‌ಬೋರ್ಡ್ ಪಟ್ಟಿಯಲ್ಲಿ ಪ್ರಾಬಲ್ಯ ಸಾಧಿಸಿರುವುದು ಟೀಂ ಇಂಡಿಯಾ ಅಭಿಮಾನಿಗಳಿಗೆ ಕೊಂಚ ಸಮಾಧಾನಕರ ಸಂಗತಿಯಾಗಿದೆ. ವಿರಾಟ್ ಕೊಹ್ಲಿ ಸ್ಕೋರಿಂಗ್ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದರೆ, ಬೌಲಿಂಗ್ ಪಟ್ಟಿಯಲ್ಲಿ ಮೊಹಮ್ಮದ್ ಶಮಿ ಪ್ರಾಬಲ್ಯ ಮೆರೆದಿದ್ದಾರೆ. ಇಡೀ ಟೂರ್ನಿಯಲ್ಲಿ 765 ರನ್ ಸಿಡಿಸಿರುವ ಕೊಹ್ಲಿಯ ನಂತರ, ರೋಹಿತ್ ಶರ್ಮಾ ಎರಡನೇ ಸ್ಥಾನ ಪಡೆದುಕೊಂಡಿದ್ದಾರೆ.
ಇಡೀ ಟೂರ್ನಮೆಂಟ್‌ನಲ್ಲಿ ಭಾರತದ ಪರ ಅದ್ಭುತ ಬೌಲಿಂಗ್ ಪ್ರದರ್ಶನ ನೀಡಿದ ಮೊಹಮ್ಮದ್ ಶಮಿ, ಫೈನಲ್ ಪಂದ್ಯದಲ್ಲಿ ಡೇವಿಡ್ ವಾರ್ನರ್ ಅವರ ವಿಕೆಟ್ ಉರುಳಿಸುವುದರೊಂದಿಗೆ ಈ ವಿಶ್ವಕಪ್‌ನಲ್ಲಿ ಅಧಿಕ ವಿಕೆಟ್ ಪಡೆದ ಬೌಲರ್ ಎನಿಸಿಕೊಂಡರು. ಆದರೆ ಆಸ್ಟ್ರೇಲಿಯಾ ವಿರುದ್ಧದ ಅತ್ಯಂತ ದುಬಾರಿ ಬೌಲರ್ ಆಗಿ ಹೊರಹೊಮ್ಮಿದರು. ಈ ವಿಶ್ವಕಪ್‌ನಲ್ಲಿ ಕೇವಲ 7 ಇನ್ನಿಂಗ್ಸ್‌ಗಳನ್ನಾಡಿದ ಶಮಿ 24 ವಿಕೆಟ್‌ಗಳೊಂದಿಗೆ ಬೌಲಿಂಗ್ ಪಟ್ಟಿಯಲ್ಲಿ ಅಗ್ರಸ್ಥಾನ ಪಡೆದುಕೊಂಡರು. ಇನ್ನು ಈ ವಿಶ್ವಕಪ್‌ನ ಯಾವ್ಯಾವ ಆಟಗಾರನಿಗೆ ಯಾವ್ಯಾವ ಪ್ರಶಸ್ತಿ ಸಿಕ್ಕಿತ್ತು ಎಂಬುದನ್ನು ನೋಡುವುದಾದರೆ..
ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 7:34 am, Mon, 20 November 23