ICC World Cup 2023: ರಜೆಯಲ್ಲಿರುವ ಟೀಂ ಇಂಡಿಯಾ ಆಟಗಾರರಿಗೆ ಬಿಗ್ ಶಾಕ್ ನೀಡಿದ ಬಿಸಿಸಿಐ..!

Team India: ಸದ್ಯ ರಜೆಯ ಮೋಜು ಮಸ್ತಿಯಲ್ಲಿರುವ ರೋಹಿತ್ ಶರ್ಮಾ ನಾಯಕತ್ವದ ಟೀಂ ಇಂಡಿಯಾಗೆ ಬಿಸಿಸಿಐ ಅನಿರೀಕ್ಷಿತವಾಗಿ ಹೊಸ ನಿಯಮಗಳನ್ನು ವಿಧಿಸಿದೆ. ಅಂದರೆ ಈ ರಜೆಯ ಅವದಿಯಲ್ಲಿ ಟೀಂ ಇಂಡಿಯಾ ಆಟಗಾರರು ಏನೇನು ಚಟುವಟಿಕೆಗಳನ್ನು ಮಾಡಬಾರದು ಎಂಬುದರ ಬಗ್ಗೆ ಬಿಸಿಸಿಐ ಕಟ್ಟುನಿಟ್ಟಿನ ಸೂಚನೆ ರವಾನಿಸಿದೆ.

ICC World Cup 2023: ರಜೆಯಲ್ಲಿರುವ ಟೀಂ ಇಂಡಿಯಾ ಆಟಗಾರರಿಗೆ ಬಿಗ್ ಶಾಕ್ ನೀಡಿದ ಬಿಸಿಸಿಐ..!
ಟೀಂ ಇಂಡಿಯಾ
Follow us
|

Updated on: Oct 25, 2023 | 7:33 AM

ತಾಯ್ನಾಡಿನಲ್ಲಿ ನಡೆಯುತ್ತಿರುವ 2023ರ ಏಕದಿನ ವಿಶ್ವಕಪ್​ನಲ್ಲಿ (ICC World Cup 2023) ತನ್ನ ಅಜೇಯ ಓಟವನ್ನು ಮುಂದುವರೆಸಿರುವ ಟೀಂ ಇಂಡಿಯಾ ತನ್ನ ಮುಂದಿನ ಪಂದ್ಯದಲ್ಲಿ ಬಲಿಷ್ಠ ಇಂಗ್ಲೆಂಡ್ (India vs England) ತಂಡವನ್ನು ಎದುರಿಸಲಿದೆ. ಆದರೆ ಈ ಪಂದ್ಯಕ್ಕೆ ಒಂದು ವಾರಕ್ಕೂ ಅಧಿಕ ಸಮಯ ಇದೆ. ಹೀಗಾಗಿ ಟೀಂ ಇಂಡಿಯಾ (Team India) ಆಟಗಾರರಿಗೆ ತಂಡದಿಂದ ರಜೆ ನೀಡಲಾಗಿದೆ. ಸದ್ಯ ರಜೆಯ ಮೋಜು ಮಸ್ತಿಯಲ್ಲಿರುವ ರೋಹಿತ್ ಶರ್ಮಾ ನಾಯಕತ್ವದ ಟೀಂ ಇಂಡಿಯಾಗೆ ಬಿಸಿಸಿಐ ಅನಿರೀಕ್ಷಿತವಾಗಿ ಹೊಸ ನಿಯಮಗಳನ್ನು ವಿಧಿಸಿದೆ. ಅಂದರೆ ಈ ರಜೆಯ ಅವದಿಯಲ್ಲಿ ಟೀಂ ಇಂಡಿಯಾ ಆಟಗಾರರು ಏನೇನು ಚಟುವಟಿಕೆಗಳನ್ನು ಮಾಡಬಾರದು ಎಂಬುದರ ಬಗ್ಗೆ ಬಿಸಿಸಿಐ (BCCI) ಕಟ್ಟುನಿಟ್ಟಿನ ಸೂಚನೆ ರವಾನಿಸಿದೆ.

