ಆಸ್ಟ್ರೇಲಿಯಾ 450/2, ಭಾರತ 65ಕ್ಕೆ ಆಲ್‌ಔಟ್: ಫೈನಲ್ ಪಂದ್ಯದ ಬಗ್ಗೆ ಭವಿಷ್ಯ ನುಡಿದ ಮಿಚೆಲ್ ಮಾರ್ಷ್!
2023ರ ಐಪಿಎಲ್ ಟೂರ್ನಿಯ ಸಂದರ್ಭದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಪಾಡ್ಕಾಸ್ಟ್ನಲ್ಲಿ ಮಿಚೆಲ್ ಮಾರ್ಷ್ ಅವರು ಭಾಗವಹಿಸಿದ್ದರು. ಈ ವೇಳೆ ಆಸ್ಟ್ರೇಲಿಯಾ ಭಾರತವನ್ನು ಸೋಲಿಸುತ್ತದೆ. ಫೈನಲ್‌ನಲ್ಲಿ ಆಸ್ಟ್ರೇಲಿಯಾ ತಂಡ 2 ವಿಕೆಟ್ ನಷ್ಟಕ್ಕೆ 450 ರನ್ ಗಳಿಸಲಿದೆ. ಭಾರತ 65 ರನ್ಗಳಿಗೆ ಆಲ್‌ಔಟ್ ಆಗಲಿದೆ ಎಂದು ಮಿಚೆಲ್ ಮಾರ್ಷ್ ಅವರು ಭವಿಷ್ಯ ನುಡಿದಿದ್ದರು.
ಕೋಲ್ಕತ್ತಾದ ಈಡನ್ ಗಾರ್ಡನ್ಸ್ ಕ್ರೀಡಾಂಗಣದಲ್ಲಿ ಗುರುವಾರ ನಡೆದಿದ್ದ ಐಸಿಸಿ ಏಕದಿನ ವಿಶ್ವಕಪ್ (ICC World Cup 2023) ಟೂರ್ನಿಯ ಎರಡನೇ ಸೆಮಿಫೈನಲ್ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಆಸ್ಟ್ರೇಲಿಯಾ ತಂಡ ರೋಚಕ ಗೆಲುವು ಸಾಧಿಸಿದೆ. ಆ ಮೂಲಕ ಫೈನಲ್ಗೆ ಪ್ರವೇಶ ಪಡೆದಿದೆ. ಭಾನುವಾರ ಅಹಮದಾಬಾದ್ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಭಾರತ ಹಾಗೂ ಆಸ್ಟ್ರೇಲಿಯಾ ತಂಡಗಳು ಸೆಣಸಾಟ ನಡೆಸಲಿವೆ. ಆದರೆ ಅದಕ್ಕೂ ಮುನ್ನ ಆಸ್ಟ್ರೇಲಿಯಾದ ಆಲ್‌ರೌಂಡರ್ ಮಿಚೆಲ್ ಮಾರ್ಷ್ ಅವರ ಆ ಒಂದು ಹೇಳಿಕೆ ಮಾತ್ರ ಸಾಕಷ್ಟು ವೈರಲ್ ಆಗುತ್ತಿದೆ.
ದಕ್ಷಿಣ ಆಫ್ರಿಕಾ ವಿರುದ್ಧ ಆಸ್ಟ್ರೇಲಿಯಾ ತಂಡ ಫೈನಲ್ಗೆ ಪ್ರವೇಶ ಪಡೆಯುತ್ತಿದ್ದಂತೆ ಮಿಚೆಲ್ ಮಾರ್ಷ್ ಅವರ ಹಳೆಯ ವಿಡಿಯೋ ಒಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಫೈನಲ್ ಪಂದ್ಯದಲ್ಲಿ ಭಾರತ ವಿರುದ್ಧ ಆಸ್ಟ್ರೇಲಿಯಾ ತಂಡ ದೊಡ್ಡ ಅಂತರದಲ್ಲಿ ಗೆಲುವು ಸಾಧಿಸುವುದಾಗಿ ಅದರಲ್ಲಿ ಅವರು ಹೇಳಿಕೊಂಡಿದ್ದಾರೆ.
