ಬೆಂಗಳೂರಿನಲ್ಲಿ ತನ್ನ 29ನೇ ಜನ್ಮದಿನವನ್ನು ಆಚರಿಸಿಕೊಂಡ ಪಾಕ್ ನಾಯಕ ಬಾಬರ್ ಆಝಂ; ವಿಡಿಯೋ ನೋಡಿ

Babar Azam Birthday: ಹಲವು ವರ್ಷಗಳ ಬಳಿಕ ಕರುನಾಡಿಗೆ ಕಾಲಿಟ್ಟಿರುವ ಬಾಬರ್ ಪಡೆಯನ್ನು ಆತ್ಮೀಯವಾಗಿ ಸ್ವಾಗತಿಸಲಾಗಿದೆ. ಇದೇ ವೇಳೆ 29ನೇ ವಸಂತಕ್ಕೆ ಕಾಲಿಟ್ಟ ಪಾಕಿಸ್ತಾನ ಕ್ರಿಕೆಟ್ ತಂಡದ ನಾಯಕ ಬಾಬರ್ ಆಝಂ ಅವರ ಜನ್ಮದಿನವನ್ನು ಇಡೀ ತಂಡ ಒಟ್ಟಾಗಿ ಕೇಕ್ ಕಟ್ ಮಾಡಿ ಸಂಭ್ರಮದಿಂದ ಆಚರಿಸಿಕೊಂಡಿದೆ.

ಬೆಂಗಳೂರಿನಲ್ಲಿ ತನ್ನ 29ನೇ ಜನ್ಮದಿನವನ್ನು ಆಚರಿಸಿಕೊಂಡ ಪಾಕ್ ನಾಯಕ ಬಾಬರ್ ಆಝಂ; ವಿಡಿಯೋ ನೋಡಿ
ಬಾಬರ್ ಆಝಂ
Follow us
TV9 Web
| Updated By: ಪೃಥ್ವಿಶಂಕರ

Updated on:Oct 16, 2023 | 6:21 AM

ಅಹಮದಾಬಾದ್‌ನಲ್ಲಿ ನಡೆದ ಟೀಂ ಇಂಡಿಯಾ ವಿರುದ್ಧದ ಮೂರನೇ ವಿಶ್ವಕಪ್ ಪಂದ್ಯವನ್ನು ಸೋಲಿನೊಂದಿಗೆ ಆಡು ಮುಗಿಸಿರುವ ಪಾಕಿಸ್ತಾನ (India vs Pakistan) ತಂಡ ತನ್ನ ಮುಂದಿನ ಪಂದ್ಯಕ್ಕಾಗಿ ಬೆಂಗಳೂರಿಗೆ (Bengaluru) ಬಂದಿಳಿದಿದೆ. ಹಲವು ವರ್ಷಗಳ ಬಳಿಕ ಕರುನಾಡಿಗೆ ಕಾಲಿಟ್ಟಿರುವ ಬಾಬರ್ ಪಡೆಯನ್ನು ಆತ್ಮೀಯವಾಗಿ ಸ್ವಾಗತಿಸಲಾಗಿದೆ. ಇದೇ ವೇಳೆ 29ನೇ ವಸಂತಕ್ಕೆ ಕಾಲಿಟ್ಟ ಪಾಕಿಸ್ತಾನ ಕ್ರಿಕೆಟ್ ತಂಡದ ನಾಯಕ ಬಾಬರ್ ಆಝಂ ( Babar Azam) ಅವರ ಜನ್ಮದಿನವನ್ನು ಇಡೀ ತಂಡ ಒಟ್ಟಾಗಿ ಕೇಕ್ ಕಟ್ ಮಾಡಿ ಸಂಭ್ರಮದಿಂದ ಆಚರಿಸಿಕೊಂಡಿದೆ. ಈ ಸಂಭ್ರಮದ ವಿಡಿಯೋವನ್ನು ಇದೀಗ ಪಿಸಿಬಿ ತನ್ನ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ಹಂಚಿಕೊಂಡಿದೆ.

