AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs NED: ಬ್ಯಾಟಿಂಗ್ ಸ್ವರ್ಗ ಬೆಂಗಳೂರಿನಲ್ಲಿ ಅಬ್ಬರಿಸುತ್ತಾ ಭಾರತ? ಪಂದ್ಯಕ್ಕೆ ಮಳೆಯ ಆತಂಕ? ಇಲ್ಲಿದೆ ವಿವರ

IND vs NED, Weather and Pitch Report: ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣ ಬ್ಯಾಟಿಂಗ್ ಪಿಚ್ ಎಂದೇ ಹೆಸರುವಾಸಿಯಾಗಿದೆ. ಮತ್ತು ಮೈದಾನವು ತುಲನಾತ್ಮಕವಾಗಿ ಚಿಕ್ಕದಾಗಿರುವುದರಿಂದ ಇಲ್ಲಿ ಬೌಂಡರಿ, ಸಿಕ್ಸರ್​ಗಳ ಸುರಿಮಳೆಯಾಗುವುದು ಖಚಿತ. ಈ ಹಿಂದೆ ಈ ಮೈದಾನದಲ್ಲಿ ನಡೆದ ಪಂದ್ಯಗಳು ಸಹ ಇದಕ್ಕೆ ಸಾಕ್ಷಿಯಾಗಿವೆ.

IND vs NED: ಬ್ಯಾಟಿಂಗ್ ಸ್ವರ್ಗ ಬೆಂಗಳೂರಿನಲ್ಲಿ ಅಬ್ಬರಿಸುತ್ತಾ ಭಾರತ? ಪಂದ್ಯಕ್ಕೆ ಮಳೆಯ ಆತಂಕ? ಇಲ್ಲಿದೆ ವಿವರ
ಭಾರತ- ನೆದರ್ಲೆಂಡ್ಸ್
ಪೃಥ್ವಿಶಂಕರ
|

Updated on: Nov 11, 2023 | 11:52 AM

Share

ಟೀಂ ಇಂಡಿಯಾ 2023ರ ಐಸಿಸಿ ವಿಶ್ವಕಪ್‌ನ (ICC ODI World Cup 2023) ತನ್ನ ಮುಂದಿನ ಪಂದ್ಯವನ್ನು ನೆದರ್ಲೆಂಡ್ಸ್ (India Vs Netherlands) ವಿರುದ್ಧ ಆಡಲಿದೆ. ನವೆಂಬರ್ 12 ರಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರಿಕೆಟ್ ಸ್ಟೇಡಿಯಂನಲ್ಲಿ ಈ ಪಂದ್ಯ ನಡೆಯಲಿದೆ. ಅಂಕಪಟ್ಟಿಯಲ್ಲಿ ಭಾರತ ಈಗಾಗಲೇ ಅಗ್ರಸ್ಥಾನ ಕಾಯ್ದುಕೊಂಡಿದೆ. ಇಂತಹ ಪರಿಸ್ಥಿತಿಯಲ್ಲಿ ನೆದರ್ಲೆಂಡ್ಸ್ ವಿರುದ್ಧದ ಪಂದ್ಯದ ಸೋಲು-ಗೆಲುವು ಭಾರತದ ಪಾಯಿಂಟ್ಸ್ ಪಟ್ಟಿಯಲ್ಲಿ ಯಾವುದೇ ಪರಿಣಾಮ ಬೀರುವುದಿಲ್ಲ. ಟೀಂ ಇಂಡಿಯಾ ಆಡುತ್ತಿರುವ ರೀತಿಯನ್ನು ನೋಡಿದರೆ, ನೆದರ್ಲೆಂಡ್ಸ್ ತಂಡವನ್ನು ಸೋಲಿಸುವ ಮೂಲಕ ತನ್ನ ಒಂಬತ್ತನೇ ಸತತ ಗೆಲುವು ದಾಖಲಿಸುವ ಮೂಲಕ ಅಭಿಮಾನಿಗಳಿಗೆ ದೀಪಾವಳಿಯ ಉಡುಗೊರೆ ನೀಡಲು ಪ್ರಯತ್ನಿಸಲಿದೆ.

