
2023ರ ವಿಶ್ವಕಪ್‌ನಲ್ಲಿ (ICC ODI World Cup 2023) ಟೀಂ ಇಂಡಿಯಾ ಇಂದು ನೆದರ್ಲೆಂಡ್ಸ್ ತಂಡವನ್ನು (India Vs Netherlands ಎದುರಿಸುತ್ತಿದೆ. ಇದು ಈ ವಿಶ್ವಕಪ್‌ನ ಕೊನೆಯ ಗುಂಪು ಪಂದ್ಯವಾಗಿದ್ದು ಮುಂದಿನ ಬುಧವಾರದಿಂದ ಸೆಮಿಫೈನಲ್ ಸುತ್ತು ಆರಂಭವಾಗಲಿದೆ. ಇನ್ನು ಬೆಂಗಳೂರಿನಲ್ಲಿ ನಡೆಯುತ್ತಿರುವ ಈ ಪಂದ್ಯ ಟೀಂ ಇಂಡಿಯಾಗೆ ದೀಪಾವಳಿ (Diwali 2023) ದಿನದಂದು ಭಾರತದ ನೆಲದಲ್ಲಿ ಇದೇ ಮೊದಲ ಪಂದ್ಯವಾಗಿದೆ. ನವೆಂಬರ್ 12 ರಂದು ಇಡೀ ದೇಶ ದೀಪ ಹಚ್ಚಿ, ಪಟಾಕಿ ಸಿಡಿಸಿ ಸಂಭ್ರಮಿಸುವುದರೊಂದಿಗೆ ದೀಪಾವಳಿಯನ್ನು ಆಚರಿಸುತ್ತಿದ್ದರೆ, ಇತ್ತ ಟೀಂ ಇಂಡಿಯಾ (Team India) ರನ್‌ಗಳ ಅಬ್ಬರದೊಂದಿಗೆ ದೀಪಾವಳಿಯನ್ನು ಆಚರಿಸುತ್ತಿದೆ. ಈ ನಡುವೆ ವಿಶ್ವ ಕ್ರಿಕೆಟ್ನ ಹಲವು ದಿಗ್ಗಜ ಕ್ರಿಕೆಟಿಗರು ಕೋಟ್ಯಾಂತರ ಭಾರತೀಯರಿಗೆ ಶುಭಾಶಯ ತಿಳಿಸಿದ್ದು, ಇದೀಗ ಖ್ಯಾತ ಕ್ರಿಕೆಟಿಗರ ಶುಭ ಹಾರೈಕೆಯ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ಭಾರಿ ವೈರಲ್ ಆಗುತ್ತಿದೆ.
ಟೀಂ ಇಂಡಿಯಾದ ಸ್ಟಾರ್ ಕ್ರಿಕೆಟಿಗರಾದ ವಿರಾಟ್ ಕೊಹ್ಲಿ, ಕೆಎಲ್ ರಾಹುಲ್, ರವೀಂದ್ರ ಜಡೇಜಾ, ಶುಭ್ಮನ್ ಗಿಲ್, ನ್ಯೂಜಿಲೆಂಡ್ ಕ್ರಿಕೆಟಿಗರಾದ ಇಶ್ ಸೋಧಿ, ಕೇನ್ ವಿಲಿಯಮ್ಸನ್, ಕನ್ನಡಿಗ ರಚಿನ್ ರವೀಂದ್ರ, ಟ್ರೆಂಟ್ ಬೌಲ್ಟ್, ಇಂಗ್ಲೆಂಡ್ ಕ್ರಿಕೆಟಿಗರಾದ ಬೆನ್ ಸ್ಟೋಕ್ಸ್, ಜೋ ರೂಟ್, ಅಫ್ಘಾನಿಸ್ತಾನ ತಂಡದ ಸ್ಟಾರ್ ಸ್ಪಿನ್ನರ್ ರಶೀದ್ ಖಾನ್ ಹಾಗೂ ದಕ್ಷಿಣ ಆಫ್ರಿಕಾ ತಂಡದ ಸ್ಟಾರ್ ವಿಕೆಟ್ ಕೀಪರ್ ಕ್ವಿಂಟನ್ ಡಿ ಕಾಕ್ ಭಾರತೀಯರಿಗೆ ದೀಪಾವಳಿಯ ಶುಭಾಶಯ ಕೋರಿದ್ದಾರೆ. ಈ ವಿಡಿಯೋವನ್ನು ಲೊಟನ್ ಹೆಸರಿನ ಎಕ್ಸ್ ಖಾತೆದಾರರು ತಮ್ಮ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.
*WORLD CUP SPECIAL DIWALI*
🏏🏏🏏🏏🧨🧨🧨🧨🇮🇳😍❤️ pic.twitter.com/fyESe923qt— Lotus 🪷🇮🇳 (@LotusBharat) November 12, 2023
ಇನ್ನು ಬೆಂಗಳೂರಿನಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆರಂಭಿಸಿರುವ ಭಾರತ ಮೊದಲ ವಿಕೆಟ್ಗೆ 100 ರನ್‌ಗಳ ಜೊತೆಯಾಟ ಹಂಚಿಕೊಂಡಿದೆ. ನಾಯಕ ರೋಹಿತ್ ಶರ್ಮಾ ಹಾಗೂ ಶುಭ್ಮನ್ ಗಿಲ್ ಭಾರತಕ್ಕೆ ಉತ್ತಮ ಆರಂಭ ನೀಡಿದ್ದಾರೆ. ಆದರೆ ಅರ್ಧಶತಕ ಸಿಡಿಸಿದ್ದ ಶುಭ್ಮನ್ ಗಿಲ್ ಸಿಕ್ಸರ್ ಬಾರಿಸುವ ಯತ್ನದಲ್ಲಿ ಕ್ಯಾಚಿತ್ತು ಔಟಾಗಿದ್ದಾರೆ. ನಾಯಕ ರೋಹಿತ್ ಶರ್ಮಾ ಅರ್ಧಶತಕದ ಸನಿಹದಲ್ಲಿದ್ದರೆ, ಅವರೊಂದಿಗೆ ಇನ್ನಿಂಗ್ಸ್ ಕಟ್ಟಲು ಕರ್ನಾಟಕದ ದತ್ತುಪುತ್ರ ವಿರಾಟ್ ಕೊಹ್ಲಿ ಕ್ರೀಸ್ಗೆ ಬಂದಿದ್ದಾರೆ.
ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 2:43 pm, Sun, 12 November 23