AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

World Cup 2023 Points Table: ಕಿವೀಸ್ ಮಣಿಸಿ ಪಾಯಿಂಟ್‌ ಪಟ್ಟಿಯಲ್ಲಿ ನಂ.1 ಸ್ಥಾನಕ್ಕೇರಿದ ಭಾರತ..!

ICC World Cup 2023 Updated Points Table: ಈ ಗೆಲುವಿನೊಂದಿಗೆ ಎಲ್ಲಾ 10 ತಂಡಗಳಲ್ಲಿ ಯಾವುದೇ ಪಂದ್ಯವನ್ನು ಸೋಲದ ಏಕೈಕ ತಂಡವಾಗಿ ಭಾರತ ಹೊರಹೊಮ್ಮಿದೆ. ಪರಿಣಾಮವಾಗಿ ಟೀಂ ಇಂಡಿಯಾ ಇದೀಗ ಪಾಯಿಂಟ್ ಪಟ್ಟಿಯಲ್ಲಿಯೂ ಮೊದಲ ಸ್ಥಾನಕ್ಕೆ ತಲುಪಿದೆ.

World Cup 2023 Points Table: ಕಿವೀಸ್ ಮಣಿಸಿ ಪಾಯಿಂಟ್‌ ಪಟ್ಟಿಯಲ್ಲಿ ನಂ.1 ಸ್ಥಾನಕ್ಕೇರಿದ ಭಾರತ..!
ಭಾರತ- ನ್ಯೂಜಿಲೆಂಡ್
ಪೃಥ್ವಿಶಂಕರ
|

Updated on: Oct 23, 2023 | 6:10 AM

Share

20 ವರ್ಷಗಳ ಕಾದ ಬಳಿಕ ಕೊನೆಗೂ ನ್ಯೂಜಿಲೆಂಡ್ ತಂಡವನ್ನು ಸೋಲಿಸುವಲ್ಲಿ ಟೀಂ ಇಂಡಿಯಾ (India Vs New Zealand) ಯಶಸ್ವಿಯಾಗಿದೆ. ಧರ್ಮಶಾಲಾದಲ್ಲಿ ನಡೆದ ವಿಶ್ವಕಪ್ 2023 ಪಂದ್ಯದಲ್ಲಿ (ICC World Cup 2023) ನ್ಯೂಜಿಲೆಂಡ್ ತಂಡವನ್ನು 4 ವಿಕೆಟ್‌ಗಳಿಂದ ಸೋಲಿಸುವ ಮೂಲಕ ಭಾರತವು ಟೂರ್ನಿಯಲ್ಲಿ ತನ್ನ ಗೆಲುವಿನ ಸರಣಿಯನ್ನು ಮುಂದುವರೆಸಿದೆ. ಮೊಹಮ್ಮದ್ ಶಮಿ (Mohammed Shami) ಅವರ 5 ವಿಕೆಟ್ ಮತ್ತು ವಿರಾಟ್ ಕೊಹ್ಲಿ (Virat Kohli) ಅವರ ಅದ್ಭುತ 95 ರನ್‌ಗಳ ಸ್ಮರಣೀಯ ಇನ್ನಿಂಗ್ಸ್​ನಿಂದಾಗಿ ಟೀಂ ಇಂಡಿಯಾ ಗೆಲುವಿನ ನಗೆ ಬೀರಿತು. ಈ ಗೆಲುವಿನೊಂದಿಗೆ ಎಲ್ಲಾ 10 ತಂಡಗಳಲ್ಲಿ ಯಾವುದೇ ಪಂದ್ಯವನ್ನು ಸೋಲದ ಏಕೈಕ ತಂಡವಾಗಿ ಭಾರತ ಹೊರಹೊಮ್ಮಿದೆ. ಪರಿಣಾಮವಾಗಿ ಟೀಂ ಇಂಡಿಯಾ ಇದೀಗ ಪಾಯಿಂಟ್ ಪಟ್ಟಿಯಲ್ಲಿಯೂ ಮೊದಲ ಸ್ಥಾನಕ್ಕೆ ತಲುಪಿದೆ.

ಧರ್ಮಶಾಲಾದಲ್ಲಿ ನಡೆದ ಈ ಪಂದ್ಯದ ಮೇಲೆ ಎಲ್ಲರ ಕಣ್ಣು ನೆಟ್ಟಿತ್ತು. ಈ ಪಂದ್ಯಕ್ಕೂ ಮುನ್ನ ಭಾರತ ಮತ್ತು ನ್ಯೂಜಿಲೆಂಡ್ ತಂಡಗಳು ಪ್ರಸಕ್ತ ವಿಶ್ವಕಪ್‌ನಲ್ಲಿ ಯಾವುದೇ ಪಂದ್ಯವನ್ನು ಸೋತಿರಲಿಲ್ಲ. ಉಭಯ ತಂಡಗಳು ತಲಾ 8 ಅಂಕಗಳನ್ನು ಹೊಂದಿದ್ದವು. ಆದರೆ ನೆಟ್ ರನ್ ರೇಟ್ ಆಧಾರದ ಮೇಲೆ ನ್ಯೂಜಿಲೆಂಡ್ ಭಾರತಕ್ಕಿಂತ ಮುಂದಿತ್ತು. ಹೀಗಾಗಿ ನ್ಯೂಜಿಲೆಂಡ್ ವಿರುದ್ಧದ ಸೋಲಿನ ಸರಣಿಯನ್ನು ಟೀಂ ಇಂಡಿಯಾ ಕೊನೆಗೊಳಿಸಲು ಮತ್ತು ನಂಬರ್ ಒನ್ ಸ್ಥಾನವನ್ನು ತಲುಪಲು ಸಾಧ್ಯವಾಗುತ್ತದೆಯೇ ಎಂದು ಎಲ್ಲರೂ ಕಾದು ಕುಳಿತಿದ್ದರು. ಎಲ್ಲರ ನಂಬಿಕೆಯನ್ನು ಹುಸಿಗೊಳಿಸದ ಟೀಂ ಇಂಡಿಯಾ, ಕಿವೀಸ್ ವಿರುದ್ಧ ಗೆದ್ದು, ಪಾಯಿಂಟ್ ಪಟ್ಟಿಯಲ್ಲಿ ನಂಬರ್ 1 ಸ್ಥಾನಕ್ಕೇರಿತು.

