ಇಂಗ್ಲೆಂಡ್ ತಂಡವನ್ನು ಮಣಿಸಿ ಪಾಯಿಂಟ್ ಪಟ್ಟಿಯಲ್ಲಿ ಮತ್ತೆ ನಂ.1 ಸ್ಥಾನಕ್ಕೇರಿದ ಭಾರತ..!

ICC World Cup 2023 Updated Points Table: ಈ ಗೆಲುವಿನೊಂದಿಗೆ ಟೀಂ ಇಂಡಿಯಾ ಪಾಯಿಂಟ್ಸ್ ಪಟ್ಟಿಯಲ್ಲಿ ಮೊದಲ ಸ್ಥಾನ ಪಡೆದುಕೊಂಡಿದ್ದರೆ, ಎಂದಿನಂತೆ ಇಂಗ್ಲೆಂಡ್ ಕೊನೆಯ ಸ್ಥಾನದಲ್ಲಿ ಉಳಿದಿದೆ.ಈ ಮೂಲಕ ಪ್ರಸ್ತುತ ಭಾರತ, ದಕ್ಷಿಣ ಆಫ್ರಿಕಾ, ನ್ಯೂಜಿಲೆಂಡ್ ಮತ್ತು ಆಸ್ಟ್ರೇಲಿಯಾ ಅಗ್ರ 4 ಸ್ಥಾನದಲ್ಲಿದ್ದು, ಶ್ರೀಲಂಕಾ, ಪಾಕಿಸ್ತಾನ, ನೆದರ್ಲ್ಯಾಂಡ್ಸ್ ಮತ್ತು ಅಫ್ಘಾನಿಸ್ತಾನ ತಂಡಗಳಿಗೂ ಸೆಮಿಫೈನಲ್ ಬಾಗಿಲು ಇನ್ನೂ ತೆರೆದಿದೆ.

ಇಂಗ್ಲೆಂಡ್ ತಂಡವನ್ನು ಮಣಿಸಿ ಪಾಯಿಂಟ್ ಪಟ್ಟಿಯಲ್ಲಿ ಮತ್ತೆ ನಂ.1 ಸ್ಥಾನಕ್ಕೇರಿದ ಭಾರತ..!
ಟೀಂ ಇಂಡಿಯಾ
Follow us
ಪೃಥ್ವಿಶಂಕರ
|

Updated on: Oct 29, 2023 | 11:04 PM

ಏಕದಿನ ವಿಶ್ವಕಪ್​ನಲ್ಲಿ (ICC ODI World Cup 2023) ಹಾಲಿ ಚಾಂಪಿಯನ್ ಇಂಗ್ಲೆಂಡ್ ತಂಡ ನಿರಾಶಾದಾಯಕ ಪ್ರದರ್ಶನ ತೋರಿದೆ. ಆರು ಪಂದ್ಯಗಳಲ್ಲಿ ಐದರಲ್ಲಿ ಸೋತಿರುವ ಬಟ್ಲರ್ ಪಡೆ (India vs England) ಭಾರತದ ವಿರುದ್ಧ ಸೋತು ಟೂರ್ನಿಯಲ್ಲಿ ಸೆಮಿಫೈನಲ್ ರೇಸ್​ನಿಂದ ಭಾಗಶಃ ಹೊರಬಿದ್ದಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಟೀಂ ಇಂಡಿಯಾ ಕೇವಲ 229 ರನ್ ಗಳಿಸಿತ್ತು. ಈ ಗುರಿ ಬೆನ್ನಟ್ಟಿದ ಇಂಗ್ಲೆಂಡ್ 129 ರನ್‌ಗಳಿಗೆ ಆಲೌಟ್ ಆಯಿತು. ಈ ಗೆಲುವಿನೊಂದಿಗೆ ಟೀಂ ಇಂಡಿಯಾ ಪಾಯಿಂಟ್ಸ್ ಪಟ್ಟಿಯಲ್ಲಿ ಮೊದಲ ಸ್ಥಾನ ಪಡೆದುಕೊಂಡಿದ್ದರೆ, ಎಂದಿನಂತೆ ಇಂಗ್ಲೆಂಡ್ ಕೊನೆಯ ಸ್ಥಾನದಲ್ಲಿ ಉಳಿದಿದೆ.ಈ ಮೂಲಕ ಪ್ರಸ್ತುತ ಭಾರತ, ದಕ್ಷಿಣ ಆಫ್ರಿಕಾ, ನ್ಯೂಜಿಲೆಂಡ್ ಮತ್ತು ಆಸ್ಟ್ರೇಲಿಯಾ ಅಗ್ರ 4 ಸ್ಥಾನದಲ್ಲಿದ್ದು, ಶ್ರೀಲಂಕಾ, ಪಾಕಿಸ್ತಾನ, ನೆದರ್ಲ್ಯಾಂಡ್ಸ್ ಮತ್ತು ಅಫ್ಘಾನಿಸ್ತಾನ ತಂಡಗಳಿಗೂ ಸೆಮಿಫೈನಲ್ ಬಾಗಿಲು ಇನ್ನೂ ತೆರೆದಿದೆ.