ಹವಾಮಾನ ವರದಿ

ಭಾನುವಾರದಂದು ಬೆಂಗಳೂರಿನಲ್ಲಿ ಭಾಗಶಃ ಬಿಸಿಲು ಮತ್ತು ಆಹ್ಲಾದಕರ ವಾತಾವರಣ ಇರುತ್ತದೆ ಎಂದು AccuWeather ಹೇಳಿದೆ. ಮಳೆಯ ಬೀಳುವ ಸಾಧ್ಯತೆಗಳು ಕೇವಲ ಮೂರು ಪ್ರತಿಶತ ಇರುವುದರಿಂದ ಮಳೆಯು ಆಟವನ್ನು ಹಾಳುಮಾಡುವ ಸಾಧ್ಯತೆಗಳಿಲ್ಲ. ತೇವಾಂಶವು ಶೇಕಡಾ 45 ರಷ್ಟಿದ್ದರೆ, ಮೋಡ ಕವಿದ ವಾತಾವರಣ ಶೇಕಡಾ 18 ರಷ್ಟಿರುತ್ತದೆ. ಇದಲ್ಲದೆ, ತಾಪಮಾನವು 16 ರಿಂದ 28 ಡಿಗ್ರಿ ಸೆಲ್ಸಿಯಸ್ ನಡುವೆ ಇರುತ್ತದೆ ಎಂದು ವರದಿಯಲ್ಲಿ ಹೇಳಿದೆ.

ಬೆಂಗಳೂರಿನಲ್ಲಿ ನಾಳೆ ಕೊನೆಯ ಲೀಗ್ ಪಂದ್ಯ: ಭಾರತಕ್ಕೆ ನೆದರ್ಲೆಂಡ್ಸ್ ಎದುರಾಳಿ; ಪಂದ್ಯ ಎಷ್ಟು ಗಂಟೆಗೆ ಆರಂಭ?

ಪಿಚ್ ವರದಿ

ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣ ಬ್ಯಾಟಿಂಗ್ ಪಿಚ್ ಎಂದೇ ಹೆಸರುವಾಸಿಯಾಗಿದೆ. ಮತ್ತು ಮೈದಾನವು ತುಲನಾತ್ಮಕವಾಗಿ ಚಿಕ್ಕದಾಗಿರುವುದರಿಂದ ಇಲ್ಲಿ ಬೌಂಡರಿ, ಸಿಕ್ಸರ್​ಗಳ ಸುರಿಮಳೆಯಾಗುವುದು ಖಚಿತ. ಈ ಹಿಂದೆ ಈ ಮೈದಾನದಲ್ಲಿ ನಡೆದ ಪಂದ್ಯಗಳು ಸಹ ಇದಕ್ಕೆ ಸಾಕ್ಷಿಯಾಗಿವೆ. ಹೀಗಾಗಿ ಈ ಪಿಚ್ ಬ್ಯಾಟರ್‌ಗಳಿಗೆ ಉತ್ತಮ ಸ್ಕೋರ್ ಮಾಡಲು ಸಹಕಾರಿಯಾಗಲಿದೆ. ಸಾಮಾನ್ಯವಾಗಿ ಈ ಪಿಚ್​ನಲ್ಲಿ ಟಾಸ್ ಗೆದ್ದ ನಾಯಕ ಮೊದಲು ಬೌಲಿಂಗ್ ಮಾಡುವುದಕ್ಕೆ ಹೆಚ್ಚು ಆಧ್ಯತೆ ನೀಡುವ ಸಾಧ್ಯತೆಗಳಿವೆ.

12 ವರ್ಷಗಳ ಬಳಿಕ ಮುಖಾಮುಖಿ

ವಾಸ್ತವವಾಗಿ ಭಾರತ ಮತ್ತು ನೆದರ್ಲೆಂಡ್ಸ್ ತಂಡಗಳು 12 ವರ್ಷಗಳ ನಂತರ ಏಕದಿನ ವಿಶ್ವಕಪ್​ನಲ್ಲಿ ಮುಖಾಮುಖಿಯಾಗುತ್ತಿವೆ. 2011ರಲ್ಲಿ ನಡೆದ ಏಕದಿನ ವಿಶ್ವಕಪ್‌ನಲ್ಲಿ ಭಾರತ ಮತ್ತು ನೆದರ್ಲೆಂಡ್ಸ್ ಕೊನೆಯ ಬಾರಿ ಮುಖಾಮುಖಿಯಾಗಿದ್ದವು. ಆ ವಿಶ್ವಕಪ್ ಕೂಡ ಭಾರತದಲ್ಲಿ ನಡೆದಿದ್ದು, ಎಂಎಸ್ ಧೋನಿ ನಾಯಕತ್ವದಲ್ಲಿ ಟೀಂ ಇಂಡಿಯಾ ಎರಡನೇ ಬಾರಿಗೆ ಏಕದಿನ ವಿಶ್ವ ಚಾಂಪಿಯನ್ ಆಗಿತ್ತು. ಇದೀಗ 2011ರ ಏಕದಿನ ವಿಶ್ವಕಪ್‌ ಬಳಿಕ ಭಾರತ ತಂಡ 2023ರಲ್ಲಿ ನೆದರ್ಲೆಂಡ್ಸ್ ತಂಡವನ್ನು ಎದುರಿಸಲಿದೆ.

