ಬಾಂಗ್ಲಾದೇಶದ ವಿರುದ್ಧ ಸುಲಭ ಜಯ ಸಾಧಿಸಿ, ವಿಶ್ವಕಪ್ನಲ್ಲಿ ತನ್ನ ಅಜೇಯ ಓಟವನ್ನು ಮುಂದುವರೆಸಿರುವ ಟೀಂ ಇಂಡಿಯಾ (India vs Bangladesh) ಇದೀಗ ತನ್ನ ಮುಂದಿನ ಪಂದ್ಯದಲ್ಲಿ ಬಲಿಷ್ಠ ಕಿವೀಸ್ ಪಡೆಯನ್ನು ಎದುರಿಸಲು ಸಜ್ಜಾಗಿದೆ. ಬಾಂಗ್ಲಾ ವಿರುದ್ಧ ಪುಣೆಯಲ್ಲಿ ಪಂದ್ಯವನ್ನಾಡಿದ ರೋಹಿತ್ ಶರ್ಮಾ ನೇತೃತ್ವದ ಟೀಂ ಇಂಡಿಯಾ, ನ್ಯೂಜಿಲೆಂಡ್ (India vs New zealand) ವಿರುದ್ಧ ಕಣಕ್ಕಿಳಿಯುವ ಸಲುವಾಗಿ ಧರ್ಮಶಾಲಾಗೆ ಹಾರಿದೆ. ಇದೇ ಭಾನುವಾರ, ಅಂದರೆ ಅಕ್ಟೋಬರ್ 22 ರಂದು ಭಾರತ ಹಾಗೂ ನ್ಯೂಜಿಲೆಂಡ್ ನಡುವೆ ಪಂದ್ಯ ನಡೆಯಲ್ಲಿದ್ದು, ಈ ಪಂದ್ಯದಲ್ಲಿ ಗೆಲುವು ಸಾಧಿಸುವ ತಂಡಕ್ಕೆ ವಿಶ್ವಕಪ್ (ICC World Cup 2023) ಪಾಯಿಂಟ್ ಪಟ್ಟಿಯಲ್ಲಿ ನಂಬರ್ 1 ಸ್ಥಾನ ಸಿಗಲಿದೆ. ಹೀಗಾಗಿ ಉಭಯ ತಂಡಗಳಿಗೂ ಈ ಗೆಲುವು ಅವಶ್ಯಕವಾಗಿದೆ.
ಭಾರತೀಯ ಕ್ರಿಕೆಟಿಗರು ವಿಮಾನ ನಿಲ್ದಾಣದಿಂದ ಹೊರಬರುತ್ತಿರುವ ಫೋಟೋಗಳು ಮತ್ತು ವೀಡಿಯೊಗಳು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿವೆ. ಏತನ್ಮಧ್ಯೆ, ಭಾರತ ತಂಡ ಧರ್ಮಶಾಲಾ ತಲುಪಿದ್ದು, ಶನಿವಾರ ಅಭ್ಯಾಸ ಸೆಷನ್‌ಗಳಲ್ಲಿ ಭಾಗವಹಿಸಲಿದೆ. ಮತ್ತೊಂದೆಡೆ ತನ್ನ ಕೊನೆಯ ಪಂದ್ಯದಲ್ಲಿ ಅಫ್ಘಾನಿಸ್ತಾನ ವಿರುದ್ಧ ಗೆದ್ದಿದ್ದ ನ್ಯೂಜಿಲೆಂಡ್ ಈಗಾಗಲೇ ಧರ್ಮಶಾಲಾದಲ್ಲಿ ಅಭ್ಯಾಸ ಆರಂಭಿಸಿದೆ.
Team India arrives in Dharamshala to take on New Zealand.pic.twitter.com/KY0ms9qUAB
— Mufaddal Vohra (@mufaddal_vohra) October 20, 2023
ವಿಶ್ವಕಪ್ ವೇಳೆ ಟೀಂ ಇಂಡಿಯಾ ಆಟಗಾರರಿಗೆ ರಜೆ ನೀಡಲು ಮುಂದಾದ ಬಿಸಿಸಿಐ! ಕಾರಣವೇನು ಗೊತ್ತಾ?