20 ವರ್ಷಗಳ ನಂತರ ಕಿವೀಸ್ ವಿರುದ್ಧ ಗೆದ್ದ ಭಾರತ..!

ಟೀಂ ಇಂಡಿಯಾ ನಂಬರ್ 1

ಟೂರ್ನಿಯ 21 ಪಂದ್ಯಗಳ ನಂತರ ಭಾರತ ಇದೀಗ ಪಾಯಿಂಟ್ಸ್ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೆ ತಲುಪಿದೆ. ಟೀಂ ಇಂಡಿಯಾ ತನ್ನ ಎಲ್ಲಾ 5 ಪಂದ್ಯಗಳನ್ನು ಗೆದ್ದು ಗರಿಷ್ಠ 10 ಅಂಕಗಳನ್ನು ಹೊಂದಿದೆ. ಆದರೆ ನ್ಯೂಜಿಲೆಂಡ್ ಈಗ 5 ಪಂದ್ಯಗಳಲ್ಲಿ 8 ಅಂಕಗಳೊಂದಿಗೆ ಎರಡನೇ ಸ್ಥಾನಕ್ಕೆ ಕುಸಿದಿದೆ. ಈ ಗೆಲುವಿನ ಹೊರತಾಗಿಯೂ, ಟೀಂ ಇಂಡಿಯಾ ನೆಟ್ ರನ್​ರೇಟ್​ನಲ್ಲಿ ನ್ಯೂಜಿಲೆಂಡ್​ಗಿಂತ ಹಿಂದಿದೆ.

ಈ ಪಂದ್ಯದ ನಂತರ, ಟೀಮ್ ಇಂಡಿಯಾದ ನೆಟ್ ರನ್​ರೇಟ್ 1.353 ಆಗಿದ್ದರೆ, ನ್ಯೂಜಿಲೆಂಡ್‌ನ ರನ್ ರೇಟ್ 1.481 ಆಗಿದೆ. ಆದಾಗ್ಯೂ, ರನ್ ರೇಟ್ ವಿಷಯದಲ್ಲಿ, ದಕ್ಷಿಣ ಆಫ್ರಿಕಾ ಮುಂಚೂಣಿಯಲ್ಲಿದ್ದು, ಅದರ ನೆಟ್ ರನ್​ರೇಟ್ 2.212 ಆಗಿದೆ. ಆದರೆ, ದಕ್ಷಿಣ ಆಫ್ರಿಕಾ 4 ಪಂದ್ಯಗಳಲ್ಲಿ 6 ಅಂಕ ಪಡೆದು ಮೂರನೇ ಸ್ಥಾನದಲ್ಲಿದೆ.

ಪಾಕಿಸ್ತಾನಕ್ಕೆ ಯಾವ ಸ್ಥಾನ?

ಇನ್ನುಳಿದ ತಂಡಗಳ ಬಗ್ಗೆ ಹೇಳುವುದಾದರೆ ಹಾಲಿ ಚಾಂಪಿಯನ್ ಇಂಗ್ಲೆಂಡ್ 4 ಪಂದ್ಯಗಳಲ್ಲಿ 3 ಸೋಲಿನೊಂದಿಗೆ ಒಂಬತ್ತನೇ ಸ್ಥಾನದಲ್ಲಿದೆ. ಅಫ್ಘಾನಿಸ್ತಾನ ಮಾತ್ರ ಅದಕ್ಕಿಂತ ಕೆಳಗಿದೆ. ಎರಡೂ ತಂಡಗಳು ತಲಾ 2 ಅಂಕಗಳನ್ನು ಹೊಂದಿವೆ ಆದರೆ ನೆಟ್ ರನ್​ರೇಟ್​ನಲ್ಲಿನ ವ್ಯತ್ಯಾಸದಿಂದಾಗಿ, ಇಂಗ್ಲೆಂಡ್ ಒಂದು ಸ್ಥಾನ ಮೇಲಿದೆ. ಇದೀಗ ಅಫ್ಘಾನಿಸ್ತಾನಕ್ಕೆ ಇಂಗ್ಲೆಂಡ್ ತಂಡವನ್ನು ಮೀರಿಸುವ ಅವಕಾಶವಿದೆ. ಅಕ್ಟೋಬರ್ 23 ಸೋಮವಾರದಂದು ಅಫ್ಘಾನಿಸ್ತಾನ ತನ್ನ ಮುಂದಿನ ಪಂದ್ಯದಲ್ಲಿ ಪಾಕಿಸ್ತಾನವನ್ನು ಎದುರಿಸಬೇಕಾಗಿದೆ. ಇಲ್ಲಿ ಅಫ್ಘಾನಿಸ್ತಾನ, ಪಾಕಿಸ್ತಾನವನ್ನು ಮಣಿಸಿದರೆ 4 ಅಂಕ ಪಡೆದು ಆರನೇ ಸ್ಥಾನಕ್ಕೇರಲಿದೆ.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
pruthvi Shankar
pruthvi Shankar

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