ವಿಶ್ವಕಪ್‌ನಲ್ಲಿ ಭಾರತಕ್ಕೆ ವಿರೋಚಿತ ಸೋಲು: ನಿಮ್ಮೊಂದಿಗೆ ನಾವಿದ್ದೇವೆ ಎಂದ ಪ್ರಧಾನಿ ಮೋದಿ

ICC World Cup 2023: ಅಜೇಯವಾಗಿ ವಿಶ್ವಕಪ್ ಫೈನಲ್ ಪ್ರವೇಶಿಸಿದ್ದ ಟೀಂ ಇಂಡಿಯಾಗೆ ವಿರೋಚಿತ ಸೋಲು ಎದುರಾಗಿದೆ. ಈ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಟ್ವೀಟ್​ ಮಾಡಿದ್ದು, ನಿಮ್ಮ ಪ್ರತಿಭೆ ಮತ್ತು ದೃಢನಿಶ್ಚಯ ಗಮನಾರ್ಹವಾಗಿದೆ. ಇಂದು ಮತ್ತು ಯಾವಾಗಲೂ ನಾವು ನಿಮ್ಮೊಂದಿಗೆ ಇರುತ್ತೇವೆ ಎಂದು ಹೇಳಿದ್ದಾರೆ.

ವಿಶ್ವಕಪ್‌ನಲ್ಲಿ ಭಾರತಕ್ಕೆ ವಿರೋಚಿತ ಸೋಲು: ನಿಮ್ಮೊಂದಿಗೆ ನಾವಿದ್ದೇವೆ ಎಂದ ಪ್ರಧಾನಿ ಮೋದಿ
ಟೀಂ ಇಂಡಿಯಾ
Follow us
ಗಂಗಾಧರ​ ಬ. ಸಾಬೋಜಿ
|

Updated on: Nov 19, 2023 | 10:39 PM

ಗುಜರಾತ್​ನ ಅಹಮದಾಬಾದ್​ನಲ್ಲಿರುವ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಇಂದು ನಡೆದ 2023ರ ವಿಶ್ವಕಪ್ ಪಂದ್ಯ (ICC World Cup 2023) ದಲ್ಲಿ 6ನೇ ಬಾರಿಗೆ ಆಸ್ಟ್ರೇಲಿಯಾ ತಂಡ ವಿಶ್ವ ಚಾಂಪಿಯನ್‌ ಆಗಿದೆ. ಆ ಮೂಲಕ ವಿಶ್ವಕಪ್ ಗೆಲ್ಲುವ ಟೀಂ ಇಂಡಿಯಾ ಕನಸು ಭಗ್ನವಾಗಿದೆ. ಅಜೇಯವಾಗಿ ವಿಶ್ವಕಪ್ ಫೈನಲ್ ಪ್ರವೇಶಿಸಿದ್ದ ಟೀಂ ಇಂಡಿಯಾಗೆ ವಿರೋಚಿತ ಸೋಲು ಎದುರಾಗಿದೆ. ಈ ಸಂದರ್ಭದಲ್ಲಿ ಇಂದು ಮತ್ತು ಯಾವಾಗಲೂ ನಾವು ನಿಮ್ಮೊಂದಿಗೆ ಇರುತ್ತೇವೆ ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ.

ಈ ಕುರಿತಾಗಿ ಟ್ವೀಟ್​ ಮಾಡಿರುವ ಪ್ರಧಾನಿ ಮೋದಿ, ಪ್ರೀತಿಯ ಭಾರತ ತಂಡ, ವಿಶ್ವಕಪ್ ಮೂಲಕ ನಿಮ್ಮ ಪ್ರತಿಭೆ ಮತ್ತು ದೃಢನಿಶ್ಚಯ ಗಮನಾರ್ಹವಾಗಿದೆ. ನೀವು ಬಹಳ ಉತ್ಸಾಹದಿಂದ ಆಡಿದ್ದೀರಿ ಮತ್ತು ರಾಷ್ಟ್ರಕ್ಕೆ ಅಪಾರ ಹೆಮ್ಮೆಯನ್ನು ತಂದಿದ್ದೀರಿ ಎಂದು ಬರೆದುಕೊಂಡಿದ್ದಾರೆ.

