ಬೆಂಗಳೂರಿನಲ್ಲಿ ಬಾಂಬ್ ಸ್ಫೋಟ? ಸುಳ್ಳು ವದಂತಿ ಹಬ್ಬಿಸಿದ ಪಾಕಿಸ್ತಾನದ ಮಾಧ್ಯಮಗಳು

Cylinders blast in Bangalore: ಪಾಕ್ ತಂಡ ಕೂಡ ಕೆಲವು ದಿನಗಳ ಹಿಂದೆಯೇ ಬೆಂಗಳೂರಿಗೆ ಆಗಮನಿಸಿದ್ದು, ಅಭ್ಯಾಸದಲ್ಲಿ ನಿರತವಾಗಿದೆ. ಇದೀಗ ಪಂದ್ಯಕ್ಕೂ ಮುನ್ನ ಬೆಂಗಳೂರಿನಲ್ಲಿ ಸ್ಫೋಟ ನಡೆದಿದೆ ಎಂದು ಪಾಕಿಸ್ತಾನದ ಮಾಧ್ಯಮಗಳು ತಪ್ಪು ಮಾಹಿತಿಯನ್ನು ಹರಡಿದ್ದು, ಈ ಘಟನೆ ಇದೀಗ ಟ್ವಿಟರ್‌ನಲ್ಲಿ ಟ್ರೆಂಡ್ ಆಗಿದೆ.

ಬೆಂಗಳೂರಿನಲ್ಲಿ ಬಾಂಬ್ ಸ್ಫೋಟ? ಸುಳ್ಳು ವದಂತಿ ಹಬ್ಬಿಸಿದ ಪಾಕಿಸ್ತಾನದ ಮಾಧ್ಯಮಗಳು
ಪಾಕಿಸ್ತಾನ ತಂಡ
Follow us
ಪೃಥ್ವಿಶಂಕರ
|

Updated on:Oct 19, 2023 | 6:15 PM

ಅಹಮದಾಬಾದ್‌ನಲ್ಲಿ ನಡೆದ ಭಾರತ ಹಾಗೂ ಪಾಕಿಸ್ತಾನ (India vs Pakistan) ನಡುವಿನ ವಿಶ್ವಕಪ್ (ICC World Cup 2023) ಪಂದ್ಯದ ವೇಳೆ ಟೀಂ ಇಂಡಿಯಾ ಅಭಿಮಾನಿಗಳು ಪಾಕ್ ಕ್ರಿಕೆಟಿಗರ ಬಳಿ ಅನುಚಿತ ವರ್ತನೆ ತೋರಿದ್ದರು ಎಂದು ಪಿಸಿಬಿ (PCB), ಐಸಿಸಿಗೆ ದೂರು ಸಲ್ಲಿಸಿದ ಬಳಿಕ ಇದೀಗ ಪಾಕಿಸ್ತಾನದ ಮಾಧ್ಯಮಗಳು ಸುಳ್ಳು ಸುದ್ದಿಯನ್ನು ಬಿತ್ತರಿಸಿ ಪೇಚಿಗೆ ಸಿಲುಕಿವೆ. ವಾಸ್ತವವಾಗಿ ನಿನ್ನೆ ಅಂದರೆ ಅಕ್ಟೋಬರ್ 18 ರಂದು ಬೆಂಗಳೂರಿನ ಕೊರಮಂಗಲದ ಫೋರಂ ಮಾಲ್ ಮುಂಭಾಗದಲ್ಲಿರುವ ಮಾರುತಿ ಕಾರು ಷೋ ರೂಂನ ನಾಲ್ಕನೇ ಮಹಡಿಯಲ್ಲಿ ಅಗ್ನಿ ಅವಘಡ (Fire Accident) ಸಂಭವಿಸಿತ್ತು. ನಾಲ್ಕನೇ ಮಹಡಿಯಲ್ಲಿದ್ದ ಮಡ್ ಪೈಪ್ ಹುಕ್ಕಾ ಕೆಫೆನಲ್ಲಿದ್ದ ಕಟ್ಟಡದಲ್ಲಿದ್ದ 8ರಿಂದ 10 ಸಿಲಿಂಡರ್​ಗಳು ಸ್ಫೋಟಗೊಂಡಿದ್ದವು. ಇದೀಗ ಇದೇ ವಿಡಿಯೋವನ್ನು ಬಳಸಿಕೊಂಡಿರುವ ಪಾಕಿಸ್ತಾನ ಮಾಧ್ಯಮಗಳು, ಪಾಕ್ ಕ್ರಿಕೆಟ್ ತಂಗಿರುವ ಹೋಟೆಲ್ ಬಳಿ ಭಾರಿ ಬಾಂಬ್ ಸ್ಫೋಟ ನಡೆದಿದೆ ಎಂಬ ಸುಳ್ಳು ಸುದ್ದಿಯನ್ನು ಪ್ರಸಾರ ಮಾಡಿವೆ.