ಬೆಂಗಳೂರಿನಲ್ಲಿ ಆಸೀಸ್ ಎದುರಾಳಿ

ಪ್ರಸ್ತುತ ವಿಶ್ವಕಪ್​ನಲ್ಲಿ ಮೂರು ಪಂದ್ಯಗಳನ್ನಾಡಿರುವ ಪಾಕಿಸ್ತಾನ ತಂಡ ಎರಡು ಗೆಲುವು ಹಾಗೂ ಒಂದು ಸೋಲಿನೊಂದಿಗೆ ಪಂದ್ಯಾವಳಿಯಲ್ಲಿ ಸಿಹಿ- ಕಹಿ ಅನುಭವ ಪಡೆದುಕೊಂಡಿದೆ. ಅದರಲ್ಲೂ ಸಾಂಪ್ರದಾಯಿಕ ಎದುರಾಳಿ ಭಾರತದ ವಿರುದ್ಧ ಪಾಕಿಸ್ತಾನ ಹೀನಾಯ ಸೋಲು ಅನುಭವಿಸಿದ್ದು, ತಂಡಕ್ಕೆ ಸಾಕಷ್ಟು ಮುಜುಗರ ತಂದಿದೆ. ಹೀಗಾಗಿ ಮತ್ತೆ ಗೆಲುವಿನ ಲಯಕ್ಕೆ ಮರಳುವ ನಿರೀಕ್ಷೆಯಲ್ಲಿರುವ ಬಾಬರ್ ಪಡೆ, ತನ್ನ ಮುಂದಿನ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡವನ್ನು ಬೆಂಗಳೂರಿನಲ್ಲಿ ಎದುರಿಸಲಿದೆ. ಈ ಪಂದ್ಯ ಅಕ್ಟೋಬರ್ 20 ರಂದು ಬೆಂಗಳೂರಿನ ಎಂ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಲ್ಲಿದೆ.

ಏಕದಿನ ಮಾದರಿಯಲ್ಲಿ ಅಗ್ರ ಬ್ಯಾಟ್ಸ್‌ಮನ್‌

15 ಅಕ್ಟೋಬರ್ 1994 ರಂದು ಜನಿಸಿದ ಬಾಬರ್ ಆಝಂ 29 ವರ್ಷಗಳನ್ನು ಪೂರೈಸಿದ್ದಾರೆ. ಲಾಹೋರ್‌ನ ಪಂಜಾಬಿ ಮುಸ್ಲಿಂ ಕುಟುಂಬದಲ್ಲಿ ಜನಿಸಿದ ಬಾಬರ್, 2015 ರಲ್ಲಿ ಅಂತರರಾಷ್ಟ್ರೀಯ ಕ್ರಿಕೆಟ್‌ಗೆ ಪದಾರ್ಪಣೆ ಮಾಡಿದರು. ತಮ್ಮ ಆಟದ ಮೂಲಕ ಏಕದಿನ ಮಾದರಿಯಲ್ಲಿ ಅಗ್ರ ಬ್ಯಾಟ್ಸ್‌ಮನ್‌ ಎನಿಸಿಕೊಂಡಿರುವ ಬಾಬರ್, ಪ್ರಸ್ತುತ ಎಲ್ಲಾ ಮೂರು ಸ್ವರೂಪಗಳಲ್ಲಿ ಪಾಕಿಸ್ತಾನ ಕ್ರಿಕೆಟ್ ತಂಡವನ್ನು ಮುನ್ನಡೆಸುತ್ತಿದ್ದಾರೆ.