ಯಾವ ತಂಡಕ್ಕೆ ಯಾವ ಸ್ಥಾನ?

ಆರು ಪಂದ್ಯಗಳಲ್ಲಿ ಆರರಲ್ಲಿ ಗೆದ್ದಿರುವ ಭಾರತ ತಂಡ 12 ಅಂಕಗಳು ಮತ್ತು +1.405 ನೆಟ್​ ರನ್​ರೇಟ್‌ನೊಂದಿಗೆ ಅಗ್ರ ಸ್ಥಾನದಲ್ಲಿದೆ. ದಕ್ಷಿಣ ಆಫ್ರಿಕಾ 6 ಪಂದ್ಯಗಳಲ್ಲಿ 5 ರಲ್ಲಿ ಗೆದ್ದ ನಂತರ 10 ಅಂಕಗಳು ಮತ್ತು +2.032 ನೆಟ್​ ರನ್​ರೇಟ್‌ನೊಂದಿಗೆ ಎರಡನೇ ಸ್ಥಾನದಲ್ಲಿದೆ. ನ್ಯೂಜಿಲೆಂಡ್ 8 ಅಂಕಗಳು ಮತ್ತು +1.232 ನೆಟ್​ ರನ್​ರೇಟ್‌ನೊಂದಿಗೆ ಮೂರನೇ ಸ್ಥಾನದಲ್ಲಿದೆ. ಆಸ್ಟ್ರೇಲಿಯಾ 8 ಅಂಕಗಳೊಂದಿಗೆ ಮತ್ತು +0.970 ನೆಟ್ ರನ್ ರೇಟ್‌ನೊಂದಿಗೆ ನಾಲ್ಕನೇ ಸ್ಥಾನದಲ್ಲಿದೆ. ಈ ಅಗ್ರ 4 ತಂಡಗಳು ಪ್ರಸ್ತುತ ಸೆಮಿಫೈನಲ್‌ಗೆ ಅರ್ಹತೆ ಪಡೆದಿವೆ. ಆದರೆ ಶ್ರೀಲಂಕಾ, ಪಾಕಿಸ್ತಾನ, ಅಫ್ಘಾನಿಸ್ತಾನ ಮತ್ತು ನೆದರ್ಲ್ಯಾಂಡ್ಸ್ ತಂಡಗಳಿಗೂ ಈ ಅವಕಾಶವಿದೆ.

IND vs ENG: 100 ರನ್​ಗಳ ಹೀನಾಯ ಸೋಲಿಗೆ ಜೋಸ್ ಬಟ್ಲರ್ ದೂರಿದ್ದು ಯಾರನ್ನ?

ಲಂಕಾ- ಅಫ್ಘಾನ್​ಗೆ ಕೊನೆಯ ಅವಕಾಶ

ಶ್ರೀಲಂಕಾ 5 ಪಂದ್ಯಗಳಲ್ಲಿ 2ರಲ್ಲಿ ಜಯ ಸಾಧಿಸಿದ್ದು, 4 ಅಂಕಗಳೊಂದಿಗೆ 5ನೇ ಸ್ಥಾನದಲ್ಲಿದೆ. ಲಂಕಾ ಪಡೆಗೆ ಇನ್ನೂ ನಾಲ್ಕು ಪಂದ್ಯಗಳು ಬಾಕಿಯಿದ್ದು, ಅದರಲ್ಲಿ ಗೆದ್ದರೆ 12 ಅಂಕ ಸಿಗಲಿದೆ. ಅಫ್ಘಾನಿಸ್ತಾನ ತಂಡಕ್ಕೂ ಇದೇ ಅವಕಾಶಗಳಿವೆ. ಆದರೆ ಪಾಕಿಸ್ತಾನ ಮತ್ತು ನೆದರ್ಲೆಂಡ್ಸ್‌ ತಂಡಗಳಿಗೆ ಸೆಮಿಫೈನಲ್ ಹಾದಿ ಕೊಂಚ ಕಠಿಣ. ಏಕೆಂದರೆ ಈ ತಂಡಗಳ ಬಳಿ 4 ಅಂಕಗಳಿದ್ದರೂ ಮೂರು ಪಂದ್ಯಗಳು ಮಾತ್ರ ಬಾಕಿ ಉಳಿದಿವೆ. ಉಳಿದಿರುವ ಮೂರೂ ಪಂದ್ಯಗಳನ್ನು ಗೆದ್ದರೂ ಈ ತಂಡಗಳ ಬಳಿ ಕೇವಲ 10 ಅಂಕ ಇರಲಿದೆ. ಆದ್ದರಿಂದ ಈ ಎರಡು ತಂಡಗಳು ಸೆಮಿಫೈನಲ್​ಗೆರಬೇಕೆಂದರೆ ಒಂದು ಪವಾಡ ನಡೆಯಬೇಕಿದೆ.

