ICC World Cup 2023: ಏಕದಿನ ವಿಶ್ವಕಪ್​ಗೆ ಟೀಮ್ ಇಂಡಿಯಾವನ್ನು ಹೆಸರಿಸಿದ ಸಂಜಯ್​ ಮಂಜ್ರೇಕರ್

| Updated By: ಝಾಹಿರ್ ಯೂಸುಫ್

Updated on: Aug 03, 2023 | 5:38 PM

ICC World Cup 2023: ಏಕದಿನ ವಿಶ್ವಕಪ್​ಗಾಗಿ ಟೀಮ್ ಇಂಡಿಯಾದ ಮಾಜಿ ಆಟಗಾರ ಸಂಜಯ್ ಮಂಜ್ರೇಕರ್ 15 ಸದಸ್ಯರ ಬಳಗವನ್ನು ಹೆಸರಿಸಿದ್ದಾರೆ.

ICC World Cup 2023: ಏಕದಿನ ವಿಶ್ವಕಪ್​ಗೆ ಟೀಮ್ ಇಂಡಿಯಾವನ್ನು ಹೆಸರಿಸಿದ ಸಂಜಯ್​ ಮಂಜ್ರೇಕರ್
Team India
Follow us on

ಏಕದಿನ ವಿಶ್ವಕಪ್​ ಆರಂಭಕ್ಕೆ ದಿನಗಣನೆ ಶುರುವಾಗಿದೆ. ಈಗಾಗಲೇ ಕ್ರಿಕೆಟ್ ಮಹಾಸಮರದ ವೇಳಾಪಟ್ಟಿ ಬಿಡುಗಡೆಯಾಗಿದ್ದು, ಅದರಂತೆ ಅಕ್ಟೋಬರ್ 5 ರಿಂದ ಏಕದಿನ ಕ್ರಿಕೆಟ್ ಟೂರ್ನಿಗೆ ಚಾಲನೆ ದೊರೆಯಲಿದೆ. ಇತ್ತ ಈ ಕ್ರಿಕೆಟ್​ ಕದನಕ್ಕಾಗಿ ಟೀಮ್ ಇಂಡಿಯಾ ಬಲಿಷ್ಠ ತಂಡವನ್ನು ರೂಪಿಸಲು ಸಿದ್ಧತೆಗಳನ್ನು ಆರಂಭಿಸಿದೆ. ಅದರ ಮೊದಲ ಭಾಗವಾಗಿ ವೆಸ್ಟ್ ಇಂಡೀಸ್ ವಿರುದ್ಧದ ಏಕದಿನ ಸರಣಿಯಲ್ಲಿ ಬ್ಯಾಟಿಂಗ್ ಕ್ರಮಾಂಕದಲ್ಲಿ ಹಲವು ಪ್ರಯೋಗಗಳನ್ನು ಮಾಡಲಾಗಿತ್ತು.

ಈ ಪ್ರಯೋಗಗಳ ನಡುವೆ ಏಕದಿನ ವಿಶ್ವಕಪ್​ಗೆ ಭಾರತ ತಂಡ ಹೇಗಿರಬೇಕೆಂದು ತಿಳಿಸಿದ್ದಾರೆ ಟೀಮ್ ಇಂಡಿಯಾದ ಮಾಜಿ ಆಟಗಾರ ಸಂಜಯ್​ ಮಂಜ್ರೇಕರ್. ಈ ಟೂರ್ನಿಗಾಗಿ 15 ಸದಸ್ಯರನ್ನು ಆಯ್ಕೆ ಮಾಡಿರುವ ಮಂಜ್ರೇಕರ್ ಕೆಲ ಪ್ರಮುಖ ಆಟಗಾರರನ್ನು ಕೈ ಬಿಟ್ಟಿರುವುದು ವಿಶೇಷ.