ನಾಯಕನಾಗಿ ಭಾರತದಲ್ಲಿ ದಾಖಲೆ ಬರೆದ ಬಾಬರ್ ಆಝಂ

ಬಾಬರ್ ವೃತ್ತಿಬದುಕು

ಇನ್ನು ಬಾಬರ್ ಆಝಂ ಅವರ ಕ್ರಿಕೆಟ್ ಬದುಕನ್ನು ನೋಡುವುದಾದರೆ.. ಇದುವರೆಗೆ ಬಾಬರ್ ಪಾಕ್ ತಂಡದ ಪರ 49 ಟೆಸ್ಟ್, 111 ಏಕದಿನ ಮತ್ತು 104 ಟಿ20 ಅಂತರಾಷ್ಟ್ರೀಯ ಪಂದ್ಯಗಳನ್ನು ಆಡಿದ್ದಾರೆ. ಇದರಲ್ಲಿ ಅವರು ಕ್ರಮವಾಗಿ 3772, 5474 ಮತ್ತು 3485 ರನ್ ಕಲೆ ಹಾಕಿದ್ದಾರೆ. ಬಾಬರ್ ಎಲ್ಲಾ ಮೂರು ಮಾದರಿಗಳಲ್ಲಿ 31 ಶತಕಗಳನ್ನು ಸಿಡಿಸಿದ್ದಾರೆ.

ವಿಶ್ವಕಪ್‌ಗಾಗಿ ಪಾಕಿಸ್ತಾನ ತಂಡ: ಅಬ್ದುಲ್ಲಾ ಶಫೀಕ್, ಬಾಬರ್ ಆಝಂ (ನಾಯಕ), ಫಖರ್ ಜಮಾನ್, ಇಮಾಮ್ ಉಲ್ ಹಕ್, ಸೌದ್ ಶಕೀಲ್, ಅಘಾ ಸಲ್ಮಾನ್, ಇಫ್ತಿಕರ್ ಅಹ್ಮದ್, ಮೊಹಮ್ಮದ್ ನವಾಜ್, ಶಾದಾಬ್ ಖಾನ್, ಮೊಹಮ್ಮದ್ ಹ್ಯಾರಿಸ್, ಮೊಹಮ್ಮದ್ ರಿಜ್ವಾನ್, ಅಬ್ರಾರ್ ಅಹ್ಮದ್, ಹಾರಿಸ್ ರೌಫ್, ಹಸನ್ ಅಲಿ, ಮೊಹಮ್ಮದ್ ವಾಸಿಂ, ಶಾಹೀನ್ ಅಫ್ರಿದಿ, ಉಸಾಮಾ ಜೀರ್, ಜಮಾನ್ ಖಾನ್.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 6:15 am, Mon, 16 October 23

