ಏಕದಿನ ವಿಶ್ವಕಪ್ನಲ್ಲಿ (ICC ODI World Cup 2023) ನಾಳೆ ಅಂದರೆ, ನವೆಂಬರ್ 12 ರಂದು ಲೀಗ್ ಹಂತದ ಕೊನೆಯ ಪಂದ್ಯ ನಡೆಯಲ್ಲಿದೆ. ಈ ಪಂದ್ಯದಲ್ಲಿ ಬಲಿಷ್ಠ ಭಾರತಕ್ಕೆ, ನೆದರ್ಲೆಂಡ್ಸ್ (India Vs Netherlands) ತಂಡ ಎದುರಾಗುತ್ತಿದೆ. ಇದುವರೆಗೆ ಟೂರ್ನಿಯಲ್ಲಿ ಒಂದೇ ಒಂದು ಸೋಲು ಕಾಣದ ಟೀಂ ಇಂಡಿಯಾ ಮೊದಲ ತಂಡವಾಗಿ ಸೆಮಿಫೈನಲ್ಗೆ ಲಗ್ಗೆ ಇಟ್ಟಿದೆ. ಇತ್ತ ನೆದರ್ಲೆಂಡ್ಸ್ ತಂಡ ಕೇವಲ 2 ಗೆಲುವುಗಳೊಂದಿಗೆ ಪಾಯಿಂಟ್ ಪಟ್ಟಿಯಲ್ಲಿ ಕೊನೆಯ ಸ್ಥಾನ ಪಡೆದುಕೊಂಡಿರುವುದಲ್ಲದೆ ವಿಶ್ವಕಪ್ನಿಂದ ಹೊರಬಿದ್ದಿದೆ. ಹೀಗಾಗಿ ನಾಳಿನ ಪಂದ್ಯ ನೆದರ್ಲೆಂಡ್ಸ್ ತಂಡಕ್ಕೆ ಕೇವಲ ಔಪಚಾರಿಕವಾಗಿದೆ. ಆದರೆ ಭಾರತಕ್ಕೆ ಮಾತ್ರ ತನ್ನ ಅಜೇಯ ಓಟವನ್ನು ಮುಂದುವರೆಸಲು ಇದು ಸುವರ್ಣಾವಕಾಶವಾಗಿದೆ. ಏಕೆಂದರೆ ಈ ಪಂದ್ಯದ ಬಳಿಕ ರೋಹಿತ್ ಪಡೆ ಸೆಮಿಫೈನಲ್‌ನಲ್ಲಿ ನ್ಯೂಜಿಲೆಂಡ್ (India Vs New Zealand) ತಂಡವನ್ನು ಎದುರಿಸಬೇಕಾಗಿದೆ. ಹೀಗಾಗಿ ಈ ಪಂದ್ಯದ ಗೆಲುವು ಟೀಂ ಇಂಡಿಯಾದ ಆತ್ಮವಿಶ್ವಾಸವನ್ನು ಹೆಚ್ಚಿಸಲಿದೆ.
ನವೆಂಬರ್ 12 ರ ಭಾನುವಾರದಂದು ಭಾರತ ಮತ್ತು ನೆದರ್ಲ್ಯಾಂಡ್ಸ್ ಪಂದ್ಯ ನಡೆಯಲಿದೆ.
ಭಾರತ ಮತ್ತು ನೆದರ್ಲ್ಯಾಂಡ್ಸ್ ನಡುವಿನ ವಿಶ್ವಕಪ್ ಪಂದ್ಯ ಮಧ್ಯಾಹ್ನ 2 ಗಂಟೆಗೆ ಪ್ರಾರಂಭವಾಗಲಿದ್ದು, ಪಂದ್ಯದ ಟಾಸ್ 1:30ಕ್ಕೆ ನಡೆಯಲ್ಲಿದೆ.
ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ನಡೆಯಲಿದೆ.
ಪಂದ್ಯವು ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್‌ನಲ್ಲಿ ನೇರ ಪ್ರಸಾರವಾಗಲಿದೆ.
ಪಂದ್ಯವನ್ನು ಡಿಸ್ನಿ+ಹಾಟ್‌ಸ್ಟಾರ್ ಅಪ್ಲಿಕೇಶನ್ ಮತ್ತು ವೆಬ್‌ಸೈಟ್‌ನಲ್ಲಿ ಲೈವ್-ಸ್ಟ್ರೀಮ್ ಮಾಡಲಾಗುತ್ತದೆ.
ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಶುಭ್ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಇಶಾನ್ ಕಿಶನ್, ಕೆಎಲ್ ರಾಹುಲ್, ಸೂರ್ಯಕುಮಾರ್ ಯಾದವ್, ರವೀಂದ್ರ ಜಡೇಜಾ, ರವಿಚಂದ್ರನ್ ಅಶ್ವಿನ್, ಶಾರ್ದೂಲ್ ಠಾಕೂರ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಕುಲ್ದೀಪ್ ಯಾದವ್, ಪ್ರಸಿದ್ ಕೃಷ್ಣ.
ನೆದರ್ಲ್ಯಾಂಡ್ಸ್ ತಂಡ: ಸ್ಕಾಟ್ ಎಡ್ವರ್ಡ್ಸ್ (ನಾಯಕ), ಮ್ಯಾಕ್ಸ್ ಒ’ಡೌಡ್, ಬಾಸ್ ಡಿ ಲೀಡ್, ವಿಕ್ರಮ್ ಸಿಂಗ್, ತೇಜ ನಿಡಮನೂರು, ಪಾಲ್ ವ್ಯಾನ್ ಮೀಕೆರೆನ್, ಕಾಲಿನ್ ಅಕರ್ಮನ್, ರೋಲೋಫ್ ವ್ಯಾನ್ ಡೆರ್ ಮೆರ್ವೆ, ಲೋಗನ್ ವ್ಯಾನ್ ಬೀಕ್, ಆರ್ಯನ್ ದತ್, ನೋಹ್ ಕ್ರೋಸ್, ವೆಸ್ಲಿ ಬ್ಯಾರೆಸಿ, ಸಾಕಿಬ್ ಜುಲ್ಫಿಕ್ , ಶರೀಜ್ ಅಹ್ಮದ್, ಸೈಬ್ರಾಂಡ್ ಎಂಗಲ್‌ಬ್ರೆಕ್ಟ್.
ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 11:09 am, Sat, 11 November 23