ICC World Cup 2023: ಏಕದಿನ ವಿಶ್ವಕಪ್​​ಗೆ ಅರ್ಹತೆ ಪಡೆದುಕೊಂಡ ಶ್ರೀಲಂಕಾ

ICC World Cup Qualifiers 2023: ಈ ಬಾರಿಯ ಏಕದಿನ ವಿಶ್ವಕಪ್​ ಟೂರ್ನಿಯಲ್ಲಿ ಒಟ್ಟು 10 ತಂಡಗಳು ಕಣಕ್ಕಿಳಿಯಲಿದ್ದು, ಇದರಲ್ಲಿ 8 ತಂಡಗಳು ನೇರವಾಗಿ ಅರ್ಹತೆ ಪಡೆದುಕೊಂಡಿದೆ.

ICC World Cup 2023: ಏಕದಿನ ವಿಶ್ವಕಪ್​​ಗೆ ಅರ್ಹತೆ ಪಡೆದುಕೊಂಡ ಶ್ರೀಲಂಕಾ
Sri Lanka Team
Follow us
TV9 Web
| Updated By: ಝಾಹಿರ್ ಯೂಸುಫ್

Updated on: Jul 02, 2023 | 6:10 PM

ICC World Cup Qualifiers 2023: ಹರಾರೆಯಲ್ಲಿ ನಡೆದ ಏಕದಿನ ವಿಶ್ವಕಪ್ (World Cup 2023) ಅರ್ಹತಾ ಸುತ್ತಿನ ಪಂದ್ಯದಲ್ಲಿ ಸತತ ನಾಲ್ಕನೇ ಗೆಲುವು ದಾಖಲಿಸುವ ಮೂಲಕ ಶ್ರೀಲಂಕಾ (Sri lanka) ತಂಡವು ಏಕದಿನ ವಿಶ್ವಕಪ್​ಗೆ ಅರ್ಹತೆ ಪಡೆದುಕೊಂಡಿದೆ. ಝಿಂಬಾಬ್ವೆ ವಿರುದ್ಧ ನಡೆದ ಸೂಪರ್ ಸಿಕ್ಸ್​ ಹಂತದ ಪಂದ್ಯದಲ್ಲಿ ಶ್ರೀಲಂಕಾ ತಂಡವು 9 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿದೆ. ಇದರೊಂದಿಗೆ ಭಾರತದಲ್ಲಿ ನಡೆಯಲಿರುವ ಏಕದಿನ ವಿಶ್ವಕಪ್​ನಲ್ಲಿ ಶ್ರೀಲಂಕಾ ತಂಡ ಪಾಲ್ಗೊಳ್ಳುವುದು ಖಚಿತವಾಗಿದೆ.

ಈ ಪಂದ್ಯದಲ್ಲಿ ಟಾಸ್ ಗೆದ್ದ ಶ್ರೀಲಂಕಾ ತಂಡದ ನಾಯಕ ದುಸುನ್ ಶಾನಕ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಝಿಂಬಾಬ್ವೆ ತಂಡವು ಮಹೀಶ್ ತೀಕ್ಷಣ ಸ್ಪಿನ್ ದಾಳಿಗೆ ತತ್ತರಿಸಿತು. ಕೇವಲ 30 ರನ್​ಗಳಿಗೆ 3 ವಿಕೆಟ್​ ಕಳೆದುಕೊಂಡು ಆರಂಭಿಕ ಆಘಾತಕ್ಕೆ ಸಿಲುಕಿದ್ದ ಝಿಂಬಾಬ್ವೆಗೆ ಈ ಹಂತದಲ್ಲಿ ನಾಯಕ ಸೀನ್ ವಿಲಿಯಮ್ಸ್ ಹಾಗೂ ಸಿಕಂದರ್ ರಾಝ ಆಸರೆಯಾದರು. 57 ಎಸೆತಗಳನ್ನು ಎದುರಿಸಿದ ವಿಲಿಯಮ್ಸ್ 56 ರನ್​ ಬಾರಿಸಿ ಮಿಂಚಿದರು. ಈ ಹಂತದಲ್ಲಿ ತೀಕ್ಷಣ ಎಸೆದ ದೂಸ್ರಾ ಎಸೆತವನ್ನು ಗುರುತಿಸುವಲ್ಲಿ ಎಡವಿದ ವಿಲಿಯಮ್ಸ್ ಕ್ಲೀನ್ ಬೌಲ್ಡ್ ಆಗಿ ಹೊರ ನಡೆದರು.

ಇನ್ನು 51 ಎಸೆತಗಳಲ್ಲಿ 31 ರನ್​ ಬಾರಿಸಿ ತಂಡಕ್ಕೆ ಆಸರೆಯಾಗಿದ್ದ ಸಿಕಂದರ್ ರಾಝರನ್ನು ದುಸನ್ ಶಾನಕ ಔಟ್ ಮಾಡಿದರು. ಈ ಮೂಲಕ ಮತ್ತೆ ಮೇಲುಗೈ ಸಾಧಿಸಿದ ಲಂಕಾ ಬೌಲರ್​ಗಳು ಝಿಂಬಾಬ್ವೆ ತಂಡವನ್ನು 32.2 ಓವರ್​ಗಳಲ್ಲಿ 165 ರನ್​ಗಳಿಗೆ ಆಲೌಟ್ ಮಾಡುವಲ್ಲಿ ಯಶಸ್ವಿಯಾದರು. ಶ್ರೀಲಂಕಾ ಪರ 8.2 ಓವರ್ ಎಸೆದ ಮಹೀಶ್ ತೀಕ್ಷಣ 25 ರನ್ ನೀಡಿ 4 ವಿಕೆಟ್ ಕಬಳಿಸಿದರೆ, ದಿಲ್ಶಾನ್ ಮಧುಶಂಕ 5 ಓವರ್​ಗಳಲ್ಲಿ 15 ರನ್ ನೀಡಿ 3 ವಿಕೆಟ್ ಪಡೆದರು.

