ICC World Cup 2023: ಏಕದಿನ ವಿಶ್ವಕಪ್ಗೆ ಟೀಮ್ ಇಂಡಿಯಾವನ್ನು ಹೆಸರಿಸಿದ ಸಂಜಯ್ ಮಂಜ್ರೇಕರ್
ICC World Cup 2023: ಏಕದಿನ ವಿಶ್ವಕಪ್ಗಾಗಿ ಟೀಮ್ ಇಂಡಿಯಾದ ಮಾಜಿ ಆಟಗಾರ ಸಂಜಯ್ ಮಂಜ್ರೇಕರ್ 15 ಸದಸ್ಯರ ಬಳಗವನ್ನು ಹೆಸರಿಸಿದ್ದಾರೆ.
ಏಕದಿನ ವಿಶ್ವಕಪ್ ಆರಂಭಕ್ಕೆ ದಿನಗಣನೆ ಶುರುವಾಗಿದೆ. ಈಗಾಗಲೇ ಕ್ರಿಕೆಟ್ ಮಹಾಸಮರದ ವೇಳಾಪಟ್ಟಿ ಬಿಡುಗಡೆಯಾಗಿದ್ದು, ಅದರಂತೆ ಅಕ್ಟೋಬರ್ 5 ರಿಂದ ಏಕದಿನ ಕ್ರಿಕೆಟ್ ಟೂರ್ನಿಗೆ ಚಾಲನೆ ದೊರೆಯಲಿದೆ. ಇತ್ತ ಈ ಕ್ರಿಕೆಟ್ ಕದನಕ್ಕಾಗಿ ಟೀಮ್ ಇಂಡಿಯಾ ಬಲಿಷ್ಠ ತಂಡವನ್ನು ರೂಪಿಸಲು ಸಿದ್ಧತೆಗಳನ್ನು ಆರಂಭಿಸಿದೆ. ಅದರ ಮೊದಲ ಭಾಗವಾಗಿ ವೆಸ್ಟ್ ಇಂಡೀಸ್ ವಿರುದ್ಧದ ಏಕದಿನ ಸರಣಿಯಲ್ಲಿ ಬ್ಯಾಟಿಂಗ್ ಕ್ರಮಾಂಕದಲ್ಲಿ ಹಲವು ಪ್ರಯೋಗಗಳನ್ನು ಮಾಡಲಾಗಿತ್ತು.
ಈ ಪ್ರಯೋಗಗಳ ನಡುವೆ ಏಕದಿನ ವಿಶ್ವಕಪ್ಗೆ ಭಾರತ ತಂಡ ಹೇಗಿರಬೇಕೆಂದು ತಿಳಿಸಿದ್ದಾರೆ ಟೀಮ್ ಇಂಡಿಯಾದ ಮಾಜಿ ಆಟಗಾರ ಸಂಜಯ್ ಮಂಜ್ರೇಕರ್. ಈ ಟೂರ್ನಿಗಾಗಿ 15 ಸದಸ್ಯರನ್ನು ಆಯ್ಕೆ ಮಾಡಿರುವ ಮಂಜ್ರೇಕರ್ ಕೆಲ ಪ್ರಮುಖ ಆಟಗಾರರನ್ನು ಕೈ ಬಿಟ್ಟಿರುವುದು ವಿಶೇಷ.
ಸಂಜಯ್ ಮಂಜ್ರೇಕರ್ ಪ್ರಕಾರ, ಏಕದಿನ ವಿಶ್ವಕಪ್ನಲ್ಲಿ ರೋಹಿತ್ ಶರ್ಮಾ ಜೊತೆ ಶುಭ್ಮನ್ ಗಿಲ್ ಆರಂಭಿಕರಾಗಿ ಕಣಕ್ಕಿಳಿಯಲಿದ್ದಾರೆ. ಆದರೆ ಇಲ್ಲಿ ಶಿಖರ್ ಧವನ್ ಅವರನ್ನೂ ಕೂಡ 15 ಸದಸ್ಯರ ಬಳಗದಲ್ಲಿ ಆಯ್ಕೆ ಮಾಡಿ ಅಚ್ಚರಿ ಮೂಡಿಸಿದ್ದಾರೆ. ಇದೇ ವೇಳೆ ಶ್ರೇಯಸ್ ಅಯ್ಯರ್ ಅವರನ್ನು ತಂಡದಿಂದ ಕೈ ಬಿಡಲಾಗಿದೆ.
ಇನ್ನು ಕೆಎಲ್ ರಾಹುಲ್, ಇಶಾನ್ ಕಿಶನ್ ಹಾಗೂ ಸಂಜು ಸ್ಯಾಮ್ಸನ್ ಅವರನ್ನು ವಿಕೆಟ್ ಕೀಪರ್ ಬ್ಯಾಟರ್ಗಳಾಗಿ ಆಯ್ಕೆ ಮಾಡಿದ್ದಾರೆ. ಹಾಗೆಯೇ ಹಾರ್ದಿಕ್ ಪಾಂಡ್ಯ ಹಾಗೂ ರವೀಂದ್ರ ಜಡೇಜಾ ಆಲ್ರೌಂಡರ್ಗಳಾಗಿ ಈ ತಂಡದಲ್ಲಿ ಕಾಣಿಸಿಕೊಂಡಿದ್ದಾರೆ.
ಇವರಲ್ಲದೆ ಟೀಮ್ ಇಂಡಿಯಾದ ವೇಗದ ಬೌಲರ್ಗಳಾಗಿ ಸಂಜಯ್ ಮಂಜ್ರೇಕರ್ ಆಯ್ಕೆ ಮಾಡಿರುವುದು, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಶಮಿ, ಪ್ರಸಿದ್ಧ್ ಕೃಷ್ಣ ಹಾಗೂ ಮೊಹಮ್ಮದ್ ಸಿರಾಜ್ ಅವರನ್ನು ಎಂಬುದು ವಿಶೇಷ. ಅದರಂತೆ ಏಕದಿನ ವಿಶ್ವಕಪ್ಗೆ ಸಂಜಯ್ ಮಂಜ್ರೇಕರ್ ಹೆಸರಿಸಿರುವ 15 ಸದಸ್ಯರ ಭಾರತ ತಂಡ ಈ ಕೆಳಗಿನಂತಿದೆ.
ಇದನ್ನೂ ಓದಿ: ICC Test Rankings: ಐಸಿಸಿ ಟೆಸ್ಟ್ ರ‍್ಯಾಂಕಿಂಗ್: ಟಾಪ್-3 ಗೆ ಜೋ ರೂಟ್, ಸ್ಟೀವ್ ಸ್ಮಿತ್ ಎಂಟ್ರಿ
ರೋಹಿತ್ ಶರ್ಮಾ (ನಾಯಕ), ಶುಭ್ಮನ್ ಗಿಲ್, ಶಿಖರ್ ಧವನ್, ವಿರಾಟ್ ಕೊಹ್ಲಿ, ಕೆಎಲ್ ರಾಹುಲ್, ಇಶಾನ್ ಕಿಶನ್, ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಕುಲ್ದೀಪ್ ಯಾದವ್, ಯುಜ್ವೇಂದ್ರ ಚಾಹಲ್, ಸಂಜು ಸ್ಯಾಮ್ಸನ್, ಪ್ರಸಿದ್ಧ್ ಕೃಷ್ಣ.