AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಶ್ವಕಪ್ ವೇಳೆ ಟೀಂ ಇಂಡಿಯಾ ಆಟಗಾರರಿಗೆ ರಜೆ ನೀಡಲು ಮುಂದಾದ ಬಿಸಿಸಿಐ! ಕಾರಣವೇನು ಗೊತ್ತಾ?

ICC World Cup 2023: ನ್ಯೂಜಿಲೆಂಡ್ ವಿರುದ್ಧದ ಪಂದ್ಯದ ನಂತರ ಭಾರತ, ಇಂಗ್ಲೆಂಡ್ ವಿರುದ್ಧ ತನ್ನ ಮುಂದಿನ ಪಂದ್ಯವನ್ನು ಆಡಲಿದೆ. ಈ ಪಂದ್ಯ ಅಕ್ಟೋಬರ್ 29 ರಂದು ಲಕ್ನೋದಲ್ಲಿ ನಡೆಯಲಿದೆ. ಅಂದರೆ ಈ ಪಂದ್ಯಕ್ಕೆ ಒಂದು ವಾರ ಬಾಕಿ ಇರಲಿದೆ. ಹೀಗಾಗಿ ಆಟಗಾರರಿಗೆ ಎರಡರಿಂದ ಮೂರು ದಿನಗಳ ಕಾಲ ಬಿಡುವು ನೀಡಲು ಬಿಸಿಸಿಐ ನಿರ್ಧರಿಸಿದೆ ಎಂದು ಮೂಲಗಳು ತಿಳಿಸಿವೆ.

ವಿಶ್ವಕಪ್ ವೇಳೆ ಟೀಂ ಇಂಡಿಯಾ ಆಟಗಾರರಿಗೆ ರಜೆ ನೀಡಲು ಮುಂದಾದ ಬಿಸಿಸಿಐ! ಕಾರಣವೇನು ಗೊತ್ತಾ?
ಟೀಂ ಇಂಡಿಯಾ
ಪೃಥ್ವಿಶಂಕರ
|

Updated on: Oct 20, 2023 | 4:09 PM

Share

2023ರ ಏಕದಿನ ವಿಶ್ವಕಪ್​ನಲ್ಲಿ (ICC World Cup 2023) ಟೀಂ ಇಂಡಿಯಾ ನಿರೀಕ್ಷಿತ ಪ್ರದರ್ಶನವನ್ನೇ ನೀಡುತ್ತಿದೆ. ರೌಂಡ್ ರಾಬಿನ್ ಸುತ್ತಿನಲ್ಲಿ ನಾಲ್ಕು ಪಂದ್ಯಗಳನ್ನು ಗೆದ್ದು, ಸೆಮಿಫೈನಲ್ ರೇಸ್​ನಲ್ಲಿ ಮುಂಚೂಣಿಯಲ್ಲಿದೆ. ಟೀಂ ಇಂಡಿಯಾ ತನ್ನ ಮುಂದಿನ ಪಂದ್ಯವನ್ನು ಅಕ್ಟೋಬರ್ 22 ರಂದು ನ್ಯೂಜಿಲೆಂಡ್ (India vs New Zealand) ವಿರುದ್ಧ ಆಡಲಿದೆ. ಈ ಪಂದ್ಯ ಉಭಯ ತಂಡಗಳಿಗೂ ಮಹತ್ವದ್ದಾಗಿದೆ. ಏಕೆಂದರೆ ಭಾರತ ಮತ್ತು ನ್ಯೂಜಿಲೆಂಡ್ ಎರಡೂ ತಂಡಗಳು ಟೂರ್ನಿಯಲ್ಲಿ ಒಂದೂ ಪಂದ್ಯವನ್ನು ಸೋತಿಲ್ಲ. ಆದ್ದರಿಂದ ಗೆದ್ದ ತಂಡ ಪಾಯಿಂಟ್ಸ್ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಲಿದೆ. ಅದೇ ವೇಳೆ ಸೆಮಿಫೈನಲ್ ಹಾದಿ ಇನ್ನಷ್ಟು ಸುಲಭವಾಗಲಿದೆ. ಅಂಕಪಟ್ಟಿಯಲ್ಲಿ ನ್ಯೂಜಿಲೆಂಡ್ ತಂಡ 8 ಪಾಯಿಂಟ್ +1.923 ನೆಟ್ ರನ್ ರೇಟ್​ನೊಂದಿಗೆ ಮೊದಲ ಸ್ಥಾನದಲ್ಲಿದ್ದರೆ, ಭಾರತ ತಂಡ 8 ಪಾಯಿಂಟ್ ಮತ್ತು +1.659 ನೆಟ್ ರನ್ ರೇಟ್​ನೊಂದಿಗೆ ಎರಡನೇ ಸ್ಥಾನದಲ್ಲಿದೆ. ಹೀಗಾಗಿ ಉಭಯ ತಂಡಗಳು ಅಗ್ರಸ್ಥಾನಕ್ಕಾಗಿ ಸೆಣಸಾಡಲಿವೆ. ಈ ನಡುವೆ ನ್ಯೂಜಿಲೆಂಡ್ ವಿರುದ್ಧದ ಪಂದ್ಯದ ನಂತರ ಟೀಂ ಇಂಡಿಯಾ ಆಟಗಾರರಿಗೆ ರಜೆ ನೀಡಲಾಗುವುದು ಎಂಬ ಮಾಹಿತಿ ಹೊರಬಿದ್ದಿದೆ.