ಇದನ್ನೂ ಓದಿ: ಐಸಿಸಿ ವಿಶ್ವಕಪ್ ಫೈನಲ್: ವಿಮಾನಗಳಿಗೆ ಸಿಕ್ಕಾಪಟ್ಟೆ ಡಿಮ್ಯಾಂಡ್; ಅಹ್ಮದಾಬಾದ್ಗೆ ಫ್ಲೈಟ್ ಬೆಲೆ ಗಗನಕ್ಕೆ
2023ರ ಐಪಿಎಲ್ ಟೂರ್ನಿಯ ಸಂದರ್ಭದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಪಾಡ್ಕಾಸ್ಟ್ನಲ್ಲಿ ಮಿಚೆಲ್ ಮಾರ್ಷ್ ಅವರು ಭಾಗವಹಿಸಿದ್ದರು. ಈ ವೇಳೆ ‘ಆಸ್ಟ್ರೇಲಿಯಾ ಭಾರತವನ್ನು ಸೋಲಿಸುತ್ತದೆ. ಫೈನಲ್‌ನಲ್ಲಿ ಆಸ್ಟ್ರೇಲಿಯಾ ತಂಡ 2 ವಿಕೆಟ್ ನಷ್ಟಕ್ಕೆ 450 ರನ್ ಗಳಿಸಲಿದೆ. ಭಾರತ 65 ರನ್ಗಳಿಗೆ ಆಲ್‌ಔಟ್ ಆಗಲಿದೆ’ ಎಂದು ಮಿಚೆಲ್ ಮಾರ್ಷ್ ಅವರು ಭವಿಷ್ಯ ನುಡಿದಿದ್ದರು. ಸದ್ಯ ಈ ಹಳೆಯ ವಿಡಿಯೋ ವೈರಲ್ ಆಗಿದೆ.
ಗುರುವಾರ ಕೋಲ್ಕತ್ತಾದಲ್ಲಿ ನಡೆದ ಸೆಮಿಫೈನಲ್ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾವನ್ನು 3 ವಿಕೆಟ್ಗಳ ನಷ್ಟಕ್ಕೆ ಸೋಲಿಸಿದ ಬಳಿಕ ಮಿಚೆಲ್ ಅವರು ಪ್ರತಿಕ್ರಿಯಿಸಿದ್ದು, ‘ನಾವು ಅತ್ಯುತ್ತಮವಾದದ್ದನ್ನು ಮಾತ್ರ ತೆಗೆದುಕೊಳ್ಳಲು ಬಯಸುತ್ತೇವೆ’ ಎಂದು ಹೇಳಿದ್ದರು.
ಇದನ್ನೂ ಓದಿ: ಮಿಂಚುತ್ತಿದೆ ‘ಬ್ರ್ಯಾಂಡ್’ ಶಮಿ; ಜಾಹೀರಾತಿಗಾಗಿ ಎಡೆತಾಕುತ್ತಿರುವ ಕಂಪನಿಗಳು; ಮೊಹಮ್ಮದ್ ಶಮಿಗೆ ಹರಿದುಬರುತ್ತಿದೆ ಹಣದ ಹೊಳೆ
‘ಭಾರತ ತಂಡ ಪ್ರಸ್ತುತ ಪಂದ್ಯದಲ್ಲಿ ಅತ್ಯುತ್ತಮ ಪ್ರದರ್ಶನವನ್ನು ನೀಡುತ್ತಿದೆ. ನಾವು ಅವರನ್ನು ಫೈನಲ್‌ನಲ್ಲಿ ಎದುರಿಸಲಿದ್ದೇವೆ. ಫೈನಲ್ ಪಂದ್ಯದಲ್ಲಿ ನಮ್ಮನ್ನು ನಾವು ಕೊಂಡುಕೊಳ್ಳಲು ಪ್ರಯತ್ನಿಸುತ್ತೇವೆ. ಎರಡು ತಂಡಗಳಿಗೂ ವಿಶ್ವಕಪ್ ತುಂಬಾ ಮುಖ್ಯ. ಹಾಗಾಗಿ ಉತ್ತಮ ಪ್ರದರ್ಶನ ನೀಡಲಿದ್ದೇವೆ’ ಎಂದು ಮಿಚೆಲ್ ಮಾರ್ಷ್ ಹೇಳಿದ್ದರು.
ಭಾರತ ತಂಡ 10 ಪಂದ್ಯಗಳಲ್ಲಿ ಭರ್ಜರಿ ಗೆಲುವು ಸಾಧಿಸಿದೆ. ರೋಹಿತ್ ಶರ್ಮಾ ನೇತೃತ್ವದ ಭಾರತ ತಂಡ ಭಾನುವಾರ ಆಸ್ಟ್ರೇಲಿಯಾ ತಂಡದೊಂದಿಗೆ ಕಣಕ್ಕಿಳಿಯಲಿದೆ. ಆ ಮೂಲಕ ಆಸ್ಟ್ರೇಲಿಯಾ ವಿರುದ್ಧ 2003ರ ವಿಶ್ವಕಪ್ ಫೈನಲ್ ಸೋಲಿಗೆ ಸೇಡು ತೀರಿಸಿಕೊಳ್ಳಲು ಭರ್ಜರಿ ತಯಾರಿ ಕೂಡ ಮಾಡಿಕೊಂಡಿದ್ದಾರೆ.
ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 6:20 pm, Fri, 17 November 23