ಭಾರತ- ಪಾಕ್ ಕ್ರಿಕೆಟ್ ಕದನಕ್ಕೆ ಕ್ಷಣಗಣನೆ; ಪಂದ್ಯ ಎಷ್ಟು ಗಂಟೆಗೆ, ಯಾವ ಚಾನೆಲ್​ನಲ್ಲಿ ನೇರ ಪ್ರಸಾರ? ಇಲ್ಲಿದೆ ಪೂರ್ಣ ಮಾಹಿತಿ

ICC World Cup 2023, India Vs Pakistan Live Streaming: 2023 ರ ಏಕದಿನ ವಿಶ್ವಕಪ್​ನ ತನ್ನ 3 ನೇ ಪಂದ್ಯದಲ್ಲಿ ಟೀಂ ಇಂಡಿಯಾ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನವನ್ನು ಎದುರಿಸಲಿದೆ. ಈ ಪಂದ್ಯ ಅಕ್ಟೋಬರ್ 14 ರಂದು ಅಹಮದಾಬಾದ್‌ನ ನರೇಂದ್ರ ಮೋದಿ ಮೈದಾನದಲ್ಲಿ ನಡೆಯಲ್ಲಿದೆ.

ಭಾರತ- ಪಾಕ್ ಕ್ರಿಕೆಟ್ ಕದನಕ್ಕೆ ಕ್ಷಣಗಣನೆ; ಪಂದ್ಯ ಎಷ್ಟು ಗಂಟೆಗೆ, ಯಾವ ಚಾನೆಲ್​ನಲ್ಲಿ ನೇರ ಪ್ರಸಾರ? ಇಲ್ಲಿದೆ ಪೂರ್ಣ ಮಾಹಿತಿ
ಭಾರತ- ಪಾಕಿಸ್ತಾನ
Follow us
ಪೃಥ್ವಿಶಂಕರ
|

Updated on: Oct 13, 2023 | 7:05 AM

2023 ರ ಏಕದಿನ ವಿಶ್ವಕಪ್​ನ (ICC World Cup 2023) ತನ್ನ 3 ನೇ ಪಂದ್ಯದಲ್ಲಿ ಟೀಂ ಇಂಡಿಯಾ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನವನ್ನು (IND vs PAK) ಎದುರಿಸಲಿದೆ. ಈ ಪಂದ್ಯ ಅಕ್ಟೋಬರ್ 14 ರಂದು ಅಹಮದಾಬಾದ್‌ನ ನರೇಂದ್ರ ಮೋದಿ ಮೈದಾನದಲ್ಲಿ (Narendra Modi Stadium in Ahmedabad) ನಡೆಯಲ್ಲಿದೆ. ವಿಶ್ವಕಪ್​ನ ಹೈವೋಲ್ಟೇಜ್ ಕದನವನ್ನು ವಿಶಿಷ್ಟಗೊಳಿಸಲು ಬಿಸಿಸಿಐ ಕೂಡ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ಹೀಗಾಗಿ ನಿರೀಕ್ಷೆಯಂತೆ ಕ್ರೀಡಾಂಗಣ ಅಭಿಮಾನಿಗಳಿಂದ ತುಂಬಿ ತುಳುಕುವುದು ಖಚಿತ. ಅಲ್ಲದೆ ಪ್ರತಿಷ್ಠೆಯ ಪಂದ್ಯವಾಗಿರುವುದರಿಂದ ಉಭಯ ತಂಡಗಳಿಗೂ ಈ ಪಂದ್ಯದ ಗೆಲುವು ಅವಶ್ಯಕವಾಗಿದೆ. ಹೀಗಾಗಿ ಎರಡೂ ತಂಡಗಳು ಈಗಾಗಲೇ ಅಹಮದಾಬಾದ್‌ ತಲುಪಿದ್ದು, ಅಭ್ಯಾಸವನ್ನು ಆರಂಭಿಸಿವೆ.

ಇನ್ನು ಉಭಯ ತಂಡಗಳು ಕೂಡ ಪಂದ್ಯಾವಳಿಯಲ್ಲಿ ಆಡಿರುವ ಎರಡೂ ಪಂದ್ಯಗಳನ್ನು ಗೆದ್ದಿರುವುದರಿಂದ ಆತ್ಮವಿಶ್ವಾಸದಿಂದ ಬೀಗುತ್ತಿವೆ. ಟೀಂ ಇಂಡಿಯಾ ತನ್ನ ಮೊದಲ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡವನ್ನು 6 ವಿಕೆಟ್​ಗಳಿಂದ ಮಣಿಸಿದರೆ, ಎರಡನೇ ಪಂದ್ಯದಲ್ಲಿ ಅಫ್ಘಾನಿಸ್ತಾನ ವಿರುದ್ಧ 8 ವಿಕೆಟ್‌ಗಳಿಂದ ಗೆಲುವು ಸಾಧಿಸಿತ್ತು. ಮತ್ತೊಂದೆಡೆ, ಪಾಕಿಸ್ತಾನವು ನೆದರ್ಲ್ಯಾಂಡ್ಸ್ ಮತ್ತು ಶ್ರೀಲಂಕಾ ವಿರುದ್ಧದ ತನ್ನ ಎರಡೂ ಪಂದ್ಯಗಳನ್ನು ಕ್ರಮವಾಗಿ 81 ರನ್ ಮತ್ತು 6 ವಿಕೆಟ್​ಗಳಿಂದ ಗೆದ್ದುಕೊಂಡಿದೆ.

