ವಿಶ್ವಕಪ್​ನ ಮೊದಲ ಪಂದ್ಯದಲ್ಲೇ ಹೊಸ ವಿಶ್ವ ದಾಖಲೆ ಬರೆದ ಇಂಗ್ಲೆಂಡ್

ICC World Cup 2023: ಈ ದಾಖಲೆಯ ಹೊರತಾಗಿಯೂ ಇಂಗ್ಲೆಂಡ್ ತಂಡವು ನ್ಯೂಝಿಲೆಂಡ್ ವಿರುದ್ಧ ಸೋಲನುಭವಿಸಿದೆ. ಇಂಗ್ಲೆಂಡ್ ನೀಡಿದ 283 ರನ್​ಗಳ ಗುರಿಯನ್ನು ಬೆನ್ನತ್ತಿದ ನ್ಯೂಝಿಲೆಂಡ್ ಪರ ಡೆವೊನ್ ಕಾನ್ವೆ (152) ಹಾಗೂ ರಚಿನ್ ರವೀಂದ್ರ (123) ಅಜೇಯ ಶತಕ ಸಿಡಿಸಿ ಮಿಂಚಿದರು.

ವಿಶ್ವಕಪ್​ನ ಮೊದಲ ಪಂದ್ಯದಲ್ಲೇ ಹೊಸ ವಿಶ್ವ ದಾಖಲೆ ಬರೆದ ಇಂಗ್ಲೆಂಡ್
England vs New Zealand
Follow us
TV9 Web
| Updated By: ಝಾಹಿರ್ ಯೂಸುಫ್

Updated on: Oct 05, 2023 | 9:00 PM

ಏಕದಿನ ವಿಶ್ವಕಪ್ 2023ರ ಮೊದಲ ಪಂದ್ಯದಲ್ಲೇ ಇಂಗ್ಲೆಂಡ್ ತಂಡ ಹೊಸ ವಿಶ್ವ ದಾಖಲೆ ನಿರ್ಮಿಸಿದೆ. ಅದು ಕೂಡ ಏಕದಿನ ಕ್ರಿಕೆಟ್ ಇತಿಹಾಸದಲ್ಲೇ ಯಾವ ತಂಡದಿಂದಲೂ ಸಾಧ್ಯವಾಗದ ದಾಖಲೆ ಎಂಬುದು ವಿಶೇಷ. ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ನ್ಯೂಝಿಲೆಂಡ್ ಬೌಲಿಂಗ್ ಆಯ್ದುಕೊಂಡಿತು. ಅದರಂತೆ ಇನಿಂಗ್ಸ್ ಆರಂಭಿಸಿದ ಇಂಗ್ಲೆಂಡ್ ತಂಡ ಉತ್ತಮ ಆರಂಭ ಪಡೆದಿರಲಿಲ್ಲ. ಆರಂಭಿಕ ಆಟಗಾರ ಡೇವಿಡ್ ಮಲಾನ್ 14 ರನ್​ ಗಳಿಸಿ ಔಟಾದರೆ, ಜಾನಿ ಬೈರ್​ಸ್ಟೋವ್ 33 ರನ್​ ಬಾರಿಸಿ ವಿಕೆಟ್ ಒಪ್ಪಿಸಿದ್ದರು.

ಆ ಬಳಿಕ ಬಂದ ಜೋ ರೂಟ್ 86 ಎಸೆತಗಳಲ್ಲಿ 77 ರನ್ ಬಾರಿಸಿದ್ದರು. ಇನ್ನು ಹ್ಯಾರಿ ಬ್ರೂಕ್ 25 ರನ್ ಬಾರಿಸಿದರೆ, ಮೊಯೀನ್ ಅಲಿ 11 ರನ್​ಗಳಿಸಿ ಔಟಾದರು. ಇನ್ನು ಜೋಸ್ ಬಟ್ಲರ್ 43 ರನ್​ಗಳ ಕೊಡುಗೆ ನೀಡಿದರೆ, ಲಿಯಾಮ್ ಲಿವಿಂಗ್​ಸ್ಟೋನ್ 20 ರನ್​ಗಳಿಸಿ ವಿಕೆಟ್ ಒಪ್ಪಿಸಿದರು. ಹಾಗೆಯೇ ಸ್ಯಾಮ್ ಕರನ್ 14 ರನ್​ಗಳಿಸಿ ಹೊರನಡೆದರೆ, ಕ್ರಿಸ್ ವೋಕ್ಸ್ 11 ರನ್​ ಗಳಿಸಿದರು.

ಅಂತಿಮವಾಗಿ ಆದಿಲ್ ರಶೀದ್ ಅಜೇಯ 15 ರನ್​ ಬಾರಿಸಿದರೆ, ಮಾರ್ಕ್​ ವುಡ್ ಅಜೇಯ 13 ರನ್​ ಗಳಿಸಿದರು. ಈ ಮೂಲಕ ಇಂಗ್ಲೆಂಡ್ ತಂಡವು 50 ಓವರ್​ಗಳಲ್ಲಿ 9 ವಿಕೆಟ್​ ಕಳೆದುಕೊಂಡು 282 ರನ್​ ಕಲೆಹಾಕಿತು.

