AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೆಮಿಫೈನಲ್​ ವೇಳೆ ಮಳೆ ಬಂದರೆ ಫಲಿತಾಂಶ ನಿರ್ಧರಿಸುವುದು ಹೇಗೆ? ಇಲ್ಲಿದೆ ಸಂಪೂರ್ಣ ಮಾಹಿತಿ

ICC World Cup 2023: ಭಾರತದ ತೀರ ಪ್ರದೇಶಗಳಲ್ಲಿ ಮಾನ್ಸೂನ್ ಕಾರಣ ಮಳೆಯಾಗುತ್ತಿದ್ದು, ಹೀಗಾಗಿ ಈ ಪಂದ್ಯಗಳಿಗೂ ಮಳೆ ಅಡಚಣೆಯನ್ನುಂಟು ಮಾಡಲಿದೆಯಾ ಎಂಬ ಭೀತಿ ಎದುರಾಗಿದೆ. ಆದರೆ ಈ ಭೀತಿಯ ನಡುವೆ ಐಸಿಸಿ ನಿಯಮದಂತೆ ಪಂದ್ಯ ನಡೆಯುವುದು ಖಚಿತ.

ಸೆಮಿಫೈನಲ್​ ವೇಳೆ ಮಳೆ ಬಂದರೆ ಫಲಿತಾಂಶ ನಿರ್ಧರಿಸುವುದು ಹೇಗೆ? ಇಲ್ಲಿದೆ ಸಂಪೂರ್ಣ ಮಾಹಿತಿ
ICC World Cup 2023
Follow us
TV9 Web
| Updated By: ಝಾಹಿರ್ ಯೂಸುಫ್

Updated on: Nov 13, 2023 | 7:28 PM

ಏಕದಿನ ವಿಶ್ವಕಪ್​ನ ಸೆಮಿಫೈನಲ್ ಪಂದ್ಯಗಳಿಗೆ ವೇದಿಕೆ ಸಿದ್ಧವಾಗಿದೆ. ನವೆಂಬರ್ 15 ರಂದು ಮುಂಬೈನಲ್ಲಿ ನಡೆಯಲಿರುವ ಮೊದಲ ಸೆಮಿಫೈನಲ್​ ಪಂದ್ಯದಲ್ಲಿ ಭಾರತ ಮತ್ತು ನ್ಯೂಝಿಲೆಂಡ್ ತಂಡಗಳು ಮುಖಾಮುಖಿಯಾಗಲಿದೆ. ಇನ್ನು ನವೆಂಬರ್ 16 ರಂದು ಕೊಲ್ಕತ್ತಾದಲ್ಲಿ ಎರಡನೇ ಸೆಮಿಫೈನಲ್ ಪಂದ್ಯ ನಡೆಯಲಿದ್ದು, ಈ ಮ್ಯಾಚ್​ನಲ್ಲಿ ಸೌತ್ ಆಫ್ರಿಕಾ ಹಾಗೂ ಆಸ್ಟ್ರೇಲಿಯಾ ತಂಡಗಳು ಸೆಣಸಲಿದೆ.

ಇತ್ತ ಭಾರತದ ತೀರ ಪ್ರದೇಶಗಳಲ್ಲಿ ಮಾನ್ಸೂನ್ ಕಾರಣ ಮಳೆಯಾಗುತ್ತಿದ್ದು, ಹೀಗಾಗಿ ಈ ಪಂದ್ಯಗಳಿಗೂ ಮಳೆ ಅಡಚಣೆಯನ್ನುಂಟು ಮಾಡಲಿದೆಯಾ ಎಂಬ ಭೀತಿ ಎದುರಾಗಿದೆ. ಆದರೆ ಈ ಭೀತಿಯ ನಡುವೆ ಐಸಿಸಿ ನಿಯಮದಂತೆ ಪಂದ್ಯ ನಡೆಯುವುದು ಖಚಿತ. ಏಕೆಂದರೆ ಸೆಮಿಫೈನಲ್ ಪಂದ್ಯಗಳ ಫಲಿತಾಂಶ ನಿರ್ಣಯಕ್ಕಾಗಿ ಐಸಿಸಿ ನಿಯಮಗಳನ್ನು ಪರಿಚಯಿಸಿದೆ. ಆ ನಿಯಮಗಳಂತೆ ಈ ಬಾರಿ ಕೂಡ ನಾಕೌಟ್ ಹಂತದ ಪಂದ್ಯಗಳು ನಡೆಯಲಿದೆ. ಆ ನಿಯಮಗಳ ಸಂಪೂರ್ಣ ಮಾಹಿತಿ ಇಲ್ಲಿದೆ.