ಪ್ರಧಾನಿ ಮೋದಿ ಟ್ವೀಟ್​​

ಭಾರತ ತಂಡದ ಮಾಜಿ ಆಟಗಾರ ಇರ್ಫಾನ್ ಪಠಾಣ್​ ಕೂಡ ಟ್ವೀಟ್​ ಮಾಡಿದ್ದು, ಒಳ್ಳೆಯದು ಆಸ್ಟ್ರೇಲಿಯಾ ನೀವು ನಿಜವಾಗಿಯೂ ವಿಶ್ವ ಚಾಂಪಿಯನ್. ಸ್ಪರ್ಧೆಯ ಅತ್ಯುತ್ತಮ ತಂಡಗಳಲ್ಲಿ ಒಂದಾದ ತಂಡವನ್ನು ಸೋಲಿಸಿದ್ದೀರಿ ಎಂದು ಬರೆದುಕೊಂಡಿದ್ದಾರೆ.

ಇರ್ಫಾನ್ ಪಠಾಣ್ ಟ್ವೀಟ್​

41ನೇ ಓವರ್​ ಬಳಿಕ 3 ವಿಕೆಟ್ ನಷ್ಟಕ್ಕೆ ಆಸ್ಟ್ರೇಲಿಯಾ 230 ರನ್​ಗಳನ್ನು ಬಾರಿಸುವ ಮೂಲಕ ವಿಶ್ವಕಪ್​ ಕಿರೀಟವನ್ನು ಮತ್ತೊಮ್ಮೆ ಮುಡಿಗೇರಿಸಿಕೊಂಡಿದೆ. ಟ್ರಾವಿಸ್ ಹೆಡ್​ಗೆ ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದುಕೊಂಡಿದ್ದು, ವಿರಾಟ್​ ಕೊಹ್ಲಿಗೆ ಸರಣಿಶ್ರೇಷ್ಠ ಪ್ರಶಸ್ತಿ ನೀಡಲಾಗಿದೆ. ಭಾರತವನ್ನು 240 ರನ್‌ಗಳಿಗೆ ಸೀಮಿತಗೊಳಿಸಿದ ಕಾಂಗರೂ ಪಡೆ ಈ ಸವಾಲನ್ನು 43 ಓವರ್‌ಗಳಲ್ಲಿ 4 ವಿಕೆಟ್ ಕಳೆದುಕೊಂಡು ಪೂರ್ಣಗೊಳಿಸಿದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಮ್ಯಾಕ್ಸ್ 25 ದಿನ ಪೂರೈಸಿದ್ದಕ್ಕೆ ಅಭಿಮಾನಿಗಳಿಗೆ ಸುದೀಪ್ ಸ್ಪೆಷಲ್ ವಿಡಿಯೋ
ಮ್ಯಾಕ್ಸ್ 25 ದಿನ ಪೂರೈಸಿದ್ದಕ್ಕೆ ಅಭಿಮಾನಿಗಳಿಗೆ ಸುದೀಪ್ ಸ್ಪೆಷಲ್ ವಿಡಿಯೋ
ಪ್ರಯಾಗ್​ರಾಜ್ ಕುಂಭಮೇಳದ ಹಲವು ಟೆಂಟ್​ಗಳಲ್ಲಿ ಅಗ್ನಿ ಜ್ವಾಲೆ ನರ್ತನ
ಪ್ರಯಾಗ್​ರಾಜ್ ಕುಂಭಮೇಳದ ಹಲವು ಟೆಂಟ್​ಗಳಲ್ಲಿ ಅಗ್ನಿ ಜ್ವಾಲೆ ನರ್ತನ
ನಂಜನಗೂಡು ನಂಜುಂಡೇಶ್ವರನ ಆಶೀರ್ವಾದ ಪಡೆದ ಡಾಲಿ ಧನಂಜಯ್
ನಂಜನಗೂಡು ನಂಜುಂಡೇಶ್ವರನ ಆಶೀರ್ವಾದ ಪಡೆದ ಡಾಲಿ ಧನಂಜಯ್
ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