ENG vs SL: ಬೆಂಗಳೂರಿನಲ್ಲಿ ಇಂದು 2ನೇ ವಿಶ್ವಕಪ್ ಪಂದ್ಯ; ಬಲಿಷ್ಠ ಇಂಗ್ಲೆಂಡ್ಗೆ ಲಂಕಾ ಸವಾಲು
ENG vs SL, ICC World Cup 2023: 25ನೇ ಏಕದಿನ ವಿಶ್ವಕಪ್ ಪಂದ್ಯ ಇಂಗ್ಲೆಂಡ್ ಮತ್ತು ಶ್ರೀಲಂಕಾ ನಡುವೆ ನಡೆಯಲಿದೆ.ಈ ಪಂದ್ಯ ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿದೆ. ಟೂರ್ನಿಯಲ್ಲಿ ಇನ್ನೂ ಜೀವಂತವಾಗಿರಬೇಕೆಂದರೆ ಇಂಗ್ಲೆಂಡ್ ಮತ್ತು ಶ್ರೀಲಂಕಾ ಎರಡೂ ತಂಡಗಳಿಗೆ ಈ ಪಂದ್ಯದಲ್ಲಿ ಗೆಲುವು ನಿರ್ಣಾಯಕವಾಗಿದೆ.
25ನೇ ಏಕದಿನ ವಿಶ್ವಕಪ್ (ICC World Cup 2023) ಪಂದ್ಯ ಇಂಗ್ಲೆಂಡ್ ಮತ್ತು ಶ್ರೀಲಂಕಾ (England vs Sri Lanka) ನಡುವೆ ನಡೆಯಲಿದೆ.ಈ ಪಂದ್ಯ ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ (M Chinnaswamy Stadium in Bangalore) ನಡೆಯಲಿದೆ. ಟೂರ್ನಿಯಲ್ಲಿ ಇನ್ನೂ ಜೀವಂತವಾಗಿರಬೇಕೆಂದರೆ ಇಂಗ್ಲೆಂಡ್ ಮತ್ತು ಶ್ರೀಲಂಕಾ ಎರಡೂ ತಂಡಗಳಿಗೆ ಈ ಪಂದ್ಯದಲ್ಲಿ ಗೆಲುವು ನಿರ್ಣಾಯಕವಾಗಿದೆ. ಹೀಗಾಗಿ ಎರಡೂ ತಂಡಗಳು ಗೆಲುವಿಗಾಗಿ ಭರ್ಜರಿ ಹೋರಾಟ ನಡೆಸಲಿವೆ ಎಂದು ನಿರೀಕ್ಷಿಸಲಾಗಿದೆ. ಶ್ರೀಲಂಕಾ 2 ಅಂಕಗಳೊಂದಿಗೆ ಎಂಟನೇ ಸ್ಥಾನದಲ್ಲಿದ್ದರೆ, ಇಂಗ್ಲೆಂಡ್ ಕೂಡ 2 ಅಂಕಗಳೊಂದಿಗೆ ಒಂಬತ್ತನೇ ಸ್ಥಾನದಲ್ಲಿದೆ. ವಿಶ್ವಕಪ್‌ನಲ್ಲಿ ಉಭಯ ತಂಡಗಳು 11 ಬಾರಿ ಮುಖಾಮುಖಿಯಾಗಿವೆ. ಇದರಲ್ಲಿ ಇಂಗ್ಲೆಂಡ್ 6 ಪಂದ್ಯಗಳನ್ನು ಗೆದ್ದಿದ್ದರೆ, ಶ್ರೀಲಂಕಾ 5 ಪಂದ್ಯಗಳನ್ನು ಗೆದ್ದಿದೆ. ಎರಡೂ ತಂಡಗಳು ಏಕದಿನ ಕ್ರಿಕೆಟ್‌ನಲ್ಲಿ 78 ಬಾರಿ ಮುಖಾಮುಖಿಯಾಗಿವೆ. ಇದರಲ್ಲಿ ಇಂಗ್ಲೆಂಡ್ 38 ಬಾರಿ ಗೆದ್ದಿದ್ದರೆ, ಶ್ರೀಲಂಕಾ 36 ಬಾರಿ ಗೆದ್ದಿದೆ. ಹೀಗಾಗಿ ಈ ಪಂದ್ಯದಲ್ಲಿ ಯಾವ ತಂಡ ಮೇಲುಗೈ ಸಾಧಿಸಲಿದೆ ಎಂದು ಹೇಳುವುದು ಕಷ್ಟ.