ಈ ಕೋತಿ ಚಪಾತಿಯನ್ನೂ ಮಾಡುತ್ತೆ, ಪಾತ್ರೆಯನ್ನೂ ತೊಳೆಯುತ್ತೆ!
ಈ ಕೋತಿ ಚಪಾತಿಯನ್ನೂ ಮಾಡುತ್ತೆ, ಪಾತ್ರೆಯನ್ನೂ ತೊಳೆಯುತ್ತೆ!
ರಜೆಗೆ ಮನೆಗೆ ಹೊರಟಿದ್ದ ಸೈನಿಕ ಕಾಲು ಜಾರಿ ರೈಲಿನಡಿ ಬಿದ್ದು ಸಾವು
ರಜೆಗೆ ಮನೆಗೆ ಹೊರಟಿದ್ದ ಸೈನಿಕ ಕಾಲು ಜಾರಿ ರೈಲಿನಡಿ ಬಿದ್ದು ಸಾವು
ಹೊಸ ವರ್ಷದಂದು ಬೆಂಗಳೂರಿನ ಅಧಿಕಾರಿಗಳಿಗೆ ರಜೆ ಇಲ್ಲ: ಡಿಕೆ ಶಿವಕುಮಾರ್
ಹೊಸ ವರ್ಷದಂದು ಬೆಂಗಳೂರಿನ ಅಧಿಕಾರಿಗಳಿಗೆ ರಜೆ ಇಲ್ಲ: ಡಿಕೆ ಶಿವಕುಮಾರ್
ಈ ಬಾರಿ ಬಿಗ್ ಬಾಸ್ ಟ್ರೋಫಿ ಯಾರಿಗೆ? ಭವಿಷ್ಯ ನುಡಿದ ಐಶ್ವರ್ಯಾ
ಈ ಬಾರಿ ಬಿಗ್ ಬಾಸ್ ಟ್ರೋಫಿ ಯಾರಿಗೆ? ಭವಿಷ್ಯ ನುಡಿದ ಐಶ್ವರ್ಯಾ
ದೋಸೆ ಜೊತೆ ಅವರೇ ಕಾಳಿನ ಹಲವಾರು ತಿಂಡಿಗಳು ಮೇಳದಲ್ಲಿ ಲಭ್ಯ
ದೋಸೆ ಜೊತೆ ಅವರೇ ಕಾಳಿನ ಹಲವಾರು ತಿಂಡಿಗಳು ಮೇಳದಲ್ಲಿ ಲಭ್ಯ
ಹೊಲಗಳಿಗೆ ಕುಟುಂಬವಾಗಿ ತೆರಳಿ ಒಟ್ಟಿಗೆ ಕೂತು ಉಣ್ಣುವುದೇ ಒಂದು ಸಂಭ್ರಮ!
ಹೊಲಗಳಿಗೆ ಕುಟುಂಬವಾಗಿ ತೆರಳಿ ಒಟ್ಟಿಗೆ ಕೂತು ಉಣ್ಣುವುದೇ ಒಂದು ಸಂಭ್ರಮ!
ಬೆಂಗಳೂರು ನಗರದಲ್ಲಿ ಒತ್ತುವರಿ ಮಾಡಿಕೊಳ್ಳುವ ಕಾಯಕ ಎಗ್ಗಿಲ್ಲದೆ ಸಾಗುತ್ತಿದೆ
ಬೆಂಗಳೂರು ನಗರದಲ್ಲಿ ಒತ್ತುವರಿ ಮಾಡಿಕೊಳ್ಳುವ ಕಾಯಕ ಎಗ್ಗಿಲ್ಲದೆ ಸಾಗುತ್ತಿದೆ
ಹಿಮಪಾತದಿಂದ ಮನಾಲಿಯಲ್ಲಿ ಟ್ರಾಫಿಕ್ ಜಾಮ್; ಹಿಮದಲ್ಲೇ ಮುಚ್ಚಿಹೋದ ಕಾರುಗಳು
ಹಿಮಪಾತದಿಂದ ಮನಾಲಿಯಲ್ಲಿ ಟ್ರಾಫಿಕ್ ಜಾಮ್; ಹಿಮದಲ್ಲೇ ಮುಚ್ಚಿಹೋದ ಕಾರುಗಳು
ಮುನಿರತ್ನಗೆ ಒಂದು ನೋಟೀಸ್ ನೀಡುವ ಯೋಗ್ಯತೆ ಬಿಜೆಪಿಗಿಲ್ಲ: ಪ್ರಿಯಾಂಕ್ ಖರ್ಗೆ
ಮುನಿರತ್ನಗೆ ಒಂದು ನೋಟೀಸ್ ನೀಡುವ ಯೋಗ್ಯತೆ ಬಿಜೆಪಿಗಿಲ್ಲ: ಪ್ರಿಯಾಂಕ್ ಖರ್ಗೆ
ಮಹಿಳೆಯರ ವಿಷಯದಲ್ಲಿ ಅವಾಚ್ಯ ಪದಬಳಕೆ ಸಲ್ಲದು: ಬಸವರಾಜ ಹೊರಟ್ಟಿ, ಸಭಾಪತಿ
ಮಹಿಳೆಯರ ವಿಷಯದಲ್ಲಿ ಅವಾಚ್ಯ ಪದಬಳಕೆ ಸಲ್ಲದು: ಬಸವರಾಜ ಹೊರಟ್ಟಿ, ಸಭಾಪತಿ