ಬರೋಬ್ಬರಿ 10 ವರ್ಷಗಳಿಂದ ಐಸಿಸಿ (ICC) ಟ್ರೋಫಿಯ ಬರ ಎದುರಿಸುತ್ತಿರುವ ಟೀಂ ಇಂಡಿಯಾ, ಈ ಬಾರಿಯ ವಿಶ್ವಕಪ್‌ನಲ್ಲಿ (ICC World Cup 2023) ಆ ಬರ ನೀಗಿಸುವ ಸೂಚನೆ ನೀಡುತ್ತಿದೆ. ಆತಿಥೇಯ ದೇಶವಾಗಿ ವಿಶ್ವಕಪ್ ಆಡುತ್ತಿರುವ ಟೀಂ ಇಂಡಿಯಾ ಇಡೀ ಟೂರ್ನಿಯಲ್ಲಿ ಒಂದೇ ಒಂದು ಪಂದ್ಯವನ್ನು ಸೋಲದೆ ಫೈನಲ್ ಪ್ರವೇಶಿದೆ. ಅಲ್ಲದೆ ಟೂರ್ನಿಯಲ್ಲಿ ಎಲ್ಲಾ ಬಲಿಷ್ಠ ತಂಡಗಳನ್ನು ಏಕಪಕ್ಷೀಯವಾಗಿ ಸೋಲಿಸಿದೆ. ಹೀಗಾಗಿ ಈ ಬಾರಿಯ ವಿಶ್ವ ಚಾಂಪಿಯನ್ ಭಾರತವೇ ಎಂಬುದು ಕ್ರಿಕೆಟ್ ಪಂಡಿತರ ಅಭಿಪ್ರಾಯವಾಗಿದೆ. ಇದಕ್ಕೆ ಪೂರಕವಾಗಿ ನವೆಂಬರ್ 15 ರಂದು ಬುಧವಾರ ನಡೆದ ಸೆಮಿಫೈನಲ್ (Semi Final) ಪಂದ್ಯ ಕೂಡ ಭಾರತವೇ ಚಾಂಪಿಯನ್ ಆಗಲಿದೆ ಎಂಬ ಭವಿಷ್ಯ ನುಡಿಯುತ್ತಿದೆ. ವಾಸ್ತವವಾಗಿ ಬುಧವಾರ ನಡೆದ ಫೈನಲ್ ಪಂದ್ಯದಲ್ಲಿ ತಂಡವು ನ್ಯೂಜಿಲೆಂಡ್ ತಂಡವನ್ನು (India Vs New Zealand) ಸೋಲಿಸಿತು. ಈ ಗೆಲುವಿನ ಬಳಿಕ ಇಂತಹದೊಂದು ಕಾಕತಾಳೀಯ ಹುಟ್ಟಿಕೊಂಡಿದ್ದು, ಈ ಬಾರಿ ಭಾರತವೇ ವಿಶ್ವಕಪ್‌ನಲ್ಲಿ ಚಾಂಪಿಯನ್ ಆಗಲಿದೆ ಎಂಬುದು ಅಭಿಮಾನಿಗಳ ಧೃಡ ಅಭಿಪ್ರಾಯವಾಗಿದೆ.