ಬಾಂಗ್ಲಾದೇಶ ವಿರುದ್ಧದ ಪಂದ್ಯದ ವೇಳೆ ಬೌಲಿಂಗ್ ಮಾಡುವಾಗ ಗಾಯಕ್ಕೆ ತುತ್ತಾಗಿದ್ದ ಸ್ಟಾರ್ ಆಲ್‌ರೌಂಡರ್ ಹಾರ್ದಿಕ್ ಪಾಂಡ್ಯ ಕಿವೀಸ್ ವಿರುದ್ಧ ಕಣಕ್ಕಿಳಿಯುತ್ತಿಲ್ಲ. ಹೀಗಾಗಿ ಅವರು ತಂಡದೊಂದಿಗೆ ಧರ್ಮಶಾಲಾಗೆ ಪ್ರಯಾಣಿಸಿಲ್ಲ. ಬಾಂಗ್ಲಾದೇಶದ ಇನ್ನಿಂಗ್ಸ್‌ನ ಒಂಬತ್ತನೇ ಓವರ್‌ನಲ್ಲಿ ಪಾಂಡ್ಯ ಅವರು ತಮ್ಮ ಫಾಲೋ-ಥ್ರೂನಲ್ಲಿ ಚೆಂಡನ್ನು ತಡೆಯಲು ಪ್ರಯತ್ನಿಸಿದಾಗ ಗಾಯಗೊಂಡರು. ಇದರ ಪರಿಣಾಮದಿಂದಾಗಿ ಅವರು ಇಡೀ ಪಂದ್ಯದಿಂದ ಹೊರಗುಳಿದಿದ್ದರು.
ಇಂಗ್ಲೆಂಡ್‌ನ ತಜ್ಞ ವೈದ್ಯರು ಬೆಂಗಳೂರಿನ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿ (ಎನ್‌ಸಿಎ) ಯಲ್ಲಿ ಹಾರ್ದಿಕ್ ಅವರ ಚಿಕಿತ್ಸೆಯನ್ನು ಮೇಲ್ವಿಚಾರಣೆ ಮಾಡುತ್ತಿದ್ದಾರೆ. ಹೀಗಾಗಿ ಪಾಂಡ್ಯ ಅನುಪಸ್ಥಿತಿಯಲ್ಲಿ ಆಯ್ಕೆ ಮಂಡಳಿ ಕಿವೀಸ್ ವಿರುದ್ಧ ಯಾವ ಆಟಗಾರನನ್ನು ಕಣಕ್ಕಿಳಿಸಲಿದೆ ಎಂಬುದನ್ನು ಕಾದುನೋಡಬೇಕಿದೆ. ಸದ್ಯಕ್ಕೆ ಲಭ್ಯವಿರುವ ಮಾಹಿತಿ ಪ್ರಕಾರ, ಶಾರ್ದೂಲ್ ಠಾಕೂರ್ ಬದಲಿಗೆ ಪಾಂಡ್ಯ ಮತ್ತು ಮೊಹಮ್ಮದ್ ಶಮಿ ಬದಲಿಗೆ ಸೂರ್ಯಕುಮಾರ್ ಯಾದವ್ ಅವರನ್ನು ತಂಡಕ್ಕೆ ಆಯ್ಕೆ ಮಾಡುವ ಸಾಧ್ಯತೆಗಳಿವೆ.
ಭಾರತದ ಸಂಭಾವ್ಯ ತಂಡ: ರೋಹಿತ್ ಶರ್ಮಾ (ನಾಯಕ), ಶುಭ್ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್, ಸೂರ್ಯಕುಮಾರ್ ಯಾದವ್, ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್ / ಮೊಹಮ್ಮದ್ ಶಮಿ, ಕುಲ್ದೀಪ್ ಯಾದವ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್.
ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 8:09 am, Sat, 21 October 23