‘ಪಂದ್ಯದಿಂದ ಹೊರಗುಳಿದಿಲ್ಲ’: ಗಿಲ್ ಆರೋಗ್ಯದ ಬಗ್ಗೆ ಬಿಗ್ ಅಪ್​ಡೇಟ್ ನೀಡಿದ ಕೋಚ್ ದ್ರಾವಿಡ್

Shubman Gill: ಶುಭ್​ಮನ್ ಗಿಲ್ ಆರೋಗ್ಯದ ಬಗ್ಗೆ ಮಾಹಿತಿ ನೀಡಿದ ಕೋಚ್ ದ್ರಾವಿಡ್ ‘ಶುಭ್​ಮನ್ ಗಿಲ್ ಆಸ್ಟ್ರೇಲಿಯಾ ವಿರುದ್ಧದ ಪಂದ್ಯದಿಂದ ಹೊರಗುಳಿದಿಲ್ಲ. ಶುಭಮನ್ ಅನಾರೋಗ್ಯದಿಂದ ಬಳಲುತ್ತಿದ್ದಾರೆ. ಆದರೆ ಅವರು ಈಗ ಕೊಂಚ ಸುದಾರಿಸಿಕೊಂಡಿದ್ದಾರೆ. ಗಿಲ್ ಮೇಲೆ ವೈದ್ಯಕೀಯ ತಂಡ ನಿಗಾ ಇಟ್ಟಿದೆ ಎಂದಿದ್ದಾರೆ.

‘ಪಂದ್ಯದಿಂದ ಹೊರಗುಳಿದಿಲ್ಲ’: ಗಿಲ್ ಆರೋಗ್ಯದ ಬಗ್ಗೆ ಬಿಗ್ ಅಪ್​ಡೇಟ್ ನೀಡಿದ ಕೋಚ್ ದ್ರಾವಿಡ್
ಟೀಂ ಇಂಡಿಯಾ
Follow us
ಪೃಥ್ವಿಶಂಕರ
|

Updated on: Oct 07, 2023 | 6:22 AM

ಐಸಿಸಿ ಏಕದಿನ ವಿಶ್ವಕಪ್ 2023 ರಲ್ಲಿ (ICC Men’s ODI World Cup 2023) ತನ್ನ ಮೊದಲ ಪಂದ್ಯಕ್ಕೆ ಟೀಂ ಇಂಡಿಯಾ ಸಜ್ಜಾಗಿದೆ. ಟೀಂ ಇಂಡಿಯಾ ವಿಶ್ವಕಪ್‌ನ ಮೊದಲ ಪಂದ್ಯವನ್ನು ಆಸ್ಟ್ರೇಲಿಯಾ ವಿರುದ್ಧ ಆಡಲಿದೆ. ಈ ಪಂದ್ಯ ಅಕ್ಟೋಬರ್ 8 ರಂದು ಚೆನ್ನೈನಲ್ಲಿ ನಡೆಯಲಿದೆ. ವಿಶ್ವಕಪ್‌ಗೂ ಮುನ್ನ ಆಸ್ಟ್ರೇಲಿಯಾ ವಿರುದ್ಧದ 3 ಪಂದ್ಯಗಳ ಏಕದಿನ ಸರಣಿಯನ್ನು ಟೀಂ ಇಂಡಿಯಾ 2-1 ಅಂತರದಲ್ಲಿ ಗೆದ್ದುಕೊಂಡಿತ್ತು. ಹೀಗಾಗಿ ಸರಣಿ ಗೆಲುವಿನ ಆತ್ಮ ವಿಶ್ವಾಸದಿಂದ ಬೀಗುತ್ತಿರುವ ರೋಹಿತ್ ಪಡೆ, ಆಸೀಸ್ ತಂಡವನ್ನು ಮಣಿಸಿ ವಿಶ್ವಕಪ್​ನಲ್ಲಿ ಶುಭಾರಂಭ ಮಾಡುವ ತವಕದಲ್ಲಿದೆ. ಆದರೆ ಮೊದಲ ಪಂದ್ಯಕ್ಕೂ ಮುನ್ನ ಟೀಂ ಇಂಡಿಯಾಗೆ ಆಘಾತ ಎದುರಾಗಿದ್ದು, ತಂಡದ ಸ್ಟಾರ್ ಓಪನರ್ ಶುಭ್​ಮನ್ ಗಿಲ್ (Shubman Gill) ಡೆಂಗ್ಯೂಗೆ ತುತ್ತಾಗಿದ್ದಾರೆ. ಹಾಗಾಗಿ ಆಸ್ಟ್ರೇಲಿಯಾ ವಿರುದ್ಧದ ಪಂದ್ಯದಲ್ಲಿ ಶುಭ್​ಮನ್ ಗಿಲ್ ಆಡುವುದಿಲ್ಲ ಎಂಬ ಮಾತು ಕೇಳಿಬಂದಿದೆ. ಇದೀಗ ತಂಡದ ಮುಖ್ಯ ಕೋಚ್ ರಾಹುಲ್ ದ್ರಾವಿಡ್ (Rahul Dravid), ಗಿಲ್ ಆರೋಗ್ಯದ ಬಗ್ಗೆ ಬಿಗ್ ಅಪ್​ಡೇಟ್ ನೀಡಿದ್ದಾರೆ.