ಟೀಂ ಇಂಡಿಯಾ ನಾಲ್ಕನೇ ಬಾರಿಗೆ ಏಕದಿನ ವಿಶ್ವಕಪ್‌ನಲ್ಲಿ ಫೈನಲ್‌ಗೆ ಲಗ್ಗೆ ಇಟ್ಟಿದೆ. ಆದರೆ, ನಾವು ಪ್ರಶಸ್ತಿಗಳ ಬಗ್ಗೆ ಮಾತನಾಡಿದರೆ, ಭಾರತ ತಂಡವು ಎರಡು ಬಾರಿ ಮಾತ್ರ ವಿಶ್ವ ಚಾಂಪಿಯನ್ ಆಗಿದೆ. ವಿಶೇಷವೆಂದರೆ ಭಾರತ ಎರಡೂ ಭಾರಿ ಚಾಂಪಿಯನ್ ಆದಗಲೂ ತನ್ನ ಸೆಮಿಫೈನಲ್ ಪಂದ್ಯವನ್ನು ಬುಧವಾರದಂದೆ ಆಡಿತ್ತು. ಈ ಬಾರಿಯೂ ಬುಧವಾರವೇ ನಡೆದ ಸೆಮಿಫೈನಲ್ ಪಂದ್ಯದಲ್ಲಿ ಟೀಂ ಇಂಡಿಯಾ ಗೆದ್ದಿದೆ. ಇಂತಹ ಪರಿಸ್ಥಿತಿಯಲ್ಲಿ, ಈ ಕಾಕತಾಳೀಯ ನಿಜವಾದರೆ, ಟೀಂ ಇಂಡಿಯಾ 2023 ರ ವಿಶ್ವಕಪ್ ಚಾಂಪಿಯನ್ ಆಗುವುದು ಖಚಿತ.
ಕೊಹ್ಲಿಯನ್ನು ಸ್ವಾರ್ಥಿ ಎಂದಿದ್ದವನಿಗೆ ಪಾಕ್ ತಂಡದ ಮುಖ್ಯ ಕೋಚ್ ಹುದ್ದೆ..!
ಟೀಂ ಇಂಡಿಯಾ 1983 ರ ವಿಶ್ವಕಪ್‌ನ ಸೆಮಿಫೈನಲ್ ಪಂದ್ಯವನ್ನು ಜೂನ್ 22 ರಂದು ಆಡಿತು. ಬುಧವಾರ ನಡೆದ ಪಂದ್ಯದಲ್ಲಿ ಭಾರತ 6 ವಿಕೆಟ್‌ಗಳಿಂದ ಇಂಗ್ಲೆಂಡ್ ತಂಡವನ್ನು ಸೋಲಿಸಿತ್ತು. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಇಂಗ್ಲೆಂಡ್ 213 ರನ್ ಗಳಿಸಿತ್ತು. ಈ ಗುರಿಯನ್ನು ಟೀಂ ಇಂಡಿಯಾ 4 ವಿಕೆಟ್ ನಷ್ಟದಲ್ಲಿ ಸಾಧಿಸಿತ್ತು. ಆ ಬಳಿಕ ಭಾರತ ಫೈನಲ್‌ನಲ್ಲಿ ವೆಸ್ಟ್ ಇಂಡೀಸ್ ತಂಡವನ್ನು ಮಣಿಸಿ ಪ್ರಶಸ್ತಿ ಗೆದ್ದುಕೊಂಡಿತ್ತು.
2011ರ ವಿಶ್ವಕಪ್‌ನ ಸೆಮಿಫೈನಲ್ ಪಂದ್ಯವನ್ನು ಮಾರ್ಚ್ 30 ರಂದು ಟೀಂ ಇಂಡಿಯಾ ಆಡಿತ್ತು. ಕಾಕತಾಳೀಯವೆಂಬಂತೆ ಈ ದಿನವೂ ಬುಧವಾರವಾಗಿದ್ದು, ಪಾಕಿಸ್ತಾನ ವಿರುದ್ಧ ಟೀಂ ಇಂಡಿಯಾ ಜಯಭೇರಿ ಬಾರಿಸಿತ್ತು. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಭಾರತ 9 ವಿಕೆಟ್ ನಷ್ಟಕ್ಕೆ 260 ರನ್ ಗಳಿಸಿತ್ತು. ಈ ಗುರಿಯನ್ನು ಬೆನ್ನಟ್ಟಿದ ಪಾಕಿಸ್ತಾನ ತಂಡ 231 ರನ್‌ಗಳಿಗೆ ಆಲೌಟ್ ಆಯಿತು.
ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 10:18 am, Fri, 17 November 23