ಭಾರತಕ್ಕೆ ಅಫ್ಘಾನ್ ಸವಾಲು; ಕೊಹ್ಲಿ- ನವೀನ್ ಮುಖಾಮುಖಿ ನೋಡಲು ಅಭಿಮಾನಿಗಳು ಕಾತುರ

India Vs Afghanistan, ICC World Cup 2023: ಭಾರತ ಕ್ರಿಕೆಟ್ ತಂಡ ವಿಶ್ವಕಪ್-2023 ರಲ್ಲಿ ತನ್ನ ಎರಡನೇ ಪಂದ್ಯವನ್ನು ಇಂದು ಅಂದರೆ, ಅಕ್ಟೋಬರ್ 11ರ ಬುಧವಾರದಂದು ಅಫ್ಘಾನಿಸ್ತಾನ ವಿರುದ್ಧ ಆಡಲಿದೆ. ಈ ಪಂದ್ಯ ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆಯಲಿದೆ.

ಭಾರತಕ್ಕೆ ಅಫ್ಘಾನ್ ಸವಾಲು; ಕೊಹ್ಲಿ- ನವೀನ್ ಮುಖಾಮುಖಿ ನೋಡಲು ಅಭಿಮಾನಿಗಳು ಕಾತುರ
ಭಾರತ- ಅಫ್ಘಾನಿಸ್ತಾನ
Follow us
ಪೃಥ್ವಿಶಂಕರ
|

Updated on:Oct 11, 2023 | 9:04 AM

ಭಾರತ ಕ್ರಿಕೆಟ್ ತಂಡ ವಿಶ್ವಕಪ್-2023 ರಲ್ಲಿ (ICC world cup 2023) ತನ್ನ ಎರಡನೇ ಪಂದ್ಯವನ್ನು ಇಂದು ಅಂದರೆ, ಅಕ್ಟೋಬರ್ 11ರ ಬುಧವಾರದಂದು ಅಫ್ಘಾನಿಸ್ತಾನ ವಿರುದ್ಧ (India Vs Afghanistan) ಆಡಲಿದೆ. ಈ ಪಂದ್ಯ ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆಯಲಿದೆ. ಟೂರ್ನಿಯಲ್ಲಿ ಟೀಂ ಇಂಡಿಯಾ ಗೆಲುವಿನೊಂದಿಗೆ ಪಯಣ ಆರಂಭಿಸಿದೆ. ಭಾನುವಾರ ನಡೆದ ಪಂದ್ಯದಲ್ಲಿ ಆಸ್ಟ್ರೇಲಿಯವನ್ನು 6 ವಿಕೆಟ್‌ಗಳಿಂದ ಸೋಲಿಸಿತು. ಈ ಗೆಲುವಿನ ನಂತರ ಟೀಂ ಇಂಡಿಯಾದ (Team India) ಮನೋಬಲ ಹೆಚ್ಚಿದ್ದು, ಸತತ ಎರಡನೇ ಗೆಲುವಿನತ್ತ ದೃಷ್ಟಿ ನೆಟ್ಟಿದೆ. ಬುಧವಾರ ನಡೆಯಲಿರುವ ಪಂದ್ಯದಲ್ಲಿ ಟೀಂ ಇಂಡಿಯಾದ ಮಾಜಿ ನಾಯಕ ವಿರಾಟ್ ಕೊಹ್ಲಿ (VIrat Kohli) ಹಾಗೂ ಅಫ್ಘಾನಿಸ್ತಾನ ಬೌಲರ್ ನವೀನ್ ಉಲ್ ಹಕ್ (Naveen Ul Haq) ಮುಖಾಮುಖಿಯಾಗಲಿದ್ದಾರೆ. ಈ ಇಬ್ಬರು ಆಟಗಾರರ ನಡುವೆ ಕಳೆದ ಐಪಿಎಲ್​ನಲ್ಲಿ ನಡೆದಿದ್ದ ಮಾತಿನ ಚಕಮಕಿ ಈ ಪಂದ್ಯದಲ್ಲಿ ಯಾವ ರೀತಿಯ ಪರಿಣಾಮ ಬೀರಲಿದೆ ಎಂಬುದನ್ನು ನೋಡಲು ಅಭಿಮಾನಿಗಳು ಕಾತುರರಾಗಿದ್ದಾರೆ.

ಕೊಹ್ಲಿ- ನವೀನ್ ನಡುವಿನ ಫೈಟ್

ವಾಸ್ತವವಾಗಿ ಕಳೆದ ಐಪಿಎಲ್​ನಲ್ಲಿ ಲಕ್ನೋ ಸೂಪರ್‌ಜೈಂಟ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವಿನ ಪಂದ್ಯದಲ್ಲಿ ಈ ಇಬ್ಬರ ನಡುವೆ ಮಾತಿನ ಚಕಮಕಿ ನಡೆದಿತ್ತು. ಆಗಿನಿಂದ ನವೀನ್​ರನ್ನು ಟಾರ್ಗೆಟ್ ಮಾಡಿದ್ದ ಕೊಹ್ಲಿ ಅಭಿಮಾನಿಗಳು, ನವೀನ್ ಆಡುವ ಪ್ರತಿಯೊಂದು ಮ್ಯಾಚ್​ನಲ್ಲಿಯೂ ಅಂದಿನ ಘಟನೆಯನ್ನು ನೆನಪಿಸುತ್ತಾರೆ.