ಟೀಂ ಇಂಡಿಯಾಕ್ಕೆ ಹಿನ್ನೆಡೆ

ವಾಸ್ತವವಾಗಿ ಕಳೆದೊಂದು ವರ್ಷದಿಂದ ಟೀಂ ಇಂಡಿಯಾ ಪರ ಆರಂಭಿಕನಾಗಿ ಅದ್ಭುತ ಫಾರ್ಮ್​ನಲ್ಲಿರುವ ಗಿಲ್ ಆಸೀಸ್ ವಿರುದ್ಧ ಕಣಕ್ಕಿಳಿಯುವುದು ತಂಡಕ್ಕೆ ಬಹಳ ಮುಖ್ಯವಾಗಿದೆ. ನಾಯಕ ರೋಹಿತ್ ಜೊತೆಗೂಡಿ ಉತ್ತಮ ಆರಂಭ ಒದಗಿಸಿಕೊಡುವ ಕಲೆ ಇತ್ತೀಚಿನ ದಿನಗಳಲ್ಲಿ ಗಿಲ್​ಗೆ ಕರಗತವಾಗಿದೆ. ಅಲ್ಲದೆ ಇದು ಟೀಂ ಇಂಡಿಯಾದ ಮೊದಲ ವಿಶ್ವಕಪ್ ಪಂದ್ಯವಾಗಿರುವುದರಿಂದ ಪಂದ್ಯವನ್ನು ಗೆದ್ದು ಲೀಗ್​ನಲ್ಲಿ ಶುಭಾರಂಭ ಮಾಡುವುದು ಆತಿಥೇಯ ಭಾರತಕ್ಕೆ ಅವಶ್ಯಕವಾಗಿದೆ. ಆದರೆ ಮೊದಲ ಪಂದ್ಯಕ್ಕೂ ಮುನ್ನವೇ ಗಿಲ್ ಅನಾರೋಗ್ಯಕ್ಕೆ ತುತ್ತಾಗಿರುವುದು ತಂಡದ ಶಕ್ತಿಯನ್ನು ಕೊಂಚ ಕುಗ್ಗಿಸಿದೆ.

ICC World Cup: ವಿಶ್ವಕಪ್ ಮೊದಲ ಪಂದ್ಯಕ್ಕೂ ಮುನ್ನ ಭಾರತಕ್ಕೆ ಶಾಕ್: ಶುಭ್​ಮನ್ ಗಿಲ್​ಗೆ ಡೆಂಗ್ಯೂ ಸೋಂಕು ದೃಢ

ರಾಹುಲ್ ದ್ರಾವಿಡ್ ಹೇಳಿದ್ದೇನು?

