ಏಕದಿನ ವಿಶ್ವಕಪ್ ಅಭ್ಯಾಸ ಪಂದ್ಯಗಳ ವೇಳಾಪಟ್ಟಿ ಪ್ರಕಟ
ICC World Cup 2023: ಕ್ರಿಕೆಟ್ ಮಹಾಸಮರ ಏಕದಿನ ವಿಶ್ವಕಪ್ ಅಕ್ಟೋಬರ್ 5 ರಿಂದ ಶುರುವಾಗಲಿದೆ. ಅಹಮದಾಬಾದ್ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯಲಿರುವ ಉದ್ಘಾಟನಾ ಪಂದ್ಯದಲ್ಲಿ 2019ರ ಫೈನಲಿಸ್ಟ್ ಇಂಗ್ಲೆಂಡ್ ಹಾಗೂ ನ್ಯೂಝಿಲೆಂಡ್ ತಂಡಗಳು ಮುಖಾಮುಖಿಯಾಗಲಿದೆ.
ಏಕದಿನ ವಿಶ್ವಕಪ್ ಆರಂಭಕ್ಕೆ ಇನ್ನು ತಿಂಗಳು ಮಾತ್ರ ಉಳಿದಿವೆ. ಅಕ್ಟೋಬರ್ 5 ರಿಂದ ಶುರುವಾಗಲಿರುವ ಈ ಟೂರ್ನಿಗೂ ಮುನ್ನ ಎಲ್ಲಾ ತಂಡಗಳು ಅಭ್ಯಾಸ ಪಂದ್ಯವನ್ನಾಡಲಿದೆ. ಈ ಅಭ್ಯಾಸ ಪಂದ್ಯಗಳ ವೇಳಾಪಟ್ಟಿಯನ್ನು ಪ್ರಕಟಿಸಲಾಗಿದ್ದು, ಮೂರು ಸ್ಟೇಡಿಯಂಗಳಲ್ಲಿ ಒಟ್ಟು 10 ಪಂದ್ಯಗಳನ್ನಾಡಲಾಗುತ್ತದೆ. ಅದರಂತೆ ಸೆಪ್ಟೆಂಬರ್ 29 ರಿಂದ ಅಭ್ಯಾಸ ಪಂದ್ಯಗಳು ಶುರುವಾಗಲಿದ್ದು, ಮೊದಲ ಪಂದ್ಯದಲ್ಲಿ ಶ್ರೀಲಂಕಾ ಹಾಗೂ ಬಾಂಗ್ಲಾದೇಶ್ ತಂಡಗಳು ಸೆಣಸಲಿದೆ. ಇನ್ನು ಟೀಮ್ ಇಂಡಿಯಾ ತನ್ನ ಮೊದಲ ಅಭ್ಯಾಸ ಪಂದ್ಯದಲ್ಲಿ ಇಂಗ್ಲೆಂಡ್ ತಂಡವನ್ನು ಎದುರಿಸಲಿದೆ.
ಹಾಗೆಯೇ ಅಕ್ಟೋಬರ್ 3 ರಂದು ಪಾಕಿಸ್ತಾನ್ ಹಾಗೂ ಆಸ್ಟ್ರೇಲಿಯಾ ನಡುವೆ ಕೊನೆಯ ಅಭ್ಯಾಸ ಪಂದ್ಯ ನಡೆಯಲಿದೆ. ಇದಾದ ಬಳಿಕ ಅಂದರೆ ಅಕ್ಟೋಬರ್ 5 ರಂದು ಅಹಮದಾಬಾದ್ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಏಕದಿನ ವಿಶ್ವಕಪ್ನ ಮೊದಲ ಪಂದ್ಯವಾಡಲಾಗುತ್ತದೆ.