ಉಭಯ ತಂಡಗಳಿಗೂ ಗೆಲುವು ಅನಿವಾರ್ಯ
ಮೇಲೆ ಹೇಳಿದಂತೆ ಜೋಸ್ ಬಟ್ಲರ್ ನೇತೃತ್ವದ ಹಾಲಿ ಚಾಂಪಿಯನ್ ಇಂಗ್ಲೆಂಡ್ ಆಡಿರುವ ನಾಲ್ಕು ಪಂದ್ಯಗಳಲ್ಲಿ ಮೂರು ಸೋಲುಗಳೊಂದಿಗೆ ಈ ಪಂದ್ಯಾವಳಿಯಲ್ಲಿ ಸಂಕಷ್ಟದ ಸ್ಥಿತಿಯಲ್ಲಿದೆ. ಈ ಟೂರ್ನಿಯಲ್ಲಿ ಇಂಗ್ಲೆಂಡ್ ಇದುವರೆಗೆ, ನ್ಯೂಜಿಲೆಂಡ್, ಅಫ್ಘಾನಿಸ್ತಾನ ಮತ್ತು ದಕ್ಷಿಣ ಆಫ್ರಿಕಾ ವಿರುದ್ಧ ಸೋತಿದ್ದು, ಬಾಂಗ್ಲಾದೇಶದ ವಿರುದ್ಧ ಮಾತ್ರ ಗೆಲುವು ಸಾಧಿಸಿದೆ. ಹೀಗಾಗಿ ಇಂಗ್ಲೆಂಡ್ನ ಸೆಮಿಫೈನಲ್ ಹಾದಿ ಸಾಕಷ್ಟು ದುರ್ಗಮವಾಗಿದೆ. ಒಂದು ವೇಳೆ ಇಂಗ್ಲೆಂಡ್ ಸೆಮಿಫೈನಲ್ಗೇರಬೇಕೆಂದರೆ ತನ್ನ ಉಳಿದ ಎಲ್ಲಾ ಪಂದ್ಯಗಳನ್ನು ಗೆಲ್ಲಬೇಕಿದೆ.
ವಿಶ್ವಕಪ್ ಮುಗಿದ ಬಳಿಕ ನಾಯಕತ್ವದಿಂದ ಬಾಬರ್ ವಜಾ! ಹೊಸ ನಾಯಕ ಯಾರು ಗೊತ್ತಾ?
ಮತ್ತೊಂದೆಡೆ, ಶ್ರೀಲಂಕಾ ಕೂಡ ಇಂಗ್ಲೆಂಡ್‌ನಂತೆಯೇ ಇದೇ ರೀತಿಯ ಪರಿಸ್ಥಿತಿಯನ್ನು ಎದುರಿಸುತ್ತಿದೆ. ದಕ್ಷಿಣ ಆಫ್ರಿಕಾ, ಪಾಕಿಸ್ತಾನ ಮತ್ತು ಆಸ್ಟ್ರೇಲಿಯಾ ವಿರುದ್ಧ ಸತತ ಮೂರು ಸೋಲಿನ ನಂತರ ಶ್ರೀಲಂಕಾ ತನ್ನ ಕೊನೆಯ ಪಂದ್ಯದಲ್ಲಿ ನೆದರ್ಲೆಂಡ್ಸ್ ವಿರುದ್ಧ ಏಕೈಕ ಗೆಲುವು ಸಾಧಿಸಿದೆ. ಹೀಗಾಗಿ ಲಂಕಾ ಕೂಡ ಪಾಯಿಂಟ್ ಪಟ್ಟಿಯಲ್ಲಿ ಎಂಟನೇ ಸ್ಥಾನದಲ್ಲಿದೆ. ಆದರೆ ಉತ್ತಮ ನಿವ್ವಳ ರನ್ ರೇಟ್‌ನಿಂದಾಗಿ ಇಂಗ್ಲೆಂಡ್‌ಗಿಂತ ಕೇವಲ ಒಂದು ಸ್ಥಾನ ಮೇಲಿದೆ.