ಸಂಜಯ್​ ಮಂಜ್ರೇಕರ್ ಪ್ರಕಾರ, ಏಕದಿನ ವಿಶ್ವಕಪ್​ನಲ್ಲಿ ರೋಹಿತ್ ಶರ್ಮಾ ಜೊತೆ ಶುಭ್​ಮನ್ ಗಿಲ್ ಆರಂಭಿಕರಾಗಿ ಕಣಕ್ಕಿಳಿಯಲಿದ್ದಾರೆ. ಆದರೆ ಇಲ್ಲಿ ಶಿಖರ್ ಧವನ್ ಅವರನ್ನೂ ಕೂಡ 15 ಸದಸ್ಯರ ಬಳಗದಲ್ಲಿ ಆಯ್ಕೆ ಮಾಡಿ ಅಚ್ಚರಿ ಮೂಡಿಸಿದ್ದಾರೆ. ಇದೇ ವೇಳೆ ಶ್ರೇಯಸ್ ಅಯ್ಯರ್ ಅವರನ್ನು ತಂಡದಿಂದ ಕೈ ಬಿಡಲಾಗಿದೆ.

ಇನ್ನು ಕೆಎಲ್ ರಾಹುಲ್​, ಇಶಾನ್ ಕಿಶನ್ ಹಾಗೂ ಸಂಜು ಸ್ಯಾಮ್ಸನ್ ಅವರನ್ನು ವಿಕೆಟ್ ಕೀಪರ್ ಬ್ಯಾಟರ್​ಗಳಾಗಿ ಆಯ್ಕೆ ಮಾಡಿದ್ದಾರೆ. ಹಾಗೆಯೇ ಹಾರ್ದಿಕ್ ಪಾಂಡ್ಯ ಹಾಗೂ ರವೀಂದ್ರ ಜಡೇಜಾ ಆಲ್​ರೌಂಡರ್​ಗಳಾಗಿ ಈ ತಂಡದಲ್ಲಿ ಕಾಣಿಸಿಕೊಂಡಿದ್ದಾರೆ.

ಇವರಲ್ಲದೆ ಟೀಮ್ ಇಂಡಿಯಾದ ವೇಗದ ಬೌಲರ್​ಗಳಾಗಿ ಸಂಜಯ್ ಮಂಜ್ರೇಕರ್ ಆಯ್ಕೆ ಮಾಡಿರುವುದು, ಜಸ್​ಪ್ರೀತ್ ಬುಮ್ರಾ, ಮೊಹಮ್ಮದ್ ಶಮಿ, ಪ್ರಸಿದ್ಧ್ ಕೃಷ್ಣ ಹಾಗೂ ಮೊಹಮ್ಮದ್ ಸಿರಾಜ್ ಅವರನ್ನು ಎಂಬುದು ವಿಶೇಷ. ಅದರಂತೆ ಏಕದಿನ ವಿಶ್ವಕಪ್​ಗೆ ಸಂಜಯ್ ಮಂಜ್ರೇಕರ್ ಹೆಸರಿಸಿರುವ 15 ಸದಸ್ಯರ ಭಾರತ ತಂಡ ಈ ಕೆಳಗಿನಂತಿದೆ.

ಇದನ್ನೂ ಓದಿ: ICC Test Rankings: ಐಸಿಸಿ ಟೆಸ್ಟ್​ ರ‍್ಯಾಂಕಿಂಗ್: ಟಾಪ್-3 ಗೆ ಜೋ ರೂಟ್, ಸ್ಟೀವ್ ಸ್ಮಿತ್ ಎಂಟ್ರಿ

ರೋಹಿತ್ ಶರ್ಮಾ (ನಾಯಕ), ಶುಭ್​ಮನ್ ಗಿಲ್, ಶಿಖರ್ ಧವನ್, ವಿರಾಟ್ ಕೊಹ್ಲಿ, ಕೆಎಲ್ ರಾಹುಲ್, ಇಶಾನ್ ಕಿಶನ್, ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಕುಲ್ದೀಪ್ ಯಾದವ್, ಯುಜ್ವೇಂದ್ರ ಚಾಹಲ್, ಸಂಜು ಸ್ಯಾಮ್ಸನ್, ಪ್ರಸಿದ್ಧ್ ಕೃಷ್ಣ.