  • 1- ಮೀಸಲು ದಿನದಾಟ: ಸೆಮಿಫೈನಲ್ ಪಂದ್ಯಗಳ ವೇಳೆ ಮಳೆ ಬಂದರೆ ಮೀಸಲು ದಿನದಾಟದಲ್ಲಿ ಮ್ಯಾಚ್ ಮುಂದುವರೆಯಲಿದೆ. ಅಂದರೆ ಬುಧವಾರ ಪಂದ್ಯ ನಡೆಸಲು ಸಾಧ್ಯವಾಗದಿದ್ದರೆ ಗುರುವಾರ ಮ್ಯಾಚ್ ನಡೆಯಲಿದೆ.
  • 2- ಪಂದ್ಯ ಮುಂದುವರಿಕೆ: ಒಂದು ವೇಳೆ ಮಳೆಯಿಂದಾಗಿ ಪಂದ್ಯ ಅರ್ಧದಲ್ಲೇ ಸ್ಥಗಿತಗೊಂಡರೆ, ಮರುದಿನ ಪಂದ್ಯ ಮುಂದುವರೆಯಲಿದೆ. ಇಲ್ಲಿ ಯಾವ ಹಂತದಲ್ಲಿ ಪಂದ್ಯ ಸ್ಥಗಿತವಾಗಿತ್ತೊ ಅಲ್ಲಿಂದಲೇ ಪಂದ್ಯವನ್ನು ಮುಂದುವರೆಸಲಾಗುತ್ತದೆ. ಉದಾಹರಣೆಗೆ- ಟೀಮ್ ಇಂಡಿಯಾ 25 ಓವರ್​ಗಳಲ್ಲಿ 200 ರನ್​ಗಳಿಸಿದ್ದಾಗ ಮಳೆ ಬಂದು ಪಂದ್ಯ ನಿಂತರೆ, ಮರುದಿನ ಟೀಮ್ ಇಂಡಿಯಾ ಇನಿಂಗ್ಸ್​ 26ನೇ ಓವರ್​ನಿಂದ ಶುರುವಾಗಲಿದೆ.
  • 3- ಹೆಚ್ಚುವರಿ 120 ನಿಮಿಷಗಳು: ಸೆಮಿಫೈನಲ್ ಪಂದ್ಯಗಳಿಗೆ ಹೆಚ್ಚುವರಿಯಾಗಿ 2 ಗಂಟೆ ನಿಗದಿ ಮಾಡಲಾಗಿದೆ. ಉದಾಹರಣೆಗೆ, ಪಂದ್ಯವು 6 ಗಂಟೆಗೆ ನಿಂತ ಬಳಿಕ 8 ಗಂಟೆಗೆ ಮತ್ತೆ ಶುರುವಾದರೆ ಯಾವುದೇ ಓವರ್​ಗಳ ಕಡಿತ ಇರುವುದಿಲ್ಲ.
  • 4- ಓವರ್​ಗಳ ಕಡಿತ: ಈ ಮೇಲೆ ಹೇಳಿದಂತೆ 2 ಗಂಟೆಗಳ ಹೆಚ್ಚುವರಿ ಸಮಯ ಕಳೆದ ಬಳಿಕವಷ್ಟೇ ಓವರ್​ಗಳ ಕಡಿತವಾಗಲಿದೆ. ಅಂದರೆ ಮಳೆಯಿಂದಾಗಿ ಪಂದ್ಯಕ್ಕೆ ಅಡಚಣೆಯಾದರೆ ಹೆಚ್ಚುವರಿ 2 ಗಂಟೆಗಳವರೆಗೆ ಯಾವುದೇ ಓವರ್​ಗಳ ಕಡಿತ ಮಾಡುವುದಿಲ್ಲ. ಆ ಬಳಿಕ ಪ್ರತಿ 5 ನಿಮಿಷಕ್ಕೆ ಒಂದು ಓವರ್ ಅನ್ನು ಕಡಿತ ಮಾಡಲಾಗುತ್ತದೆ.