ಪ್ರಸ್ತುತ ಧರ್ಮಶಾಲಾದಲ್ಲಿ ತಮ್ಮ ಕುಟುಂಬದೊಂದಿಗೆ ಸಮಯ ಕಳೆಯುತ್ತಿರುವ ಟೀಂ ಇಂಡಿಯಾ ಆಟಗಾರರಿಗೆ ಟ್ರೆಕ್ಕಿಂಗ್ ಮಾಡದಂತೆ ತಂಡದ ಆಡಳಿತವು ಎಚ್ಚರಿಕೆ ನೀಡಿದೆ. ಇದಲ್ಲದೇ ಆಟಗಾರರು ಪ್ಯಾರಾಗ್ಲೈಡಿಂಗ್ ಕೂಡ ಮಾಡುವಂತಿಲ್ಲ. ಆದರೆ, ಈ ವಿರಾಮದಲ್ಲಿ ಭಾರತದ ಆಟಗಾರರು ಧರ್ಮಶಾಲಾದ ಅದ್ಭುತ ಸ್ಥಳಗಳನ್ನು ಸಂಪೂರ್ಣವಾಗಿ ಆನಂದಿಸಬಹುದು ಎಂದು ತಿಳಿದುಬಂದಿದೆ.

IND vs ENG: ಇಂಗ್ಲೆಂಡ್ ವಿರುದ್ಧವೂ ಹಾರ್ದಿಕ್ ಪಾಂಡ್ಯ ಆಡುವುದು ಅನುಮಾನ..!

ಟ್ರೆಕ್ಕಿಂಗ್‌ ಮಾಡುವಂತಿಲ್ಲ

ಬಿಸಿಸಿಐ ಅಧಿಕಾರಿಯೊಬ್ಬರು ‘ಇಂಡಿಯನ್ ಎಕ್ಸ್‌ಪ್ರೆಸ್’ಗೆ ಮಾಹಿತಿ ನೀಡಿರುವ ಪ್ರಕಾರ ‘ಟ್ರೆಕ್ಕಿಂಗ್‌ಗೆ ಹೋಗದಂತೆ ತಂಡದ ಆಡಳಿತವು ಆಟಗಾರರಿಗೆ ತಿಳಿಸಿದೆ. ಅದೇ ಸಮಯದಲ್ಲಿ, ಯಾವುದೇ ಭಾರತೀಯ ಆಟಗಾರನು ಪಂದ್ಯಾವಳಿಯಲ್ಲಿ ಸಮಯದಲ್ಲಿ ಪ್ಯಾರಾಗ್ಲೈಡಿಂಗ್ ಮಾಡುವಂತಿಲ್ಲ. ಏಕೆಂದರೆ ಇದು ಆಟಗಾರನ ಒಪ್ಪಂದಕ್ಕೆ ವಿರುದ್ಧವಾಗಿದೆ ಎಂದಿದ್ದಾರೆ.

ಟೀಂ ಇಂಡಿಯಾದ ಮುಂದಿನ ಪಂದ್ಯ ಯಾವಾಗ?

ಲಕ್ನೋದ ಏಕಾನಾ ಕ್ರಿಕೆಟ್ ಸ್ಟೇಡಿಯಂನಲ್ಲಿ ಭಾರತ ತಂಡ ಇಂಗ್ಲೆಂಡ್ ವಿರುದ್ಧ ಟೂರ್ನಿಯ ಆರನೇ ಪಂದ್ಯವನ್ನು ಆಡಲಿದೆ. ವರದಿಗಳ ಪ್ರಕಾರ ಟೀಂ ಇಂಡಿಯಾ ಅಕ್ಟೋಬರ್ 25 ಬುಧವಾರ ಲಕ್ನೋ ತಲುಪಲಿದೆ. ಇದಕ್ಕೂ ಮುನ್ನ ಆಡಿದ ಐದು ಪಂದ್ಯಗಳಲ್ಲಿ ಸೋಲನುಭವಿಸದ ಟೀಂ ಇಂಡಿಯಾ ಪಾಯಿಂಟ್ಸ್ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದೆ. ಇಲ್ಲಿಯವರೆಗೆ, ಟೂರ್ನಿಯಲ್ಲಿ ಎಲ್ಲಾ ಪಂದ್ಯಗಳನ್ನು ಗೆದ್ದ ಏಕೈಕ ತಂಡವಾಗಿದೆ.

