ಗುಜರಾತ್ನ ಅಹಮದಾಬಾದ್ನಲ್ಲಿರುವ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಇಂದು ನಡೆದ 2023ರ ವಿಶ್ವಕಪ್ ಪಂದ್ಯ (ICC World Cup 2023) ದಲ್ಲಿ 6ನೇ ಬಾರಿಗೆ ಆಸ್ಟ್ರೇಲಿಯಾ ತಂಡ ವಿಶ್ವ ಚಾಂಪಿಯನ್ ಆಗಿದೆ. ಆ ಮೂಲಕ ವಿಶ್ವಕಪ್ ಗೆಲ್ಲುವ ಟೀಂ ಇಂಡಿಯಾ ಕನಸು ಭಗ್ನವಾಗಿದೆ. ಅಜೇಯವಾಗಿ ವಿಶ್ವಕಪ್ ಫೈನಲ್ ಪ್ರವೇಶಿಸಿದ್ದ ಟೀಂ ಇಂಡಿಯಾಗೆ ವಿರೋಚಿತ ಸೋಲು ಎದುರಾಗಿದೆ. ಈ ಸಂದರ್ಭದಲ್ಲಿ ಇಂದು ಮತ್ತು ಯಾವಾಗಲೂ ನಾವು ನಿಮ್ಮೊಂದಿಗೆ ಇರುತ್ತೇವೆ ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ.
ಈ ಕುರಿತಾಗಿ ಟ್ವೀಟ್ ಮಾಡಿರುವ ಪ್ರಧಾನಿ ಮೋದಿ, ಪ್ರೀತಿಯ ಭಾರತ ತಂಡ, ವಿಶ್ವಕಪ್ ಮೂಲಕ ನಿಮ್ಮ ಪ್ರತಿಭೆ ಮತ್ತು ದೃಢನಿಶ್ಚಯ ಗಮನಾರ್ಹವಾಗಿದೆ. ನೀವು ಬಹಳ ಉತ್ಸಾಹದಿಂದ ಆಡಿದ್ದೀರಿ ಮತ್ತು ರಾಷ್ಟ್ರಕ್ಕೆ ಅಪಾರ ಹೆಮ್ಮೆಯನ್ನು ತಂದಿದ್ದೀರಿ ಎಂದು ಬರೆದುಕೊಂಡಿದ್ದಾರೆ.
Dear Team India,
Your talent and determination through the World Cup was noteworthy. You’ve played with great spirit and brought immense pride to the nation.
We stand with you today and always.
— Narendra Modi (@narendramodi) November 19, 2023
ಭಾರತ ತಂಡದ ಮಾಜಿ ಆಟಗಾರ ಇರ್ಫಾನ್ ಪಠಾಣ್ ಕೂಡ ಟ್ವೀಟ್ ಮಾಡಿದ್ದು, ಒಳ್ಳೆಯದು ಆಸ್ಟ್ರೇಲಿಯಾ ನೀವು ನಿಜವಾಗಿಯೂ ವಿಶ್ವ ಚಾಂಪಿಯನ್. ಸ್ಪರ್ಧೆಯ ಅತ್ಯುತ್ತಮ ತಂಡಗಳಲ್ಲಿ ಒಂದಾದ ತಂಡವನ್ನು ಸೋಲಿಸಿದ್ದೀರಿ ಎಂದು ಬರೆದುಕೊಂಡಿದ್ದಾರೆ.
Well done Australia you are truly a world champion. Coming from behind beating one of the best team in the competition. #WorldCup2023
— Irfan Pathan (@IrfanPathan) November 19, 2023
41ನೇ ಓವರ್ ಬಳಿಕ 3 ವಿಕೆಟ್ ನಷ್ಟಕ್ಕೆ ಆಸ್ಟ್ರೇಲಿಯಾ 230 ರನ್ಗಳನ್ನು ಬಾರಿಸುವ ಮೂಲಕ ವಿಶ್ವಕಪ್ ಕಿರೀಟವನ್ನು ಮತ್ತೊಮ್ಮೆ ಮುಡಿಗೇರಿಸಿಕೊಂಡಿದೆ. ಟ್ರಾವಿಸ್ ಹೆಡ್ಗೆ ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದುಕೊಂಡಿದ್ದು, ವಿರಾಟ್ ಕೊಹ್ಲಿಗೆ ಸರಣಿಶ್ರೇಷ್ಠ ಪ್ರಶಸ್ತಿ ನೀಡಲಾಗಿದೆ. ಭಾರತವನ್ನು 240 ರನ್‌ಗಳಿಗೆ ಸೀಮಿತಗೊಳಿಸಿದ ಕಾಂಗರೂ ಪಡೆ ಈ ಸವಾಲನ್ನು 43 ಓವರ್‌ಗಳಲ್ಲಿ 4 ವಿಕೆಟ್ ಕಳೆದುಕೊಂಡು ಪೂರ್ಣಗೊಳಿಸಿದೆ.
ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.