ಭಾರತ- ಪಾಕ್ ಪಂದ್ಯಕ್ಕೂ ಮುನ್ನ ವರ್ಣರಂಜಿತ ಕಾರ್ಯಕ್ರಮ; ಖಚಿತ ಪಡಿಸಿದ ಬಿಸಿಸಿಐ

ಪಾಕ್ ಒಮ್ಮೆಯೂ ಗೆದ್ದಿಲ್ಲ

2013 ರಿಂದ ಟೀಂ ಇಂಡಿಯಾ ಐಸಿಸಿ ಟ್ರೋಫಿಯನ್ನು ಗೆದ್ದಿಲ್ಲವಾದ್ದರಿಂದ ಈ ಪಂದ್ಯಾವಳಿಯು ಭಾರತಕ್ಕೆ ನಿರ್ಣಾಯಕವಾಗಿದೆ. ಹಾಗಾಗಿ ಪ್ರತಿ ಪಂದ್ಯವೂ ರೋಹಿತ್ ಪಡೆಗೆ ಮುಖ್ಯವಾಗಿದೆ. ಅಲ್ಲದೆ ಪಾಕಿಸ್ತಾನ ವಿರುದ್ಧದ ಗೆಲುವು ತಂಡದ ಆತ್ಮವಿಶ್ವಾಸವನ್ನು ಇನ್ನಷ್ಟು ಹೆಚ್ಚಿಸಲಿದೆ. ಇನ್ನು ವಿಶ್ವಕಪ್ ಇತಿಹಾಸದಲ್ಲಿ ಭಾರತ ಮತ್ತು ಪಾಕಿಸ್ತಾನ ಏಳು ಬಾರಿ ಮುಖಾಮುಖಿಯಾಗಿದ್ದು, ಈ ಏಳು ಮುಖಾಮುಖಿಯಲ್ಲೂ ಭಾರತ ಗೆದ್ದಿದೆ.

ಪಂದ್ಯದ ಬಗ್ಗೆ ಪೂರ್ಣ ವಿವರ ಇಂತಿದೆ.

ಭಾರತ ಮತ್ತು ಪಾಕಿಸ್ತಾನ ನಡುವಿನ ವಿಶ್ವಕಪ್ ಪಂದ್ಯ ಯಾವಾಗ ನಡೆಯಲಿದೆ?

ಅಕ್ಟೋಬರ್ 14 ರ ಶನಿವಾರದಂದು ಭಾರತ ಮತ್ತು ಪಾಕಿಸ್ತಾನ ನಡುವಿನ ವಿಶ್ವಕಪ್ ಪಂದ್ಯ ನಡೆಯಲಿದೆ.

ಭಾರತ ಮತ್ತು ಪಾಕಿಸ್ತಾನ ನಡುವಿನ ವಿಶ್ವಕಪ್ ಪಂದ್ಯ ಎಷ್ಟು ಗಂಟೆಗೆ ಆರಂಭವಾಗಲಿದೆ?

ಭಾರತ ಮತ್ತು ಪಾಕಿಸ್ತಾನ ನಡುವಿನ ಪಂದ್ಯವು ಮಧ್ಯಾಹ್ನ 2 ಗಂಟೆಗೆ ಆರಂಭವಾಗಲಿದೆ.

ಭಾರತ ಮತ್ತು ಪಾಕಿಸ್ತಾನ ನಡುವಿನ ವಿಶ್ವಕಪ್ ಪಂದ್ಯ ಎಲ್ಲಿ ನಡೆಯಲಿದೆ?

ಭಾರತ ಮತ್ತು ಪಾಕಿಸ್ತಾನ ನಡುವಿನ ಪಂದ್ಯವು ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯಲಿದೆ.

ಭಾರತ ಮತ್ತು ಪಾಕಿಸ್ತಾನ ಪಂದ್ಯದ ನೇರ ಪ್ರಸಾರವನ್ನು ಎಲ್ಲಿ ವೀಕ್ಷಿಸಬೇಕು?

ಭಾರತ ಮತ್ತು ಪಾಕಿಸ್ತಾನ ಪಂದ್ಯದ ನೇರ ಪ್ರಸಾರವನ್ನು ಎಲ್ಲಾ ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್ ಚಾನೆಲ್‌ಗಳಲ್ಲಿ ವೀಕ್ಷಿಸಬಹುದಾಗಿದೆ.

ಭಾರತ ಮತ್ತು ಪಾಕಿಸ್ತಾನ ಪಂದ್ಯವನ್ನು ಆನ್‌ಲೈನ್‌ನಲ್ಲಿ ಉಚಿತವಾಗಿ ವೀಕ್ಷಿಸುವುದು ಹೇಗೆ?

ಭಾರತ ಮತ್ತು ಪಾಕಿಸ್ತಾನದ ಪಂದ್ಯದ ಲೈವ್-ಸ್ಟ್ರೀಮಿಂಗ್ ಅನ್ನು ಡಿಸ್ನಿ+ ಹಾಟ್‌ಸ್ಟಾರ್ ಅಪ್ಲಿಕೇಶನ್ ಮತ್ತು ವೆಬ್‌ಸೈಟ್‌ನಲ್ಲಿ ವೀಕ್ಷಿಸಬಹುದಾಗಿದೆ.

ಭಾರತ: ಸ್ಟಾರ್ ಸ್ಪೋರ್ಟ್ಸ್ ಮತ್ತು ಡಿಸ್ನಿ+ ಹಾಟ್‌ಸ್ಟಾರ್

ಪಾಕಿಸ್ತಾನ: ಪಿಟಿವಿ ಸ್ಪೋರ್ಟ್ಸ್.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