ರೋಹಿತ್ ಶರ್ಮಾ ನಾಯಕತ್ವದ ಟೀಂ ಇಂಡಿಯಾ ಐದು ಪಂದ್ಯಗಳಲ್ಲಿ ರನ್ ಚೇಸಿಂಗ್​ನಲ್ಲಿ ಮಾತ್ರ ಗೆದ್ದಿರುವುದು ಗಮನಾರ್ಹ. ಭಾರತ ಮೊದಲ ಪಂದ್ಯದಲ್ಲಿ ಆಸ್ಟ್ರೇಲಿಯಾವನ್ನು 6 ವಿಕೆಟ್‌ಗಳಿಂದ, ಎರಡನೇ ಪಂದ್ಯದಲ್ಲಿ ಅಫ್ಘಾನಿಸ್ತಾನವನ್ನು 8 ವಿಕೆಟ್‌ಗಳಿಂದ, ಮೂರನೇ ಪಂದ್ಯದಲ್ಲಿ ಪಾಕಿಸ್ತಾನವನ್ನು 7 ವಿಕೆಟ್‌ಗಳಿಂದ, ನಾಲ್ಕನೇ ಪಂದ್ಯದಲ್ಲಿ ಬಾಂಗ್ಲಾದೇಶವನ್ನು 7 ವಿಕೆಟ್‌ಗಳಿಂದ ಮತ್ತು ಐದನೇ ಪಂದ್ಯದಲ್ಲಿ ನ್ಯೂಜಿಲೆಂಡ್‌ನ್ನು 4 ವಿಕೆಟ್‌ಗಳಿಂದ ಸೋಲಿಸಿತು.