ಇನ್ನು ಶುಭ್​ಮನ್ ಗಿಲ್ ಆರೋಗ್ಯದ ಬಗ್ಗೆ ಮಾಹಿತಿ ನೀಡಿದ ಕೋಚ್ ದ್ರಾವಿಡ್ ‘ಶುಭ್​ಮನ್ ಗಿಲ್ ಆಸ್ಟ್ರೇಲಿಯಾ ವಿರುದ್ಧದ ಪಂದ್ಯದಿಂದ ಹೊರಗುಳಿದಿಲ್ಲ. ಶುಭಮನ್ ಅನಾರೋಗ್ಯದಿಂದ ಬಳಲುತ್ತಿದ್ದಾರೆ. ಆದರೆ ಅವರು ಈಗ ಕೊಂಚ ಸುದಾರಿಸಿಕೊಂಡಿದ್ದಾರೆ. ಗಿಲ್ ಮೇಲೆ ವೈದ್ಯಕೀಯ ತಂಡ ನಿಗಾ ಇಟ್ಟಿದೆ. ನಮಗೆ ಇನ್ನೂ ಸಮಯಾವಕಾಶವಿದೆ. ಈಗ ವೈದ್ಯಕೀಯ ತಂಡ ಏನು ನಿರ್ಧರಿಸುತ್ತದೆ ಎಂಬುದರ ಮೇಲೆ ಕೇಂದ್ರೀಕೃತವಾಗಿದೆ. ಅಕ್ಟೋಬರ್ 8 ರವರೆಗೆ ಶುಭ್‌ಮನ್ ಹೇಗೆ ಕಾರ್ಯನಿರ್ವಹಿಸುತ್ತಿದ್ದಾರೆ ಎಂಬುದನ್ನು ನಾವು ಗಮನಿಸುತ್ತೇವೆ. ಆಸ್ಟ್ರೇಲಿಯ ವಿರುದ್ಧದ ಪಂದ್ಯಕ್ಕೂ ಮುನ್ನ ಶುಭ್‌ಮನ್ ಆಡುತ್ತಾರೋ ಇಲ್ಲವೋ ಎಂಬುದು ಸ್ಪಷ್ಟವಾಗಲಿದೆ’ ಎಂದು ದ್ರಾವಿಡ್ ಹೇಳಿದ್ದಾರೆ.

ರೋಹಿತ್ ಜೊತೆ ಕಿಶನ್ ಓಪನರ್?

ಏತನ್ಮಧ್ಯೆ, ಅನಾರೋಗ್ಯದ ಕಾರಣ ಶುಭ್​ಮನ್ ಗಿಲ್ ಆಸ್ಟ್ರೇಲಿಯಾ ವಿರುದ್ಧ ಆಡಲು ಸಾಧ್ಯವಾಗದಿದ್ದರೆ, ರೋಹಿತ್ ಶರ್ಮಾ ಅವರೊಂದಿಗೆ ಯಾರು ಓಪನಿಂಗ್ ಮಾಡುತ್ತಾರೆ? ಹೀಗೊಂದು ಪ್ರಶ್ನೆ ಎದ್ದಿದೆ. ಒಂದು ವೇಳೆ ಅನಾರೋಗ್ಯದಿಂದ ಶುಭಮನ್ ಗಿಲ್ ಚೇತರಿಸಿಕೊಳ್ಳದಿದ್ದರೆ ಅವರ ಅನುಪಸ್ಥಿತಿಯಲ್ಲಿ ಇಶಾನ್ ಕಿಶನ್ ನಾಯಕ ರೋಹಿತ್ ಜೊತೆ ಓಪನಿಂಗ್ ಮಾಡಬಹುದು ಎಂಬ ಮಾತು ಸಹ ಕೇಳಿಬಂದಿದೆ.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್