ವಾಸ್ತವವಾಗಿ ನಾಳೆ ಅಂದರೆ, ಅಕ್ಟೋಬರ್ 20 ರಂದು ಪಾಕಿಸ್ತಾನ ತಂಡ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆಸ್ಟ್ರೇಲಿಯಾ ತಂಡವನ್ನು ಎದುರಿಸಲಿದೆ. ಈ ಹೈವೋಲ್ಟೇಜ್ ಕದನಕ್ಕಾಗಿ ಉಭಯ ತಂಡಗಳು ಈಗಾಗಲೇ ಬೆಂಗಳೂರಿಗೆ ಬಂದಿಳಿದಿವೆ. ಪಾಕ್ ತಂಡ ಕೂಡ ಕೆಲವು ದಿನಗಳ ಹಿಂದೆಯೇ ಬೆಂಗಳೂರಿಗೆ ಆಗಮನಿಸಿದ್ದು, ಅಭ್ಯಾಸದಲ್ಲಿ ನಿರತವಾಗಿದೆ. ಇದೀಗ ಪಂದ್ಯಕ್ಕೂ ಮುನ್ನ ಬೆಂಗಳೂರಿನಲ್ಲಿ ಸ್ಫೋಟ ನಡೆದಿದೆ ಎಂದು ಪಾಕಿಸ್ತಾನದ ಮಾಧ್ಯಮಗಳು ತಪ್ಪು ಮಾಹಿತಿಯನ್ನು ಹರಡಿದ್ದು, ಈ ಘಟನೆ ಇದೀಗ ಟ್ವಿಟರ್‌ನಲ್ಲಿ ಟ್ರೆಂಡ್ ಆಗಿದೆ.

ಪತ್ರಕರ್ತರಿಂದ ಸುಳ್ಳು ವದಂತಿ

ಪಾಕಿಸ್ತಾನ ಮೂಲದ ಕೆಲವು ಹೆಸರಾಂತ ಪತ್ರಕರ್ತರು ತಮ್ಮ ಅಧಿಕೃತ ಟ್ವಿಟರ್ ಖಾತೆಯಲ್ಲಿ ಈ ತಪ್ಪು ಮಾಹಿತಿಯನ್ನು ಹಂಚಿಕೊಂಡಿದ್ದಾರೆ. ಇದರಲ್ಲಿ, ಬೆಂಗಳೂರಿನಲ್ಲಿ ನಡೆದ ಸ್ಫೋಟವು ವಿಶ್ವಕಪ್‌ನಲ್ಲಿ ಪಾಕಿಸ್ತಾನ ಮತ್ತು ಇತರ ತಂಡಗಳಿಗೆ ಭದ್ರತಾ ಕಾಳಜಿಯನ್ನು ಹೆಚ್ಚಿಸಿದೆ ಎಂದು ಬರೆದುಕೊಂಡಿದ್ದರೆ, ಇನ್ನು ಕೆಲವರು ಬೆಂಗಳೂರಿನ ಮಡ್‌ಪೈಪ್ ಕೆಫೆಯಲ್ಲಿ ಭಾರಿ ಸ್ಫೋಟ ನಡೆದಿದ್ದು, ಎಲ್ಲರೂ ಸುರಕ್ಷಿತವಾಗಿದ್ದಾರೆ ಎಂದು ಭಾವಿಸುತ್ತೇವೆ. ಪಾಕಿಸ್ತಾನ ತಂಡ ಇಂದು ಬೆಂಗಳೂರಿನಲ್ಲಿ ಅಭ್ಯಾಸ ನಡೆಸಲ್ಲಿದ್ದು, ಇನ್ನೆರಡು ದಿನಗಳಲ್ಲಿ ಆಸ್ಟ್ರೇಲಿಯಾ ವಿರುದ್ಧ ಪಂದ್ಯವನ್ನಾಡಲಿದೆ ಎಂದು ಬರೆದುಕೊಂಡಿದ್ದಾರೆ.

ಬೆಂಗಳೂರಿನಲ್ಲಿ ಬಾಂಬ್ ಸ್ಫೋಟ?

ಮೇಲೆ ಹೇಳಿದಂತೆ ಬೆಗಳೂರಿನಲ್ಲಿ ಸಿಲಿಂಡರ್ ಸ್ಫೋಟಗೊಂಡಿದೆಯೇ ಹೊರತು, ಬಾಂಬ್ ಸ್ಫೋಟ ನಡೆದಿಲ್ಲ. ಆದರೆ ಪಾಕಿಸ್ತಾನ ತಂಡದ ಆಟಗಾರರು ತಂಗಿದ್ದ ಟೀಮ್ ಹೋಟೆಲ್ ಬಳಿ ಬಾಂಬ್ ಸ್ಫೋಟ ಸಂಭವಿಸಿದೆ ಎಂದು ಪಾಕಿಸ್ತಾನದ ಮಾಧ್ಯಮಗಳು ಸುಳ್ಳು ಸುದ್ದಿಯನ್ನು ಪ್ರಚಾರ ಮಾಡಿವೆ.