ಪಿಚ್ ವರದಿ
ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದ ಪಿಚ್ ಬ್ಯಾಟಿಂಗ್ಗೆ ಪೂರಕವಾಗಿದೆ. ಕಳೆದ ಪಂದ್ಯದಲ್ಲಿ ಆಸ್ಟ್ರೇಲಿಯಾ ಈ ಮೈದಾನದಲ್ಲಿ 370 ರನ್ ಕಲೆಹಾಕಿತ್ತು. ಹಾಗಾಗಿ ಈ ಮೈದಾನದಲ್ಲಿ ಇಂಗ್ಲೆಂಡ್ ಆಟಗಾರರೇ ಹೆಚ್ಚು ಮೇಲುಗೈ ಸಾಧಿಸುವ ಸಾಧ್ಯತೆಗಳಿವೆ ಏಕೆಂದರೆ ಲಂಕಾ ಆಟಗಾರರಿಗೆ ಹೋಲಿಸಿದರೆ, ಇಂಗ್ಲೆಂಡ್ ಆಟಗಾರರು ಹೆಚ್ಚಾಗಿ ಈ ಮೈದಾನದಲ್ಲಿ ಐಪಿಎಲ್ ಪಂದ್ಯಗಳನ್ನು ಆಡಿದ್ದಾರೆ. ಹೀಗಾಗಿ ಐಪಿಎಲ್ ಅನುಭವ ಆಂಗ್ಲರಿಗೆ ನೆರವಾಗುವ ಸಾದ್ಯತೆಗಳಿವೆ. ಇನ್ನು ಈ ಮೈದಾನದಲ್ಲಿ ಎರಡನೇ ಬಾರಿಗೆ ಬ್ಯಾಟಿಂಗ್ ಮಾಡಿದ ತಂಡ ಗರಿಷ್ಠ ಪಂದ್ಯಗಳನ್ನು ಗೆದ್ದಿದೆ. ಹೀಗಾಗಿ ಟಾಸ್ ಗೆದ್ದ ತಂಡ ಮೊದಲು ಬೌಲಿಂಗ್ ಮಾಡಲು ಆದ್ಯತೆ ನೀಡಲಿದೆ.
ಉಭಯ ಸಂಭಾವ್ಯ ತಂಡಗಳು
ಇಂಗ್ಲೆಂಡ್ ಸಂಭಾವ್ಯ ತಂಡ: ಜಾನಿ ಬೈರ್‌ಸ್ಟೋವ್, ಡೇವಿಡ್ ಮಲನ್, ಜೋ ರೂಟ್, ಬೆನ್ ಸ್ಟೋಕ್ಸ್, ಹ್ಯಾರಿ ಬ್ರೂಕ್, ಜೋಸ್ ಬಟ್ಲರ್ (ನಾಯಕ ಮತ್ತು ವಿಕೆಟ್ ಕೀಪರ್), ಸ್ಯಾಮ್ ಕರನ್, ಡೇವಿಡ್ ವಿಲ್ಲಿ, ಆದಿಲ್ ರಶೀದ್, ಅಟ್ಕಿನ್ಸನ್, ಮಾರ್ಕ್ ವುಡ್.
ಶ್ರೀಲಂಕಾ ಸಂಭಾವ್ಯ ತಂಡ: ಪಾತುಮ್ ನಿಸಂಕ, ಕುಸಾಲ್ ಪೆರೇರಾ, ಕುಸಾಲ್ ಮೆಂಡಿಸ್ (ನಾಯಕ ಮತ್ತು ವಿಕೆಟ್ ಕೀಪರ್), ಚರಿತ್ ಅಸ್ಲಂಕಾ, ಸದಿರಾ ಸಮರವಿಕ್ರಮ, ಧನಂಜಯ್ ಡಿ ಸಿಲ್ವಾ, ದುಶನ್ ಹೇಮಂತ, ಮಹೇಶ್ ತಿಕ್ಷಣ, ಚಾಮಿಕಾ ಕರುಣಾರತ್ನ, ಕಸೂನ್ ರಜಿತಾ, ದಿಲ್ಶನ್ ಮಧುಶಂಕ.
ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