ಯಾವ ಕಾರಣಕ್ಕಾಗಿ ರಜೆ?

ನ್ಯೂಜಿಲೆಂಡ್ ವಿರುದ್ಧದ ಪಂದ್ಯದ ನಂತರ ಭಾರತ, ಇಂಗ್ಲೆಂಡ್ ವಿರುದ್ಧ ತನ್ನ ಮುಂದಿನ ಪಂದ್ಯವನ್ನು ಆಡಲಿದೆ. ಈ ಪಂದ್ಯ ಅಕ್ಟೋಬರ್ 29 ರಂದು ಲಕ್ನೋದಲ್ಲಿ ನಡೆಯಲಿದೆ. ಅಂದರೆ ಈ ಪಂದ್ಯಕ್ಕೆ ಒಂದು ವಾರ ಬಾಕಿ ಇರಲಿದೆ. ಹೀಗಾಗಿ ಆಟಗಾರರಿಗೆ ಎರಡರಿಂದ ಮೂರು ದಿನಗಳ ಕಾಲ ಬಿಡುವು ನೀಡಲು ಬಿಸಿಸಿಐ ನಿರ್ಧರಿಸಿದೆ ಎಂದು ಮೂಲಗಳು ತಿಳಿಸಿವೆ. ಈ ರಜೆಯ ಅವಧಿಯಲ್ಲಿ ಆಟಗಾರರು ಮನೆಗೆ ಹೋಗಬಹುದು ಮತ್ತು ಅವರ ಕುಟುಂಬಗಳೊಂದಿಗೆ ಸಮಯ ಕಳೆಯಬಹುದು. ಆ ಬಳಿಕ ಅಕ್ಟೋಬರ್ 26 ರಂದು ಎಲ್ಲಾ ಆಟಗಾರರು ಮತ್ತೊಮ್ಮೆ ಲಕ್ನೋದಲ್ಲಿ ತಂಡವನ್ನು ಸೇರಿಕೊಳ್ಳಲಿದ್ದಾರೆ ಎಂದು ವರದಿಯಾಗಿದೆ.

IND vs NZ: ಟೀಂ ಇಂಡಿಯಾಗೆ ಆಘಾತ; ನ್ಯೂಜಿಲೆಂಡ್ ವಿರುದ್ಧ ಕಣಕ್ಕಿಳಿಯುವುದಿಲ್ಲ ಹಾರ್ದಿಕ್ ಪಾಂಡ್ಯ..!

ಭಾರತ ಏಕದಿನ ವಿಶ್ವಕಪ್‌ನಲ್ಲಿ ತನ್ನ ಲೀಗ್ ಪಂದ್ಯಗಳನ್ನು ವಿವಿಧ ಸ್ಥಳಗಳಲ್ಲಿ ಆಡುತ್ತಿರುವ ಏಕೈಕ ತಂಡವಾಗಿದೆ. ಆದ್ದರಿಂದ ಕೆಲಸದ ಹೊರೆಯನ್ನು ಪರಿಗಣಿಸಿ ಅಭ್ಯಾಸ ಶಿಬಿರದ ಸಮಯವನ್ನು ನಿಗದಿಪಡಿಸಲಾಗಿದೆ. ಆಟಗಾರರು ಪಂದ್ಯಕ್ಕೆ 48 ಗಂಟೆಗಳ ಮೊದಲು ತರಬೇತಿ ಸೆಷನ್ನಲ್ಲಿ ಭಾಗವಹಿಸುತ್ತಾರೆ. ಆದರೆ ಬ್ಯಾಕ್‌ಅಪ್ ಆಟಗಾರರು ಮಾತ್ರ ಪಂದ್ಯದ ಒಂದು ದಿನದ ಮೊದಲು ಅಬ್ಯಾಸದಲ್ಲಿ ತೊಡಗಿಕೊಳ್ಳುತ್ತಿದ್ದಾರೆ.

ಹಾರ್ದಿಕ್ ಅಲಭ್ಯ

ಮತ್ತೊಂದೆಡೆ ಹಾರ್ದಿಕ್ ಪಾಂಡ್ಯ ಗಾಯಗೊಂಡಿರುವುದು ಭಾರತ ತಂಡವನ್ನು ಚಿಂತೆಗೀಡು ಮಾಡಿದ್ದು, ನ್ಯೂಜಿಲೆಂಡ್ ವಿರುದ್ಧದ ಪಂದ್ಯದಿಂದ ಪಾಂಡ್ಯ ತಂಡದಿಂದ ಹೊರಗುಳಿಯಲಿದ್ದಾರೆ. ಅಲ್ಲದೆ ಚೇತರಿಸಿಕೊಳ್ಳಲು ಬೆಂಗಳೂರಿನಲ್ಲಿರುವ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಗೆ ಕಳುಹಿಸಲಾಗುವುದು ಎಂಬ ಮಾಹಿತಿ ಇದೆ. ವಿರಾಮದ ನಂತರ ಹಾರ್ದಿಕ್ ಲಕ್ನೋದಲ್ಲಿ ಟೀಂ ಇಂಡಿಯಾದ ಶಿಬಿರವನ್ನು ಸೇರಿಕೊಳ್ಳಲಿದ್ದಾರೆ.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