  • 5- 20 ಓವರ್​ಗಳ ಬಳಿ ಫಲಿತಾಂಶ: ಸೆಮಿಫೈನಲ್ ಪಂದ್ಯದಲ್ಲಿ ಫಲಿತಾಂಶ ನಿರ್ಧರಿಸಲು ಉಭಯ ತಂಡಗಳು ಕನಿಷ್ಠ 20 ಓವರ್​ಗಳನ್ನು ಆಡಿರಬೇಕು. ಅಂದರೆ ಮೊದಲ ಇನಿಂಗ್ಸ್​ ಬಳಿಕ ಮಳೆ ಬಂದು ಪಂದ್ಯ ಸ್ಥಗಿತವಾಗಿದ್ದರೆ ಡಕ್​ವರ್ತ್ ಲೂಯಿಸ್ ನಿಯಮದ ಪ್ರಕಾರ ಫಲಿತಾಂಶ ನಿರ್ಧರಿಸಲು ದ್ವಿತೀಯ ಇನಿಂಗ್ಸ್​ನಲ್ಲಿ ಬ್ಯಾಟ್ ಮಾಡಿದ ತಂಡ ಕನಿಷ್ಠ 20 ಓವರ್​ಗಳನ್ನು ಆಡಿರಬೇಕು.
  • 6- ಲೀಗ್ ಹಂತದ ಪಾಯಿಂಟ್ಸ್​: ಒಂದು ವೇಳೆ ಸೆಮಿಫೈನಲ್​ ಪಂದ್ಯವು ಸಂಪೂರ್ಣ ಮಳೆಗೆ ಅಹುತಿಯಾಗಿ, ಮೀಸಲು ದಿನಾಟದಲ್ಲೂ ಪಂದ್ಯವನ್ನು ಪೂರ್ಣಗೊಳಿಸಲು ಸಾಧ್ಯವಾಗದಿದ್ದರೆ ಮಾತ್ರ ಅಂಕ ಪಟ್ಟಿಯಲ್ಲಿ ಹೆಚ್ಚಿನ ಪಾಯಿಂಟ್ಸ್​ ಹೊಂದಿರುವ ತಂಡವನ್ನು ವಿಜಯಿ ಎಂದು ಘೋಷಿಸಲಾಗುತ್ತದೆ. ಉದಾಹರಣೆಗೆ- ಭಾರತ-ನ್ಯೂಝಿಲೆಂಡ್ ನಡುವಣ ಸೆಮಿಫೈನಲ್​ ಪಂದ್ಯವು ಮಳೆಯಿಂದಾಗಿ ರದ್ದಾದರೆ ಅಂಕ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವ ಟೀಮ್ ಇಂಡಿಯಾ ಫೈನಲ್​ಗೆ ಅರ್ಹತೆ ಪಡೆಯಲಿದೆ.
ಮೇ 6ರವರೆಗೆ ನಿಷೇಧಾಜ್ಞೆ ಜಾರಿಯಲ್ಲಿಟ್ಟಿರುವ ದಕ್ಷಿಣ ಕನ್ನಡ ಜಿಲ್ಲಾಡಳಿತ
ಮೇ 6ರವರೆಗೆ ನಿಷೇಧಾಜ್ಞೆ ಜಾರಿಯಲ್ಲಿಟ್ಟಿರುವ ದಕ್ಷಿಣ ಕನ್ನಡ ಜಿಲ್ಲಾಡಳಿತ
ಪಾಕಿಸ್ತಾನ ವಿರುದ್ಧ ಬಾಂಬ್ ಕಟ್ಕೊಂಡು ಯುದ್ಧಕ್ಕೆ ಹೋಗ್ತೀನಿ: ಸಚಿವ ಜಮೀರ್
ಪಾಕಿಸ್ತಾನ ವಿರುದ್ಧ ಬಾಂಬ್ ಕಟ್ಕೊಂಡು ಯುದ್ಧಕ್ಕೆ ಹೋಗ್ತೀನಿ: ಸಚಿವ ಜಮೀರ್
ಯುದ್ಧ ಮಾಡದೆಯೇ ಪಾಕಿಸ್ತಾನಕ್ಕೆ ಮರ್ಮಾಘಾತ ನೀಡಿದ ಭಾರತದ 9 ನಿರ್ಧಾರಗಳಿವು..