ಕ್ರೀಡಾಂಗಣದ ಸುತ್ತ ಬಿಗಿ ಪೊಲೀಸ್ ಭದ್ರತೆ

ನಾಳೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಮೊದಲ ವಿಶ್ವಕಪ್ ಪಂದ್ಯ ನಡೆಯುತ್ತಿದ್ದು, ನಾಳೆ ನಡೆಯಲಿರುವ ಪಂದ್ಯದಲ್ಲಿ ಪಾಕಿಸ್ತಾನ ಹಾಗೂ ಅಸ್ಟ್ರೇಲಿಯಾ ತಂಡಗಳು ಮುಖಾಮುಖಿಯಾಗುತ್ತಿವೆ. ಹೀಗಾಗಿ ಪಂದ್ಯ ನಡೆಯುವ ಚಿನ್ನಸ್ವಾಮಿ ಕ್ರೀಡಾಂಗಣದ ಸುತ್ತ ಬಿಗಿ ಪೊಲೀಸ್ ಭದ್ರತೆ ಒದಗಿಸಲಾಗಿದೆ. ಅಲ್ಲದೆ ಪಂದ್ಯದ ಒಂದು ದಿನಕ್ಕೂ ಮುನ್ನ ಪಶ್ಚಿಮ ವಲಯದ ಹೆಚ್ಚುವರಿ ಪೊಲೀಸ್ ಆಯುಕ್ತ ಸತೀಶ್ ಅವರಿಂದ ಭಧ್ರತೆ ಪರಿಶೀಲನೆ ನಡೆಯಿತು. ಅವರೊಂದಿಗೆ ಕೇಂದ್ರ ವಿಭಾಗ ಡಿಸಿಪಿ ಟಿ.ಹೆಚ್ ಶೇಖರ್ ನೇತೃತ್ವದಲ್ಲಿ ಪೊಲೀಸ್ ಬಂದೋಬಸ್ತ್ ನೀಡಲಾಗಿದ್ದು, ಶ್ವಾನದಳ ಮತ್ತು ಬಾಂಬ್ ಡಿಡೆಕ್ಟರ್ ರಿಂದ ಭದ್ರತಾ ಪರಿಶೀಲನೆ ನಡೆಸಲಾಯಿತು. ಕ್ರೀಡಾಂಗಣದಲ್ಲಿ ಒಟ್ಟು 623 ಜನ ಪೊಲೀಸರ ನಿಯೋಜನೆ ಮಾಡಲಾಗಿದ್ದು ಇದರಲ್ಲಿ, 9 ಎಸಿಪಿ, 25 ಜನ ಇನ್ಸ್ಪೆಕ್ಟರ್, 86 ಜನ ಪಿಎಸ್ಐ, 404 ಜನ ಕಾನ್ಸ್ಟೇಬಲ್​ಗಳು ಸೇರಿದ್ದಾರೆ.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 6:13 pm, Thu, 19 October 23

ನಿನ್ನ ರೌಡಿಸಂ ನನ್ನ ಹತ್ರ ಬೇಡ: ರಜತ್​ಗೆ ಖಡಕ್ ಆವಾಜ್ ಹಾಕಿದ ಚೈತ್ರಾ
ನಿನ್ನ ರೌಡಿಸಂ ನನ್ನ ಹತ್ರ ಬೇಡ: ರಜತ್​ಗೆ ಖಡಕ್ ಆವಾಜ್ ಹಾಕಿದ ಚೈತ್ರಾ
ಶಿಕ್ಷಕರ ಕೊರತೆ ಬಗ್ಗೆ ವಿದ್ಯಾರ್ಥಿಗಳ ವಿಡಿಯೋ ವೈರಲ್​: ಶಾಲೆಗೆ ಸಂಸದ ಭೇಟಿ
ಶಿಕ್ಷಕರ ಕೊರತೆ ಬಗ್ಗೆ ವಿದ್ಯಾರ್ಥಿಗಳ ವಿಡಿಯೋ ವೈರಲ್​: ಶಾಲೆಗೆ ಸಂಸದ ಭೇಟಿ
70 ಅಡಿ ಸೇತುವೆ ಮೇಲಿಂದ ಗಂಗಾ ನದಿಗೆ ಹಾರಿದ ಯುವತಿ; ವಿಡಿಯೋ ಇಲ್ಲಿದೆ
70 ಅಡಿ ಸೇತುವೆ ಮೇಲಿಂದ ಗಂಗಾ ನದಿಗೆ ಹಾರಿದ ಯುವತಿ; ವಿಡಿಯೋ ಇಲ್ಲಿದೆ
ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್
ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್
ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ
ಮಾಜಿ ಪಿಎಂ ಮನಮೋಹನ್ ಸಿಂಗ್​ಗೆ ಅಂತಿಮ ನಮನ ಸಲ್ಲಿಸಿದ ಪ್ರಧಾನಿ ಮೋದಿ
ಮಾಜಿ ಪಿಎಂ ಮನಮೋಹನ್ ಸಿಂಗ್​ಗೆ ಅಂತಿಮ ನಮನ ಸಲ್ಲಿಸಿದ ಪ್ರಧಾನಿ ಮೋದಿ