ಅಭ್ಯಾಸ ಪಂದ್ಯಗಳ ವೇಳಾಪಟ್ಟಿ ಈ ಕೆಳಗಿನಂತಿದೆ:
29 ಸೆಪ್ಟೆಂಬರ್ (ಶುಕ್ರವಾರ):
- ಬಾಂಗ್ಲಾದೇಶ vs ಶ್ರೀಲಂಕಾ (ಬರ್ಸಾಪರಾ ಕ್ರಿಕೆಟ್ ಸ್ಟೇಡಿಯಂ, ಗುವಾಹಟಿ)
- ಸೌತ್ ಆಫ್ರಿಕಾ vs ಅಫ್ಘಾನಿಸ್ತಾನ್ (ಗ್ರೀನ್‌ಫೀಲ್ಡ್ ಅಂತಾರಾಷ್ಟ್ರೀಯ ಕ್ರೀಡಾಂಗಣ, ತಿರುವನಂತಪುರಂ)
- ನ್ಯೂಝಿಲೆಂಡ್ vs ಪಾಕಿಸ್ತಾನ್ (ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಕ್ರೀಡಾಂಗಣ, ಹೈದರಾಬಾದ್)
ಸೆಪ್ಟೆಂಬರ್ 30 (ಶನಿವಾರ):
- ಭಾರತ vs ಇಂಗ್ಲೆಂಡ್ (ಬರ್ಸಾಪರಾ ಕ್ರಿಕೆಟ್ ಸ್ಟೇಡಿಯಂ, ಗುವಾಹಟಿ)
- ಆಸ್ಟ್ರೇಲಿಯಾ vs ನೆದರ್ಲ್ಯಾಂಡ್ಸ್ (ಗ್ರೀನ್‌ಫೀಲ್ಡ್ ಅಂತರಾಷ್ಟ್ರೀಯ ಕ್ರೀಡಾಂಗಣ, ತಿರುವನಂತಪುರಂ)
ಅಕ್ಟೋಬರ್ 2 (ಸೋಮವಾರ):
- ಇಂಗ್ಲೆಂಡ್ vs ಬಾಂಗ್ಲಾದೇಶ್ (ಬರ್ಸಾಪರಾ ಕ್ರಿಕೆಟ್ ಸ್ಟೇಡಿಯಂ, ಗುವಾಹಟಿ)
- ನ್ಯೂಝಿಲೆಂಡ್ vs ದಕ್ಷಿಣ ಆಫ್ರಿಕಾ (ಗ್ರೀನ್‌ಫೀಲ್ಡ್ ಅಂತಾರಾಷ್ಟ್ರೀಯ ಕ್ರೀಡಾಂಗಣ, ತಿರುವನಂತಪುರಂ)
ಅಕ್ಟೋಬರ್ 3 (ಮಂಗಳವಾರ):
- ಅಫ್ಘಾನಿಸ್ತಾನ vs ಶ್ರೀಲಂಕಾ (ಬರ್ಸಾಪರಾ ಕ್ರಿಕೆಟ್ ಸ್ಟೇಡಿಯಂ, ಗುವಾಹಟಿ)
- ಭಾರತ vs ನೆದರ್ಲ್ಯಾಂಡ್ಸ್ (ಗ್ರೀನ್‌ಫೀಲ್ಡ್ ಇಂಟರ್‌ನ್ಯಾಶನಲ್ ಸ್ಟೇಡಿಯಂ, ತಿರುವನಂತಪುರಂ)
- ಪಾಕಿಸ್ತಾನ್ vs ಆಸ್ಟ್ರೇಲಿಯಾ (ರಾಜೀವ್ ಗಾಂಧಿ ಇಂಟರ್‌ನ್ಯಾಶನಲ್ ಸ್ಟೇಡಿಯಂ, ಹೈದರಾಬಾದ್)
ಈ ಎಲ್ಲಾ ಪಂದ್ಯಗಳು ಮಧ್ಯಾಹ್ನ 2 ಗಂಟೆಯಿಂದ ಶುರುವಾಗಲಿದೆ. ಹಾಗೆಯೇ ಈ ಅಭ್ಯಾಸ ಪಂದ್ಯಗಳಲ್ಲಿ 15 ಆಟಗಾರರನ್ನು ಕಣಕ್ಕಿಳಿಸಲು ಅನುಮತಿಸಲಾಗುತ್ತದೆ.
ಇದನ್ನೂ ಓದಿ: RCB ಯಿಂದ ಇಬ್ಬರು, CSK ಯಿಂದ ಒಬ್ಬರು: ತಂಡದಲ್ಲಿ ಮುಂಬೈ ಅವರದ್ದೇ ದರ್ಬಾರು..!
ವಿಶ್ವಕಪ್ನ ಮೊದಲ ಮುಖಾಮುಖಿ:
ಕ್ರಿಕೆಟ್ ಮಹಾಸಮರ ಏಕದಿನ ವಿಶ್ವಕಪ್ ಅಕ್ಟೋಬರ್ 5 ರಿಂದ ಶುರುವಾಗಲಿದೆ. ಅಹಮದಾಬಾದ್ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯಲಿರುವ ಉದ್ಘಾಟನಾ ಪಂದ್ಯದಲ್ಲಿ 2019ರ ಫೈನಲಿಸ್ಟ್ ಇಂಗ್ಲೆಂಡ್ ಹಾಗೂ ನ್ಯೂಝಿಲೆಂಡ್ ತಂಡಗಳು ಮುಖಾಮುಖಿಯಾಗಲಿದೆ. ಇನ್ನು ಟೀಮ್ ಇಂಡಿಯಾ ಅಕ್ಟೋಬರ್ 8 ರಂದು ಆಸ್ಟ್ರೇಲಿಯಾ ವಿರುದ್ಧ ಕಣಕ್ಕಿಳಿಯುವ ಮೂಲಕ ವಿಶ್ವಕಪ್ ಅಭಿಯಾನ ಆರಂಭಿಸಲಿದೆ. ಇನ್ನು ಫೈನಲ್ ಪಂದ್ಯ ನಡೆಯುವುದು ಸೆಪ್ಟೆಂಬರ್ 19 ರಂದು…ಏಕದಿನ ವಿಶ್ವಕಪ್ನ ಸಂಪೂರ್ಣ ವೇಳಾಪಟ್ಟಿ ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ.