IND vs SL: ಭಾರತ- ಲಂಕಾ ವಿಶ್ವಕಪ್ ಪಂದ್ಯ; ವಾಂಖೆಡೆ ಪಿಚ್ ಯಾರಿಗೆ ಸಹಕಾರಿ? ಪಂದ್ಯಕ್ಕಿದೆಯಾ ಮಳೆ ಕಾಟ?

IND vs SL, Wankhede Stadium Pitch Report: ಭಾರತ ಮತ್ತು ಶ್ರೀಲಂಕಾ ನಡುವೆ ಏಕದಿನ ವಿಶ್ವಕಪ್‌ನ 33ನೇ ಪಂದ್ಯ ನಡೆಯುತ್ತಿದೆ. ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ಎರಡೂ ತಂಡಗಳು ಮುಖಾಮುಖಿಯಾಗಲಿವೆ. ಇದಕ್ಕೂ ಮುನ್ನ 2011ರ ವಿಶ್ವಕಪ್ ಸುತ್ತಿನ ಅಂತಿಮ ಪಂದ್ಯದಲ್ಲಿ ಉಭಯ ತಂಡಗಳು ಇದೇ ಮೈದಾನದಲ್ಲಿ ಮುಖಾಮುಖಿಯಾಗಿದ್ದವು.

IND vs SL: ಭಾರತ- ಲಂಕಾ ವಿಶ್ವಕಪ್ ಪಂದ್ಯ; ವಾಂಖೆಡೆ ಪಿಚ್ ಯಾರಿಗೆ ಸಹಕಾರಿ? ಪಂದ್ಯಕ್ಕಿದೆಯಾ ಮಳೆ ಕಾಟ?
ಭಾರತ- ಶ್ರೀಲಂಕಾ
Follow us
ಪೃಥ್ವಿಶಂಕರ
|

Updated on:Nov 01, 2023 | 4:33 PM

ಭಾರತ ಮತ್ತು ಶ್ರೀಲಂಕಾ (India vs Sri Lanka) ನಡುವೆ ಏಕದಿನ ವಿಶ್ವಕಪ್‌ನ (ICC World Cup 2023) 33ನೇ ಪಂದ್ಯ ನಾಳೆ ನಡೆಯಲ್ಲಿದೆ. ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ (Wankhede Stadium) ಎರಡೂ ತಂಡಗಳು ಮುಖಾಮುಖಿಯಾಗಲಿವೆ. ಇದಕ್ಕೂ ಮುನ್ನ 2011ರ ವಿಶ್ವಕಪ್ ಸುತ್ತಿನ ಅಂತಿಮ ಪಂದ್ಯದಲ್ಲಿ ಉಭಯ ತಂಡಗಳು ಇದೇ ಮೈದಾನದಲ್ಲಿ ಮುಖಾಮುಖಿಯಾಗಿದ್ದವು. ಆಗ ಭಾರತ ಶ್ರೀಲಂಕಾವನ್ನು ಸೋಲಿಸಿ ಪ್ರಶಸ್ತಿ ಗೆದ್ದಿತ್ತು. ಇತ್ತೀಚೆಗೆ ನಡೆದ ಏಷ್ಯಾಕಪ್ ಫೈನಲ್‌ನಲ್ಲಿ ಭಾರತ 10 ವಿಕೆಟ್‌ಗಳಿಂದ ಶ್ರೀಲಂಕಾವನ್ನು ಸೋಲಿಸಿತ್ತು. ಹೀಗಾಗಿ  ಹಳೆ ಸೋಲಿಗೆ ಸೇಡು ತೀರಿಸಿಕೊಳ್ಳುವ ತವಕದಲ್ಲಿ ಲಂಕಾ ಪಡೆ ಇದ್ದರೆ, ಗೆಲುವಿನ ಸರಣಿಯನ್ನು ಮುಂದುವರೆಸಲು ಟೀಂ ಇಂಡಿಯಾ ಎದುರು ನೋಡುತ್ತಿದೆ. ಇನ್ನು ವಿಶ್ವಕಪ್ ಪಾಯಿಂಟ್ ಪಟ್ಟಿಯಲ್ಲಿ ಭಾರತ ಮೊದಲ ಸ್ಥಾನದಲ್ಲಿದ್ದರೆ, ಶ್ರೀಲಂಕಾ ಏಳನೇ ಸ್ಥಾನದಲ್ಲಿದೆ. ಹೀಗಾಗಿ ಸೆಮಿಫೈನಲ್ ರೇಸ್​ನಲ್ಲಿ ಉಳಿಯಬೇಕೆಂದರೆ ಶ್ರೀಲಂಕಾ ತಂಡ ಭಾರತದ ವಿರುದ್ಧ ಗೆಲ್ಲಲೇಬೇಕಿದೆ. ಆದರೆ ಬಲಿಷ್ಠ ಭಾರತದೆದುರು ಆಟಗಾರರ ಇಂಜುರಿಯಿಂದ ಬಳಲುತ್ತಿರುವ ಶ್ರೀಲಂಕಾದ ಆಟ ನಡೆಯುತ್ತಾ ಎಂಬುದನ್ನು ಕಾದುನೋಡಬೇಕಿದೆ.

ಮುಖಾಮುಖಿ ದಾಖಲೆ

ಭಾರತ ಮತ್ತು ಶ್ರೀಲಂಕಾ ನಡುವೆ ಇದುವರೆಗೆ 167 ಏಕದಿನ ಪಂದ್ಯಗಳು ನಡೆದಿವೆ. ಭಾರತ 98 ಪಂದ್ಯಗಳನ್ನು ಗೆದ್ದಿದ್ದರೆ, ಶ್ರೀಲಂಕಾ 57 ಪಂದ್ಯಗಳನ್ನು ಗೆದ್ದಿದೆ. ಈ ಎರಡೂ ತಂಡಗಳು ಏಕದಿನ ವಿಶ್ವಕಪ್‌ನಲ್ಲಿ 8 ಬಾರಿ ಮುಖಾಮುಖಿಯಾಗಿವೆ. ಇದರಲ್ಲಿ ಭಾರತ 4 ಬಾರಿ ಗೆದ್ದಿದ್ದರೆ, ಶ್ರೀಲಂಕಾ 4 ಪಂದ್ಯಗಳನ್ನು ಗೆದ್ದು ಬೀಗಿದೆ.

ಭಾರತ- ಲಂಕಾ ಫೈಟ್; ವಾಂಖೆಡೆ ಮೈದಾನದಲ್ಲಿ ಮರುಕಳಿಸುತ್ತಾ ಇತಿಹಾಸ? ಪಂದ್ಯದ ಬಗ್ಗೆ ಪೂರ್ಣ ಮಾಹಿತಿ ಇಲ್ಲಿದೆ

ಪಿಚ್ ವರದಿ

ಮುಂಬೈನ ವಾಂಖೆಡೆ ಸ್ಟೇಡಿಯಂ ಬ್ಯಾಟಿಂಗ್‌ಗೆ ಯೋಗ್ಯವಾಗಿದೆ. ಸ್ವಲ್ಪ ಮಟ್ಟಿಗೆ ವೇಗದ ಬೌಲರ್‌ಗಳು ಸಹಾಯ ಪಡೆಯಬಹುದು. ಆದ್ದರಿಂದ ಟಾಸ್ ಗೆದ್ದ ನಂತರ ನಾಯಕ ರನ್ ಚೇಸ್ ಮಾಡಲು ಆದ್ಯತೆ ನೀಡುತ್ತಾರೆ. ಈ ಟೂರ್ನಿಯಲ್ಲಿ ಇಲ್ಲಿ ಆಡಿದ ಎರಡು ಪಂದ್ಯಗಳಲ್ಲಿ ಮೊದಲು ಬ್ಯಾಟ್ ಮಾಡಿದ ದಕ್ಷಿಣ ಆಫ್ರಿಕಾ ಒಟ್ಟು 399 ಮತ್ತು 382 ರನ್ ಕಲೆಹಾಕಿತ್ತು. ಆದ್ದರಿಂದ ಮುಂಬರುವ ಭಾರತ ಮತ್ತು ಶ್ರೀಲಂಕಾ ಪಂದ್ಯದಲ್ಲಿ ಟಾಸ್ ದೊಡ್ಡ ಪಾತ್ರವನ್ನು ವಹಿಸುತ್ತದೆ.

ದೆಹಲಿಯ ಹವಾಮಾನ ವರದಿ

ವೆದರ್‌. ಕಾಮ್ ಒದಗಿಸಿದ ಹವಾಮಾನ ಮುನ್ಸೂಚನೆಯ ಪ್ರಕಾರ, ಭಾನುವಾರದಂದು ಮುಂಬೈನಲ್ಲಿ ಗರಿಷ್ಠ ತಾಪಮಾನ 32 ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಠ 15 ಡಿಗ್ರಿ ಸೆಲ್ಸಿಯಸ್ ಇರಲ್ಲಿದೆ. ಇಡೀ ಪಂದ್ಯದ ವೇಳೆ ಮಳೆಯಾಗುವ ಸಾಧ್ಯತೆ ಇಲ್ಲ. ಹೀಗಾಗಿ ಅಭಿಮಾನಿಗಳು ಯಾವುದೇ ಆತಂಕವಿಲ್ಲದೆ ಪಂದ್ಯವನ್ನು ವೀಕ್ಷಿಸಬಹುದಾಗಿದೆ.

ಉಭಯ ತಂಡಗಳು

ಭಾರತ ಸಂಭಾವ್ಯ ತಂಡ: ರೋಹಿತ್ ಶರ್ಮಾ (ನಾಯಕ), ಶುಭ್​ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್ / ಇಶಾನ್ ಕಿಶನ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ಸೂರ್ಯಕುಮಾರ್ ಯಾದವ್, ರವೀಂದ್ರ ಜಡೇಜಾ, ಕುಲ್ದೀಪ್ ಯಾದವ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್.

ಶ್ರೀಲಂಕಾ ಸಂಭಾವ್ಯ ತಂಡ: ಪಾತುಮ್ ನಿಸಂಕ, ದಿಮುತ್ ಕರುಣಾರತ್ನೆ, ಕುಸಾಲ್ ಮೆಂಡಿಸ್ (ನಾಯಕ/ವಿಕೆಟ್ ಕೀಪರ್), ಸದಿರ ಸಮರವಿಕ್ರಮ, ಚರಿತ್ ಅಸಲಂಕಾ, ಧನಂಜಯ ಡಿ ಸಿಲ್ವಾ, ಏಂಜೆಲೊ ಮ್ಯಾಥ್ಯೂಸ್, ಮಹೇಶ್ ತೀಕ್ಷಣ, ಕಸೂನ್ ರಜಿತ, ದುಷ್ಮಂತ ಚಮೀರ, ದಿಲ್ಶನ್ ಮಧುಶಂಕ.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 4:29 pm, Wed, 1 November 23