ಚೆನ್ನೈನಲ್ಲಿ ಕೊಹ್ಲಿ-ರಾಹುಲ್ ಜುಗಲ್​ಬಂದಿ, ಗೆಲುವಿನೊಂದಿಗೆ ವಿಶ್ವಕಪ್ ಅಭಿಯಾನ ಆರಂಭಿಸಿದ ಭಾರತ!

ನವೀನ್ ಕಾಲೆಳೆದ ಫ್ಯಾನ್ಸ್

ಇದಕ್ಕೆ ಉದಾಹರಣೆಯಾಗಿ ಹಿಮಾಚಲ ಪ್ರದೇಶದ ಧರ್ಮಶಾಲಾ ಮೈದಾನದಲ್ಲಿ ಬಾಂಗ್ಲಾದೇಶ ವಿರುದ್ಧದ ಪಂದ್ಯದಲ್ಲಿ ನವೀನ್ ಉಲ್ ಹಕ್ ಬೌಂಡರಿಯಲ್ಲಿ ಫೀಲ್ಡಿಂಗ್ ಮಾಡುತ್ತಿದ್ದಾಗ ಪ್ರೇಕ್ಷಕರು ಕೊಹ್ಲಿ-ಕೊಹ್ಲಿ ಎಂದು ಘೋಷಣೆಗಳನ್ನು ಕೂಗಿದ್ದರು. ಇದರ ವಿಡಿಯೋ ಕೂಡ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ನವೀನ್ ಉಲ್ ಹಕ್ ಅವರನ್ನು ನೋಡುತ್ತಿದ್ದ ಪ್ರೇಕ್ಷಕರು ಕೊಹ್ಲಿ-ಕೊಹ್ಲಿ ಎಂದು ಘೋಷಣೆ ಕೂಗಿದ್ದು ವೈರಲ್ ಆಗಿರುವ ವಿಡಿಯೋದಲ್ಲಿ ಕಂಡುಬಂದಿತ್ತು.

ಮುಖಾಮುಖಿ ವರದಿ

ಇನ್ನು ಈ ಉಭಯ ತಂಡಗಳ ಮುಖಾಮುಖಿಯಲ್ಲಿ ಟೀಂ ಇಂಡಿಯಾ ಇದುವರೆಗೆ ಅಫ್ಘಾನಿಸ್ತಾನದ ಮೇಲೆ ಪ್ರಾಬಲ್ಯ ಸಾಧಿಸಿದೆ. ಭಾರತದ ವಿರುದ್ಧ ಅಫ್ಘಾನಿಸ್ತಾನ ಇನ್ನೂ ಒಂದೇ ಒಂದು ಪಂದ್ಯವನ್ನು ಗೆದ್ದಿಲ್ಲ. ಆದರೆ ಅಫ್ಘಾನಿಸ್ತಾನ ತಂಡವನ್ನು ರೋಹಿತ್ ಪಡೆ ಕಡೆಗಣಿಸುವಂತಿಲ್ಲ. ಏಕೆಂದರೆ ಈ ತಂಡ ಗೆಲುವಿಗಾಗಿ ಕೊನೆಯವರೆಗೂ ಹೋರಾಟ ನಡೆಸುವ ಸಾಮಥ್ಯ್ರ ಹೊಂದಿದೆ. ಅಫ್ಘಾನಿಸ್ತಾನ ವಿರುದ್ಧ ಟೀಂ ಇಂಡಿಯಾ ಇದುವರೆಗೆ ಒಟ್ಟು 3 ಏಕದಿನ ಪಂದ್ಯಗಳನ್ನು ಆಡಿದೆ. ಈ ಪೈಕಿ 2 ಪಂದ್ಯಗಳಲ್ಲಿ ಟೀಂ ಇಂಡಿಯಾ ಮೇಲುಗೈ ಸಾಧಿಸಿದ್ದರೆ, ಒಂದು ಪಂದ್ಯ ಟೈ ಆಗಿದೆ. ಹೀಗಾಗಿ ಇದೀಗ ಟೀಂ ಇಂಡಿಯಾಗೆ ಮೂರನೇ ಗೆಲುವು ಸಿಗುತ್ತೋ ಅಥವಾ ಅಫ್ಘಾನಿಸ್ತಾನ ಗೆಲುವಿನ ಖಾತೆ ತೆರೆಯುತ್ತೋ ಎಂಬುದನ್ನು ಕಾದು ನೋಡಬೇಕಾಗಿದೆ.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 6:10 am, Wed, 11 October 23

ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!
ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್
ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್
ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ
ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ
Video: ರೈಲಿನಲ್ಲಿ ಕುಡುಕ ಪ್ರಯಾಣಿಕ ಹಾಗೂ ಟಿಟಿಇ ನಡುವೆ ಹೊಡೆದಾಟ
Video: ರೈಲಿನಲ್ಲಿ ಕುಡುಕ ಪ್ರಯಾಣಿಕ ಹಾಗೂ ಟಿಟಿಇ ನಡುವೆ ಹೊಡೆದಾಟ
‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?
‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