ಇನ್ನು 166 ರನ್​ಗಳ ಸುಲಭ ಗುರಿ ಪಡೆದ ಶ್ರೀಲಂಕಾ ತಂಡಕ್ಕೆ ಆರಂಭಿಕರಾದ ಪಾತುಂ ನಿಸ್ಸಾಂಕ ಹಾಗೂ ದಿಮುತ್ ಕರುಣರತ್ನೆ ಉತ್ತಮ ಆರಂಭ ಒದಗಿಸಿದರು. ಮೊದಲ ವಿಕೆಟ್​ಗೆ 103 ರನ್​ಗಳ ಜೊತೆಯಾಟವಾಡಿದ ಈ ಜೋಡಿ ತಂಡಕ್ಕೆ ಭದ್ರ ಬುನಾದಿ ಹಾಕಿಕೊಟ್ಟರು.

ಈ ಹಂತದಲ್ಲಿ 30 ರನ್​ಗಳಿಸಿದ್ದ ದಿಮುತ್ ಕರುಣರತ್ನೆ ರಿಚರ್ಡ್ ನಾಗರವ ಎಸೆತದಲ್ಲಿ ಕ್ಯಾಚ್ ನೀಡಿ ಹೊರನಡೆದರು. ಮತ್ತೊಂದೆಡೆ ಆಕರ್ಷಕ ಅರ್ಧಶತಕ ಬಾರಿಸಿದ ನಿಸ್ಸಾಂಕ ತಂಡದ ಗೆಲುವನ್ನು ಖಚಿತಪಡಿಸಿದರು.

ಇದನ್ನೂ ಓದಿ: ODI World Cup 2023: ಏಕದಿನ ವಿಶ್ವಕಪ್​ನಿಂದ ವೆಸ್ಟ್ ಇಂಡೀಸ್ ಔಟ್..!

ಅಂತಿಮವಾಗಿ ಪಾತುಂ ನಿಸ್ಸಾಂಕ (101) ಭರ್ಜರಿ ಶತಕ ಸಿಡಿಸಿದರೆ, ಕುಸಾಲ್ ಮೆಂಡಿಸ್ (25) ಉತ್ತಮ ಸಾಥ್ ನೀಡಿದರು. ಇದರೊಂದಿಗೆ 33.1 ಓವರ್​ಗಳಲ್ಲಿ ಶ್ರೀಲಂಕಾ ತಂಡವು ಗುರಿ ಮುಟ್ಟಿತು. ಈ ಗೆಲುವಿನೊಂದಿಗೆ ಅಕ್ಟೋಬರ್ 5 ರಿಂದ ಭಾರತದಲ್ಲಿ ಶುರುವಾಗಲಿರುವ ಏಕದಿನ ವಿಶ್ವಕಪ್​ಗೆ ಶ್ರೀಲಂಕಾ ತಂಡವು ಅರ್ಹತೆ ಪಡೆದುಕೊಂಡಿದೆ.

ಏಕದಿನ ವಿಶ್ವಕಪ್​ಗೆ ಅರ್ಹತೆ ಪಡೆದಿರುವ ತಂಡಗಳು:

  • 1- ಭಾರತ
  • 2- ಪಾಕಿಸ್ತಾನ್
  • 3- ಆಸ್ಟ್ರೇಲಿಯಾ
  • 4- ಸೌತ್ ಆಫ್ರಿಕಾ
  • 5- ನ್ಯೂಝಿಲ್ಯಾಂಡ್
  • 6- ಇಂಗ್ಲೆಂಡ್
  • 7- ಬಾಂಗ್ಲಾದೇಶ್
  • 8- ಅಫ್ಘಾನಿಸ್ತಾನ್
  • 9- ಶ್ರೀಲಂಕಾ
  • 10-

ಈ ಬಾರಿಯ ಏಕದಿನ ವಿಶ್ವಕಪ್​ ಟೂರ್ನಿಯಲ್ಲಿ ಒಟ್ಟು 10 ತಂಡಗಳು ಕಣಕ್ಕಿಳಿಯಲಿದ್ದು, ಇದರಲ್ಲಿ 8 ತಂಡಗಳು ನೇರವಾಗಿ ಅರ್ಹತೆ ಪಡೆದುಕೊಂಡಿದೆ. ಇದೀಗ ಅರ್ಹತಾ ಸುತ್ತಿನ ಮೂಲಕ ಶ್ರೀಲಂಕಾ ತಂಡವು 9ನೇ ತಂಡವಾಗಿ ಎಂಟ್ರಿ ಕೊಟ್ಟಿದೆ. ಇನ್ನು ಒಂದು ಸ್ಥಾನ ಮಾತ್ರ ಉಳಿದಿದ್ದು, ಈ ಸ್ಥಾನಕ್ಕಾಗಿ ಅರ್ಹತಾ ಸುತ್ತಿನಲ್ಲಿರುವ ಝಿಂಬಾಬ್ವೆ ಹಾಗೂ ಸ್ಕಾಟ್​ಲ್ಯಾಂಡ್ ನಡುವೆ ನೇರ ಪೈಪೋಟಿ ಏರ್ಪಟ್ಟಿದೆ.

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