ಬಾಂಗ್ಲಾ- ಇಂಗ್ಲೆಂಡ್ ಔಟ್

ಟೂರ್ನಿಯಲ್ಲಿ ಬಾಂಗ್ಲಾದೇಶ ಮತ್ತು ಇಂಗ್ಲೆಂಡ್ ಸವಾಲು ಭಾಗರ್ಶ ಅಂತ್ಯಗೊಂಡಿದೆ. ಆದರೆ ಉಳಿದ ತಂಡಗಳ ಲೆಕ್ಕಾಚಾರವನ್ನು ಹಾಳು ಮಾಡುವ ಅವಕಾಶ ಈ ತಂಡಗಳಿಗಿದೆ. ಬಾಂಗ್ಲಾದೇಶ ಮುಂದಿನ ಪಂದ್ಯದಲ್ಲಿ ಪಾಕಿಸ್ತಾನ, ಶ್ರೀಲಂಕಾ ಮತ್ತು ಆಸ್ಟ್ರೇಲಿಯಾವನ್ನು ಎದುರಿಸಲಿದೆ. ಇಂಗ್ಲೆಂಡ್ ಮುಂದಿನ ಪಂದ್ಯದಲ್ಲಿ ಆಸ್ಟ್ರೇಲಿಯಾ, ನೆದರ್ಲೆಂಡ್ ಮತ್ತು ಪಾಕಿಸ್ತಾನವನ್ನು ಎದುರಿಸಲಿದೆ.

ಸೆಮಿಫೈನಲ್ ಪಂದ್ಯಗಳು ನವೆಂಬರ್ 15 ಮತ್ತು ನವೆಂಬರ್ 16 ರಂದು ನಡೆಯಲಿವೆ. ಅಂಕಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವ ತಂಡ ನಾಲ್ಕನೇ ಶ್ರೇಯಾಂಕದ ತಂಡದ ವಿರುದ್ಧ ಆಡಲಿದ್ದು, ಎರಡು ಮತ್ತು ಮೂರನೇ ಶ್ರೇಯಾಂಕದ ತಂಡಗಳು ಸೆಮಿಫೈನಲ್‌ನಲ್ಲಿ ಆಡಲಿವೆ. ನವೆಂಬರ್ 19 ರಂದು ಫೈನಲ್ ಪಂದ್ಯ ನಡೆಯಲಿದೆ.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಡಿವೈಎಸ್​ಪಿಯ ಆ ವರ್ತನೆ ಕಂಡು ಶಾಕ್ ಆಯ್ತು... ಕಣ್ಣೀರಿಟ್ಟ ಮಹಿಳೆ
ಡಿವೈಎಸ್​ಪಿಯ ಆ ವರ್ತನೆ ಕಂಡು ಶಾಕ್ ಆಯ್ತು... ಕಣ್ಣೀರಿಟ್ಟ ಮಹಿಳೆ
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM
ಗಾಂಧಿ ಎಐಸಿಸಿ ನಾಯಕತ್ವ: ಶತಮಾನೋತ್ಸವ ಕಾರ್ಯಕ್ರಮ ಬಗ್ಗೆ ಶಿವಕುಮಾರ್ ಮಾತು
ಗಾಂಧಿ ಎಐಸಿಸಿ ನಾಯಕತ್ವ: ಶತಮಾನೋತ್ಸವ ಕಾರ್ಯಕ್ರಮ ಬಗ್ಗೆ ಶಿವಕುಮಾರ್ ಮಾತು
ಆಂಧ್ರದ ವಿಶಾಖಪಟ್ಟಣದಲ್ಲಿ ಪ್ರಧಾನಿ ಮೋದಿ ರೋಡ್ ಶೋ
ಆಂಧ್ರದ ವಿಶಾಖಪಟ್ಟಣದಲ್ಲಿ ಪ್ರಧಾನಿ ಮೋದಿ ರೋಡ್ ಶೋ