ಯುದ್ಧ ಮಾಡದೆಯೇ ಪಾಕಿಸ್ತಾನಕ್ಕೆ ಮರ್ಮಾಘಾತ ನೀಡಿದ ಭಾರತದ 9 ನಿರ್ಧಾರಗಳಿವು..
VIDEO: ವಿವಾದಕ್ಕೀಡಾದ ಶುಭ್​​ಮನ್ ಗಿಲ್ ರನೌಟ್
VIDEO: ವಿವಾದಕ್ಕೀಡಾದ ಶುಭ್​​ಮನ್ ಗಿಲ್ ರನೌಟ್
Daily Devotional: ಪೂಜೆ ಸಮಯದಲ್ಲಿ ಯಾವ ಬಣ್ಣದ ಬಟ್ಟೆ ಧರಿಸಬೇಕು?
Daily Devotional: ಪೂಜೆ ಸಮಯದಲ್ಲಿ ಯಾವ ಬಣ್ಣದ ಬಟ್ಟೆ ಧರಿಸಬೇಕು?
horoscope: ಈ ರಾಶಿಯವರಿಗೆ ಇಂದು ಆಕಸ್ಮಿಕ ಧನಯೋಗ, ವೃತ್ತಿಯಲ್ಲಿ ಯಶಸ್ಸು
horoscope: ಈ ರಾಶಿಯವರಿಗೆ ಇಂದು ಆಕಸ್ಮಿಕ ಧನಯೋಗ, ವೃತ್ತಿಯಲ್ಲಿ ಯಶಸ್ಸು
6ಕ್ಕೆ ಆರೂ ವಿಷಯದಲ್ಲಿ ಫೇಲಾದ ಮಗನಿಗೆ ಕೇಕ್‌ ತಿನ್ನಿಸಿ ಧೈರ್ಯ ತುಂಬಿದ ಅಪ್ಪ
6ಕ್ಕೆ ಆರೂ ವಿಷಯದಲ್ಲಿ ಫೇಲಾದ ಮಗನಿಗೆ ಕೇಕ್‌ ತಿನ್ನಿಸಿ ಧೈರ್ಯ ತುಂಬಿದ ಅಪ್ಪ
ತಾಯಿಯ ಜೊತೆಯಲ್ಲೇ ಸನ್ಮಾನ; ಇದು ಚೈತ್ರಾ ಕುಂದಾಪುರ ಪಾಲಿನ ಹೆಮ್ಮೆಯ ಕ್ಷಣ
ತಾಯಿಯ ಜೊತೆಯಲ್ಲೇ ಸನ್ಮಾನ; ಇದು ಚೈತ್ರಾ ಕುಂದಾಪುರ ಪಾಲಿನ ಹೆಮ್ಮೆಯ ಕ್ಷಣ
ಬಿಜೆಪಿಯಿಂದ ಉಚ್ಚಾಟಿತ ಯತ್ನಾಳ್ ತನ್ನ ಅಸ್ತಿತ್ವ ಉಳಿಸಿಕೊಳ್ಳಬೇಕಿದೆ: ಸಚಿವ
ಬಿಜೆಪಿಯಿಂದ ಉಚ್ಚಾಟಿತ ಯತ್ನಾಳ್ ತನ್ನ ಅಸ್ತಿತ್ವ ಉಳಿಸಿಕೊಳ್ಳಬೇಕಿದೆ: ಸಚಿವ
ರಸ್ತೆಯಲ್ಲಿ ನಿಲ್ಲಿಸಿದ್ದ ಸ್ಕೂಟಿಯನ್ನೇ ತಳ್ಳಿಕೊಂಡು ಹೋದ ಗೂಳಿ!
ರಸ್ತೆಯಲ್ಲಿ ನಿಲ್ಲಿಸಿದ್ದ ಸ್ಕೂಟಿಯನ್ನೇ ತಳ್ಳಿಕೊಂಡು ಹೋದ ಗೂಳಿ!