ಇದುವೇ ವಿಶ್ವ ದಾಖಲೆ:

ವಿಶೇಷ ಎಂದರೆ ಈ ಪಂದ್ಯದಲ್ಲಿ ಇಂಗ್ಲೆಂಡ್​ನ 11 ಬ್ಯಾಟರ್​ಗಳು ಎರಡಂಕಿ ಮೊತ್ತಗಳಿಸಿದ್ದರು. ಇದರೊಂದಿಗೆ ಏಕದಿನ ಕ್ರಿಕೆಟ್ ಇತಿಹಾಸದಲ್ಲಿ ತಂಡವೊಂದರ ಎಲ್ಲಾ ಆಟಗಾರರು ಎರಡಂಕಿ ರನ್​ಗಳಿಸಿದ ಹೊಸ ದಾಖಲೆ ನಿರ್ಮಾಣವಾಯಿತು.

ಅಂದರೆ ಇದುವರೆಗೆ ಯಾವುದೇ ತಂಡದ 11 ಆಟಗಾರರು ಏಕದಿನ ಪಂದ್ಯದಲ್ಲಿ ಡಬಲ್ ಡಿಜಿಟ್ ಸ್ಕೋರ್​ಗಳಿಸಿರಲಿಲ್ಲ. ಇದೀಗ ವಿಶ್ವಕಪ್​ನ ಮೊದಲ ಪಂದ್ಯದಲ್ಲೇ ಇಂಗ್ಲೆಂಡ್ ತಂಡ ಈ ದಾಖಲೆ ನಿರ್ಮಿಸಿರುವುದು ವಿಶೇಷ.

ಇಂಗ್ಲೆಂಡ್ ಬ್ಯಾಟರ್​ಗಳ ಸ್ಕೋರ್​ ಕಾರ್ಡ್ ಹೀಗಿದೆ:

  1. ಜಾನಿ ಬೈರ್​ಸ್ಟೋವ್- 33
  2. ಡೇವಿಡ್ ಮಲಾನ್- 14
  3. ಜೋ ರೂಟ್- 77
  4. ಹ್ಯಾರಿ ಬ್ರೂಕ್- 25
  5. ಮೊಯೀನ್ ಅಲಿ- 11
  6. ಜೋಸ್ ಬಟ್ಲರ್- 43
  7. ಲಿಯಾಮ್ ಲಿವಿಂಗ್​ಸ್ಟೋನ್- 20
  8. ಸ್ಯಾಮ್ ಕರನ್- 14
  9. ಕ್ರಿಸ್ ವೋಕ್ಸ್- 11
  10. ಆದಿಲ್ ರಶೀದ್- 15*
  11. ಮಾರ್ಕ್​ ವುಡ್- 13*

ಸೋತ ವಿಶ್ವ ಚಾಂಪಿಯನ್ನರು:

ಈ ದಾಖಲೆಯ ಹೊರತಾಗಿಯೂ ಇಂಗ್ಲೆಂಡ್ ತಂಡವು ನ್ಯೂಝಿಲೆಂಡ್ ವಿರುದ್ಧ ಸೋಲನುಭವಿಸಿದೆ. ಇಂಗ್ಲೆಂಡ್ ನೀಡಿದ 283 ರನ್​ಗಳ ಗುರಿಯನ್ನು ಬೆನ್ನತ್ತಿದ ನ್ಯೂಝಿಲೆಂಡ್ ಪರ ಡೆವೊನ್ ಕಾನ್ವೆ (152) ಹಾಗೂ ರಚಿನ್ ರವೀಂದ್ರ (123) ಅಜೇಯ ಶತಕ ಸಿಡಿಸಿ ಮಿಂಚಿದರು. ಅಷ್ಟೇ ಅಲ್ಲದೆ 36.2 ಓವರ್​ಗಳಲ್ಲಿ ತಂಡವನ್ನು ಗುರಿ ಮುಟ್ಟಿಸುವ ಮೂಲಕ ನ್ಯೂಝಿಲೆಂಡ್ ತಂಡಕ್ಕೆ 9 ವಿಕೆಟ್​ಗಳ ಜಯ ತಂದುಕೊಟ್ಟರು.

ಸಂಭಾಲ್ ಜಾಮಾ ಮಸೀದಿ ಸಮೀಕ್ಷೆ ವೇಳೆ ಕಲ್ಲು ತೂರಾಟ
ಸಂಭಾಲ್ ಜಾಮಾ ಮಸೀದಿ ಸಮೀಕ್ಷೆ ವೇಳೆ ಕಲ್ಲು ತೂರಾಟ
ಇನ್ನು ಮುಂದೆ ಸುಮ್ಮನಿರಲ್ಲ: ಚೈತ್ರಾ-ಮೋಕ್ಷಿತಾಗೆ ತ್ರಿವಿಕ್ರಮ್ ಸವಾಲು
ಇನ್ನು ಮುಂದೆ ಸುಮ್ಮನಿರಲ್ಲ: ಚೈತ್ರಾ-ಮೋಕ್ಷಿತಾಗೆ ತ್ರಿವಿಕ್ರಮ್ ಸವಾಲು
ಯಾವ ದೋಷಕ್ಕೆ ನವಗ್ರಹವನ್ನು ಹೇಗೆ ಪ್ರದಕ್ಷಿಣೆ ಹಾಕಬೇಕು? ಇಲ್ಲಿದೆ ನೋಡಿ
ಯಾವ ದೋಷಕ್ಕೆ ನವಗ್ರಹವನ್ನು ಹೇಗೆ ಪ್ರದಕ್ಷಿಣೆ ಹಾಕಬೇಕು? ಇಲ್ಲಿದೆ ನೋಡಿ
ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?
ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?
ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