ಏಕದಿನ ವಿಶ್ವಕಪ್‌ನಲ್ಲಿ ಎರಡನೇ ಬಾರಿಗೆ ಮುಖಾಮುಖಿ

2003ರಲ್ಲಿ ಏಕದಿನ ವಿಶ್ವಕಪ್‌ನಲ್ಲಿ ಈ ಎರಡು ತಂಡಗಳ ನಡುವೆ ಮೊದಲ ಪಂದ್ಯ ನಡೆದಿತ್ತು. ಆ ಪಂದ್ಯದಲ್ಲಿ ಟೀಂ ಇಂಡಿಯಾ ನೆದರ್ಲೆಂಡ್ಸ್ ವಿರುದ್ಧ 68 ರನ್‌ಗಳ ಜಯ ಸಾಧಿಸಿತ್ತು. ಇದಾದ ಬಳಿಕ 2011ರ ವಿಶ್ವಕಪ್‌ನಲ್ಲಿ ಉಭಯ ತಂಡಗಳು ಎರಡನೇ ಬಾರಿ ಮುಖಾಮುಖಿಯಾಗಿದ್ದು, ಈ ಪಂದ್ಯದಲ್ಲೂ ಟೀಂ ಇಂಡಿಯಾ ಗೆಲುವು ಸಾಧಿಸಿತ್ತು. ಧೋನಿ ನಾಯಕತ್ವದಲ್ಲಿ ಟೀಂ ಇಂಡಿಯಾ 5 ವಿಕೆಟ್‌ಗಳಿಂದ ನೆದರ್ಲೆಂಡ್ಸ್ ತಂಡವನ್ನು ಸೋಲಿಸಿತು. ಅದೇನೆಂದರೆ ಇಲ್ಲಿಯವರೆಗೂ ಇತಿಹಾಸ ಭಾರತದ ಪರವಾಗಿದ್ದು, ಸದ್ಯ ಭಾರತ ಪ್ರದರ್ಶನ ನೀಡುತ್ತಿರುವ ರೀತಿಯಿಂದ ಟೀಂ ಇಂಡಿಯಾ ಏಕದಿನ ವಿಶ್ವಕಪ್​ನಲ್ಲಿ ಈ ತಂಡದ ವಿರುದ್ಧ ಹ್ಯಾಟ್ರಿಕ್ ಗೆಲುವು ಸಾಧಿಸುವ ಸಾಧ್ಯತೆಗಳಿವೆ.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಪೃಥ್ವಿಶಂಕರ
ಪೃಥ್ವಿಶಂಕರ