ಭಾರತ ವಿಶ್ವಕಪ್ ತಂಡ: ರೋಹಿತ್ ಶರ್ಮಾ (ನಾಯಕ), ಶುಭ್​ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ಕೀಪರ್), ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಕುಲ್ದೀಪ್ ಯಾದವ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್, ಸೂರ್ಯಕುಮಾರ್ ಯಾದವ್, ಇಶಾನ್ ಕಿಶನ್, ರವಿಚಂದ್ರನ್ ಅಶ್ವಿನ್, ಮೊಹಮ್ಮದ್ ಶಮಿ.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ನಾಗವಲ್ಲಿ ಮಿಂಚು ರಾಧಿಕಾ ಕಣ್ಣಲ್ಲಿ ಕಾಣಿಸಿತು: ರಮೇಶ್ ಅರವಿಂದ್
ನಾಗವಲ್ಲಿ ಮಿಂಚು ರಾಧಿಕಾ ಕಣ್ಣಲ್ಲಿ ಕಾಣಿಸಿತು: ರಮೇಶ್ ಅರವಿಂದ್
ಇಲ್ಲಿ ನಾನೇ ಅಭ್ಯರ್ಥಿ: ಅಚ್ಚರಿ ಹೇಳಿಕೆ ನೀಡಿದ ಡಿಸಿಎಂ ಡಿಕೆ ಶಿವಕುಮಾರ್​
ಇಲ್ಲಿ ನಾನೇ ಅಭ್ಯರ್ಥಿ: ಅಚ್ಚರಿ ಹೇಳಿಕೆ ನೀಡಿದ ಡಿಸಿಎಂ ಡಿಕೆ ಶಿವಕುಮಾರ್​
ಬಿಹಾರದಲ್ಲಿ ಪ್ರವಾಹ ಭೀತಿ; ನೂರಾರು ಹಳ್ಳಿಗಳಿಗೆ ನುಗ್ಗಿದ ಗಂಗಾ ನದಿ ನೀರು
ಬಿಹಾರದಲ್ಲಿ ಪ್ರವಾಹ ಭೀತಿ; ನೂರಾರು ಹಳ್ಳಿಗಳಿಗೆ ನುಗ್ಗಿದ ಗಂಗಾ ನದಿ ನೀರು
ಹಾಡಹಗಲೇ ಮೆಡಿಕಲ್ ಶಾಪ್​ಗೆ ನುಗ್ಗಿ ದರೋಡೆ ಮಾಡಿದ ಕಳ್ಳರು; ವಿಡಿಯೋ ವೈರಲ್
ಹಾಡಹಗಲೇ ಮೆಡಿಕಲ್ ಶಾಪ್​ಗೆ ನುಗ್ಗಿ ದರೋಡೆ ಮಾಡಿದ ಕಳ್ಳರು; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ 6 ಅಡಿ ಉದ್ದದ ಹಾವು ಪ್ರತ್ಯ
ಇದ್ದಕ್ಕಿದ್ದಂತೆ ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ 6 ಅಡಿ ಉದ್ದದ ಹಾವು ಪ್ರತ್ಯ
ರಾಮನಗರದಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿಗೆ ಕೌಂಟರ್ ಕೊಟ್ಟ ಡಿಕೆಶಿ
ರಾಮನಗರದಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿಗೆ ಕೌಂಟರ್ ಕೊಟ್ಟ ಡಿಕೆಶಿ
ಕಾರು ಡಿಕ್ಕಿ ಹೊಡೆದ ರಭಸಕ್ಕೆ ಫ್ಲೈಓವರ್ ಪಿಲ್ಲರ್ ಮೇಲೆ ಸಿಲುಕಿದ ಯುವತಿ
ಕಾರು ಡಿಕ್ಕಿ ಹೊಡೆದ ರಭಸಕ್ಕೆ ಫ್ಲೈಓವರ್ ಪಿಲ್ಲರ್ ಮೇಲೆ ಸಿಲುಕಿದ ಯುವತಿ
ಬೀದರ್​​ನ ಐತಿಹಾಸಿಕ ಕೋಟೆ ಆವರಣದಲ್ಲಿ ಏರ್ ಶೋ ಪ್ರದರ್ಶನ
ಬೀದರ್​​ನ ಐತಿಹಾಸಿಕ ಕೋಟೆ ಆವರಣದಲ್ಲಿ ಏರ್ ಶೋ ಪ್ರದರ್ಶನ
ದರ್ಬಾರ್ ಗಲ್ಲಿಯಲ್ಲಿ ರಸ್ತೆಯುದ್ದಕ್ಕೂ ಪ್ಯಾಲೆಸ್ತೀನ್ ಧ್ವಜ ಶಾಮಿಯಾನ
ದರ್ಬಾರ್ ಗಲ್ಲಿಯಲ್ಲಿ ರಸ್ತೆಯುದ್ದಕ್ಕೂ ಪ್ಯಾಲೆಸ್ತೀನ್ ಧ್ವಜ ಶಾಮಿಯಾನ
ಚನ್ನಪಟ್ಟಣ: ಹೈಟೆಕ್ ಕ್ರೀಡಾಂಗಣ ನಿರ್ಮಾಣಕ್ಕೆ ಡಿಕೆಶಿ ಶಂಕುಸ್ಥಾಪನೆ
ಚನ್ನಪಟ್ಟಣ: ಹೈಟೆಕ್ ಕ್ರೀಡಾಂಗಣ ನಿರ್ಮಾಣಕ್ಕೆ ಡಿಕೆಶಿ ಶಂಕುಸ್ಥಾಪನೆ