ICC World Cup 2023: 3 ಗೆಲುವು, ಸತತ ಸೋಲು: ಝಿಂಬಾಬ್ವೆ ತಂಡದ ವಿಶ್ವಕಪ್ ಕನಸು ಭಗ್ನ..!
ICC World Cup 2023: 2015 ರಲ್ಲಿ ಆಸ್ಟ್ರೇಲಿಯಾ-ನ್ಯೂಝಿಲ್ಯಾಂಡ್ನಲ್ಲಿ ನಡೆದ ಏಕದಿನ ವಿಶ್ವಕಪ್ನಲ್ಲಿ ಕೊನೆಯ ಬಾರಿ ಕಣಕ್ಕಿಳಿದಿದ್ದ ಝಿಂಬಾಬ್ವೆ ಈ ಬಾರಿ ಕೂಡ ಅರ್ಹತೆ ಪಡೆಯುವ ವಿಶ್ವಾಸದಲ್ಲಿತ್ತು.
ICC World Cup 2023: ಈ ಬಾರಿಯ ಏಕದಿನ ವಿಶ್ವಕಪ್ಗೆ ಅರ್ಹತೆ ಪಡೆಯುವ ಫೇವರೇಟ್ ತಂಡಗಳಲ್ಲಿ ಗುರುತಿಸಿಕೊಂಡಿದ್ದ ಝಿಂಬಾಬ್ವೆ ಇದೀಗ ಹೊರಬಿದ್ದಿದೆ. ಅರ್ಹತಾ ಸುತ್ತಿನ ಮೊದಲ ಮೂರು ಪಂದ್ಯಗಳಲ್ಲಿ ಭರ್ಜರಿ ಜಯ ಸಾಧಿಸಿದ್ದ ಝಿಂಬಾಬ್ವೆ ಸೂಪರ್ ಸಿಕ್ಸ್ ಹಂತದಲ್ಲಿ ಮುಗ್ಗರಿಸಿದೆ. ಅದರಲ್ಲೂ ನಿರ್ಣಾಯಕವಾಗಿದ್ದ ಸ್ಕಾಟ್ಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ 31 ರನ್ಗಳಿಂದ ಸೋಲನುಭವಿಸಿದೆ. ಇದರೊಂದಿಗೆ ಭಾರತದಲ್ಲಿ ಏಕದಿನ ವಿಶ್ವಕಪ್ ಆಡುವ ಕನಸು ಕೂಡ ಕಮರಿದೆ.
2015 ರಲ್ಲಿ ಆಸ್ಟ್ರೇಲಿಯಾ-ನ್ಯೂಝಿಲ್ಯಾಂಡ್ನಲ್ಲಿ ನಡೆದ ಏಕದಿನ ವಿಶ್ವಕಪ್ನಲ್ಲಿ ಕೊನೆಯ ಬಾರಿ ಕಣಕ್ಕಿಳಿದಿದ್ದ ಝಿಂಬಾಬ್ವೆ ಈ ಬಾರಿ ಕೂಡ ಅರ್ಹತೆ ಪಡೆಯುವ ವಿಶ್ವಾಸದಲ್ಲಿತ್ತು. ಆದರೆ ಸೂಪರ್ ಸಿಕ್ಸ್ ಹಂತದ ಮೊದಲ ಪಂದ್ಯದಲ್ಲಿ ಶ್ರೀಲಂಕಾ ವಿರುದ್ಧ ಸೋಲನುಭವಿಸಿತು. ಇನ್ನು ತನ್ನ ಕೊನೆಯ ಪಂದ್ಯದಲ್ಲಿ ಸ್ಕಾಟ್ಲ್ಯಾಂಡ್ ವಿರುದ್ಧ ಸೋಲನುಭವಿಸಿ ನಿರಾಸೆ ಮೂಡಿಸಿದೆ.
ಅತ್ತ ಇದೀಗ ಸ್ಕಾಟ್ಲ್ಯಾಂಡ್ ಹಾಗೂ ನೆದರ್ಲ್ಯಾಂಡ್ಸ್ ನಡುವೆ ಕೊನೆಯ ಪಂದ್ಯ ನಡೆಯಲಿದ್ದು, ಇದರಲ್ಲಿ ಸ್ಕಾಟ್ಲ್ಯಾಂಡ್ ಗೆದ್ದರೆ ವಿಶ್ವಕಪ್ಗೆ ಅರ್ಹತೆ ಪಡೆಯಲಿದೆ. ಆದರೆ ಇಲ್ಲಿ ನೆದರ್ಲ್ಯಾಂಡ್ಸ್ ಗೆದ್ದರೂ ಸ್ಕಾಟ್ಲ್ಯಾಂಡ್ಗಿಂತ ಹೆಚ್ಚಿನ ನೆಟ್ ರನ್ ರೇಟ್ ಪಡೆದರೆ ಮಾತ್ರ ವಿಶ್ವಕಪ್ಗೆ ಅರ್ಹತೆ ಪಡೆಯಬಹುದು.
ಇದನ್ನೂ ಓದಿ: ODI World Cup 2023: ಏಕದಿನ ವಿಶ್ವಕಪ್ಗೆ 15 ಸದಸ್ಯರ ಭಾರತ ಸಂಭಾವ್ಯ ತಂಡ ಹೀಗಿದೆ
ಏಕೆಂದರೆ ಸ್ಕಾಟ್ಲ್ಯಾಂಡ್ ಒಟ್ಟು 6 ಅಂಕಗಳನ್ನು ಹೊಂದಿದ್ದು, ನೆದರ್ಲ್ಯಾಂಡ್ಸ್ 4 ಅಂಕಗಳನ್ನು ಕಲೆಹಾಕಿದೆ. ಇದೀಗ ಕೊನೆಯ ಪಂದ್ಯದಲ್ಲಿ ನೆದರ್ಲ್ಯಾಂಡ್ಸ್ ಗೆದ್ದರೆ ಒಟ್ಟು 6 ಅಂಕ ಪಡೆದರೂ, ಹೆಚ್ಚಿನ ನೆಟ್ ರನ್ ರೇಟ್ ಹೊಂದಿದ್ದರೆ ಮಾತ್ರ ಏಕದಿನ ವಿಶ್ವಕಪ್ಗೆ ಅರ್ಹತೆ ಪಡೆಯಬಹುದು. ಹೀಗಾಗಿ ಅರ್ಹತಾ ಸುತ್ತಿನ ಅಂತಿಮ ಹಣಾಹಣಿಯಲ್ಲಿ ಉಭಯ ತಂಡಗಳಿಂದ ಭರ್ಜರಿ ಪೈಪೋಟಿ ನಿರೀಕ್ಷಿಸಬಹುದು.