ಪೃಥ್ವಿಶಂಕರ ಅವರ ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ. ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ಕೆಲಸ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ಇವರು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ಇವರ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
ಅಬ್ಬಾ, ಗೊತ್ತೇ ಇಲ್ಲದೆ ತಲೆದಿಂಬಿನಡಿ ಸೇರಿತ್ತು ಭಾರಿ ಗಾತ್ರದ ನಾಗರ ಹಾವು!
ಅಬ್ಬಾ, ಗೊತ್ತೇ ಇಲ್ಲದೆ ತಲೆದಿಂಬಿನಡಿ ಸೇರಿತ್ತು ಭಾರಿ ಗಾತ್ರದ ನಾಗರ ಹಾವು!
ಮೋದಿ ಭೇಟಿ ಬಳಿಕ ಬೆಂಗಳೂರಿಗೆ ಆಗಮಿಸಿದ ಪೋಲೆಂಡ್ ಪ್ರಧಾನಿ ಡೊನಾಲ್ಡ್ ಟಸ್ಕ್
ಮೋದಿ ಭೇಟಿ ಬಳಿಕ ಬೆಂಗಳೂರಿಗೆ ಆಗಮಿಸಿದ ಪೋಲೆಂಡ್ ಪ್ರಧಾನಿ ಡೊನಾಲ್ಡ್ ಟಸ್ಕ್
ಇಂದು ಈ ರಾಶಿಯವರು ವಿರೋಧಿಗಳೊಂದಿಗೆ ವಿವಾದಕ್ಕಿಳಿಯಬೇಡಿ
ಇಂದು ಈ ರಾಶಿಯವರು ವಿರೋಧಿಗಳೊಂದಿಗೆ ವಿವಾದಕ್ಕಿಳಿಯಬೇಡಿ
ಸರಸ್ವತಿ ದೇವಾಲಯದಲ್ಲಿ ಮಕ್ಕಳ ಕೈಹಿಡಿದು ವಿದ್ಯಾರಂಭ ಮಾಡಿಸಿದ ಶಶಿ ತರೂರ್
ಸರಸ್ವತಿ ದೇವಾಲಯದಲ್ಲಿ ಮಕ್ಕಳ ಕೈಹಿಡಿದು ವಿದ್ಯಾರಂಭ ಮಾಡಿಸಿದ ಶಶಿ ತರೂರ್
ಸಂಪುಟದಲ್ಲಿ ಮಹಿಳಾ ಮಂತ್ರಿ, ನಿಗಮ ಮಂಡಳಿ ನೇಮಕದ ಬಗ್ಗೆ ಸಿಎಂ ಮಾಹಿತಿ
ಸಂಪುಟದಲ್ಲಿ ಮಹಿಳಾ ಮಂತ್ರಿ, ನಿಗಮ ಮಂಡಳಿ ನೇಮಕದ ಬಗ್ಗೆ ಸಿಎಂ ಮಾಹಿತಿ
‘ಪ್ರೇಮದ ಊರಲಿ’ ಸಿನಿಮಾ 100 ಕೋಟಿ ರೂಪಾಯಿ ಕಲೆಕ್ಷನ್: ನಿರ್ಮಾಪಕರು ಖುಷ್
‘ಪ್ರೇಮದ ಊರಲಿ’ ಸಿನಿಮಾ 100 ಕೋಟಿ ರೂಪಾಯಿ ಕಲೆಕ್ಷನ್: ನಿರ್ಮಾಪಕರು ಖುಷ್
ಅಮಿತ್ ಶಾ ಭೇಟಿಗೆ ಟೈಮ್ ಫಿಕ್ಸ್: ಕುತೂಹಲ ಮೂಡಿಸಿದ ಆರ್ ಅಶೋಕ್ ನಡೆ
ಅಮಿತ್ ಶಾ ಭೇಟಿಗೆ ಟೈಮ್ ಫಿಕ್ಸ್: ಕುತೂಹಲ ಮೂಡಿಸಿದ ಆರ್ ಅಶೋಕ್ ನಡೆ
ಈ ಬಾರಿ ದಸರಾದಲ್ಲಿ ಸಾಲು ಸಾಲು ಅಭಾಸಗಳು:ಅಪಶಕುನದ ಬಗ್ಗೆ ಚರ್ಚೆ!
ಈ ಬಾರಿ ದಸರಾದಲ್ಲಿ ಸಾಲು ಸಾಲು ಅಭಾಸಗಳು:ಅಪಶಕುನದ ಬಗ್ಗೆ ಚರ್ಚೆ!
ದೆಹಲಿ ಮಹಾನಗರ ಪಾಲಿಕೆಯಲ್ಲಿ ಆಪ್- ಬಿಜೆಪಿ ಕೌನ್ಸಿಲರ್‌ಗಳ ನಡುವೆ ಸಂಘರ್ಷ
ದೆಹಲಿ ಮಹಾನಗರ ಪಾಲಿಕೆಯಲ್ಲಿ ಆಪ್- ಬಿಜೆಪಿ ಕೌನ್ಸಿಲರ್‌ಗಳ ನಡುವೆ ಸಂಘರ್ಷ
ವೆಬ್ ಸಿರೀಸ್ ಆಗಬೇಕಿದ್ದ ‘ಪ್ರೇಮದ ಊರಲಿ’ ಕಥೆ: ಇಲ್ಲಿದೆ ಅಚ್ಚರಿಯ ವಿಷಯ
ವೆಬ್ ಸಿರೀಸ್ ಆಗಬೇಕಿದ್ದ ‘ಪ್ರೇಮದ ಊರಲಿ’ ಕಥೆ: ಇಲ್ಲಿದೆ ಅಚ್ಚರಿಯ ವಿಷಯ